ದಾರಿತಪ್ಪಿಸುವ ಜಾಹೀರಾತು ಪ್ರಕರಣ: ಮತ್ತೆ ಪತ್ರಿಕೆಗಳಲ್ಲಿ ಕ್ಷಮೆಯಾಚನೆ ಪ್ರಕಟಿಸಿದ ರಾಮ್‌ದೇವ್

Date:

ಪತಂಜಲಿ ಆಯುರ್ವೇದ್ ಲಿಮಿಟೆಡ್ ವಿರುದ್ಧ ದಾರಿತಪ್ಪಿಸುವ ಜಾಹೀರಾತು ಪ್ರಕರಣ ದಾಖಲಾಗಿದ್ದು, ಸುಪ್ರೀಂ ಕೋರ್ಟ್ ನಿರಂತರವಾಗಿ ಬಾಬಾ ರಾಮ್‌ದೇವ್ ಅವರನ್ನು ತರಾಟೆಗೆ ತೆಗೆದುಕೊಳ್ಳುತ್ತಿದೆ. ಈ ನಡುವೆ ಸುಪ್ರೀಂ ಕೋರ್ಟ್‌ನ ನಿರ್ದೇಶನ ಪಾಲಿಸದ ಕಾರಣ ಯೋಗ ಗುರು ರಾಮ್‌ದೇವ್ ಮತ್ತು ಅವರ ಸಹಾಯಕ ಬಾಲಕೃಷ್ಣ ಮತ್ತೆ ಪತ್ರಿಕೆಗಳಲ್ಲಿ ಸಾರ್ವಜನಿಕ ಕ್ಷಮೆಯಾಚಿಸಿದ್ದಾರೆ.

- Advertisement -

ಇದು ಎರಡನೇ ಬಾರಿಗೆ ಪತಂಜಲಿ ಸಂಸ್ಥೆಯ ಕಡೆಯಿಂದ ದಿನ ಪತ್ರಿಕೆಯಲ್ಲಿ ಪ್ರಕಟಿಸಲಾಗುತ್ತಿರುವ ಕ್ಷಮೆಯಾಚನೆ ಆಗಿದೆ. ನಿನ್ನೆಯಷ್ಟೇ (ಏಪ್ರಿಲ್ 23) “ಈ ಹಿಂದೆ ಜನರನ್ನು ತಪ್ಪುದಾರಿಗೆಳೆಯುವ ಜಾಹೀರಾತು ಎಷ್ಟು ದೊಡ್ಡದಾಗಿ ಪ್ರಕಟಿಸಲಾಗಿದೆಯೋ ಅಷ್ಟೇ ದೊಡ್ಡದಾಗಿ ಕ್ಷಮೆಯಾಚನೆಯನ್ನು ಪ್ರಕಟಿಸಲಾಗಿದೆಯೇ” ಎಂದು ನ್ಯಾಯಾಲಯ ಪ್ರಶ್ನಿಸಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಇಂದು ಬೆಳಿಗ್ಗೆ ಪ್ರಕಟವಾದ ಜಾಹೀರಾತು ವೃತ್ತಪತ್ರಿಕೆ ಪುಟದ ನಾಲ್ಕನೇ ಒಂದು ಭಾಗವನ್ನು ಒಳಗೊಂಡಿದೆ ಮತ್ತು “ಬೇಷರತ್ತಾದ ಸಾರ್ವಜನಿಕ ಕ್ಷಮೆ” ಎಂದು ಶೀರ್ಷಿಕೆ ನೀಡಲಾಗಿದೆ. “ಭಾರತದ ಗೌರವಾನ್ವಿತ ಸುಪ್ರೀಂ ಕೋರ್ಟ್‌ನಲ್ಲಿ ನಡೆಯುತ್ತಿರುವ ವಿಷಯದ ಹಿನ್ನೆಲೆಯಲ್ಲಿ (ರಿಟ್ ಅರ್ಜಿ ಸಿ. ನಂ. 645/2022), ಭಾರತದ ಗೌರವಾನ್ವಿತ ಸುಪ್ರೀಂ ಕೋರ್ಟ್‌ನ ನಿರ್ದೇಶನಗಳು / ಆದೇಶಗಳನ್ನು ಅನುಸರಣೆ ಮಾಡದ ಅಥವಾ ಅಸಹಕಾರ ಮಾಡಿದ ಕಾರಣಕ್ಕಾಗಿ ನಾವು ನಮ್ಮ ವೈಯಕ್ತಿಕ ಸಾಮರ್ಥ್ಯದಲ್ಲಿ ಮತ್ತು ಕಂಪನಿಯ ಪರವಾಗಿ ಬೇಷರತ್ತಾಗಿ ಕ್ಷಮೆಯಾಚಿಸುತ್ತೇವೆ” ಎಂದು ಈ ಕ್ಷಮೆಯಾಚನೆಯಲ್ಲಿ ತಿಳಿಸಲಾಗಿದೆ.

ಇದನ್ನು ಓದಿದ್ದೀರಾ?  ದಿನಪತ್ರಿಕೆಯಲ್ಲಿ ಕ್ಷಮಾಪಣೆಯನ್ನು ನಿಮ್ಮ ಜಾಹೀರಾತಿನಷ್ಟು ಗಾತ್ರದಲ್ಲೇ ಪ್ರಕಟಿಸಲಾಗಿದೆಯೇ: ರಾಮ್‌ದೇವ್‌ಗೆ ಸುಪ್ರೀಂ ತರಾಟೆ

ಹಾಗೆಯೇ, “22.11.2023 ರ ಸಭೆ/ಪತ್ರಿಕಾಗೋಷ್ಠಿಯನ್ನು ಕ್ಷಮೆ ಕೇಳಿದ್ದಕ್ಕಿಂತ ಅಧಿಕವಾಗಿ ನಾವು ಬೇಷರತ್ತಾಗಿ ಕ್ಷಮೆಯಾಚಿಸುತ್ತೇವೆ. ನಮ್ಮ ಜಾಹೀರಾತುಗಳನ್ನು ಪ್ರಕಟಿಸುವಲ್ಲಿ ಮಾಡಿದ ತಪ್ಪಿಗೆ ನಾವು ಪ್ರಾಮಾಣಿಕವಾಗಿ ಕ್ಷಮೆಯಾಚಿಸುತ್ತೇವೆ. ಅಂತಹ ತಪ್ಪುಗಳು ಪುನರಾವರ್ತನೆ ಆಗುವುದಿಲ್ಲ ಎಂಬುದು ನಮ್ಮ ಸಂಪೂರ್ಣ ಬದ್ಧತೆಯಾಗಿದೆ” ಎಂದು ಹೇಳಲಾಗಿದೆ.

“ನಾವು ಗೌರವಾನ್ವಿತ ನ್ಯಾಯಾಲಯದ ಸೂಚನೆಗಳನ್ನು ಮತ್ತು ನಿರ್ದೇಶನಗಳನ್ನು ಪಾಲಿಸುತ್ತೇವೆ. ನಾವು ನ್ಯಾಯಾಲಯದ ಘನತೆಯನ್ನು ಎತ್ತಿಹಿಡಿಯುತ್ತೇವೆ. ಪ್ರಾಮಾಣಿಕವಾಗಿ ಮಾನ್ಯ ನ್ಯಾಯಾಲಯದ/ಸಂಬಂಧಿತ ಅಧಿಕಾರಿಗಳ ನಿರ್ದೇಶನಗಳನ್ನು ಅನುಸರಿಸುತ್ತೇವೆ. ಪತಂಜಲಿ ಆಯುರ್ವೇದ್ ಲಿಮಿಟೆಡ್, ಬಾಲಕೃಷ್ಣ, ಸ್ವಾಮಿ ರಾಮ್‌ದೇವ್, ಹರಿದ್ವಾರ, ಉತ್ತರಾಖಂಡ” ಎಂದು ಕ್ಷಮೆಯಲ್ಲಿ ಉಲ್ಲೇಖಿಸಲಾಗಿದೆ.

ನಿನ್ನೆ ಪ್ರಕಟವಾದ ಜಾಹೀರಾತು ಚಿಕ್ಕದಾಗಿದ್ದು, ರಾಮದೇವ್ ಮತ್ತು ಬಾಲಕೃಷ್ಣ ಅವರ ಹೆಸರನ್ನು ನಿರ್ದಿಷ್ಟವಾಗಿ ಉಲ್ಲೇಖಿಸಲಾಗಿರಲಿಲ್ಲ.

ಇದನ್ನು ಓದಿದ್ದೀರಾ?  ನೀವು ಅಷ್ಟೊಂದು ಮುಗ್ಧರೇನಲ್ಲ; ಬಾಬಾ ರಾಮ್‌ದೇವ್‌ಗೆ ಸುಪ್ರೀಂ ಕೋರ್ಟ್ ತಪರಾಕಿ

ಈ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಹಿಮಾ ಕೊಹ್ಲಿ ಮತ್ತು ನ್ಯಾಯಮೂರ್ತಿ ಎ ಅಮಾನುಲ್ಲಾ ಅವರ ಪೀಠವು “ದಿನಪತ್ರಿಕೆಯಲ್ಲಿ ಕ್ಷಮಾಪಣೆಯನ್ನು ನಿಮ್ಮ ಜಾಹೀರಾತಿನಷ್ಟು ಗಾತ್ರದಲ್ಲೇ ಪ್ರಕಟಿಸಲಾಗಿದೆಯೇ” ಎಂದು ಪ್ರಶ್ನಿಸಿದೆ.

“ನೀವು ದಿನಪತ್ರಿಕೆಯಲ್ಲಿ ನೀಡಿದ ಕ್ಷಮಾಪಣೆಯನ್ನು ಕತ್ತರಿಸಿ ನೀವೇ ಇಟ್ಟುಕೊಳ್ಳಿ. ಅದನ್ನು ದೊಡ್ಡದಾಗಿಸಿ ಫೋಟೊಕಾಪಿ ಮಾಡಿಕೊಳ್ಳಿ. ಅದು ನಮ್ಮನ್ನು ಮೆಚ್ಚಿಸಲಾರದು. ನಾನು ಜಾಹೀರಾತಿನ ನಿಜವಾದ ಗಾತ್ರವನ್ನು ನೋಡಲು ಬಯಸುತ್ತೇನೆ” ಎಂದು ನ್ಯಾಯಮೂರ್ತಿ ಹಿಮಾ ಕೊಹ್ಲಿ ಹೇಳಿದ್ದಾರೆ.

ಈ ಪ್ರಕರಣದ ಮುಂದಿನ ವಿಚಾರಣೆ ಏಪ್ರಿಲ್ 30 ರಂದು ನಡೆಯಲಿದೆ ಮತ್ತು ರಾಮ್‌ದೇವ್ ಮತ್ತು ಬಾಲಕೃಷ್ಣ ಅವರನ್ನು ನ್ಯಾಯಾಲಯಕ್ಕೆ ಹಾಜರಾಗುವಂತೆ ತಿಳಿಸಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ: ಎಎಪಿ ನಾಯಕ ಸೌರಭ್ ಭಾರದ್ವಾಜ್ ಸೇರಿ ಹಲವು ಮಂದಿ ದೆಹಲಿ ಪೊಲೀಸರ ವಶಕ್ಕೆ

ಚುನಾವಣಾ ಆಯೋಗದ ವಿರುದ್ಧ ಆಯೋಜಿಸಲಾಗಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಜಂತರ್ ಮಂತರ್‌‌ಗೆ ಆಗಮಿಸಿದ್ದ...

ಸಿಜೆಪಿ ಬೆಂಬಲಕ್ಕೆ ನಿಂತ ಪಾಲ್ಘರ್ ವಕೀಲರ ಸಂಘ: ಕಾರ್ಯಕರ್ತರಿಗೆ ಉಚಿತ ಕಾನೂನು ನೆರವು ಘೋಷಣೆ

ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ವಕೀಲರ ಸಂಘವೊಂದು 'ಕಾಕ್ರೋಚ್ ಜನತಾ ಪಾರ್ಟಿ' (ಸಿಜೆಪಿ)...

ಅಯೋಧ್ಯೆ ರಾಮಮಂದಿರ ಸಿಬ್ಬಂದಿಗೆ ಶೇ. 100ರಷ್ಟು ಪೊಲೀಸ್ ವೆರಿಫಿಕೇಷನ್; ಹಿನ್ನೆಲೆ ಪರಿಶೀಲನೆ ಕಡ್ಡಾಯ

ಉತ್ತರ ಪ್ರದೇಶದ ಅಯೋಧ್ಯೆಯ ರಾಮಮಂದಿರ ಆಡಳಿತ ಮತ್ತು ಭದ್ರತಾ ವ್ಯವಸ್ಥೆಯನ್ನು ಮತ್ತಷ್ಟು...

ಸಿಇಸಿ ಗ್ಯಾನೇಶ್ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ: ಅನುಮತಿ ನಿರಾಕರಣೆ; ಜಂತರ್ ಮಂತರ್‌ನಲ್ಲಿ ಬಿಗಿ ಭದ್ರತೆ

ಮುಖ್ಯ ಚುನಾವಣೆ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ...