ಸಾಮೂಹಿಕ ಸಿಕ್ ಲೀವ್| 25 ಸಿಬ್ಬಂದಿಗಳನ್ನು ವಜಾಗೊಳಿಸಿದ ಏರ್ ಇಂಡಿಯಾ ಎಕ್ಸ್‌ಪ್ರೆಸ್

Date:

ಸಿಬ್ಬಂದಿಗಳು ಯಾವುದೇ ಸೂಚನೆಯಿಲ್ಲದೆ ಸಾಮೂಹಿಕವಾಗಿ ಸಿಕ್ ಲೀವ್ (Mass Sick Leave)ತೆಗೆದುಕೊಂಡು ವಿಮಾನಗಳನ್ನೇ ರದ್ದು ಮಾಡಬೇಕಾದ ಸ್ಥಿತಿ ಉಂಟಾದ ಕಾರಣ ಏರ್ ಇಂಡಿಯಾ ಎಕ್ಸ್‌ಪ್ರೆಸ್ 25 ಸಿಬ್ಬಂದಿಗಳನ್ನು ವಜಾಗೊಳಿಸಿದೆ.

- Advertisement -

200ಕ್ಕೂ ಹೆಚ್ಚು ಕ್ಯಾಬಿನ್ ಸಿಬ್ಬಂದಿ ಅನಾರೋಗ್ಯ ಕಾರಣ ನೀಡಿ ರಜೆ ಹಾಕಿದ್ದಾರೆ ಎಂದು ವರದಿಯಾಗಿದೆ. ಅಷ್ಟೊಂದು ಪ್ರಮಾಣದಲ್ಲಿ ಸಿಬ್ಬಂದಿಗಳ ಕೊರತೆ ಉಂಟಾದ ಕಾರಣದಿಂದಾಗಿ ಕೊಚ್ಚಿ, ಕ್ಯಾಲಿಕಟ್ ಮತ್ತು ಬೆಂಗಳೂರು ಸೇರಿದಂತೆ ವಿವಿಧ ವಿಮಾನ ನಿಲ್ದಾಣಗಳಲ್ಲಿ ಏರ್‌ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನ ಹಾರಾಟಕ್ಕೆ ಅಡಚಣೆಯಾಗಿದೆ. ಸುಮಾರು 70 ಕ್ಕೂ ಹೆಚ್ಚು ವಿಮಾನಗಳು ರದ್ದಾಗಿದ್ದು, ಇನ್ನೂ ಹಲವಾರು ವಿಮಾನಗಳ ವಿಳಂಬವಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಇನ್ನು ಟಾಟಾ ಗ್ರೂಪ್ ಒಡೆತನದ ವಿಮಾನಯಾನ ಸಂಸ್ಥೆಯು ಉಳಿದ ಕ್ಯಾಬಿನ್ ಸಿಬ್ಬಂದಿಗೆ ಗುರುವಾರ ಸಂಜೆ 4 ಗಂಟೆಯೊಳಗೆ ಮತ್ತೆ ಕರ್ತವ್ಯಕ್ಕೆ ಹಾಜರಾಗಲು ಅಥವಾ ವಜಾಗೊಳಿಸುವುದಾಗಿ ಎಚ್ಚರಿಕೆಯನ್ನು ನೀಡಿದೆ ಎಂದು ವರದಿಯಾಗಿದೆ.

ಇದನ್ನು ಓದಿದ್ದೀರಾ?  ಸಾಮೂಹಿಕ ‘ಸಿಕ್ ಲೀವ್’ ಹಾಕಿಕೊಂಡ ಸಿಬ್ಬಂದಿಗಳು; 78 ವಿಮಾನಗಳು ರದ್ದು!

ಏರ್‌ಲೈನ್‌ನಲ್ಲಿ ಉನ್ನತ ಮಟ್ಟದಲ್ಲಿ ಸುಮಾರು 500 ಸಿಬ್ಬಂದಿಗಳು ಸೇರಿದಂತೆ ಸುಮಾರು 1,400 ಕ್ಯಾಬಿನ್ ಸಿಬ್ಬಂದಿ ಇದ್ದಾರೆ. ಏರ್‌ಲೈನ್‌ನಲ್ಲಿ ವೇತನ ಸೇರಿದಂತೆ, ಕೆಲವು ವ್ಯವಸ್ಥೆಗಳ ವಿರುದ್ಧ ಪ್ರತಿಭಟನೆಯ ಭಾಗವಾಗಿ ಮಂಗಳವಾರ ರಾತ್ರಿಯಿಂದ 200ಕ್ಕೂ ಹೆಚ್ಚು ಕ್ಯಾಬಿನ್ ಸಿಬ್ಬಂದಿಗಳು ಕರ್ತವ್ಯಕ್ಕೆ ಹಾಜರಾಗಿಲ್ಲ. ಅನಾರೋಗ್ಯದ ಕಾರಣ ನೀಡಿದ್ದಾರೆ.

ಟಾಟಾ ಗ್ರೂಪ್‌ನೊಂದಿಗೆ ವಿಲೀನಗೊಂಡ ನಂತರ ಸಿಬ್ಬಂದಿಗಳನ್ನು ಸಮಾನವಾಗಿ ನೋಡಲಾಗುತ್ತಿಲ್ಲ. ಇಂಟರ್‌ವೀವ್‌ನಲ್ಲಿ ಪಾಸ್ ಆಗಿದ್ದರೂ ಕೂಡಾ ಕೆಲವು ಸಿಬ್ಬಂದಿಗೆ ಕಡಿಮೆ ದರ್ಜೆಯ ಉದ್ಯೋಗ ನೀಡಲಾಗಿದೆ ಎಂದು ಏರ್ ಇಂಡಿಯಾ ಎಕ್ಸ್‌ಪ್ರೆಸ್‌ನ ಸಿಬ್ಬಂದಿಗಳ ಆರೋಪವಾಗಿದೆ.

ಇನ್ನು ಪ್ರಾದೇಶಿಕ ಕಾರ್ಮಿಕ ಆಯುಕ್ತರು ಏರ್‌ಲೈನ್‌ಗೆ ಪತ್ರ ಬರೆದಿದ್ದು ಕಳವಳ ವ್ಯಕ್ತಪಡಿಸಿದೆ. “ಏರ್ ಇಂಡಿಯಾ ಎಕ್ಸ್‌ಪ್ರೆಸ್‌ನ ಆಡಳಿತವು ಯಾವುದೇ ಜವಾಬ್ದಾರಿಯುತ ನಿರ್ಧಾರ ಮಾಡಿ ಯಾವುದೇ ರಾಜಿ ಪ್ರಕ್ರಿಯೆ ನಡೆಸಿಲ್ಲ. ಕಾರ್ಮಿಕ ಕಾನೂನುಗಳ ದುರುಪಯೋಗ ಮತ್ತು ಸ್ಪಷ್ಟ ಉಲ್ಲಂಘನೆ ಇಲ್ಲಿ ಕಂಡು ಬರುತ್ತದೆ” ಎಂದು ಹೇಳಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅ. 10ರ ಜಂತರ್ ಮಂತರ್ ಪ್ರತಿಭಟನೆಗೆ ಅನುಮತಿ ನಿರಾಕರಿಸಿದ ದೆಹಲಿ ಪೊಲೀಸ್; ಕಠಿಣ ಕ್ರಮದ ಎಚ್ಚರಿಕೆ

ಮುಖ್ಯ ಚುನಾವಣಾ ಆಯುಕ್ತರ (CEC) ಹೊಣೆಗಾರಿಕೆ ಪ್ರಶ್ನಿಸಿ 'ಕಾಕ್ರೋಚ್ ಜನತಾ ಪಾರ್ಟಿ'...

ಪಂಜಾಬ್ ಸಿಎಂ ಕಚೇರಿ ಭ್ರಷ್ಟಾಚಾರದ ಸಿಬಿಐ ತನಿಖೆ ವಿಚಾರಣೆಯಿಂದ ಹಿಂದೆ ಸರಿದ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ

ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರ ಕಚೇರಿಗೆ ಸಂಬಂಧಿಸಿದ ಭ್ರಷ್ಟಾಚಾರದ ಆರೋಪಗಳ...

ಪಶ್ಚಿಮ ಬಂಗಾಳ ಉಪಚುನಾವಣೆ ವೇಳೆ ಅಕ್ರಮದ ಆರೋಪ; ಮರುಮತದಾನಕ್ಕೆ ವಿಪಕ್ಷಗಳ ಆಗ್ರಹ

ಪಶ್ಚಿಮ ಬಂಗಾಳದ ನಂದಿಗ್ರಾಮ ಮತ್ತು ರೇಜಿನಗರ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಮತ...