13 ವರ್ಷಗಳಿಂದ ಕೋಲ್ಕತ್ತಾದಲ್ಲಿ ನಿಂತಿದ್ದ ವಿಮಾನ ಬೆಂಗಳೂರಿಗೆ ರವಾನೆ

Date:

ಕೋಲ್ಕತ್ತಾ ವಿಮಾನ ನಿಲ್ದಾಣದಲ್ಲಿ 13 ವರ್ಷಗಳಿಂದ ನಿಷ್ಕ್ರಿಯವಾಗಿ ನಿಂತಿದ್ದ ಬೋಯಿಂಗ್ 737-200 ವಿಮಾನವನ್ನು ತೆರವುಗೊಳಿಸಲಾಗಿದ್ದು, ಬೆಂಗಳೂರಿಗೆ ರವಾನಿಸಲಾಗಿದೆ. ಟ್ರ್ಯಾಕ್ಟರ್–ಟ್ರೇಲರ್ ಮೂಲಕ ವಿಮಾನವನ್ನು ಬೆಂಗಳೂರಿಗೆ ತರಲಾಗಿದೆ. ಅದನ್ನು ನಿರ್ವಹಣಾ ಎಂಜಿನಿಯರ್‌ಗಳ ತರಬೇತಿಗಾಗಿ ಬಳಸಲಾಗುತ್ತದೆ ಎಂದು ವರದಿಯಾಗಿದೆ.

- Advertisement -

43 ವರ್ಷ ಹಳೆಯ ಈ ವಿಮಾನವು ಏರ್ ಇಂಡಿಯಾ ಸಂಸ್ಥೆಗೆ ಸೇರಿದ್ದಾಗಿದೆ. ವಿಮಾನವನ್ನು ಅದರ ‘ಪ್ರಾಟ್ ಅಂಡ್‌ ವಿಟ್ನಿ’ ಎಂಜಿನ್‌ಗಳ ಸಮೇತ ಮಾರಾಟ ಮಾಡಲಾಗಿದೆ ಎಂದು ತಿಳಿದುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಏರ್ ಇಂಡಿಯಾ ಸಿಇಒ ಕ್ಯಾಂಪ್‌ಬೆಲ್ ವಿಲ್ಸನ್, “ಈ ವಿಮಾನ ನಮ್ಮದು ಎಂಬುದೇ ನಮಗೆ ತಿಳಿದಿರಲಿಲ್ಲ! ಖಾಸಗೀಕರಣದ ವೇಳೆ ವಿಮಾನದ ದಾಖಲೆಗಳು ಲೆಡ್ಜರ್‌ಗಳಲ್ಲಿ ಕಾಣೆಯಾಗಿದ್ದವು” ಎಂದು ತಿಳಿಸಿದ್ದಾರೆ.

1982ರಲ್ಲಿ ಇಂಡಿಯನ್ ಏರ್‌ಲೈನ್ಸ್‌ಗೆ ಸೇರಿದ್ದ VT-EHH ನೋಂದಣಿಯ ಬೋಯಿಂಗ್ 737-200 ವಿಮಾನವನ್ನು 1998ರಲ್ಲಿ ಅಲೈಯನ್ಸ್ ಏರ್‌ ಗುತ್ತಿಗೆ ಪಡೆದಿತ್ತು. 2007ರಲ್ಲಿ ವಿಮಾನವನ್ನು ಇಂಡಿಯನ್ ಏರ್‌ಲೈನ್ಸ್‌ ಮರಳಿಪಡೆದಿತ್ತು. ಬಳಿಕ, ವಿಮಾನವನ್ನು ಸರಕು ವಿಮಾನವಾಗಿ ಬಳಸಲಾಗುತ್ತಿತ್ತು.

ಅದೇ ವರ್ಷ, ಏರ್ ಇಂಡಿಯಾ ಸಂಸ್ಥೆಯು ಇಂಡಿಯನ್ ಏರ್‌ಲೈನ್ಸ್ ಜೊತೆ ವಿಲೀನವಾದ್ದರಿಂದ, ವಿಮಾನವು ಇಂಡಿಯನ್‌ ಏರ್‌ಲೈನ್ಸ್‌ ಸುಪರ್ದಿಗೆ ಬಂದಿತ್ತು. ಸಂಸ್ಥೆಯು ವಿಮಾನವನ್ನು ಇಂಡಿಯಾ ಪೋಸ್ಟ್ ಸೇವೆಗಾಗಿ ಬಳಕೆ ಮಾಡುತ್ತಿತ್ತು. ಆದಾಗ್ಯೂ, 2012ರಲ್ಲಿ ವಿಮಾನದ ಕಾರ್ಯನಿರ್ವಹಣೆ ನಿಲ್ಲಿಸಲಾಗಿತ್ತು. ಅಂದಿನಿಂದಲೂ ವಿಮಾನವು ಕೋಲ್ಕತ್ತಾ ವಿಮಾನ ನಿಲ್ದಾಣದಲ್ಲಿ ನಿಂತಿತ್ತು.

ಈ 13 ವರ್ಷಗಳಲ್ಲಿ ವಿಮಾನ ನಿಲ್ಧಾಣವು ವಿಮಾನದ ಪಾರ್ಕಿಂಗ್ ಶುಲ್ಕವಾಗಿ ಸಂಸ್ಥೆಯಿಂದ ಸುಮಾರು 1 ಕೋಟಿ ರೂಪಾಯಿ ವಸೂಲಿ ಮಾಡಿದೆ ಎಂದು ವರದಿಯಾಗಿದೆ. ಇದೀಗ, ವಿಮಾನವನ್ನು ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಲಿಮಿಟೆಡ್‌ (BIAL) ಖರೀದಿಸಿದ್ದು, ಬೆಂಗಳೂರಿಗೆ ತಂದಿದೆ. ಬಿಐಎಎಲ್‌ ತನ್ನ ಎಂಆರ್‌ಒ ಕೇಂದ್ರದಲ್ಲಿ ತರಬೇತಿಗಾಗಿ ಬಳಸಿಕೊಳ್ಳಲಿದೆ ಎಂದು ತಿಳಿದುಬಂದಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನ್ಯಾಯಾಂಗದ ಮೇಲೆ ಗೌರವವಿದೆ, ತಪ್ಪಾಗಿದ್ದರೆ ಕ್ಷಮೆಯಾಚಿಸುವೆ: ಸಂಜಯ್ ರಾವತ್

ಸುಪ್ರೀಂ ಕೋರ್ಟ್ ಕುರಿತು ತಾವು ನೀಡಿರುವ ಹೇಳಿಕೆಗಳು ಸೂಕ್ತವಲ್ಲ ಅಥವಾ ಅನುಚಿತ...

ವಿರಳಾತಿ ವಿರಳ ಪ್ರಕರಣ: ಮಾಲೆಗಾಂವ್ ಅಪ್ರಾಪ್ತೆಯ ಅತ್ಯಾಚಾರ, ಕೊಲೆ ಅಪರಾಧಿಗೆ ಮರಣದಂಡನೆ ಶಿಕ್ಷೆ

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ಮಾಲೆಗಾಂವ್ ತಾಲೂಕಿನ ಡೋಂಗರಾಳೆ ಗ್ರಾಮದಲ್ಲಿ ಸಾಡೇನಾಲ್ಕು ವರ್ಷದ...

ತಿರಂಗಾ ಮಾರ್ಚ್ ನಡೆಸದಂತೆ ಅಭಿಜೀತ್ ದೀಪ್ಕೆಗೆ ದೆಹಲಿ ಪೊಲೀಸರಿಂದ ನೋಟಿಸ್: ಮನೆಯ ಬಳಿ ಬಿಗಿ ಭದ್ರತೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರು ದೆಹಲಿಯ...

​ಪ್ರತಿಭಟನೆಗಳ ವರದಿಗಾರಿಕೆಗೆ ಭಾರತೀಯ ಪ್ರೆಸ್ ಕೌನ್ಸಿಲ್‌ನಿಂದ ನೂತನ ಮಾರ್ಗದರ್ಶಿ ಸೂತ್ರಗಳ ಬಿಡುಗಡೆ

ಪ್ರತಿಭಟನೆಗಳು ಮತ್ತು ಧರಣಿ ಸತ್ಯಾಗ್ರಹಗಳ ಸಂದರ್ಭದಲ್ಲಿ ಪತ್ರಕರ್ತರ ಸುರಕ್ಷತೆಯನ್ನು ಕಾಯ್ದುಕೊಳ್ಳಲು, ಜವಾಬ್ದಾರಿಯುತ...