ವಾಯು ಮಾಲಿನ್ಯ | ಸಂಸತ್ತಿನಲ್ಲಿ ಚರ್ಚೆ, ‘ರಾಷ್ಟ್ರೀಯ ಆರೋಗ್ಯ ತುರ್ತುಸ್ಥಿತಿ’ ಘೋಷಣೆಗೆ ರಾಹುಲ್‌ ಗಾಂಧಿ ಒತ್ತಾಯ

Date:

ನಡೆಯುತ್ತಿರುವ ಬಜೆಟ್‌ ಅಧಿವೇಶನದಲ್ಲಿ ವಾಯು ಮಾಲಿನ್ಯ ಕುರಿತು ಗಂಭೀರ ಚರ್ಚೆ ನಡೆಸಬೇಕು. ಸಮಸ್ಯೆಯನ್ನು ನಿಭಾಯಿಸಲು ಕೇಂದ್ರ ಬಜೆಟ್‌ನಲ್ಲಿ ‘ಸಾಕಷ್ಟು ಹಣ’ ಒದಗಿಸಬೇಕು. ವಾಯು ಮಾಲಿನ್ಯ ಸಂಬಂಧ ‘ರಾಷ್ಟ್ರೀಯ ಆರೋಗ್ಯ ತುರ್ತುಪರಿಸ್ಥಿತಿ’ ಘೋಷಿಸಬೇಕು ಎಂದು ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಒತ್ತಾಯಿಸಿದ್ದಾರೆ.

- Advertisement -

ಫೇಸ್‌ಬುಕ್‌ನಲ್ಲಿ ವಿಡಿಯೋ ಪೋಸ್ಟ್‌ ಹೊಂಚಿಕೊಂಡಿರುವ ರಾಹುಲ್ ಗಾಂಧಿ, ನಾಗರಿಕರಿಂದ ಬಂದ ಸಂದೇಶಗಳನ್ನು ವಿವರಿಸಿದ್ದಾರೆ. “ಸರ್ಕಾರವು ಸಂಸತ್ತಿನಲ್ಲಿ ವಾಯು ಮಾಲಿನ್ಯ ಕುರಿತು ಚರ್ಚೆಗೆ ಅವಕಾಶ ನೀಡುವ ಸಮಯ ಬಂದಿದೆ. ಪ್ರಧಾನಿಯವರು ವಾಯು ಮಾಲಿನ್ಯವನ್ನು ರಾಷ್ಟ್ರೀಯ ಆರೋಗ್ಯ ತುರ್ತುಸ್ಥಿತಿ ಎಂದು ಘೋಷಿಸಬೇಕು… ನಾವು ಒಟ್ಟಾಗಿ ಸೇರಿ ಗಂಭೀರ ಯೋಜನೆಯನ್ನು ನಡೆಸಬೇಕಾಗಿದೆ. ಈ ಸಮಸ್ಯೆಯನ್ನು ನಿಭಾಯಿಸಲು ಬಜೆಟ್‌ನಲ್ಲಿ ಸಾಕಷ್ಟು ಹಣದ ಅಗತ್ಯವಿದೆ” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

“ಕಳೆದ ಕೆಲವು ದಿನಗಳಿಂದ, ಮಾಲಿನ್ಯವು ಜನಸಾಮಾನ್ಯರ ಜೀವನಕ್ಕೆ ಏನೆಲ್ಲ ಮಾಡುತ್ತಿದೆ ಎಂಬುದರ ಕುರಿತು ಭಾರತೀಯರು ಕಳುಹಿಸಿದ ಸಾವಿರಾರು ಸಂದೇಶಗಳನ್ನು ನಾನು ಓದಿದ್ದೇನೆ. ಎಲ್ಲರಲ್ಲಿಯೂ ಭಯವು ಎದ್ದು ಕಾಣುತ್ತಿದೆ. ಮಕ್ಕಳು ಮತ್ತು ಪೋಷಕರಲ್ಲಿ ಭವಿಷ್ಯದ ಭಯ ಆವರಿಸಿದೆ. ಭಾರತದಾದ್ಯಂತ ನಗರಗಳಲ್ಲಿನ ಕುಟುಂಬಗಳು ಆತಂಕದಲ್ಲಿದ್ದಾರೆ. ಮಾಲಿನ್ಯವು ಇನ್ನು ಮುಂದೆ ಕೇವಲ ಪರಿಸರ ಸಮಸ್ಯೆಯಲ್ಲ; ಇದು ರಾಷ್ಟ್ರೀಯ ಆರೋಗ್ಯ ತುರ್ತುಪರಿಸ್ಥಿತಿ. ಸಂಸತ್ತು ಅದರ ಬಗ್ಗೆ ಚರ್ಚಿಸಬೇಕು. ಸರ್ಕಾರ ಕಾರ್ಯನಿರ್ವಹಿಸಬೇಕು” ಎಂದು ಆಗ್ರಹಿಸಿದ್ದಾರೆ.

