ಎಐಸಿಸಿ ಅಧ್ಯಕ್ಷ ಮತ್ತು ರಾಜ್ಯಸಭೆ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಇಂದು (ಜುಲೈ 21-ಸೋಮವಾರ) 83ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಮಲ್ಲಿಕಾರ್ಜುನ ಖರ್ಗೆ ಅವರಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ, ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಅನೇಕ ಗಣ್ಯರು ಹುಟ್ಟುಹಬ್ಬದ ಶುಭಾಶಯ ತಿಳಿಸಿದ್ದಾರೆ.
ಈ ಮಧ್ಯೆ ಕಾಂಗ್ರೆಸ್ ಸಂಸದರು ಸಂಸತ್ತಿನಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರ ಜನ್ಮದಿನವನ್ನು ವಿಶಿಷ್ಟವಾಗಿ ಆಚರಿಸಿದರು. ರಾಹುಲ್ ಗಾಂಧಿ ನೇತೃತ್ವದಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರ ಹುಟ್ಟುಹಬ್ಬ ಆಚರಿಸಿದ ಕಾಂಗ್ರೆಸ್ ಸಂಸದರು, ಹಿರಿಯ ನಾಯಕನಿಗೆ ಆತ್ಮೀಯವಾಗಿ ಶುಭ ಕೋರಿದರು.
ಇದೇ ವೇಳೆ ಲೋಕಸಭೆ ಪ್ರತಿಪಕ್ಷ ಸಂಸದ ರಾಹುಲ್ ಗಾಂಧಿ ಅವರು, ಮಲ್ಲಿಕಾರ್ಜುನ ಖರ್ಗೆ ಅವರಿಗ ಕೇಕ್ ತಿನ್ನಿಸಿ ಸಂಭ್ರಮಿಸಿದರು. ಮಲ್ಲಿಕಾರ್ಜುನ ಖರ್ಗೆ ಅವರ ಹುಟ್ಟುಹಬ್ಬದ ನಿಮಿತ್ತವಾಗಿ ತರಿಸಿದ್ದ ಕೇಕ್‌ನ್ನು ಕತ್ತರಿಸಿದ ರಾಹುಲ್ ಗಾಂಧಿ, ರಾಜ್ಯಸಭೆ ವಿಪಕ್ಷ ನಾಯಕನಿಗೆ ಶುಭಾಶಯ ಕೋರಿದರು.
ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ‘ಮನೆ-ಮನೆಗೆ ಪೊಲೀಸ್’ ಕಾರ್ಯಕ್ರಮ: ಪೊಲೀಸ್ ಇಲಾಖೆಯ ಮಾದರಿ ಹೆಜ್ಜೆ
ಮಲ್ಲಿಕಾರ್ಜುನ ಖರ್ಗೆ ಕೂಡ ರಾಹುಲ್ ಗಾಂಧಿ ಅವರಿಗ ಕೇಕ್ ತಿನ್ನಿಸಿ ಆತ್ಮೀಯತೆ ಮೆರೆದರು. ಈ ವೇಳೆ ನೆರೆದಿದ್ದ ಕಾಂಗ್ರೆಸ್ ಸಂಸದರೆಲ್ಲರೂ ಚಪ್ಪಾಳೆ ತಟ್ಟು ಮೂಲಕ ಸಂಭ್ರಮಿಸಿದರು. ಇದೇ ವೇಳೆ ಮಲ್ಲಿಕಾರ್ಜುನ ಖರ್ಗೆ ಅವರು ಕಾಂಗ್ರೆಸ್ ಸಂಸದೆ ಮತ್ತು ರಾಹುಲ್ ಗಾಂಧಿ ಸಹೋದರಿ ಪ್ರಿಯಾಂಕಾ ಗಾಂಧಿ ಅವರಿಗೂ ಕೇಕ್ ತಿನ್ನಿಸಿದರು.
ಪ್ರಿಯಾಂಕಾ ಗಾಂಧಿ ಅವರು ಮಲ್ಲಿಕಾರ್ಜುನ ಖರ್ಗೆ ಅವರಿಗೆ ಶಾಲು ಹೊದಿಸಿ ಅಭಿನಂದಿಸಿದರೆ, ರಾಹಲ್ ಗಾಂಧಿ ಅವರು ಹೂಗುಚ್ಛ ನೀಡುವ ಮೂಲಕ ಜನ್ಮದಿನದ ಶುಭಾಶಯ ತಿಳಿಸಿದರು.
ಇನ್ನು ಇಂದಿನಿಂದಲೇ ಸಂಸತ್ತಿನ ಮಾನ್ಸೂನ್ ಅಧಿವೇಶನ ಆರಂಭವಾಗಿದ್ದು, ಪಹಲ್ಗಾಮ್ ಭಯೋತ್ಪಾದಕ ದಾಳಿ, ಆಪರೇಷನ್ ಸಿಂಧೂರ ಸೇನಾ ಕಾರ್ಯಾಚರಣೆ ಮತ್ತು ಬಿಹಾರ ಮತದಾರ ಪಟ್ಟಿ ವಿಶೇಷ ತೀವ್ರ ವಿಚಾರಣೆ (SIR) ವಿಚಾರವಾಗಿ ಕೇಂದ್ರ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ಕಾಂಗ್ರೆಸ್ ಸಿದ್ಧವಾಗಿದೆ.
#MonsoonSession | Delhi: Congress MPs, including Lok Sabha LoP Rahul Gandhi, today celebrated the birthday of party president and Rajya Sabha LoP Mallikarjun Kharge.
— ANI (@ANI) July 21, 2025
(Source: AICC) pic.twitter.com/RYQaQLECCC
