ಕೇರಳ ಚುನಾವಣೆ | ಯುಡಿಎಫ್‌ಗೆ ಬೆಂಬಲ ನೀಡಿದ 65ಕ್ಕೂ ಅಧಿಕ ದಲಿತ, ಆದಿವಾಸಿ ಸಮುದಾಯ ಒಳಗೊಂಡ ಸಂಘಟನೆ

Date:

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಯೋಜನೆಗಳಿಂದ ಆದಿವಾಸಿ, ದಲಿತ ಮತ್ತು ಇತರ ಹಿಂದುಳಿದ ಸಮುದಾಯಗಳನ್ನು ಬದಿಗಿಡಲಾಗಿದೆ ಎಂದು 65ಕ್ಕೂ ಅಧಿಕ ದಲಿತ, ಆದಿವಾಸಿ ಗುಂಪುಗನ್ನು ಒಳಗೊಂಡ ಸಂಘಟನೆ ಆರೋಪಿಸಿವೆ. ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ (ಯುಡಿಎಫ್) ಗೆ ತನ್ನ ಬೆಂಬಲವನ್ನು ಘೋಷಿಸಿದೆ.

- Advertisement -

ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಎಡಿಎಫ್ ಕಾರ್ಯಕಾರಿ ಅಧ್ಯಕ್ಷ ಕೆ. ಅಂಬುಜಾಕ್ಷನ್, ರಾಜ್ಯದ ಒಟ್ಟು ಬಜೆಟ್‌ನ ಏಳನೇ ಒಂದು ಭಾಗ ಮಾತ್ರ ಇರುವ ಯೋಜನಾ ನಿಧಿಯ ಕೇವಲ 10% ಮಾತ್ರ ಎಸ್‌ಸಿ/ಎಸ್‌ಟಿ ಅಭಿವೃದ್ಧಿಗೆ ಮೀಸಲಿಡಲಾಗಿದೆ. ಇದರಲ್ಲಿ ಗಣನೀಯ ಭಾಗವು ಬಳಕೆಯಾಗದೆ ಉಳಿದಿದೆ ಎಂದು ದೂರಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಆದಿವಾಸಿ ಕಲಾವಿದನ ನಿಧನದ 25 ವರ್ಷಗಳ ನಂತರ ₹18...

ಈ ಚಿತ್ರಕಲಾಕೃತಿಯಲ್ಲಿ ಚಿತ್ರಿತವಾಗಿರುವ ನಾಗ, ಭೂಮಿತಾಯಿಯ ಪ್ರತೀಕ. ನಾಗನ ಮೇಲೆ ನಿಂತಿರುವ ವಿಶಾಲ ವೃಕ್ಷ, ಪ್ರಕೃತಿ ಮತ್ತು ಬದುಕಿನ ಸಂಬಂಧದ ಪ್ರತಿಫಲನ. ಗೊಂಡ್ ಆದಿವಾಸಿ ಕಲಾವಿದನ ಚಿತ್ರ ಕಲಾಕೃತಿಯೊಂದು ಆತನ ಮರಣದ 25...

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಇದನ್ನು ಓದಿದ್ದೀರಾ? ಕೇರಳ | ಹೈಕೋರ್ಟ್ ಮಧ್ಯಪ್ರವೇಶದ ಬಳಿಕವೂ ಕೋಮುದ್ವೇಷದ ಹೇಳಿಕೆ ಪುನರುಚ್ಚರಿಸಿದ ಬಿಜೆಪಿ ಅಭ್ಯರ್ಥಿ

ಹಾಗೆಯೇ ವಿಝಿಂಜಮ್ ಬಂದರು, ರಾಷ್ಟ್ರೀಯ ಹೆದ್ದಾರಿಗಳು ಮತ್ತು ಸುರಂಗ ರಸ್ತೆಗಳಂತಹ ದೊಡ್ಡ ಮೂಲಸೌಕರ್ಯ ಯೋಜನೆಗಳು ದಲಿತರು, ಆದಿವಾಸಿಗಳು, ಮೀನುಗಾರರು ಮತ್ತು ಕಡಿಮೆ ಆದಾಯದ ಗುಂಪುಗಳು ಸೇರಿದಂತೆ ಸಾಮಾನ್ಯ ತೆರಿಗೆದಾರರಿಗೆ ಪ್ರಯೋಜನವಾಗದ ಅಭಿವೃದ್ಧಿಯಾಗಿದೆ ಎಂದು ಎಡಿಎಫ್ ಹೇಳಿಕೆಯಲ್ಲಿ ತಿಳಿಸಿದೆ.

