ಕಾಪಿರೈಟ್‌ ಕೃತಿಗಳಿಂದ AI ತರಬೇತಿ ಕಾನೂನು ಬಾಹಿರವಲ್ಲ: ದೆಹಲಿ ಹೈಕೋರ್ಟ್‌

Date:

ಕೃತಿಸ್ವಾಮ್ಯ (Copyright) ಹೊಂದಿರುವ ಕೃತಿಗಳನ್ನು ಸಂಗ್ರಹಿಸಿ ಕೃತಕ ಬುದ್ಧಿಮತ್ತೆ (AI) ಮಾದರಿಗಳಿಗೆ ತರಬೇತಿ ನೀಡುವುದು ಕೃತಿಸ್ವಾಮ್ಯ ಉಲ್ಲಂಘನೆಯಾಗುವುದಿಲ್ಲ ಎಂದು ದೆಹಲಿ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ.

- Advertisement -

ಈ ಕುರಿತು ಶುಕ್ರವಾರ ತೀರ್ಪು ನೀಡಿದ ನ್ಯಾಯಾಲಯ, ಕೃತಿಸ್ವಾಮ್ಯದ ವಿಷಯಗಳನ್ನು ಬಳಸಿ AI ಮಾದರಿಗಳಿಗೆ ತರಬೇತಿ ನೀಡುವುದನ್ನು ಓಪನ್‌ಎಐಗೆ (OpenAI) ನಿರ್ಬಂಧಿಸಿದರೆ, ಅದು ಕಂಪನಿಗೆ ಮಾತ್ರವಲ್ಲದೆ ಸಾರ್ವಜನಿಕ ಹಿತಾಸಕ್ತಿಗೂ ಅಪೂರಣೀಯ ಹಾನಿಯನ್ನು ಉಂಟುಮಾಡಲಿದೆ ಎಂದು ಅಭಿಪ್ರಾಯಪಟ್ಟಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಪ್ರಚಾರ, ರಾಹುಲ್ ವ್ಯಕ್ತಿತ್ವ ಮತ್ತು ರೆಜಿಮ್ ಚೇಂಜ್

ಮೋದಿ ಅನುಭವಿ ನಟನಂತೆ, ಪ್ರದರ್ಶಕನಂತೆ ಕಾಣುತ್ತಾರೆ. ರಾಹುಲ್ ಗಾಂಧಿ ಪಾತ್ರದ ಒಳಹೊಕ್ಕು ನಟಿಸುವ ಕಲಾವಿದನಂತೆ ಕಾಣುತ್ತಾರೆ. ಈ ನಿಟ್ಟಿನಲ್ಲಿ ರಾಹುಲ್ ರಾಜಕೀಯ ನಡೆಗಳು ಮೋದಿಯವರ ರಾಜಕೀಯ ನಡೆಗಳೊಂದಿಗೆ ವಿಶ್ಲೇಷಣೆಗೊಳಗಾಗುತ್ತಿವೆ. ಕಳೆದ 12 ವರ್ಷಗಳ...

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

ಅಮೆರಿಕದ ಸ್ಯಾನ್‌ ಫ್ರಾನ್ಸಿಸ್ಕೊ ಮೂಲದ ಕೃತಕ ಬುದ್ಧಿಮತ್ತೆ ಸಂಶೋಧನಾ ಸಂಸ್ಥೆಯಾಗಿರುವ ಓಪನ್‌ಎಐ, ಚಾಟ್‌ಜಿಪಿಟಿ (ChatGPT) ಸೇರಿದಂತೆ ಹಲವು ಜನರೇಟಿವ್ ಎಐ ಮಾದರಿಗಳನ್ನು ಅಭಿವೃದ್ಧಿಪಡಿಸಿದೆ.

2024ರಲ್ಲಿ ಸುದ್ದಿಸಂಸ್ಥೆ ANI Media Pvt Ltd ದೆಹಲಿ ಹೈಕೋರ್ಟ್‌ನಲ್ಲಿ ಓಪನ್‌ಎಐ ಐಎನ್‌ಸಿ ಮತ್ತು ಓಪನ್‌ಎಐ ಓಪ್‌ಕೋ ಎಲ್‌ಎಲ್‌ಸಿ ವಿರುದ್ಧ ಮೊಕದ್ದಮೆ ದಾಖಲಿಸಿತ್ತು. ತನ್ನ ಸುದ್ದಿಸಾಮಗ್ರಿಯನ್ನು ಅನುಮತಿಯಿಲ್ಲದೆ ದೊಡ್ಡ ಭಾಷಾ ಮಾದರಿಗಳಿಗೆ (Large Language Models) ತರಬೇತಿ ನೀಡಲು ಬಳಸಲಾಗಿದೆ ಎಂದು ಎಎನ್‌ಐ ಆರೋಪಿಸಿತ್ತು. ಭಾರತದಲ್ಲಿ ಎಐ ತರಬೇತಿ ಮತ್ತು ಕೃತಿಸ್ವಾಮ್ಯಕ್ಕೆ ಸಂಬಂಧಿಸಿದಂತೆ ದಾಖಲಾಗಿದ್ದ ಮೊದಲ ಪ್ರಮುಖ ಪ್ರಕರಣ ಇದಾಗಿತ್ತು.

ನಂತರ, ಫೆಡರೇಷನ್ ಆಫ್ ಇಂಡಿಯನ್ ಪಬ್ಲಿಷರ್ಸ್ (FIP), ಡಿಜಿಟಲ್ ನ್ಯೂಸ್ ಪಬ್ಲಿಷರ್ಸ್ ಅಸೋಸಿಯೇಷನ್ (DNPA), ಇಂಡಿಯನ್ ಮ್ಯೂಸಿಕ್ ಇಂಡಸ್ಟ್ರಿ (IMI) ಸೇರಿದಂತೆ ಹಲವು ಮಾಧ್ಯಮ, ಪ್ರಕಾಶನ ಮತ್ತು ಕೈಗಾರಿಕಾ ಸಂಸ್ಥೆಗಳೂ ಇದೇ ರೀತಿಯ ಕಳವಳ ವ್ಯಕ್ತಪಡಿಸಿದ್ದವು.

ಇದನ್ನೂ ಓದಿ: ಸಿಜೆಪಿ ಪ್ರತಿಭಟನೆ ಕುರಿತು ಯಾವುದೇ ಅರ್ಜಿ ಬಂದಿಲ್ಲ, ಮಾಧ್ಯಮಗಳು ಸುಳ್ಳು ಸುದ್ದಿ ಪ್ರಸಾರ ಮಾಡಿವೆ: ಸಿಜೆಐ ಸೂರ್ಯಕಾಂತ್

ಪ್ರಕರಣದ ವಿಚಾರಣೆಗೆ ನೆರವಾಗುವ ಉದ್ದೇಶದಿಂದ 2024ರ ನವೆಂಬರ್‌ನಲ್ಲಿ ನ್ಯಾಯಮೂರ್ತಿ ಅಮಿತ್ ಬನ್ಸಾಲ್ ಅವರು ವಕೀಲ ಆದರ್ಶ್ ರಾಮಾನುಜನ್ ಹಾಗೂ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ವಿಶ್ವವಿದ್ಯಾಲಯದ (NLSIU) ಕಾನೂನು ಪ್ರಾಧ್ಯಾಪಕ ಡಾ. ಅರುಲ್ ಜಾರ್ಜ್ ಸ್ಕಾರಿಯಾ ಅವರನ್ನು ನ್ಯಾಯಾಲಯದ ಸಹಾಯಕರಾಗಿ (Amici Curiae) ನೇಮಿಸಿದ್ದರು. ಈ ತೀರ್ಪು ಭಾರತದಲ್ಲಿ ಕೃತಕ ಬುದ್ಧಿಮತ್ತೆ ಮತ್ತು ಕೃತಿಸ್ವಾಮ್ಯ ಹಕ್ಕುಗಳಿಗೆ ಸಂಬಂಧಿಸಿದ ಕಾನೂನು ಚರ್ಚೆಯಲ್ಲಿ ಮಹತ್ವದ ಮೈಲಿಗಲ್ಲು ಎಂದು ಪರಿಗಣಿಸಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಹಲ್ಲೆಗೊಳಗಾಗಿ ರೈಲ್ವೆ ಹಳಿ ಮೇಲೆ ಬಿದ್ದಿದ್ದ ಯುವಕ ಚಿಕಿತ್ಸೆ ಫಲಿಸದೆ ಸಾವು

ಶಿವಮೊಗ್ಗ ರೈಲ್ವೆ ಹಳಿ ಬಳಿ ಗಂಭೀರ ಗಾಯಗಳೊಂದಿಗೆ ಪತ್ತೆಯಾಗಿದ್ದ 26 ವರ್ಷದ...

ನೇಣು ಬಿಗಿದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ; ತರಾತುರಿಯಲ್ಲಿ ಅಂತ್ಯಕ್ರಿಯೆ, ಕಾರಣ ನಿಗೂಢ!

ಸೊರಬ ತಾಲೂಕಿನ ಮುಟಗುಪ್ಪೆ ಗ್ರಾಮದಲ್ಲಿ 22 ವರ್ಷದ ಯುವತಿಯೊಬ್ಬರು ಮನೆಯಲ್ಲಿ ನೇಣು...

ಶಿವಮೊಗ್ಗ | ಗಾಂಜಾ ಮಾರಾಟ ಆರೋಪ: ಐವರು ಅರೆಸ್ಟ್‌, 1.23 ಕೆಜಿ ಮಾದಕ ವಸ್ತು ಜಪ್ತಿ

ಶಿವಮೊಗ್ಗ ನಗರದ ಅನುಪಿನಕಟ್ಟೆ ಸಮೀಪ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದಡಿ ತುಂಗಾನಗರ...