AIADMKಯಿಂದ TVKಗೆ ಜಿಗಿಯಲು ಸಜ್ಜಾದ 10 ಶಾಸಕರು; ಪೂರ್ಣ ಬಹುಮತದತ್ತ ವಿಜಯ್‌ ಸರ್ಕಾರ!

Date:

ತಮಿಳುನಾಡಿನಲ್ಲಿ ಪ್ರಮುಖ ರಾಜಕೀಯ ಪಲ್ಲಟ ನಡೆಯುತ್ತಿದೆ. ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (TVK) ಪಕ್ಷವು ರಾಜ್ಯದಲ್ಲಿ ತನ್ನ ಹಿಡಿತವನ್ನು ಮತ್ತಷ್ಟು ಗಟ್ಟಿಗೊಳಿಸುತ್ತಿದೆ. ಪ್ರಮುಖ ವಿರೋಧ ಪಕ್ಷವಾದ ಎಐಎಡಿಎಂಕೆ ತೀವ್ರ ಹಿನ್ನಡೆ ಅನುಭವಿಸುತ್ತಿದ್ದು, ಪಕ್ಷದ ಸುಮಾರು 10 ಶಾಸಕರು ಟಿವಿಕೆಗೆ ಸೇರ್ಪಡೆಗೊಳ್ಳಲು ಮಾತುಕತೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.

- Advertisement -

ವಿಪಕ್ಷವನ್ನು ಸೆಳೆಯಲು ಟಿವಿಕೆ ರಹಸ್ಯ ಕಾರ್ಯಾಚರಣೆ ನಡೆಸುತ್ತಿದೆ. ಅದಕ್ಕೆ ‘ಆಪರೇಷನ್ ಎಲ್’ ಎಂದು ಕರೆಯಲಾಗುತ್ತಿದೆ. ಟಿವಿಕೆ ನಾಯಕರು ಮತ್ತು ಅಸಮಾಧಾನಿತ ಎಐಎಡಿಎಂಕೆ ಶಾಸಕರ ನಡುವೆ ಸರಣಿ ಮಾತುಕತೆಗಳು ನಡೆಯುತ್ತಿದ್ದು, ಮೂಲಗಳ ಪ್ರಕಾರ ಆಗಸ್ಟ್ 15ರ ಒಳಗಾಗಿ ವಿರೋಧ ಪಕ್ಷದ ಕನಿಷ್ಠ 10 ಶಾಸಕರು ಟಿವಿಕೆ ಪಕ್ಷವನ್ನು ಸೇರುವ ಸಾಧ್ಯತೆ ದಟ್ಟವಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೋಟ್ ಕ್ಲಬ್‌ನಿಂದ ಜಂತರ್ ಮಂತರ್‌ವರೆಗೆ; ದೆಹಲಿಯ ಪ್ರತಿಭಟನಾ ತಾಣ...

ಸ್ವಾತಂತ್ರ್ಯಾನಂತರ ಹಲವು ದಶಕಗಳವರೆಗೆ ದೆಹಲಿಯ ಇಂಡಿಯಾ ಗೇಟ್ ಸಮೀಪದ ರಾಜಪಥದಲ್ಲಿರುವ ಬೋಟ್ ಕ್ಲಬ್ ಮೈದಾನವು ದೇಶದ ಪ್ರಮುಖ ರಾಜಕೀಯ ಪ್ರತಿಭಟನೆಗಳು, ರೈತ ಸಮಾವೇಶಗಳು ಮತ್ತು ಸಾರ್ವಜನಿಕ ಚಳವಳಿಗಳಿಗೆ ವೇದಿಕೆಯಾಗಿತ್ತು. ದೆಹಲಿಯ ಜಂತರ್ ಮಂತರ್ ಪ್ರತಿಭಟನಾ...

2026ರ ಅರ್ಥಶಾಸ್ತ್ರ ನೊಬೆಲ್ ಪ್ರಶಸ್ತಿಯ ಹಿಂದಿನ ತಿರುಳು

ಅಮೆರಿಕದ ಇಬ್ಬರು ವಿದ್ವಾಂಸರಾದ ರಾಬರ್ಟ್ ಇ. ಹಾಲ್ ಮತ್ತು ಮೈಕಲ್ ವುಡ್‌ಫೋರ್ಡ್ ರೂಪಿಸಿದ 'ನವ-ಕೇನ್ಸಿಯನ್ ಮಾದರಿ'ಗಳು ಇಂದು ಜಗತ್ತಿನ ಬಹುತೇಕ ಕೇಂದ್ರ ಬ್ಯಾಂಕುಗಳ ಮತ್ತು ಹಣಕಾಸು ಇಲಾಖೆಗಳ ದೈನಂದಿನ ದಿಕ್ಸೂಚಿಯಾಗಿವೆ. ಆ ಕಾರಣಕ್ಕೆ...

ಮಣಿಪುರ | ಜನಾಂಗೀಯ ಕಿಚ್ಚಿಗೆ ದ್ವೇಷ ರಾಜಕಾರಣದ ತುಪ್ಪ;...

ಮಣಿಪುರದಲ್ಲಿ ಕಳೆದ ಮೂರು ವರ್ಷಗಳಿಂದ ಮುಗಿಯದ ಜನಾಂಗೀಯ ರಕ್ತಪಾತಕ್ಕೆ, ಸಮುದಾಯಗಳ ನಡುವಿನ ಹಳೆಯ ವೈರತ್ವವನ್ನು ಮೀರಿ, ಸರ್ಕಾರದ ಪಕ್ಷಪಾತದ ರಾಜಕಾರಣ, ಆಡಳಿತಾತ್ಮಕ ವೈಫಲ್ಯ ಮತ್ತು ವಿಭಜನಾತ್ಮಕ ನೀತಿಗಳೂ ಕಾರಣವಾಗಿವೆ. ಉರಿಯುವ ಬೆಂಕಿಗೆ ತುಪ್ಪ...

ಸರಣಿ ರಾಜೀನಾಮೆಗಳ ಬಳಿಕ ಎಐಎಡಿಎಂಕೆ ಪಕ್ಷದ ಶಾಸಕರ ಸಂಖ್ಯಾಬಲ ಈಗಾಗಲೇ 41ಕ್ಕೆ ಕುಸಿದಿದೆ. ಮತ್ತೊಂದೆಡೆ ಮುಖ್ಯಮಂತ್ರಿ ವಿಜಯ್ ನೇತೃತ್ವದ ಟಿವಿಕೆ ನಿರಂತರವಾಗಿ ತನ್ನ ಶಕ್ತಿಯನ್ನು ವಿಸ್ತರಿಸಿಕೊಳ್ಳುತ್ತಿದೆ. ಪಕ್ಷದ ವರ್ಚಸ್ಸು ದಿನದಿಂದ ದಿನಕ್ಕೆ ಕುಸಿಯುತ್ತಿರುವುದರಿಂದ, ಎಐಎಡಿಎಂಕೆಯಲ್ಲೇ ಮುಂದುವರಿದರೆ ಮುಂದಿನ ಚುನಾವಣೆಯಲ್ಲಿ ಭವಿಷ್ಯ ಅನಿಶ್ಚಿತವಾಗಬಹುದು ಎಂಬ ಆತಂಕ ಹಲವು ಶಾಸಕರಲ್ಲಿ ಮನೆಮಾಡಿದೆ. ಹೀಗಾಗಿ ಅವರು ಆಡಳಿತ ಪಕ್ಷದತ್ತ ಮುಖ ಮಾಡಿದ್ದಾರೆ ಎನ್ನಲಾಗಿದೆ.

ಈ ವಲಸೆ ಪ್ರಕ್ರಿಯೆ ಪೂರ್ಣಗೊಂಡರೆ ಮುಖ್ಯಮಂತ್ರಿ ವಿಜಯ್ ಅವರ ಸರ್ಕಾರ ವಿಧಾನಸಭೆಯಲ್ಲಿ ಯಾವುದೇ ಅಡೆತಡೆಯಿಲ್ಲದೆ ಸ್ಪಷ್ಟ ಮತ್ತು ಪೂರ್ಣ ಬಹುಮತವನ್ನು ಹೊಂದಲಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ನಮ್ಮನ್ನು ದಮನಿಸುವ ಪೊಲೀಸ್ ಆದೇಶ ಕೂಡಲೇ ರದ್ದಾಗಲಿ’: ರಾಜ್ಯ ಸರ್ಕಾರದ ವಿರುದ್ಧ ಸಿಡಿದೆದ್ದ ಲಿಂಗತ್ವ ಅಲ್ಪಸಂಖ್ಯಾತರು

ಲಿಂಗತ್ವ ಅಲ್ಪಸಂಖ್ಯಾತರ ವಿರುದ್ಧ ಬೆಂಗಳೂರು ನಗರ ಪೊಲೀಸ್ ಆಯುಕ್ತರು ಇತ್ತೀಚೆಗೆ ಹೊರಡಿಸಿರುವ...

ಎಸ್‌ಸಿ, ಎಸ್‌ಟಿ ಮೀಸಲಾತಿ ಶೇ.56ಕ್ಕೆ ಏರಿಕೆ ಮಾಡಿದ್ದ ಆದೇಶ ರದ್ದುಗೊಳಿಸಿದ ಹೈಕೋರ್ಟ್!

ರಾಜ್ಯದ ಹಿಂದಿನ ಬಸವರಾಜ್ ಬೊಮ್ಮಾಯಿ ನೇತೃತ್ವದ ಸರ್ಕಾರವು ಪರಿಶಿಷ್ಟ ಜಾತಿ (ಎಸ್‌ಸಿ)...

ದೆಹಲಿಯಲ್ಲಿ ಹೆಚ್ಚಿದ ಕಟ್ಟೆಚ್ಚರ: ಒಂದು ತಿಂಗಳು 20,000 ಅರೆಸೇನಾ ಸಿಬ್ಬಂದಿ ನಿಯೋಜನೆ

ಪ್ರತಿಪಕ್ಷ 'ಇಂಡಿಯಾ' ಒಕ್ಕೂಟದ ಪ್ರತಿಭಟನೆ ಹಾಗೂ ಮುಂಬರುವ ಹಬ್ಬದ ಋತುವಿನ ಹಿನ್ನೆಲೆಯಲ್ಲಿ...

ಬೋಟ್ ಕ್ಲಬ್‌ನಿಂದ ಜಂತರ್ ಮಂತರ್‌ವರೆಗೆ; ದೆಹಲಿಯ ಪ್ರತಿಭಟನಾ ತಾಣ ಬದಲಾದದ್ದು ಹೇಗೆ?

ಸ್ವಾತಂತ್ರ್ಯಾನಂತರ ಹಲವು ದಶಕಗಳವರೆಗೆ ದೆಹಲಿಯ ಇಂಡಿಯಾ ಗೇಟ್ ಸಮೀಪದ ರಾಜಪಥದಲ್ಲಿರುವ ಬೋಟ್...