10 ದಿನಗಳಲ್ಲಿ ಮೂರನೇ ಬಾರಿಗೆ ಪೆಟ್ರೋಲ್, ಡೀಸೆಲ್ ದರ ಏರಿಕೆ: ಬೆಂಗಳೂರಿನಲ್ಲಿ ಬೆಲೆ ಎಷ್ಟು?

Date:

ಶನಿವಾರ ಮತ್ತೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯಾಗಿದೆ. ಕಳೆದ ಮಂಗಳವಾರ ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳು ಪ್ರತಿ ಲೀಟರ್‌ಗೆ 90 ಪೈಸೆ ಹೆಚ್ಚಿಸಿತ್ತು. ಅದಕ್ಕೂ ಹಿಂದೆ ಮೂರು ರೂಪಾಯಿ ಬೆಲೆ ಏರಿಸಲಾಗಿತ್ತು. ಅಂದರೆ ಕಳೆದ ಹತ್ತು ದಿನಗಳ ಅವಧಿಯಲ್ಲಿ ಮೂರನೇ ಬಾರಿಗೆ ಪೆಟ್ರೋಲ್, ಡೀಸೆಲ್ ದರ ಏರಿಕೆಯಾಗಿದೆ.

- Advertisement -

ಇರಾನ್ ಮೇಲೆ ಇಸ್ರೇಲ್-ಅಮೆರಿಕ ದಾಳಿ ನಡೆಸಿ ಯುದ್ಧ ಆರಂಭವಾದಾಗಿನಿಂದ ಜಾಗತಿಕವಾಗಿ ತೈಲ ಬಿಕ್ಕಟ್ಟು ಆರಂಭವಾಗಿದೆ. ದೇಶದಲ್ಲಿ ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ಚುನಾವಣೆ ಮುಗಿಯುವವರೆಗೂ ಇಂಧನ ಬೆಲೆಯನ್ನು ಏರಿಸದ ಕೇಂದ್ರ ಸರ್ಕಾರ, ಚುನಾವಣೆ ಮುಗಿದು ಫಲಿತಾಂಶವೂ ಹೊರಬಿದ್ದು, ಸರ್ಕಾರಗಳು ರಚನೆಯಾಗುತ್ತಿದ್ದಂತೆ ಇಂಧನ ದರವನ್ನು ಪದೇ ಪದೇ ಹೆಚ್ಚಿಸುತ್ತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಭಾರತಕ್ಕೆ ಬರದ ಬುಲೆಟ್ ಟ್ರೈನ್: ತಡವಾಗುತ್ತಿರುವುದು ಮೋದಿಯಿಂದಲೋ, ಜಪಾನ್‌ನವರಿಂದಲೋ?

ಮುಂಬೈ ಮತ್ತು ಅಹಮದಾಬಾದ್ ನಡುವಿನ 508 ಕಿ.ಮೀ ಉದ್ದದ ಈ ಮಾರ್ಗವು ಭಾರತೀಯ ರೈಲ್ವೆಯನ್ನು ಆಧುನೀಕರಿಸುವ ಯೋಜನೆಯ ಭಾಗವಾಗಿ ನರೇಂದ್ರ ಮೋದಿಯವರು ಘೋಷಿಸಿದ್ದರು. ಅದಾಗಿ ಹತ್ತು ವರ್ಷವಾದರೂ ಸುದ್ದಿಯೇ ಇಲ್ಲ. ಬುಲೆಟ್ ಟ್ರೈನ್...

ನೊಬೆಲ್‌ ಪ್ರಶಸ್ತಿ ಸರಣಿ | ರಸಾಯನವಿಜ್ಞಾನದ ʼಅಸಮಮಿತಿʼ (Chirality)ಯ...

ರಸಾಯನವಿಜ್ಞಾನದ ನೊಬೆಲ್ ಪ್ರಶಸ್ತಿಯನ್ನು ಈ ಬಾರಿ ಹೆನ್ರಿ ಕಗಾನ್‌ ಮತ್ತು ಕೆನ್ಸೊ ಸುಆಯ್‌ ಅವರಿಗೆ ನೀಡಲಾಗಿದೆ. ಅವರ ಸಂಶೋಧನೆಯ ಕೇಂದ್ರ ಬಿಂದು ರಸಾಯನವಿಜ್ಞಾನದಲ್ಲಿ ಶತಮಾನಗಟ್ಟಲೆ ಅತ್ಯಂತ ಕುತೂಹಲಕಾರಿ ಪ್ರಶ್ನೆಯಾಗಿದ್ದ- ಒಂದಕ್ಕೊಂದು ಕನ್ನಡಿಯ ಪ್ರತಿಬಿಂಬದಂತಿರುವ...

ಅನುದಾನ ಕೊರತೆ: ವಿದ್ಯಾರ್ಥಿಗಳಿಂದ ನಿರ್ವಹಣಾ ಶುಲ್ಕ ವಸೂಲಿ, ಶಿಕ್ಷಕರ...

