ಬೆದರಿಕೆಗಳನ್ನು ಅರ್ಥ ಮಾಡಿಕೊಳ್ಳುವಲ್ಲಿ ಭಾರತ ವಿಫಲವಾಗಿದೆ: ಅಜಿತ್ ದೋವಲ್

Date:

ಕೆಲವು ರಾಷ್ಟ್ರಗಳು ತಮ್ಮ ಅಧಿಕಾರ ಬಳಸಿಕೊಂಡು, ತಮ್ಮಿಚ್ಛೆಯನ್ನು ಇತರ ರಾಷ್ಟ್ರಗಳ ಮೇಲೆ ಹೇರಲು ಪ್ರಯತ್ನಿಸುತ್ತಿದೆ. ಆದ್ದರಿಂದಲೇ ಯುದ್ಧಗಳು ಸಂಭವಿಸುತ್ತವೆ. ಭಾರತವು ಯಾವುದೇ ದೇಶದ ಮೇಲೆ‌ ದಾಳಿ ಮಾಡಿಲ್ಲ. ಆದರೆ, ತನಗಿರುವ ಬೆದರಿಕೆಗಳನ್ನು ಅರ್ಥ ಮಾಡಿಕೊಳ್ಳುವಲ್ಲಿ ವಿಫಲವಾಗಿದೆ ಎಂದು ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಹೇಳಿದ್ದಾರೆ.

- Advertisement -

ದೆಹಲಿಯಲ್ಲಿ ನಡೆದ ‘ವಿಕ್ಷಿತ್ ಭಾರತ್ ಯಂಗ್ ಲೀಡರ್ಸ್’ ಸಂವಾದದಲ್ಲಿ ಅವರು ಮಾತನಾಡಿದರು. ವೆನೆಜುವೆಲಾ ಅಧ್ಯಕ್ಷರನ್ನು ಅಮೆರಿಕ ಸೆರೆ ಹಿಡಿದಿರುವುದು, ರಷ್ಯಾ-ಸಂಘರ್ಷ, ಪ್ಯಾಲೆಸ್ತೀನ್ ಮೇಲೆ ಇಸ್ರೇಲ್ ದಾಳಿ, ಗ್ರೀನ್ ‌ಲ್ಯಾಂಡ್ ಖರೀದಿಗೆ ಮುಂದಾಗಿರುವ ಟ್ರಂಪ್ – ಇಂತಹ ಹಲವು ಅಂತರಾಷ್ಟ್ರೀಯ ಸಂಘರ್ಷಗಳ ಬಗ್ಗೆ ಅವರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ‘ಕೆಲವು‌ ರಾಷ್ಟ್ರಗಳು ತಮ್ಮ ಅಧಿಕಾರ, ಇಚ್ಛೆಯನ್ನು ಮತ್ತೊಬ್ಬರ ಮೇಲೆ‌ ಹೇರಲು ಯತ್ನಿಸುತ್ತಿರುವುದರಿಂದಲೇ ಇಷ್ಟೆಲ್ಲ ಸಂಘರ್ಷಗಳು ನಡೆಯುತ್ತಿದೆ’ ಎಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

“ಭಾರತ ಯಾವುದೇ ದೇಶದ ಮೇಲೆ ದಾಳಿ ಮಾಡಿಲ್ಲ. ಆದರೆ, ತನ್ನ ರಾಷ್ಟ್ರೀಯ ಭದ್ರತೆಗೆ ಇರುವ ಬೆದರಿಕೆಗಳನ್ನು ಅರ್ಥಮಾಡಿಕೊಳ್ಳುವಲ್ಲಿ ವಿಫಲವಾಗಿದೆ. ಭಾರತವು ಗಡಿಗಳಲ್ಲಿ ಮಾತ್ರವಲ್ಲದೆ, ಆರ್ಥಿಕವಾಗಿಯೂ ತನ್ನನ್ನು ತಾನು ಬಲಪಡಿಸಿಕೊಳ್ಳಬೇಕಾಗಿದೆ” ಎಂದು‌ ಹೇಳಿದ್ದಾರೆ.

“ಇತಿಹಾಸದಲ್ಲಿ ನಾವು ಯಾರ ಮೇಲೂ‌ದಾಳಿ ಮಾಡಿಲ್ಲ. ಆದರೆ, ನಮ್ಮ‌ ಮೇಲೆ ದಾಳಿಗಳು‌ ನಡೆದಿವೆ. ಆ ದಾಳಿಗಳಲ್ಲಿ ನಮ್ಮ ಹಳ್ಳಿಗಳನ್ನು ಸುಟ್ಟುಹಾಕಲಾಯಿತು. ನಮ್ಮ ನಾಗರಿಕತೆಯನ್ನು ನಾಶಪಡಿಸಲಾಯಿತು. ಆದರೆ, ನಾವು ಅಸಹಾಯಕರಾಗಿ ಮೂಕ ಪ್ರೇಕ್ಷಕರಾಗಿ ನೋಡುತ್ತಿದ್ದೆವು. ಇತಿಹಾಸದಿಂದ ನಾವು‌ ಪಾಠ ಕಲಿಯಬೇಕು ದೇಶವನ್ನು ಗಡಿ ಭದ್ರತೆ, ಆರ್ಥಿಕತೆ, ಸಾಮಾಜಿಕ ಅಭಿವೃದ್ಧಿ ಸೇರಿದಂತೆ ಪ್ರತಿಯೊಂದು ಅಂಶದಲ್ಲೂ ಮತ್ತೆ ಶ್ರೇಷ್ಠವಾಗುವ ಹಂತಕ್ಕೆ ಕೊಂಡೊಯ್ಯಬೇಕು” ಎಂದು ಅಜಿತ್ ದೋವಲ್ ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನ್ಯಾಯಾಂಗದ ಮೇಲೆ ಗೌರವವಿದೆ, ತಪ್ಪಾಗಿದ್ದರೆ ಕ್ಷಮೆಯಾಚಿಸುವೆ: ಸಂಜಯ್ ರಾವತ್

ಸುಪ್ರೀಂ ಕೋರ್ಟ್ ಕುರಿತು ತಾವು ನೀಡಿರುವ ಹೇಳಿಕೆಗಳು ಸೂಕ್ತವಲ್ಲ ಅಥವಾ ಅನುಚಿತ...

ವಿರಳಾತಿ ವಿರಳ ಪ್ರಕರಣ: ಮಾಲೆಗಾಂವ್ ಅಪ್ರಾಪ್ತೆಯ ಅತ್ಯಾಚಾರ, ಕೊಲೆ ಅಪರಾಧಿಗೆ ಮರಣದಂಡನೆ ಶಿಕ್ಷೆ

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ಮಾಲೆಗಾಂವ್ ತಾಲೂಕಿನ ಡೋಂಗರಾಳೆ ಗ್ರಾಮದಲ್ಲಿ ಸಾಡೇನಾಲ್ಕು ವರ್ಷದ...

ತಿರಂಗಾ ಮಾರ್ಚ್ ನಡೆಸದಂತೆ ಅಭಿಜೀತ್ ದೀಪ್ಕೆಗೆ ದೆಹಲಿ ಪೊಲೀಸರಿಂದ ನೋಟಿಸ್: ಮನೆಯ ಬಳಿ ಬಿಗಿ ಭದ್ರತೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರು ದೆಹಲಿಯ...

​ಪ್ರತಿಭಟನೆಗಳ ವರದಿಗಾರಿಕೆಗೆ ಭಾರತೀಯ ಪ್ರೆಸ್ ಕೌನ್ಸಿಲ್‌ನಿಂದ ನೂತನ ಮಾರ್ಗದರ್ಶಿ ಸೂತ್ರಗಳ ಬಿಡುಗಡೆ

ಪ್ರತಿಭಟನೆಗಳು ಮತ್ತು ಧರಣಿ ಸತ್ಯಾಗ್ರಹಗಳ ಸಂದರ್ಭದಲ್ಲಿ ಪತ್ರಕರ್ತರ ಸುರಕ್ಷತೆಯನ್ನು ಕಾಯ್ದುಕೊಳ್ಳಲು, ಜವಾಬ್ದಾರಿಯುತ...