ತಮಿಳುನಾಡು | ಹೊಸ ಚುನಾವಣಾ ಅಫಿಡವಿಟ್‌ನಲ್ಲಿ ಎರಡು ಬಾಕಿ ಇರುವ ಕ್ರಿಮಿನಲ್ ಪ್ರಕರಣಗಳ ಉಲ್ಲೇಖಿಸಿದ ವಿಜಯ್

Date:

ತಮಿಳುನಾಡು ಚುನಾವಣೆಗೂ ಮುನ್ನ ಟಿವಿಕೆ ಮುಖ್ಯಸ್ಥ, ನಟ ವಿಜಯ್ ಹೊಸ ಅಫಿಡವಿಟ್ ಸಲ್ಲಿಸಿದ್ದಾರೆ. ಅದರಲ್ಲಿ ಈ ಹಿಂದೆ ಘೋಷಿಸದ ಎರಡು ಕ್ರಿಮಿನಲ್ ಪ್ರಕರಣಗಳನ್ನು ಉಲ್ಲೇಖಿಸದ್ದಾರೆ.

- Advertisement -

ಈ ಹಿಂದೆ ಮಾರ್ಚ್ 30ರಂದು ಮೊದಲನೆಯ ಅಫಿಡವಿಟ್ ಸಲ್ಲಿಸಲಾಗಿತ್ತು. ಇದೀಗ ಏಪ್ರಿಲ್ 4ರಂದು ಹೊಸ ಅಫಿಡವಿಟ್ ಸಲ್ಲಿಸಿದ್ದಾರೆ. ಅದರಲ್ಲಿ ಈ ಹಿಂದಿನ ಅಫಿಡವಿಟ್‌ನಲ್ಲಿ ಸೇರಿಸದ ಚೆನ್ನೈ ಮತ್ತು ಮಧುರೈನಲ್ಲಿ ದಾಖಲಾಗಿರುವ ಎರಡು ಪ್ರಕರಣಗಳನ್ನು ಉಲ್ಲೇಖಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಇದನ್ನು ಓದಿದ್ದೀರಾ? ತಮಿಳುನಾಡು | ಸೇಲಂನಲ್ಲಿ ಟಿವಿಕೆ ಮುಖ್ಯಸ್ಥ ವಿಜಯ್ ರ‍್ಯಾಲಿ: ಓರ್ವ ಸಾವು

ಚುನಾವಣಾ ಪ್ರಚಾರದ ಸಮಯದಲ್ಲಿ ಸಾರ್ವಜನಿಕರಿಗೆ ತೊಂದರೆ ನೀಡಿದ ಆರೋಪದ ಮೇಲೆ ಚೆನ್ನೈನ ಕೆ 5 ಪೆರವಲ್ಲೂರ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಈ ಬಗ್ಗೆ ನನಗೆ ಏಪ್ರಿಲ್ 2ರಂದು ಸಾಮಾಜಿಕ ಮಾಧ್ಯಮದ ಮೂಲಕ ಮಾಹಿತಿ ತಿಳಿದುಬಂದಿದೆ ಎಂದು ಹೊಸ ಅಫಿಡವಿಟ್‌ನಲ್ಲಿ ವಿಜಯ್ ತಿಳಿಸಿದ್ದಾರೆ.

ಹಾಗೆಯೇ ಮಧುರೈ ಜಿಲ್ಲೆಯ ಕೂಡಕೋವಿಲ್ ಪೊಲೀಸ್ ಠಾಣೆಯಿಂದ 2025ರಲ್ಲಿ ಇನ್ನೊಂದು ಎಫ್‌ಐಆರ್ ದಾಖಲಾಗಿದೆ. 2025ರ ಆಗಸ್ಟ್ 21ರಂದು ಟಿವಿಕೆಯ ಎರಡನೇ ರಾಜ್ಯ ಮಟ್ಟದ ಬೃಹತ್ ಸಮ್ಮೇಳನ ನಡೆದಿತ್ತು. ಈ ವೇಳೆ ಶರತ್‌ಕುಮಾರ್ ಎಂಬ ಅಭಿಮಾನಿಯನ್ನು ಸುಮಾರು 10 ಮಂದಿ ಬೌನ್ಸರ್‌ಗಳು ತಳ್ಳಾಡಿ ಹಲ್ಲೆ ಮಾಡಿದ್ದರು ಎಂದು ದೂರು ದಾಖಲಾಗಿತ್ತು. ಆದರೆ ಈ ಪ್ರಕರಣದಲ್ಲಿ ಇನ್ನೂ ವಿಜಯ್ ಅವರಿಗೆ ಇನ್ನೂ ಸಮನ್ಸ್ ಬಂದಿಲ್ಲ.

