ದಯವಿಟ್ಟು ಬಿಟ್ಟುಬಿಡಿ, ನನಗೆ ನಾಲ್ಕು ಹೆಣ್ಣುಮಕ್ಕಳಿದ್ದಾರೆ ಎಂದು ಅಂಗಲಾಚಿದರೂ ಅತ್ಯಾಚಾರವೆಸಗಿದ ರಾಕ್ಷಸರು

Date:

ದಯವಿಟ್ಟು ಬಿಟ್ಟುಬಿಡಿ, ನನಗೆ ನಾಲ್ಕು ಹೆಣ್ಣುಮಕ್ಕಳಿದ್ದಾರೆ ಎಂದು ಅಂಗಲಾಚಿದರೂ ಮಹಿಳೆಯೊಬ್ಬರ ಮೇಲೆ ಸಾಮೂಹಿಕವಾಗಿ ಅಮಾನುಷವಾಗಿ ಅತ್ಯಾಚಾರ ವೆಸಗಿದ ಘಟನೆ ಆಗ್ರಾದಲ್ಲಿ ನಡೆದಿದೆ

- Advertisement -

ಆಗ್ರಾದ ಹೋಂಸ್ಟೇ ಮಹಿಳಾ ಉದ್ಯೋಗಿಯೊಬ್ಬರ ಮೇಲೆ ಹಲ್ಲೆ ನಡೆಸಿ, ಬಲವಂತವಾಗಿ ಮದ್ಯ ಕುಡಿಸಿ ನಂತರ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. ಸಹಾಯಕ್ಕಾಗಿ ಆಕೆ ಅಳುತ್ತಿರುವುದನ್ನು ತೋರಿಸುವ ವಿಡಿಯೋಗಳು ವೈರಲ್‌ ಆಗಿದೆ. ಘಟನೆಗೆ ಸಂಬಂಧಿಸಿದಂತೆ ಓರ್ವ ಮಹಿಳೆ ಸೇರಿದಂತೆ ಐವರನ್ನು ಬಂಧಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಆರೋಪಿಗಳ ಮೇಲೆ ಭಾರತೀಯ ದಂಡ ಸಂಹಿತೆಯ (ಐಪಿಸಿ) ಅತ್ಯಾಚಾರ, ಹಲ್ಲೆ ಮತ್ತು ಇತರ ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣವನ್ನು ದಾಖಲಿಸಲಾಗಿದೆ.

ವೈರಲ್‌ ಆಗಿರುವ ಮತ್ತೊಂದು ವಿಡಿಯೋದಲ್ಲಿ, “ದಯವಿಟ್ಟು ನನ್ನನ್ನು ರಕ್ಷಿಸಿ! ನನಗೆ ನಾಲ್ಕು ಹೆಣ್ಣು ಮಕ್ಕಳಿದ್ದಾರೆ. ಅವರು ನನ್ನನ್ನು ಎಳೆದುಕೊಂಡು ಹೋಗುತ್ತಿದ್ದಾರೆ. ನನ್ನ ಫೋನ್ ಕಿತ್ತುಕೊಂಡಿದ್ದಾರೆ. ಅವರು ನನ್ನ ವಿಡಿಯೋವನ್ನು ಬಳಸಿಕೊಂಡು ಬ್ಲ್ಯಾಕ್ ಮೇಲ್ ಮಾಡುತ್ತಿದ್ದಾರೆ, ಅವರು ನನ್ನಿಂದ ಹಣವನ್ನೂ ತೆಗೆದುಕೊಂಡಿದ್ದಾರೆ,” ಎಂದು ಮಹಿಳೆ ಸಾರ್ವಜನಿಕರಲ್ಲಿ ಮನವಿ ಮಾಡುತ್ತಿದ್ದಾರೆ.

ಈ ಸುದ್ದಿ ಓದಿದ್ದೀರಾ? ಹೈದರಾಬಾದ್‌ನ ಬಹುಮಹಡಿ ಕಟ್ಟಡದಲ್ಲಿ ಬೆಂಕಿ ಅವಘಡ: 7 ಸಾವು

ಇನ್ನೊಂದು ವಿಡಿಯೋದಲ್ಲಿ “ದಯವಿಟ್ಟು ನನಗೆ ಸಹಾಯ ಮಾಡಿ!”, ಎಂದು ಆಕೆ ಹೇಳುತ್ತಿರುವುದು ಕೇಳಿಬರುತ್ತಿದೆ. ಒಬ್ಬ ವ್ಯಕ್ತಿ ಅವಳನ್ನು ಕೋಣೆಯೊಳಗೆ ಎಳೆದೊಯ್ದಿದ್ದಾನೆ. ಈ ಸಂದರ್ಭದಲ್ಲಿ ಆರೋಪಿಗಳು ಚಿತ್ರಹಿಂಸೆ ನೀಡುತ್ತಿದ್ದಾರೆ.

ಮತ್ತೊಂದು ವಿಡಿಯೋದಲ್ಲಿ, ಈ ಹಿಂದೆ ಮಾಡಿದ ಆಕ್ಷೇಪಾರ್ಹ ವಿಡಿಯೋ ತೋರಿಸಿ ಬ್ಲ್ಯಾಕ್‌ಮೇಲ್ ಮಾಡಲಾಗುತ್ತಿದೆ ಎಂದು ಮಹಿಳೆ ಹೇಳುವುದನ್ನು ಕೇಳಬಹುದು.

“ತನ್ನ ಸ್ನೇಹಿತೆ ಮತ್ತು ಇತರ ಕೆಲವರು ತನಗೆ ಬಲವಂತವಾಗಿ ಕುಡಿಯಲು ಒತ್ತಾಯಿಸಿದರು. ಪ್ರತಿಭಟಿಸಲು ಪ್ರಯತ್ನಿಸಿದಾಗ ನನ್ನನ್ನು ಕೊಠಡಿಯೊಳಗೆ ಎಳೆದೊಯ್ದು ಥಳಿಸಿದ್ದಾರೆ. ತಲೆಯ ಮೇಲೆ ಗಾಜಿನ ಬಾಟಲಿಯಿಂದ ಹಲ್ಲೆ ಮಾಡಲಾಗಿದೆ” ಎಂದು ಸಂತ್ರಸ್ತ ಮಹಿಳೆ ಪೊಲೀಸರಿಗೆ ತಿಳಿಸಿದ್ದಾರೆ.

“ಸಹಾಯಕ್ಕಾಗಿ ಅಳುತ್ತಿದ್ದ ಸಂತ್ರಸ್ತೆಯಿಂದ ನಮಗೆ ಶನಿವಾರ ಮಧ್ಯರಾತ್ರಿ ಕರೆ ಬಂದಿತು. ನಾವು ಹೋಂಸ್ಟೇಗೆ ಧಾವಿಸಿ ಆರೋಪಿಗಳ ವಿರುದ್ಧ ಕ್ರಮ ಕೈಗೊಂಡಿದ್ದೇವೆ. ಸಂತ್ರಸ್ತೆಯ ವಯಸ್ಸು ಸುಮಾರು 25 ವರ್ಷ. ಆಕೆ ಹೋಂಸ್ಟೇಯಲ್ಲಿ ಒಂದೂವರೆ ವರ್ಷದಿಂದ ಕೆಲಸ ಮಾಡುತ್ತಿದ್ದರು” ಎಂದು ಹಿರಿಯ ಪೊಲೀಸ್ ಅಧಿಕಾರಿ ಸದರ್ ಅರ್ಚನಾ ಸಿಂಗ್ ತಿಳಿಸಿದ್ದಾರೆ.

ಶನಿವಾರ ರಾತ್ರಿ ಈ ಘಟನೆ ನಡೆದಿದೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ. ಬಾಡಿಗೆ ಕಟ್ಟಡವಾಗಿರುವ ಹೋಮ್‌ಸ್ಟೇಯನ್ನು ಮುಚ್ಚಲಾಗಿದೆ.

 

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಾಲಾ ಸಮಸ್ಯೆಗಳ ಕುರಿತು ಗ್ರಾಮ ಸಭೆಯಲ್ಲಿ ಧ್ವನಿ ಎತ್ತಿದ ವಿದ್ಯಾರ್ಥಿಗಳು; ಅಧಿಕಾರಿಗಳ ಮೆಚ್ಚುಗೆ-ಭರವಸೆ

ಸರ್ಕಾರಿ ಶಾಲಾ ವಿದ್ಯಾರ್ಥಿಗಳು ‘ವಿಶೇಷ ಗ್ರಾಮ ಸಭೆ’ಗಳಲ್ಲಿ ಪಾಲ್ಗೊಂಡು, ಪಂಚಾಯತ್ ಪ್ರತಿನಿಧಿಗಳು...

ಉತ್ತರಾಖಂಡ SIR ಅಂತಿಮ ಮತದಾರರ ಪಟ್ಟಿ ಪ್ರಕಟ: ಆದರೆ ಮುಗಿದಿಲ್ಲ ನೋಂದಣಿ ಪ್ರಕ್ರಿಯೆ

ಉತ್ತರಾಖಂಡ ರಾಜ್ಯದಲ್ಲಿ ನಡೆದ 'ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ' (ಎಸ್‌ಐಆರ್)...

ವಾಹನ ದಟ್ಟಣೆಯ ಸುಳಿಯಲ್ಲಿ ಮನಾಲಿ; ಪ್ರವಾಸೋದ್ಯಮದ ಒತ್ತಡಕ್ಕೆ ನಲುಗುತ್ತಿವೆಯೇ ಬೆಟ್ಟಗಳು?

ಮುಂಗಾರು ಮಳೆ ಕಡಿಮೆಯಾಗುತ್ತಿದ್ದಂತೆ ಹಿಮಾಚಲ ಪ್ರದೇಶದ ಪ್ರವಾಸಿ ತಾಣಗಳಿಗೆ ಪ್ರವಾಸಿಗರ ಆಗಮನ...