ಅಜಿತ್ ಪವಾರ್ ವಿಮಾನ ಅಪಘಾತ: ಸಮಗ್ರ ತನಿಖೆಗೆ ಆಗ್ರಹಿಸಿ ಅಮಿತ್ ಶಾಗೆ ರೋಹಿತ್ ಪವಾರ್ ಪತ್ರ

Date:

ಜನವರಿ 28ರಂದು ನಡೆದ ವಿಮಾನ ಅಪಘಾತದಲ್ಲಿ ಮೃತಪಟ್ಟ ಅಜಿತ್ ಪವಾರ್ ಅವರ ಸಾವಿನ ಕುರಿತು ಸಮಗ್ರ ಮತ್ತು ಪಾರದರ್ಶಕ ತನಿಖೆ ನಡೆಸುವಂತೆ ಕೋರಿ ಎನ್‌ಸಿಪಿ (ಶರದ್ ಪವಾರ್ ಬಣ) ನಾಯಕ ರೋಹಿತ್ ಪವಾರ್ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಪತ್ರ ಬರೆದಿದ್ದಾರೆ.

- Advertisement -

​ಈ ಕುರಿತು ಶನಿವಾರ ಸಾಮಾಜಿಕ ಜಾಲತಾಣ ‘ಎಕ್ಸ್‌’ನಲ್ಲಿ ಮಾಹಿತಿ ಹಂಚಿಕೊಂಡಿರುವ ಅವರು, ‘ಅಜಿತ್ ದಾದಾ’ ಅವರ ಸಾವಿಗೆ ಕಾರಣವಾದ ವಿಮಾನ ಅಪಘಾತದ ಬಗ್ಗೆ ಹಲವು ಅನುಮಾನಗಳು ಮೂಡಿವೆ. ಈ ಹಿಂದೆಯೇ ಪತ್ರಿಕಾಗೋಷ್ಠಿ ನಡೆಸಿ, ಈ ಸಂಶಯಗಳನ್ನು ಮತ್ತು ಅದಕ್ಕೆ ಸಂಬಂಧಿಸಿದ ಸತ್ಯಾಂಶಗಳನ್ನು ಜನರ ಮುಂದಿಡಲಾಗಿತ್ತು ಎಂದು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಈ ಪ್ರಕರಣದ ಕುರಿತು ಖುದ್ದು ಚರ್ಚಿಸಲು ಕೇಂದ್ರ ಗೃಹ ಸಚಿವ ಅಮಿತ್ ಶಾ, ನಾಗರಿಕ ವಿಮಾನಯಾನ ಸಚಿವ ರಾಮ್ ಮೋಹನ್ ನಾಯ್ಡು ಮತ್ತು ನಾಗರಿಕ ವಿಮಾನಯಾನ ಮಹಾನಿರ್ದೇಶಕರನ್ನು ಭೇಟಿ ಮಾಡಲು ಪ್ರಯತ್ನಿಸಲಾಯಿತು. ಆದರೆ, ಕಾರಣಾಂತರಗಳಿಂದ ಈ ಭೇಟಿ ಸಾಧ್ಯವಾಗಲಿಲ್ಲ ಎಂದು ರೋಹಿತ್ ಪವಾರ್ ಬೇಸರ ವ್ಯಕ್ತಪಡಿಸಿದ್ದಾರೆ.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಖರ್ಗೆ ಭಾಷಣ ಕಿತ್ತು ಹಾಕಿದ್ದು ಖಂಡನೀಯ; ಅಂದು ದ್ರೋಣಾಚಾರ್ಯ, ಇಂದು ಸಂಘಾಚಾರ್ಯ!

