8 ಗಂಟೆಗಳ ಕಾಲ ತಡವಾದ ಏರ್ ಇಂಡಿಯಾ ವಿಮಾನ: ಎಸಿ ಇಲ್ಲದೆ ಪ್ರಯಾಣಿಕರು ಮೂರ್ಛೆ

Date:

ದೆಹಲಿಯಿಂದ ಅಮೆರಿಕದ ಸ್ಯಾನ್‌ ಪ್ರಾನ್ಸಿಸ್ಕೊಗೆ ತೆರಳಬೇಕಿದ್ದ ಏರ್‌ ಇಂಡಿಯಾ ವಿಮಾನವೊಂದು 8 ಗಂಟೆಗಳ ಕಾಲ ತಡವಾದ ಕಾರಣ ನಿಲ್ದಾಣದಲ್ಲಿ ಎಸಿ ವ್ಯವಸ್ಥೆಯಿಲ್ಲದೆ ಹಲವು ಪ್ರಯಾಣಿಕರು ಮೂರ್ಛೆ ಹೋದ ಘಟನೆ ನವದೆಹಲಿಯಲ್ಲಿ ನಡೆದಿದೆ.

- Advertisement -

ಹಲವು ಪ್ರಯಾಣಿಕರು ತಮಗಾದ ನೋವುಗಳನ್ನು ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ. ಹಲವರು ವಿಮಾನಕ್ಕಾಗಿ ನಿಲ್ದಾಣದಲ್ಲಿ ಕಾಯುತ್ತಿರುವ ದೃಶ್ಯಗಳನ್ನು ಹಂಚಿಕೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ...

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು ನಿರಾಕರಿಸಿ ತನ್ನನ್ನು ತಾನು ಮೇಕೆಯ ಮಮಕಾರದ ಹಾಲಿಗೆ ಕೊಟ್ಟುಕೊಂಡಿದ್ದರು. ಈಗಿನ ಪಶುಪಾಲಕ ಸಮುದಾಯಗಳ ಸಾವಯವ ಬದುಕಿನ ರೀತಿ ನೀತಿ ಗಮನಿಸಿ......

ದಕ್ಷಿಣ ಆಫ್ರಿಕಾದಲ್ಲಿ ಗಾಂಧಿ ಮೊಳಗಿಸಿದ್ದ ಮತ ಹಕ್ಕಿನ ಕೂಗಿಗೆ...

ಮತದಾನ ಕೇವಲ ಹಕ್ಕಲ್ಲ, ಅದು ಪ್ರಜೆಯೊಬ್ಬನ ಘನತೆ ಹಾಗೂ ಅಸ್ತಿತ್ವದ ಸಂಕೇತ. 131 ವರ್ಷಗಳ ಹಿಂದೆ ದಕ್ಷಿಣ ಆಫ್ರಿಕಾದಲ್ಲಿ ಇದೇ ಮತಾಧಿಕಾರಕ್ಕಾಗಿ ಗಾಂಧೀಜಿ ಬ್ರಿಟಿಷರ ವಿರುದ್ಧ ಸಿಡಿದೆದ್ದಿದ್ದರು. ಆದರೆ, ಇಂದು ಸ್ವತಂತ್ರ ಭಾರತದಲ್ಲಿ...

ಎಕ್ಸ್‌ನಲ್ಲಿ ಬರೆದುಕೊಂಡಿರುವ ಪತ್ರಕರ್ತರಾದ ಶ್ವೇತಾ ಪುಂಜ್‌, ದೆಹಲಿಯ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಏರ್‌ ಇಂಡಿಯಾ ವಿಮಾನವು 8 ಗಂಟೆಗಳ ಕಾಲ ತಡವಾದ ಕಾರಣ ಸೂಕ್ತವಾದ ಕುರ್ಚಿಯಿಲ್ಲದೆ ಹಲವರು ನೆಲದ ಮೇಲೆ ಕುಳಿತುಕೊಂಡಿದ್ದರು. ಕೆಲವರು ಎಸಿ ವ್ಯವಸ್ಥೆಯಿಲ್ಲದ ಕಾರಣ ಮೂರ್ಛೆ ಕೂಡ ಹೋದರು ಎಂದು ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಹೋರಾಟಗಳನ್ನು ಹತ್ತಿಕ್ಕಿದ ಗೌಡರ ಹಾಸನದಲ್ಲಿ ಮತ್ತೆ ಮೊಳಗಿದ ಹೋರಾಟದ ಕೂಗು

ಕೇಂದ್ರ ನಾಗರಿಕ ವಿಮಾನಯಾನ ಸಚಿವರಾದ ಜ್ಯೋತಿರಾಧಿತ್ಯ ಸಿಂಧಿಯಾ ಅವರಿಗೆ ಟ್ಯಾಗ್‌ ಮಾಡಿರುವ ಶ್ವೇತಾ ಅವರು ಇಡೀ ಘಟನೆಯನ್ನು ಅಮಾನವೀಯ ಎಂದು ಕರೆದಿದ್ದಾರೆ.