ಕೇಂದ್ರ ಸರ್ಕಾರವು ಬಜೆಟ್‌ ಮಾಡುತ್ತಿರುವ ಭಾನುವಾರವೇ, ದೆಹಲಿಯಲ್ಲಿ ಗಾಳಿ ಗುಣಮಟ್ಟ ‘ತುಂಬಾ ಕಳಪೆ ಮಟ್ಟ’ಕ್ಕೆ ಕುಸಿದಿದೆ. ಒಟ್ಟಾರೆ ವಾಯು ಗುಣಮಟ್ಟ ಸೂಚ್ಯಂಕ (AQI) ಬೆಳಿಗ್ಗೆ 8 ಗಂಟೆಯ ಸುಮಾರಿಗೆ 318ರಷ್ಟಿದೆ ಎಂದು ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ (CPCB) ತಿಳಿಸಿದೆ.

ಬಜೆಟ್ ಅಧಿವೇಶನವು ಒಟ್ಟು 65 ದಿನಗಳ ಕಾಲ ಪಡೆಯಲಿದೆ. ಮೊದಲ ಹಂತದ 30 ದಿನಗಳ ಅಧಿವೇಶನವು ಏಪ್ರಿಲ್ 2 ರಂದು ಕೊನೆಗೊಳ್ಳುತ್ತದೆ. ನಂತರ, ಎರಡನೇ ಹಂತದ ಅಧಿವೇಶನವು ಫೆಬ್ರವರಿ 13ರಿಂದ ಮಾರ್ಚ್‌ 9ರವರೆಗೆ ನಡೆಯಲಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಇವು ಕೇವಲ ಉಪಚುನಾವಣೆಗಳು’: ನಂದಿಗ್ರಾಮ, ರೆಜಿನಗರ ‘ಎಸ್‌ಐಆರ್’ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂ ನಕಾರ

ಪಶ್ಚಿಮ ಬಂಗಾಳದ ನಂದಿಗ್ರಾಮ ಮತ್ತು ರೆಜಿನಗರ ಕ್ಷೇತ್ರಗಳ ಉಪಚುನಾವಣೆಗೂ ಮುನ್ನ ‘ವಿಶೇಷ...

22 ನಿಮಿಷದ ಜಾಹೀರಾತು, 75 ಸಾವಿರ ದಂಡ! ಸಿನಿಪ್ಲೆಕ್ಸ್‌ ಕಿವಿಹಿಂಡಿದ ಗ್ರಾಹಕ ವೇದಿಕೆ

ಸಿನಿಮಾ ಶುರುವಾಗುವ ಮುನ್ನ 22 ನಿಮಿಷಗಳ ಕಾಲ ವಾಣಿಜ್ಯ ಜಾಹೀರಾತುಗಳು ಮತ್ತು...

ಸಿಇಸಿ ಗ್ಯಾನೇಶ್‌ ಕುಮಾರ್‌ ವಿರುದ್ಧ ದೇಶವ್ಯಾಪಿ ಪ್ರತಿಭಟನೆ; ಹೈದರಾಬಾದ್‌ನಲ್ಲಿ ‘ಸಿಜೆಪಿ’ ಮಹತ್ವದ ಸಭೆ

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ...

ಜಮ್ಮು-ಕಾಶ್ಮೀರಕ್ಕೆ ಪೂರ್ಣ ರಾಜ್ಯ ಸ್ಥಾನಮಾನದ ನಿರ್ಣಯ ಅಂಗೀಕಾರ; ಸದನದಲ್ಲಿ ಬಿಜೆಪಿ ಗದ್ದಲ

ಜಮ್ಮು-ಕಾಶ್ಮೀರಕ್ಕೆ ತುರ್ತಾಗಿ ಪೂರ್ಣ ರಾಜ್ಯದ ಸ್ಥಾನಮಾನವನ್ನು ಮರುಸ್ಥಾಪಿಸಬೇಕು ಎಂದು ಆಗ್ರಹಿಸುವ ನಿರ್ಣಯವನ್ನು...