​ಭೇಟಿ ಸಾಧ್ಯವಾಗದ ಹಿನ್ನೆಲೆಯಲ್ಲಿ, ಅಪಘಾತದ ಕುರಿತಾದ ನಮ್ಮ ಎಲ್ಲ ಸಂಶಯಗಳು ಮತ್ತು ವಿವರವಾದ ಪ್ರಸ್ತುತಿಯನ್ನು ಇಮೇಲ್ ಮೂಲಕ ಗೃಹ ಸಚಿವರು, ವಿಮಾನಯಾನ ಸಚಿವರು ಹಾಗೂ ಡಿಜಿಸಿಎ ಅಧಿಕಾರಿಗಳಿಗೆ ಕಳುಹಿಸಲಾಗಿದೆ. ಸತ್ಯಾಂಶವನ್ನು ಹೊರತರಲು ಮತ್ತು ಮಹಾರಾಷ್ಟ್ರದ ಜನತೆಯನ್ನು ಕಾಡುತ್ತಿರುವ ಪ್ರಶ್ನೆಗಳಿಗೆ ಉತ್ತರ ಕಂಡುಕೊಳ್ಳಲು ನಿಷ್ಪಕ್ಷಪಾತ ತನಿಖೆಯ ಅಗತ್ಯವಿದೆ ಎಂದು ಅವರು ಪ್ರತಿಪಾದಿಸಿದ್ದಾರೆ.

“ನಾವು ಪತ್ರಿಕಾಗೋಷ್ಠಿ ನಡೆಸಿದ ನಂತರ ತನಿಖೆಗೆ ಕೊಂಚ ಚುರುಕು ಮುಟ್ಟಿದೆ. ಆದರೆ, ನಿರೀಕ್ಷಿತ ವೇಗದಲ್ಲಿ ತನಿಖೆ ಸಾಗುತ್ತಿಲ್ಲ. ಸಂಸತ್ತಿನ ಅಧಿವೇಶನದ ಕಾರಣ ಸಚಿವರುಗಳಿಗೆ ಸಮಯ ನೀಡಲು ಸಾಧ್ಯವಾಗಿಲ್ಲದಿರಬಹುದು, ಆದರೆ ಡಿಜಿಸಿಎ ಅಧಿಕಾರಿಗಳು ಏಕೆ ಸಮಯ ನೀಡಲಿಲ್ಲ ಎಂಬುದು ಅರ್ಥವಾಗುತ್ತಿಲ್ಲ” ಎಂದು ರೋಹಿತ್ ಪ್ರಶ್ನಿಸಿದ್ದಾರೆ.

​”ನಾವು ಅಧಿಕಾರದಲ್ಲಿ ಇಲ್ಲದಿದ್ದರೂ ನಮ್ಮದೇ ರೀತಿಯಲ್ಲಿ ಸತ್ಯಶೋಧನೆಗೆ ಪ್ರಯತ್ನಿಸುತ್ತಿದ್ದೇವೆ. ರಾಜ್ಯ ಸರ್ಕಾರ ಮತ್ತು ಅಧಿಕಾರದಲ್ಲಿರುವವರು ಈ ವಿಷಯದಲ್ಲಿ ಹೆಚ್ಚಿನ ಮುತುವರ್ಜಿ ವಹಿಸುತ್ತಾರೆ ಎಂದು ಭಾವಿಸುತ್ತೇನೆ. ಈ ಮನವಿಗೆ ಸಕಾರಾತ್ಮಕ ಸ್ಪಂದನೆ ಸಿಗುವ ವಿಶ್ವಾಸವಿದೆ” ಎಂದು ಅವರು ಹೇಳಿದ್ದಾರೆ.

ಎನ್‌ಸಿಪಿ ವಿಲೀನ ತಳ್ಳಿಹಾಕಿದ ಶರದ್‌ ಪವಾರ್ ಬಣ

ಶರದ್ ಪವಾರ್ ನೇತೃತ್ವದ ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ-ಎಸ್‌ಪಿ)ಯು ಅಜಿತ್ ಪವಾರ್ ಬಣದೊಂದಿಗಿನ ವಿಲೀನದ ವಿಚಾರವನ್ನು ಶರದ್‌ ಪವಾರ್‌ ಬಣ ತಳ್ಳಿಹಾಕಿದೆ. ಈ ಬಗ್ಗೆ ಮಾತನಾಡಿದ ಪಕ್ಷದ ಮಹಾರಾಷ್ಟ್ರ ಘಟಕದ ಅಧ್ಯಕ್ಷ ಶಶಿಕಾಂತ ಶಿಂಧೆ ಅವರು “ನಾವು ಒತ್ತಡ ಹೇರಿದ್ದೇವೆ ಎಂಬುದು ಸರಿಯಲ್ಲ. ಈಗ ನಾವು ಪಕ್ಷವನ್ನು ಮರುನಿರ್ಮಾಣ ಮಾಡಲು ನಿರ್ಧರಿಸಿದ್ದೇವೆ. 2023ರಲ್ಲಿ ಪಕ್ಷ ಒಡೆದು ಬಿಜೆಪಿ-ಶಿಂಧೆ ಶಿವಸೇನೆ ಮೈತ್ರಿಗೆ ಸೇರಿದ್ದ ಅಜಿತ್ ಗುಂಪಿನೊಂದಿಗೆ ವಿಲೀನದ ಚರ್ಚೆಗೆ ಇದೀಗ ಅವಕಾಶವಿಲ್ಲ ಎಂದರು. ಇತ್ತೀಚೆಗೆ ಉಪ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಸುನೇತ್ರಾ ಪವಾರ್ ಅವರು ಶೀಘ್ರದಲ್ಲೇ ಎನ್‌ಸಿಪಿ ರಾಷ್ಟ್ರೀಯ ಅಧ್ಯಕ್ಷರಾಗಲಿದ್ದಾರೆ ಎಂಬ ಬಗ್ಗೆಯೂ ಮಾತನಾಡಿದ ಶಶಿಕಾಂತ ಶಿಂಧೆ, ಸುನೇತ್ರ ಅವರೇ ತಮ್ಮ ಪಕ್ಷದ ಬಗ್ಗೆ ನಿರ್ಧಾರ ತೆಗೆದುಕೊಳ್ಳುತ್ತಾರೆ” ಎಂದು ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಸ್ಸಾಂ ಉಪಚುನಾವಣೆ ಅಖಾಡ: ಸಿಎಂ ಶರ್ಮಾ ಮತ್ತು ಕಾಂಗ್ರೆಸ್ ಸಂಸದರ ನಡುವೆ ‘ಬಿರಿಯಾನಿ vs ರಸ್ಕ್’ ವಾಕ್ಸಮರ!

ಅಸ್ಸಾಂನ ನಗಾಂವ್ ಲೋಕಸಭಾ ಕ್ಷೇತ್ರಕ್ಕೆ ನಡೆಯಲಿರುವ ಉಪಚುನಾವಣೆಯ ಪ್ರಚಾರ ಕಣದಲ್ಲಿ ರಾಜಕೀಯ...

ಶಾಲಾ ಸಮಸ್ಯೆಗಳ ಕುರಿತು ಗ್ರಾಮ ಸಭೆಯಲ್ಲಿ ಧ್ವನಿ ಎತ್ತಿದ ವಿದ್ಯಾರ್ಥಿಗಳು; ಅಧಿಕಾರಿಗಳ ಮೆಚ್ಚುಗೆ-ಭರವಸೆ

ಸರ್ಕಾರಿ ಶಾಲಾ ವಿದ್ಯಾರ್ಥಿಗಳು ‘ವಿಶೇಷ ಗ್ರಾಮ ಸಭೆ’ಗಳಲ್ಲಿ ಪಾಲ್ಗೊಂಡು, ಪಂಚಾಯತ್ ಪ್ರತಿನಿಧಿಗಳು...

ಉತ್ತರಾಖಂಡ SIR ಅಂತಿಮ ಮತದಾರರ ಪಟ್ಟಿ ಪ್ರಕಟ: ಆದರೆ ಮುಗಿದಿಲ್ಲ ನೋಂದಣಿ ಪ್ರಕ್ರಿಯೆ

ಉತ್ತರಾಖಂಡ ರಾಜ್ಯದಲ್ಲಿ ನಡೆದ 'ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ' (ಎಸ್‌ಐಆರ್)...