ಕಳೆದ ಒಂಬತ್ತು ವರ್ಷಗಳಲ್ಲಿ ಎಸ್‌ಸಿ/ಎಸ್‌ಟಿ ಕಲ್ಯಾಣಕ್ಕಾಗಿ ಮೀಸಲಿಟ್ಟ ₹7,411 ಕೋಟಿ ವ್ಯರ್ಥವಾಗಿದ್ದು, ಶಿಕ್ಷಣದಂತಹ ಕ್ಷೇತ್ರಗಳ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ. ಇ-ಅನುದಾನಗಳ ವಿತರಣೆಯಲ್ಲಿನ ವಿಳಂಬದಿಂದಾಗಿ ಸುಮಾರು 150 ಎಸ್‌ಸಿ/ಎಸ್‌ಟಿ ವಿದ್ಯಾರ್ಥಿಗಳು ತಮ್ಮ ಅಧ್ಯಯನವನ್ನು ತ್ಯಜಿಸಬೇಕಾದ ಸ್ಥಿತಿ ಬಂದಿದೆ ಎಂದು ಅಂಬುಜಾಕ್ಷನ್ ದೂರಿದ್ದಾರೆ. ಹಾಗೆಯೇ ಇ-ಅನುದಾನಗಳನ್ನು ಬಾಕಿ ಇಟ್ಟಿಲ್ಲ, ವಿತರಿಸಲಾಗಿದೆ ಎಂಬ ಸಚಿವ ಓ ಆರ್ ಕೇಲು ಹೇಳಿಕೆಯನ್ನು ಸಂಘಟನೆಗಳು ವಿರೋಧಿಸಿದೆ.

ಭೂರಹಿತರಿಗಾಗಿ ಕೇಂದ್ರ ಸರ್ಕಾರವು ಮಂಜೂರು ಮಾಡಿದ 19,000 ಎಕರೆ ಭೂಮಿಯನ್ನು ವಿತರಿಸಿಲ್ಲ. ಹೆಚ್ಚುವರಿಯಾಗಿ, ವಸತಿ ಯೋಜನೆಯಡಿಯಲ್ಲಿ ನಿಧಿಯ ಗಮನಾರ್ಹ ಪಾಲು ಎಸ್‌ಸಿ/ಎಸ್‌ಟಿ ಹಂಚಿಕೆಗಳಿಂದ ಬಂದಿದ್ದರೂ, ಈ ಸಮುದಾಯಗಳ ಫಲಾನುಭವಿಗಳನ್ನು ಕಡೆಗಣಿಸಲಾಗುತ್ತಿದೆ ಎಂದು ಆರೋಪಿಸಿದ್ದಾರೆ.

ಏಪ್ರಿಲ್ 9ರಂದು ಕೇರಳ ವಿಧಾನಸಭೆ ಚುನಾವಣೆ ನಡೆಯಲಿದೆ. ಮೇ 4ರಂದು ಮತ ಎಣಿಕೆ ನಡೆಯಲಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅನ್ಯಾಯದ ವಿರುದ್ಧ ಹೋರಾಟಕ್ಕೆ ಹೊಸ ರೂಪು: ‘ಸತ್ಯಾಗ್ರಹ’ ಪೋರ್ಟಲ್ ಪರಿಚಯಿಸಿದ ರಾಹುಲ್ ಗಾಂಧಿ

ದೇಶಾದ್ಯಂತ ನಡೆಯುತ್ತಿರುವ ವಿವಿಧ ಜನಪರ ಪ್ರತಿಭಟನೆಗಳು ಹಾಗೂ ಹೋರಾಟಗಳನ್ನು ಒಂದೇ ಸೂರಿನಡಿ...

ಫಾರ್ಮ್‌-6 ಮೂಲಕ ಮರುನೋಂದಣಿ ಸಾಧ್ಯವಿದ್ದರೆ SIR ಏಕೆ? ಚುನಾವಣಾ ಆಯೋಗಕ್ಕೆ ಚಿದಂಬರಂ ಪ್ರಶ್ನೆ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಕೈಬಿಡಲಾದ ಮತದಾರರು...

ದೆಹಲಿ ಸಿಜೆಪಿ ಪ್ರತಿಭಟನೆ ಬೆನ್ನಲ್ಲೇ ಹೋರಾಟಗಾರರ ವಿರುದ್ಧ ಮೂರು ಎಫ್‌ಐಆರ್ ದಾಖಲು

ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆಯಲ್ಲಿ (SIR) ಅಕ್ರಮ ನಡೆದಿದೆ ಎಂದು ಆರೋಪಿಸಿ,...

ಪದವೀಧರ ಪ್ರಾಥಮಿಕ ಶಿಕ್ಷಕರ ಸಂಘದ ಬೀದರ್ ತಾಲೂಕು ಅಧ್ಯಕ್ಷರಾಗಿ ವೀರೇಂದ್ರಕುಮಾರ್

ಕರ್ನಾಟಕ ರಾಜ್ಯ ಪದವೀಧರ ಪ್ರಾಥಮಿಕ (6ರಿಂದ 8ನೇ ತರಗತಿ) ಶಿಕ್ಷಕರ ಸಂಘದ...