ಎರಡು ಕ್ರಿಮಿನಲ್ ಪ್ರಕರಣಗಳನ್ನು ಹೊಸ ಅಫಿಡವಿಟ್‌ನಲ್ಲಿ ಸೇರಿಸಿದ್ದರೂ ಉಳಿದ್ದಂತೆ ಎಲ್ಲ ಮಾಹಿತಿ, ಹಣಕಾಸು ಘೋಷಣೆ ಸ್ಥಿರವಾಗಿದೆ. ಹೊಸ ಅಫಿಡವಿಟ್‌ನಲ್ಲಿ ವಿಜಯ್ ಅವರ ಚರಾಸ್ತಿಗಳ ಮೌಲ್ಯ ಸುಮಾರು 410.59 ಕೋಟಿ ರೂ.ಗಳಾಗಿದ್ದು, ಈ ಹಿಂದೆ ಘೋಷಿಸಲಾದ 404.58 ಕೋಟಿ ರೂ.ಗಳಿಗೆ ಹೋಲಿಸಿದರೆ ಕೊಂಚ ಅಧಿಕವಾಗಿದೆ. ಇದರಲ್ಲಿ 15 ಲಕ್ಷ ರೂ. ಮೌಲ್ಯದ ಬೆಳ್ಳಿ ವಸ್ತುಗಳು ಮತ್ತು 1.20 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ 883 ಗ್ರಾಂ ಚಿನ್ನಾಭರಣಗಳು ಸೇರಿವೆ.

ಇದನ್ನು ಓದಿದ್ದೀರಾ? ತಮಿಳುನಾಡು ಚುನಾವಣೆ | ಬಿಜೆಪಿ ‘ಕುತಂತ್ರ’ಕ್ಕೆ ಬಲಿಯಾಗ್ತಾರಾ ದಳಪತಿ ವಿಜಯ್‌!?

ನೀಲಂಕರೈ ಮತ್ತು ಸಾಲಿಗ್ರಾಮದಂತಹ ಸ್ಥಳಗಳಲ್ಲಿನ ವಾಣಿಜ್ಯ ಮತ್ತು ವಸತಿ ಕಟ್ಟಡಗಳು ಸೇರಿದಂತೆ ಅವರ ಸ್ಥಿರ ಆಸ್ತಿಗಳ ಒಟ್ಟು ಪ್ರಸ್ತುತ ಮಾರುಕಟ್ಟೆ ಮೌಲ್ಯವು 220.15 ಕೋಟಿ ರೂ.ಗಳೆಂದು ಅಂದಾಜಿಸಲಾಗಿದೆ. ಟಿವಿಕೆ ನಾಯಕ 2024-2025ರ ಹಣಕಾಸು ವರ್ಷಕ್ಕೆ ಒಟ್ಟು 184.53 ಕೋಟಿ ರೂ.ಗಳ ಆದಾಯವನ್ನು ಘೋಷಿಸಿದ್ದಾರೆ. ಸುಮಾರು 3.44 ಕೋಟಿ ರೂ.ಗಳ ಬಾಕಿ ಇರುವ ಆದಾಯ ತೆರಿಗೆಯ ಬಗ್ಗೆಯೂ ಉಲ್ಲೇಖಿಸಿದ್ದಾರೆ.

ವಿಜಯ್ ಪೆರಂಬೂರು ಮತ್ತು ತಿರುಚಿರಾಪಳ್ಳಿ ಪೂರ್ವ ವಿಧಾನಸಭಾ ಕ್ಷೇತ್ರಗಳಿಂದ ಚುನಾವಣೆಯಲ್ಲಿ ಸ್ಪರ್ಧಿಸುತ್ತಿದ್ದಾರೆ. ಮಾರ್ಚ್ 30ರಂದು ಪೆರಂಬೂರ್ ವಿಧಾನಸಭಾ ಕ್ಷೇತ್ರಕ್ಕೆ ತಮ್ಮ ಮೊದಲ ನಾಮಪತ್ರ ಸಲ್ಲಿಸಿದರು. ನಂತರ ಏಪ್ರಿಲ್ 2ರಂದು ತಿರುಚ್ಚಿ ಪೂರ್ವ ಕ್ಷೇತ್ರದ ಅಭ್ಯರ್ಥಿಯಾಗಿ ತಮ್ಮ ನಾಮಪತ್ರ ಸಲ್ಲಿಸಿದರು. ಏಪ್ರಿಲ್ 4ರಂದು ಪೆರಂಬೂರ್‌ನಲ್ಲಿ ಸಲ್ಲಿಸಲಾದ ಹೊಸ ಅಫಿಡವಿಟ್‌ನಲ್ಲಿ ಈ ಸೇರ್ಪಡೆ ಬದಲಾವಣೆಗಳನ್ನು ಮಾಡಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು ದಸರಾ ಉದ್ಘಾಟನೆಗೆ ಅಭಿನವ ಗವಿಸಿದ್ದೇಶ್ವರ ಶ್ರೀಗೆ ಆಹ್ವಾನ

ಕೊಪ್ಪಳದ ಗವಿಸಿದ್ದೇಶ್ವರ ಮಠದ ಪೀಠಾಧಿಪತಿಗಳಾದ ಅಭಿನವ ಗವಿಸಿದ್ದೇಶ್ವರ ಸ್ವಾಮೀಜಿ ಅವರು ಈ...

ಪತ್ರಕರ್ತೆಯರ ಮೇಲೆ ಲೈಂಗಿಕ ದೌರ್ಜನ್ಯ; ಮಹಿಳೆಯರಿಗೆ ಸುರಕ್ಷತೆಯೇ ಇಲ್ಲವೇ: ಮೋಶಾಗೆ ಪ್ರಿಯಾಂಕಾ ಗಾಂಧಿ ಪ್ರಶ್ನೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆಯ ವರದಿಗಾರಿಕೆ ಮಾಡುತ್ತಿದ್ದ ಮಹಿಳಾ ಪತ್ರಕರ್ತೆಯರ ಮೇಲೆ...