ಹಾವೇರಿ ಜಿಲ್ಲೆಯಲ್ಲಿ ಸರಕಾರಿ ಶಾಲೆಗಳಿಗೆ ನಿರ್ವಹಣಾ ವೆಚ್ಚದ ಅನುದಾನ ಬಿಡುಗಡೆಯಾಗದ ಹಿನ್ನೆಲೆಯಲ್ಲಿ ಶಿಕ್ಷಕರು ನಿತ್ಯದ ಖರ್ಚು-ವೆಚ್ಚ ಸರಿದೂಗಿಸಲು ಪರದಾಡುವಂತಾಗಿದೆ. ಶಾಲೆ ನಡೆಸಲು ವಿದ್ಯಾರ್ಥಿಗಳಿಂದಲೇ ಹಣ ವಸೂಲಿ ಮಾಡುತ್ತಿರುವ ಆರೋಪ ಕೇಳಿಬಂದಿದ್ದು, ಪೋಷಕರಿಂದ ಮತ್ತು...

ಇದನ್ನು ಓದಿದ್ದೀರಾ? ಪೆಟ್ರೋಲ್, ಡೀಸೆಲ್ ಬೆಲೆ ಮತ್ತೆ ಏರಿಕೆ: ಲೀಟರ್‌ಗೆ 90 ಪೈಸೆ ಹೆಚ್ಚಳ

ಈಗ ಸತತ ಮೂರನೇ ಬಾರಿಗೆ ಪೆಟ್ರೋಲ್ ಬೆಲೆಯನ್ನು ಲೀಟರ್‌ಗೆ 87 ಪೈಸೆಯವರೆಗೆ ಹೆಚ್ಚಿಸಲಾಗಿದೆ. ಡೀಸೆಲ್ ಬೆಲೆ ಲೀಟರ್‌ಗೆ 91 ಪೈಸೆಯಷ್ಟು ಹೆಚ್ಚಾಗಿದೆ. ಇದರಿಂದಾಗಿ ದೆಹಲಿಯಲ್ಲಿ, ಈಗ ಪೆಟ್ರೋಲ್ ಬೆಲೆ ಲೀಟರ್‌ಗೆ 99.51 ರೂ. ಏರಿಕೆಯಾಗಿದೆ. ಡೀಸೆಲ್ ಬೆಲೆ ಲೀಟರ್‌ಗೆ 92.49 ರೂ.ಗಳಿಗೆ ಏರಿದೆ.

ಬೆಂಗಳೂರಿನಲ್ಲಿ ಪೆಟ್ರೋಲ್ ಬೆಲೆ ಲೀಟರ್‌ಗೆ 94 ಪೈಸೆ ಏರಿಕೆಯಾಗಿದೆ, ಡೀಸೆಲ್‌ ಬೆಲೆ 98 ಪೈಸೆ ಏರಿಕೆಯಾಗಿದೆ. ಹೊಸ ದರದ ಅನ್ವಯ ಪೆಟ್ರೋಲ್‌ ಲೀಟರ್‌ಗೆ 107.12 ರೂಪಾಯಿ, ಡೀಸೆಲ್‌ ಬೆಲೆ 95.04 ರೂ.ಗಳಿಗೆ ಏರಿಕೆಯಾಗಿದೆ.

ಇನ್ನು ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಇರಾನ್-ಇಸ್ರೇಲ್ ಸಂಘರ್ಷಕ್ಕೂ ಮುನ್ನ ಪ್ರತಿ ಬ್ಯಾರೆಲ್‌ಗೆ $70-72 ಆಸುಪಾಸಿನಲ್ಲಿತ್ತು. ಆದರೆ ಯುದ್ಧದ ಬಳಿಕ $120 ದಾಟಿತ್ತು. ಸದ್ಯ $104-110 ವ್ಯಾಪ್ತಿಯಲ್ಲಿ ವಹಿವಾಟು ನಡೆಸುತ್ತಿವೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಖಾಸಗಿ ಬಸ್ ಬೆಂಕಿಗಾಹುತಿ!

ಶಿವಮೊಗ್ಗ- ಸಾಗರ ಮಾರ್ಗದಲ್ಲಿ ಸಂಚರಿಸುತ್ತಿದ್ದ ಖಾಸಗಿ ಬಸ್‌ನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು,...

ವಿರೋಧಿಗಳಿಂದ ‘ಸ್ಟಿಂಗ್ ಆಪರೇಷನ್’ ಅಸ್ತ್ರ: ಸಂಪುಟ ಸಹೋದ್ಯೋಗಿಗಳಿಗೆ ಸಿಎಂ ಡಿ ಕೆ ಶಿವಕುಮಾರ್ ಎಚ್ಚರಿಕೆ

ರಾಜ್ಯ ರಾಜಕಾರಣದಲ್ಲಿ ಮತ್ತೊಮ್ಮೆ 'ಕುಟುಕು ಕಾರ್ಯಾಚರಣೆ' (ಸ್ಟಿಂಗ್ ಆಪರೇಷನ್) ವಿವಾದ ಕಾವು...

ಶಿವಮೊಗ್ಗ | ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ: ಅರಣ್ಯ ಇಲಾಖೆ ಸಿಬ್ಬಂದಿ ಬಂಧನ

ಶಿವಮೊಗ್ಗ ನಗರದ ವಾದಿ-ಹುದಾ ಸಮೀಪ 8 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ...