ಚಂಡೀಗಢ ಆಡಳಿತ ಏರ್ ಸೈರನ್ ಮೂಲಕ ಮನೆಯಿಂದ ಹೊರಬರದಂತೆ ಸಾರ್ವಜನಿಕರಿಗೆ ಮನವಿ ಮಾಡಿದೆ.
“ದಾಳಿ ನಡೆಯುವ ಸಾಧ್ಯತೆಯ ಬಗ್ಗೆ ವಾಯುಪಡೆ ನಿಲ್ದಾಣದಿಂದ ಏರ್ ಸೈರನ್ ಮೂಲಕ ಎಚ್ಚರಿಕೆ ನೀಡಲಾಗಿದೆ. ಸೈರನ್‌ಗಳು ಮೊಳಗುತ್ತಿವೆ. ಪ್ರತಿಯೊಬ್ಬರು ಮನೆಯೊಳಗೆ ಇರಿ, ಬಾಲ್ಕನಿ ಬಳಿಗೂ ಬರಬೇಡಿ” ಎಂದು ಚಂಡೀಗಢ ಆಡಳಿತ ಅಧಿಕೃತ ಹೇಳಿಕೆ ನೀಡಿದೆ.
ಈ ಬೆಳವಣಿಗೆ ಭಾರತ ಹಾಗೂ ಪಾಕಿಸ್ತಾನದ ನಡುವೆ ಮತ್ತಷ್ಟು ಉದ್ವಿಗ್ನತೆಯನ್ನು ಹೆಚ್ಚಿಸಿದೆ.
ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಜನಾರ್ದನ ರೆಡ್ಡಿಗೆ ಜೈಲು: ಇದು ಜನಸಾಮಾನ್ಯರ ಜಯ
ಗುರುವಾರ ರಾತ್ರಿ ಪಾಕಿಸ್ತಾನ ಪಂಜಾಬ್, ಚಂಡೀಗಢದ ಹಲವು ಪ್ರದೇಶಗಳನ್ನು ಗುರಿಯಾಗಿಸಿ ಡ್ರೋಣ್, ಕ್ಷಿಪಣಿ ದಾಳಿ ನಡೆಸಿತ್ತು. ಈ ದಾಳಿಯನ್ನು ಸಮರ್ಥವಾಗಿ ಎದುರಿಸಿದ ಭಾರತೀಯ ಸೇನೆ ಪಾಕಿಸ್ತಾನದ ಕ್ಷಿಪಣಿ, ಡ್ರೋಣ್‌ಗಳನ್ನು ಹೊಡೆದುರುಳಿಸಿತ್ತು.
ಪಂಜಾಬ್ ಮತ್ತು ಹರಿಯಾಣದ ರಾಜಧಾನಿ ಚಂಡೀಗಢದಲ್ಲಿ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ಗಡಿ ಪ್ರದೇಶದಲ್ಲಿರುವ ಮೊಹಾಲಿಯಲ್ಲೂ ಜನತೆಗೆ ಮನೆಯಿಂದ ಹೊರಬರದಂತೆ ಸೂಚಿಸಲಾಗಿದೆ.