ಬಾಲಿಗೆ ಹೊರಟಿದ್ದ ‘ಏರ್‌ ಇಂಡಿಯಾ’ ವಿಮಾನ ದೆಹಲಿಗೆ ವಾಪಸ್!

Date:

ಪೂರ್ವ ಇಂಡೋನೇಷ್ಯಾದ ಪೂರ್ವ ನುಸಾ ತೆಂಗಾರ ಪ್ರಾಂತ್ಯದ ಫ್ಲೋರ್ಸ್ ದ್ವೀಪದಲ್ಲಿ ಮೌಂಟ್ ಲೆವೊಟೊಬಿ ಲಕಿ-ಲಕಿ ಜ್ವಾಲಾಮುಖಿಯು ಸ್ಫೋಟಗೊಂಡಿದೆ. ಅಲ್ಲಿನ ಪರಿಸ್ಥಿತಿ ಗಂಭೀರವಾಗಿದೆ. ಘಟನೆಯು ವಾಯುಯಾನದ ಮೇಲೂ ಪ್ರಭಾವ ಬೀರಿದೆ. ಹೀಗಾಗಿ, ಏರ್ ಇಂಡಿಯಾ, ಸಿಂಗಾಪುರ್ ಏರ್‌ಲೈನ್ಸ್, ಏರ್ ನ್ಯೂಜಿಲೆಂಡ್, ಜೆಟ್‌ಸ್ಟಾರ್, ವರ್ಜಿನ್ ಆಸ್ಟ್ರೇಲಿಯಾ ಹಾಗೂ ಚೀನಾದ ಜುನ್ಯಾವೊ ಏರ್‌ಲೈನ್ಸ್ ಸೇರಿದಂತೆ ಹಲವು ವಿಮಾನಯಾನ ಸಂಸ್ಥೆಗಳು ಬಾಲಿಗೆ ತೆರಳಬೇಕಿದ್ದ ತಮ್ಮ ಅಂತಾರಾಷ್ಟ್ರೀಯ ವಿಮಾನಗಳನ್ನು ರದ್ದುಗೊಳಿಸಿವೆ. ಹೀಗಾಗಿ, ದೆಹಲಿಯಿಂದ ಬಾಲಿಗೆ ಹಾರಾಟ ಆರಂಭಿಸಿದ್ದ ‘ಏರ್‌ ಇಂಡಿಯಾ’ ವಿಮಾನವು ಮರಳಿ ದೆಹಲಿ ಬಂದಿದೆ.

- Advertisement -

ಜ್ವಾಲಾಮುಖಿ ಸ್ಪೋಟದಿಂದ ಉಂಟಾದ ದಟ್ಟ ಹೊಗೆಯು ಸುಮಾರು 10 ಕಿ.ಮೀ ಎತ್ತರದವರೆಗೆ ಆವರಿಸಿದೆ. ಇದು, ವಿಮಾನ ಸಂಚಾರಕ್ಕೆ ಭಾರೀ ತೊಂದರೆ ಉಂಟು ಮಾಡಿದೆ.ಜ್ವಾಲಾಮುಖಿ ಸ್ಪೋಟದಿಂದ ಈವರೆಗೆ ಯಾವುದೇ ಸಾವು-ನೋವು ವರದಿಯಾಗಿಲ್ಲ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜನತಂತ್ರದ ಬಿಕ್ಕಟ್ಟಿಗೆ ಮೌನ; ವ್ಯಾಪಾರಿಗಳ ನಷ್ಟಕ್ಕೆ ಪರಿಹಾರದ ಭರವಸೆ;...

ಚುನಾವಣಾ ಜನತಂತ್ರ ಬಿಕ್ಕಟ್ಟಿಗೆ ಸಿಲುಕಿದಾಗ, ನಾಗರಿಕರ ಪ್ರತಿಭಟನಾ ಹಕ್ಕು ಬೀದಿಗೆ ಬಿದ್ದಾಗ ಸುಪ್ರೀಂ ಕೋರ್ಟ್ ತಳೆದ ಮೌನ, ಸ್ಪಂದಿಸಿದ ರೀತಿ, ಕನಾಟ್ ಪ್ಲೇಸ್‌ನ ವ್ಯಾಪಾರಿಗಳು ಹಾಗೂ ಉದ್ಯೋಗಿಗಳ ಜೀವನೋಪಾಯಕ್ಕೆ ಧಕ್ಕೆಯಾದರೆ ಮಧ್ಯಪ್ರವೇಶಿಸಿ ಪರಿಹಾರ...

‘ಕೈಮುಗಿದು ಕಾಲಿಗೆ ಬೀಳುವೆ…’ ಪ್ರಜಾಪ್ರಭುತ್ವ ಕುಸಿತಕ್ಕೆ ಮುನ್ನುಡಿಯೇ?

ಜಾತಿ ಅಸಮಾನತೆ, ಸಾಮಾಜಿಕ ಶೋಷಣೆ ಮತ್ತು ರಾಜಕೀಯ ಪ್ರಭಾವದ ಮುಂದೆ ಜನಪ್ರತಿನಿಧಿಗಳೇ ಕೈಮುಗಿದು ನಿಲ್ಲುವ ದುಸ್ಥಿತಿ ಪ್ರಜಾಪ್ರಭುತ್ವದ ಅಡಿಪಾಯವನ್ನೇ ಅಲುಗಾಡಿಸುತ್ತಿದೆ. ಸಂವಿಧಾನ ಸಾರಿದ ಸಮಾನತೆ, ಸ್ವಾತಂತ್ರ್ಯ ಮತ್ತು ಭ್ರಾತೃತ್ವ ಕೇವಲ ಕಾಗದಕ್ಕೆ ಸೀಮಿತವಾಗುತ್ತಿದೆಯೇ...

JNU ವಿದ್ಯಾರ್ಥಿ ‘ನಜೀಬ್’ ನಾಪತ್ತೆಗೆ 10 ವರ್ಷಗಳು: ಉತ್ತರ...

ತನಿಖಾ ಸಂಸ್ಥೆಗಳು ಕಡತವನ್ನು ಮುಚ್ಚಿದ ಮಾತ್ರಕ್ಕೆ ಒಬ್ಬ ತಾಯಿಯ ಹುಡುಕಾಟವನ್ನಾಗಲಿ ಅಥವಾ ಅಮಾಯಕ ವಿದ್ಯಾರ್ಥಿಯೊಬ್ಬನ ನಾಪತ್ತೆ ಕುರಿತ ಪ್ರಶ್ನೆಗಳನ್ನಾಗಲಿ ಅಳಿಸಿಹಾಕಲು ಸಾಧ್ಯವಿಲ್ಲ. ನಜೀಬ್ ಅಹ್ಮದ್ ಅವರನ್ನು ಕೇವಲ ಒಂದು ಪ್ರತಿಭಟನೆಯ ಸಂಕೇತವಾಗಿ ನೆನೆಯುವ...

ಸ್ಪೋಟದಿಂದ ಹೊಗೆ ಆವರಿಸಿಕೊಂಡಿರುವ ಕಾರಣ, ಇಂಡೋನೇಷ್ಯಾದ ಬಾಲಿಗೆ ತೆರಳುತ್ತಿದ್ದ ಏರ್‌ ಇಂಡಿಯಾ ವಿಮಾನ ‘AI2145’ ತನ್ನ ಪ್ರಯಾಣವನ್ನು ಅರ್ಧಕ್ಕೆ ಮೊಟಕುಗೊಳಿಸಿ, ದೆಹಲಿಗೆ ವಾಪಸ್‌ ಬಂದಿದೆ. ಪ್ರಯಾಣಿಕರಿಗೆ ಉಂಟಾದ ಅನಾನುಕೂಲತೆಗಾಗಿ ಏರ್ ಇಂಡಿಯಾ ಸಂಸ್ಥೆಯು ವಿಷಾದ ವ್ಯಕ್ತಪಡಿಸಿದೆ. ಪರಿಹಾರವಾಗಿ ಹೋಟೆಲ್ ವಸತಿ, ಟಿಕೆಟ್‌ನ ಸಂಪೂರ್ಣ ಮೊತ್ತವನ್ನು ಮರುಪಾವತಿ ಮಾಡುವುದಾಗಿ ತಿಳಿಸಿದೆ.

ಪೂರ್ವ ನುಸಾ ತೆಂಗಾರ ಪ್ರಾಂತ್ಯದಲ್ಲಿ 2024ರ ನವೆಂಬರ್‌ನಲ್ಲಿಯೂ ಜ್ವಾಲಾಮುಖಿ ಸ್ಪೋಟಗೊಂಡಿತ್ತು. ಆಗ, 9 ಮಂದಿ ಸಾವನ್ನಪ್ಪಿದ್ದರು. ಹಲವರು ಗಾಯಗೊಂಡಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪತ್ರಕರ್ತರ ಮೇಲಿನ ಪೊಲೀಸ್‌ ದಾಳಿಗೆ ಡಿಎಸ್‌ಜೆಎ ಖಂಡನೆ; ಪ್ರೆಸ್ ಕೌನ್ಸಿಲ್‌ನಿಂದ ಮಾರ್ಗಸೂಚಿ ಪ್ರಕಟ

ದೆಹಲಿಯಲ್ಲಿ ನಡೆಯುತ್ತಿರುವ ಪ್ರತಿಭಟನೆಗಳು ಮತ್ತು ಪೊಲೀಸ್ ಕ್ರಮಗಳನ್ನು ವರದಿ ಮಾಡುತ್ತಿರುವ ಪತ್ರಕರ್ತರ...

ದೇಶದ ಜನತೆ ಅಧಿಕಾರ ಬದಲಾವಣೆ ಬಯಸಿದ್ದಾರೆ, ನೀವು ಹೊರಡುವ ಸಮಯ ಬಂದಿದೆ; ರಾಜ್‌ನಾಥ್‌ಗೆ ಸಿಬಲ್‌ ಎಚ್ಚರಿಕೆ

ಕಾಂಗ್ರೆಸ್ ಮತ್ತು ಅದರ ಮಿತ್ರಪಕ್ಷಗಳು ಬಾಂಗ್ಲಾದೇಶ ಮಾದರಿಯಲ್ಲಿ ದೇಶದಲ್ಲಿ 'ಸರ್ಕಾರ ಬದಲಾವಣೆ'ಯ...

ಖ್ಯಾತ ಹಿರಿಯ ಸಂಗೀತ ನಿರ್ದೇಶಕ ದೇವ ಇನ್ನಿಲ್ಲ

ಕನ್ನಡ ಸೇರಿದಂತೆ ದಕ್ಷಿಣ ಭಾರತದ ಹಲವು ಭಾಷೆಗಳ ಚಿತ್ರಗಳಿಗೆ ಸುಮಧುರ ಸಂಗೀತ...

‘ಮಕ್ಕಳಿಗೂ ಇಂಟರ್‌ನೆಟ್ ಬಳಕೆ ಮೂಲಭೂತ ಹಕ್ಕು; ಸಂಪೂರ್ಣ ನಿಷೇಧ ಪರಿಹಾರವಲ್ಲ’: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

ವಯಸ್ಕರಂತೆ ಮಕ್ಕಳಿಗೂ ಇಂಟರ್‌ನೆಟ್ ಸಂಪರ್ಕ ಪಡೆಯುವ ಮತ್ತು ಅದನ್ನು ಬಳಸುವ ಮೂಲಭೂತ...