ಉತ್ತರಕಾಶಿ ಪ್ರವಾಹ | ಆ. 5ರಿಂದ ನಾಪತ್ತೆಯಾಗಿರುವ 43 ಮಂದಿ ಪತ್ತೆಗಾಗಿ ಮುಂದುವರೆದ ಶೋಧ

Date:

ಆಗಸ್ಟ್‌ 5ರಂದು ಉತ್ತರಪ್ರದೇಶದ ಉತ್ತರಕಾಶಿಯಲ್ಲಿ ಸಂಭವಿಸಿದ ಹಠಾತ್‌ ಪ್ರವಾಹದಲ್ಲಿ ಸಿಲುಕಿ ನಾಪತ್ತೆಯಾದ 43 ಮಂದಿಯ ಸುಳಿವು ಇನ್ನೂ ಪತ್ತೆಯಾಗಿಲ್ಲ ಎಂದು ಉತ್ತರಾಖಂಡ ಸರ್ಕಾರ ಅಧಿಕೃತವಾಗಿ ಮಾಹಿತಿ ನೀಡಿದೆ. 43 ಮಂದಿಯ ಪತ್ತೆಗಾಗಿ ಶೋಧ ಕಾರ್ಯಾಚರಣೆ ಮುಂದುವರೆದಿದೆ.

- Advertisement -

ಈ ಬಗ್ಗೆ ಮಾಹಿತಿ ನೀಡಿದ ಜಿಲ್ಲಾಧಿಕಾರಿ ವಿನಯಶಂಕರ ಪಾಂಡೆ “ಧಾರಾಲಿಯಲ್ಲಿ ಸಂಭವಿಸಿದ ಭೂಕುಸಿತದಲ್ಲಿ ಅವಶೇಷಗಳ ಅಡಿ ಸಿಲುಕಿರುವವರ ಪತ್ತೆ ಮಾಡುವುದು ಜಿಲ್ಲಾಡಳಿತದ ಮೊದಲ ಆದ್ಯತೆ. ರಾಷ್ಟ್ರೀಯ ವಿಪತ್ತು ಸ್ಪಂದನಾ ಪಡೆ, ಇಂಡೋ ಟಿಬೆಟಿಯನ್‌ ಗಡಿ ಪೊಲೀಸ್‌, ಭೂಗರ್ಭಶಾಸ್ತ್ರಜ್ಞರ ತಂಡಗಳು ಜಂಟಿಯಾಗಿ ವಿಪತ್ತು ಪ್ರದೇಶದಲ್ಲಿ ಶೋಧ ಕಾರ್ಯ ನಿರ್ವಹಿಸುತ್ತಿವೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಇದನ್ನು ಓದಿದ್ದೀರಾ? ಉತ್ತರಕಾಶಿಯಲ್ಲಿ ಪ್ರವಾಹ: 100ಕ್ಕೂ ಹೆಚ್ಚು ಮಂದಿ ನಾಪತ್ತೆ

“ಕಾಣೆಯಾಗಿರುವ 43 ಮಂದಿಯಲ್ಲಿ ಒಂಬತ್ತು ಸೇನಾ ಸಿಬ್ಬಂದಿ, ಎಂಟು ಮಂದಿ ಧಾರಾಲಿ ಸ್ಥಳೀಯರು, ಐದು ಮಂದಿ ನೆರೆಯ ಗ್ರಾಮಸ್ಥರು ಹಾಗೂ ತೆಹ್ರಿ, ಬಿಹಾರ, ಉತ್ತರಪ್ರದೇಶ ಮತ್ತು ನೇಪಾಳದ ಜನರೂ ಸೇರಿದ್ದಾರೆ” ಎಂದು ಹೇಳಿದ್ದಾರೆ.