“ಏರ್ ಇಂಡಿಯಾದ ಖಾಸಗೀಕರಣದ ಕಥೆಯು ವಿಫಲವಾಗಿದೆ. ಡಿಜಿಸಿಎ ಎಐ 183 ವಿಮಾನವು 8 ಗಂಟೆಗಳ ಕಾಲ ತಡವಾಗಿದೆ. ಪ್ರಯಾಣಿಕರು ಎಸಿ ವ್ಯವಸ್ಥೆಯಿಲ್ಲದೆ ಕೆಳಗೆ ಕುಳಿತ್ತಿದ್ದರು. ಎಸಿಯಿಲ್ಲದ ಕಾರಣ ಕೆಲವರು ಅಸ್ವಸ್ಥರಾದರು. ಇದು ಅಮಾನವೀಯ” ಎಂದು ಶ್ವೇತ ಪುಂಜ್‌ ಹೇಳಿದ್ದಾರೆ.

ಶ್ವೇತಾ ಅವರ ಟ್ವೀಟ್‌ಗೆ ಪ್ರತಿಕ್ರಿಯೆ ನೀಡಿರುವ ಏರ್‌ ಇಂಡಿಯಾ, ನಾವು ಅಡಚಣೆಗಾಗಿ ವಿಷಾದ ವ್ಯಕ್ತಪಡಿಸುತ್ತೇವೆ. ನಮ್ಮ ತಂಡ ತಡವಾಗಿರುವ ಬಗ್ಗೆ ಸಕ್ರಿಯವಾಗಿ ಕಾರ್ಯಾಚರಣೆ ನಡೆಸುತ್ತಿದೆ ಎಂಬುವನ್ನು ಖಚಿತಪಡಿಸಿಕೊಳ್ಳಿ. ನಿಮ್ಮ ನಿರಂತರ ಬೆಂಬಲ ಹಾಗೂ ತಿಳುವಳಿಕೆಗಾಗಿ ಮೆಚ್ಚಿಗೆ ವ್ಯಕ್ತಪಡಿಸುತ್ತೇವೆ. ಪ್ರಯಾಣಿಕರಿಗೆ ಅಗತ್ಯ ನೆರವು ಒದಗಿಸಲು ನಮ್ಮ ತಂಡಕ್ಕೆ ಜಾಗೃತಗೊಳಿಸಿದ್ದೇವೆ” ಎಂದು ಹೇಳಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಯೋಧ್ಯೆ ರಾಮಮಂದಿರ ಸಿಬ್ಬಂದಿಗೆ ಶೇ. 100ರಷ್ಟು ಪೊಲೀಸ್ ವೆರಿಫಿಕೇಷನ್; ಹಿನ್ನೆಲೆ ಪರಿಶೀಲನೆ ಕಡ್ಡಾಯ

ಉತ್ತರ ಪ್ರದೇಶದ ಅಯೋಧ್ಯೆಯ ರಾಮಮಂದಿರ ಆಡಳಿತ ಮತ್ತು ಭದ್ರತಾ ವ್ಯವಸ್ಥೆಯನ್ನು ಮತ್ತಷ್ಟು...

ಸಿಇಸಿ ಗ್ಯಾನೇಶ್ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ: ಅನುಮತಿ ನಿರಾಕರಣೆ; ಜಂತರ್ ಮಂತರ್‌ನಲ್ಲಿ ಬಿಗಿ ಭದ್ರತೆ

ಮುಖ್ಯ ಚುನಾವಣೆ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ...

ಉತ್ತರ ಪ್ರದೇಶ: ಪ್ರಜಾಪ್ರಭುತ್ವ ಹೋರಾಟಗಾರರಿಗೆ ಅಖಿಲೇಶ್ ಮಾಸಿಕ ₹51,000 ಪಿಂಚಣಿ ಭರವಸೆ

ಉತ್ತರ ಪ್ರದೇಶದಲ್ಲಿ 2027ರಲ್ಲಿ ಸಮಾಜವಾದಿ ಪಕ್ಷ (ಎಸ್‌ಪಿ) ಸರ್ಕಾರ ರಚಿಸಿದರೆ, 1975ರ...

ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಬೆಂಗಳೂರು, ಗೋವಾ, ಕೋಲ್ಕತ್ತದಲ್ಲಿ ಸಿಜೆಪಿ ‘ಮೋರ್ಚಾ’

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ...