ಮಣಿಪುರ ಹಿಂಸಾಚಾರ ಆರಂಭವಾಗಿ ಎರಡು ವರ್ಷ; ಭದ್ರತೆ ಹೆಚ್ಚಳ

Date:

ಮಣಿಪುರ ಹಿಂಸಾಚಾರ ಆರಂಭವಾಗಿ ಮೇ 3ರಂದು ಎರಡು ವರ್ಷವಾಗಲಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಮಣಿಪುರದಾದ್ಯಂತ ಭದ್ರತೆಯನ್ನು ಬಿಗಿಗೊಳಿಸಲಾಗಿದೆ. 2023ರ ಮೇ 3ರಂದು ಮಣಿಪುರದಲ್ಲಿ ಜನಾಂಗೀಯ ಹಿಂಸಾಚಾರ ಆರಂಭವಾಗಿದ್ದು, 250ಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ಶುಕ್ರವಾರ ಹೇಳಿದ್ದಾರೆ.

- Advertisement -

ಈಗಾಗಲೇ ಇಂಫಾಲ್, ಚುರಾಚಂದ್‌ಪುರ ಮತ್ತು ಕಾಂಗ್‌ಪೋಕ್ಪಿ ಜಿಲ್ಲಾ ಕೇಂದ್ರಗಳ ಪ್ರಮುಖ ಸ್ಥಳಗಳಲ್ಲಿ ಪೊಲೀಸರು ಶೋಧ ನಡೆಸುತ್ತಿದ್ದಾರೆ. ವಾಹನ ತಪಾಸಣೆಯನ್ನು ತೀವ್ರಗೊಳಿಸಿದ್ದಾರೆ. ಮಣಿಪುರ ಪೀಪಲ್ಸ್ ಕನ್ವೆನ್ಷನ್ (ಮಣಿಪುರ ಜನರ ಸಮಾವೇಶ) ನಡೆಯಲಿರುವ ಇಂಫಾಲ್‌ನ ಖುಮಾನ್ ಲ್ಯಾಂಪಕ್ ಮತ್ತು ಸುತ್ತಮುತ್ತ ಭದ್ರತೆಯನ್ನು ಹೆಚ್ಚಿಸಲಾಗಿದೆ. ಕಾಂಗ್ಲಾ ಗೇಟ್ ಮುಂದೆ ಕೇಂದ್ರ ಪಡೆಗಳನ್ನು ನಿಯೋಜಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಇದನ್ನು ಓದಿದ್ದೀರಾ? ಮಣಿಪುರ ಹಿಂಸಾಚಾರ | ಗ್ರಾಹಕ ವ್ಯವಹಾರಗಳ ಸಚಿವರ ಆಪ್ತ ಸಹಾಯಕನ ಅಪಹರಣ

ಮೈತೇಯಿ ಸಾಮಾಜಿಕ ಸಂಘಟನೆಯಾದ COCOMI ಮೇ 3ರಂದು ಎಲ್ಲಾ ಚಟುವಟಿಕೆಗಳನ್ನು ಸ್ಥಗಿತಗೊಳಿಸಿ ಸಮಾವೇಶದಲ್ಲಿ ಭಾಗವಹಿಸುವಂತೆ ಸಾರ್ವಜನಿಕರಿಗೆ ಕರೆ ನೀಡಿದೆ. ಕಳೆದ ಎರಡು ವರ್ಷಗಳಿಂದ ನಡೆಯುತ್ತಿರುವ ಹಿಂಸಾಚಾರವನ್ನು ನೆನೆಯಲು ಈ ಕಾರ್ಯಕ್ರಮ ನಡೆಸಲಾಗುತ್ತಿದೆ ಎಂದು ಮುಖಂಡರುಗಳು ತಿಳಿಸಿದ್ದಾರೆ.

ಈ ನಡುವೆ ಕುಕಿ ವಿದ್ಯಾರ್ಥಿಗಳ ಸಂಘಟನೆ (ಕೆಎಸ್‌ಒ) ಮತ್ತು ಜೊಮಿ ವಿದ್ಯಾರ್ಥಿಗಳ ಒಕ್ಕೂಟ (ಝಡ್‌ಎಸ್‌ಎಫ್) ಮೇ 3ರಂದು ಕುಕಿ ಪ್ರಾಬಲ್ಯದ ಎಲ್ಲಾ ಪ್ರದೇಶಗಳಲ್ಲಿ ಬಂದ್‌ಗೆ ಕರೆ ನೀಡಿವೆ. ಚುರಾಚಂದ್‌ಪುರ ಜಿಲ್ಲಾ ಕೇಂದ್ರದಲ್ಲಿ ಸ್ಥಳೀಯ ಬುಡಕಟ್ಟು ನಾಯಕರ ವೇದಿಕೆಯು ಯೋಜಿಸಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಕರೆ ನೀಡಲಾಗಿದೆ. ಶೋಕಾಚರಣೆಯ ಸಂಕೇತವಾಗಿ ಜನರು ತಮ್ಮ ನಿವಾಸಗಳಲ್ಲಿ ಕಪ್ಪು ಧ್ವಜಗಳನ್ನು ಹಾರಿಸುವಂತೆ ತಿಳಿಸಲಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಸ್ಸಾಂ ಉಪಚುನಾವಣೆ ಅಖಾಡ: ಸಿಎಂ ಶರ್ಮಾ ಮತ್ತು ಕಾಂಗ್ರೆಸ್ ಸಂಸದರ ನಡುವೆ ‘ಬಿರಿಯಾನಿ vs ರಸ್ಕ್’ ವಾಕ್ಸಮರ!

ಅಸ್ಸಾಂನ ನಗಾಂವ್ ಲೋಕಸಭಾ ಕ್ಷೇತ್ರಕ್ಕೆ ನಡೆಯಲಿರುವ ಉಪಚುನಾವಣೆಯ ಪ್ರಚಾರ ಕಣದಲ್ಲಿ ರಾಜಕೀಯ...

ಶಾಲಾ ಸಮಸ್ಯೆಗಳ ಕುರಿತು ಗ್ರಾಮ ಸಭೆಯಲ್ಲಿ ಧ್ವನಿ ಎತ್ತಿದ ವಿದ್ಯಾರ್ಥಿಗಳು; ಅಧಿಕಾರಿಗಳ ಮೆಚ್ಚುಗೆ-ಭರವಸೆ

ಸರ್ಕಾರಿ ಶಾಲಾ ವಿದ್ಯಾರ್ಥಿಗಳು ‘ವಿಶೇಷ ಗ್ರಾಮ ಸಭೆ’ಗಳಲ್ಲಿ ಪಾಲ್ಗೊಂಡು, ಪಂಚಾಯತ್ ಪ್ರತಿನಿಧಿಗಳು...

ಉತ್ತರಾಖಂಡ SIR ಅಂತಿಮ ಮತದಾರರ ಪಟ್ಟಿ ಪ್ರಕಟ: ಆದರೆ ಮುಗಿದಿಲ್ಲ ನೋಂದಣಿ ಪ್ರಕ್ರಿಯೆ

ಉತ್ತರಾಖಂಡ ರಾಜ್ಯದಲ್ಲಿ ನಡೆದ 'ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ' (ಎಸ್‌ಐಆರ್)...