ಗುಜರಾತ್‌ ವಿಮಾನ ದುರಂತ | 242 ಪ್ರಯಾಣಿಕರಲ್ಲಿ ಓರ್ವ ಸಾವಿನ ದವಡೆಯಿಂದ ಪಾರು

Date:

ಗುಜರಾತ್‌ನ ಅಹಮದಾಬಾದ್‌ನಲ್ಲಿ ಸಂಭವಿಸಿದ ಏರ್‌ ಇಂಡಿಯಾ ಬೋಯಿಂಗ್‌ 787-8 ವಿಮಾನ ದುರಂತದಲ್ಲಿ ಪ್ರಯಾಣಿಸುತ್ತಿದ್ದ 242 ಪ್ರಯಾಣಿಕರಲ್ಲಿ ಓರ್ವ ಮಾತ್ರ ಬದುಕಿದ್ದಾನೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

- Advertisement -

ಆಸನದ ಸಂಖ್ಯೆ 11ಎನಲ್ಲಿ ಪ್ರಯಾಣಿಸುತ್ತಿದ್ದ ರಮೇಶ್‌ ಎಂಬಾತ ಪವಾಡ ಸದೃಶ್ಯದಿಂದ ಬದುಕುಳಿದಿದ್ದು, ಆತನೊಬ್ಬನೆ ಯಾರ ಬೆಂಬಲವಿಲ್ಲದೆ ನಡೆದುಕೊಂಡು ಆಸ್ಪತ್ರೆಗೆ ತೆರಳಿದ್ದಾನೆ. ಆತ ತೆರಳುತ್ತಿದ್ದ ದೃಶ್ಯಗಳು ಎಲ್ಲಡೆ ವೈರಲ್‌ ಆಗಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ವಿಮಾನದಲ್ಲಿ 232 ಪ್ರಯಾಣಿಕರು ಹಾಗೂ 10 ವಿಮಾನಯನ ಸಿಬ್ಬಂದಿ ಇದ್ದ ವಿಮಾನ ಲಂಡನ್‌ಗೆ ತೆರಳುತ್ತಿದ್ದ ಸಂದರ್ಭದಲ್ಲಿ ತಾಂತ್ರಿಕ ದೋಷದಿಂದ ಅಹಮದಾಬಾದ್‌ನ ಮೇಘಾನಿ ಪ್ರದೇಶದ ಬಿಜೆ ಮೆಡಿಕಲ್ ಕಾಲೇಜಿನ ಹಾಸ್ಟೆಲ್‌ನ ಮೇಲೆ ಬಿದ್ದಿದೆ.

ದುರಂತದಲ್ಲಿ ಹಾಸ್ಟೆಲ್‌ನಲ್ಲಿದ್ದ 7 ವೈದ್ಯಕೀಯ ವಿದ್ಯಾರ್ಥಿಗಳು ಮೃತಪಟ್ಟಿದ್ದಾರೆ ಎಂದು ಹೇಳಲಾಗಿದೆ.ಮಧ್ಯಾಹ್ನ ಊಟದ ಸಮಯದಲ್ಲಿ ಮೆಡಿಕಲ್ ಕಾಲೇಜ್ ಕ್ಯಾಂಟೀನ್ ಕಟ್ಟಡಕ್ಕೆ ವಿಮಾನ ಬಡಿದಿದೆ. ಈ ಪರಿಣಾಮ ಮೆಡಿಕಲ್ ಕಾಲೇಜಿನ ಅಡುಗೆ ಮನೆಗೆ ಬೆಂಕಿ ಹೊತ್ತಿಕೊಂಡು ಗೋಡೆಗಳು ಛಿದ್ರ ಛಿದ್ರಗೊಂಡಿದೆ.

ದುರಂತದಲ್ಲಿ ಬಿಜೆಪಿ ನಾಯಕ, ಮಾಜಿ ಮುಖ್ಯಮಂತ್ರಿ ವಿಜಯ್​ ರೂಪಾನಿ ಸೇರಿದಂತೆ 241 ಜನರು ಮೃತಪಟ್ಟಿದ್ದಾರೆ ಎಂದು ಅಹಮದಾಬಾದ್ ನಗರ ಪೊಲೀಸ್ ಕಮಿಷನರ್​​​ ಮಾಹಿತಿ ನೀಡಿದ್ದಾರೆ.

ಇದನ್ನು ಓದಿದ್ದೀರಾ? ಗುಜರಾತ್‌ನಲ್ಲಿ ಏರ್‌ ಇಂಡಿಯಾ ವಿಮಾನ ಪತನ; Photo and Video gallery

ಅಹಮದಾಬಾದ್​ ವಿಮಾನ ನಿಲ್ದಾಣದ ಬಳಿ ನಡೆದ ವಿಮಾನದ ಅಪಘಾತಕ್ಕೆ ಸಂಬಂಧಿಸಿದಂತೆ ಎಲ್ಲಾ ವಿವರಗಳನ್ನು ಸಂಘಟಿಸಲು ನಾಗರಿಕ ವಿಮಾನಯಾನ ಸಚಿವಾಲಯದಲ್ಲಿ ಕಾರ್ಯಾಚರಣಾ ನಿಯಂತ್ರಣ ಕೊಠಡಿಯನ್ನು ಸಕ್ರಿಯಗೊಳಿಸಲಾಗಿದೆ. ಅದಕ್ಕಾಗಿ 011-24610843, 9650391859 ದೂರವಾಣಿ ಸಂಖ್ಯೆಯನ್ನು ತೆರೆಯಲಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಸ್ಸಾಂ ಉಪಚುನಾವಣೆ ಅಖಾಡ: ಸಿಎಂ ಶರ್ಮಾ ಮತ್ತು ಕಾಂಗ್ರೆಸ್ ಸಂಸದರ ನಡುವೆ ‘ಬಿರಿಯಾನಿ vs ರಸ್ಕ್’ ವಾಕ್ಸಮರ!

ಅಸ್ಸಾಂನ ನಗಾಂವ್ ಲೋಕಸಭಾ ಕ್ಷೇತ್ರಕ್ಕೆ ನಡೆಯಲಿರುವ ಉಪಚುನಾವಣೆಯ ಪ್ರಚಾರ ಕಣದಲ್ಲಿ ರಾಜಕೀಯ...

ಶಾಲಾ ಸಮಸ್ಯೆಗಳ ಕುರಿತು ಗ್ರಾಮ ಸಭೆಯಲ್ಲಿ ಧ್ವನಿ ಎತ್ತಿದ ವಿದ್ಯಾರ್ಥಿಗಳು; ಅಧಿಕಾರಿಗಳ ಮೆಚ್ಚುಗೆ-ಭರವಸೆ

ಸರ್ಕಾರಿ ಶಾಲಾ ವಿದ್ಯಾರ್ಥಿಗಳು ‘ವಿಶೇಷ ಗ್ರಾಮ ಸಭೆ’ಗಳಲ್ಲಿ ಪಾಲ್ಗೊಂಡು, ಪಂಚಾಯತ್ ಪ್ರತಿನಿಧಿಗಳು...

ಉತ್ತರಾಖಂಡ SIR ಅಂತಿಮ ಮತದಾರರ ಪಟ್ಟಿ ಪ್ರಕಟ: ಆದರೆ ಮುಗಿದಿಲ್ಲ ನೋಂದಣಿ ಪ್ರಕ್ರಿಯೆ

ಉತ್ತರಾಖಂಡ ರಾಜ್ಯದಲ್ಲಿ ನಡೆದ 'ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ' (ಎಸ್‌ಐಆರ್)...