“29 ಮಂದಿ ನೇಪಾಳಿ ಕಾರ್ಮಿಕರ ಪೈಕಿ ಐವರ ಸಂಪರ್ಕ ಸಾಧ್ಯವಾಗಿದೆ. ಆದರೆ ಉಳಿದವರನ್ನು ಸಂಪರ್ಕಿಸಲು ಸಾಧ್ಯವಾಗಿಲ್ಲ. ಇಲ್ಲಿಯವರೆಗೆ ಇಬ್ಬರ ಮೃತ ದೇಹವನ್ನು ಮಾತ್ರ ಹೊರತೆಗೆಯಲಾಗಿದೆ. ರಸ್ತೆಗಳಲ್ಲಿ ಬಿರುಕು ಮತ್ತು ಭೂ ಕುಸಿತ ಉಂಟಾಗಿರುವ ಪರಿಣಾಮವಾಗಿ ಕಾರ್ಯಾಚರಣೆ ನಡೆಸುವುದು ಸವಾಲಾಗಿದೆ” ಎಂದು ತಿಳಿಸಿದ್ದಾರೆ.

“ನಿರಾಶ್ರಿತರ ಪರಿಹಾರ ವಾಹನಗಳ ನಿಯಮಿತ ಸಂಚಾರ ಮತ್ತು 300 ಮಂದಿ ಮಾತ್ರವೇ ಧಾರಾಲಿಯಲ್ಲಿ ಉಳಿದಿದ್ದಾರೆ. ಉಳಿದ ಕುಟುಂಬಗಳನ್ನು ಉತ್ತರಕಾಶಿ ಮತ್ತು ಡೆಹ್ರಾಡೂನ್‌ಗೆ ಸ್ಥಳಾಂತರಿಸಲಾಗಿದೆ. ಈವರೆಗೆ ಒಟ್ಟು 1,278 ಮಂದಿಯನ್ನು ಸ್ಥಳಾಂತರಿಸಲಾಗಿದ್ದು, ಅದರಲ್ಲಿ ಪ್ರವಾಸಿಗರು ಮತ್ತು ಸ್ಥಳೀಯರು ಸೇರಿದ್ದಾರೆ” ಎಂದು ಜಿಲ್ಲಾಡಳಿತ ಸ್ಪಷ್ಟಪಡಿಸಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅ. 10ರ ಜಂತರ್ ಮಂತರ್ ಪ್ರತಿಭಟನೆಗೆ ಅನುಮತಿ ನಿರಾಕರಿಸಿದ ದೆಹಲಿ ಪೊಲೀಸ್; ಕಠಿಣ ಕ್ರಮದ ಎಚ್ಚರಿಕೆ

ಮುಖ್ಯ ಚುನಾವಣಾ ಆಯುಕ್ತರ (CEC) ಹೊಣೆಗಾರಿಕೆ ಪ್ರಶ್ನಿಸಿ 'ಕಾಕ್ರೋಚ್ ಜನತಾ ಪಾರ್ಟಿ'...

ಪಂಜಾಬ್ ಸಿಎಂ ಕಚೇರಿ ಭ್ರಷ್ಟಾಚಾರದ ಸಿಬಿಐ ತನಿಖೆ ವಿಚಾರಣೆಯಿಂದ ಹಿಂದೆ ಸರಿದ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ

ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರ ಕಚೇರಿಗೆ ಸಂಬಂಧಿಸಿದ ಭ್ರಷ್ಟಾಚಾರದ ಆರೋಪಗಳ...

ಪಶ್ಚಿಮ ಬಂಗಾಳ ಉಪಚುನಾವಣೆ ವೇಳೆ ಅಕ್ರಮದ ಆರೋಪ; ಮರುಮತದಾನಕ್ಕೆ ವಿಪಕ್ಷಗಳ ಆಗ್ರಹ

ಪಶ್ಚಿಮ ಬಂಗಾಳದ ನಂದಿಗ್ರಾಮ ಮತ್ತು ರೇಜಿನಗರ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಮತ...