ಪುಣೆ ಭೂ ಅವ್ಯವಹಾರ ಪ್ರಕರಣ: ಡಿಸಿಎಂ ಅಜಿತ್ ಪವಾರ್ ಪುತ್ರನ ಹೆಸರು ಕೈಬಿಟ್ಟ ತನಿಖಾ ಸಮಿತಿ

Date:

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರ ಪುತ್ರ ಪಾರ್ಥ್ ಪವಾರ್‌ ಪಾಲುದಾರರಾಗಿರುವ ಪುಣೆ ಮೂಲದ ಕಂಪೆನಿಯ 300 ಕೋಟಿ ರೂ. ಭೂ ವ್ಯವಹಾರದ ಕುರಿತು ತನಿಖೆ ನಡೆಸುತ್ತಿರುವ ಉನ್ನತ ಮಟ್ಟದ ಸಮಿತಿಯು, ಅಕ್ರಮಗಳಿಗೆ ಸಂಬಂಧಿಸಿ ಮೂರು ಜನರನ್ನು ಹೆಸರಿಸಿದೆ. ಆದರೆ ಪಾರ್ಥ್ ಪವಾರ್ ಬಗ್ಗೆ ಯಾವುದೇ ಉಲ್ಲೇಖವನ್ನು ಮಾಡಿಲ್ಲ ಎಂದು ವರದಿಯಾಗಿದೆ.

- Advertisement -

ಇನ್ಸ್‌ಪೆಕ್ಟರ್‌ ಜನರಲ್ ರಾಜೇಂದ್ರ ಮುಥೆ ನೇತೃತ್ವದ ಸಮಿತಿಯು ಮಂಗಳವಾರ ಈ ಕುರಿತು ವರದಿಯನ್ನು ಸಲ್ಲಿಸಿದೆ. ವರದಿಯಲ್ಲಿ ಪುಣೆಯ ದುಬಾರಿ ಪ್ರದೇಶವಾದ ಮುಂಡ್ವಾದಲ್ಲಿ 40 ಎಕರೆ ಸರಕಾರಿ ಭೂಮಿಯ ಮಾರಾಟ-ಖರೀದಿ ಒಪ್ಪಂದದ ನೋಂದಣಿಯಲ್ಲಿ ಅಕ್ರಮಗಳು ಮತ್ತು ನಿಯಮಗಳ ಉಲ್ಲಂಘನೆ ಕಂಡುಬಂದಿದೆ ಎಂದು ತಿಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಪುತ್ರ ಪಾರ್ಥ್ ಪವಾರ್ ಪಾಲುದಾರರಾಗಿರುವ ಅಮಾದಿಯಾ ಎಂಟರ್ ಪ್ರೈಸಸ್ ಎಲ್ಎಲ್ ಪಿ ಕಂಪೆನಿಗೆ ಪುಣೆಯ ಬಳಿ 40 ಎಕರೆ ಮಹರ್ ವತನ್ ಭೂಮಿಯನ್ನು 300 ಕೋಟಿ ರೂಪಾಯಿಗೆ ಮಾರಾಟ ಮಾಡಲಾಗಿದೆ. ಈ ಭೂಮಿಯ ಮಾರಾಟ ದರ 1,800 ಕೋಟಿ ರೂಪಾಯಿ ಎಂದು ಅಂದಾಜಿಸಲಾಗಿದೆ.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಬಿಹಾರ ಫಲಿತಾಂಶ ಕರ್ನಾಟಕದ ಕಾಂಗ್ರೆಸ್ಸಿಗರಿಗೆ ಪಾಠವಾಗಲಿದೆಯೇ?

ಪಾರ್ಥ್ ಪವಾರ್ ಅವರು ಅಮಾದಿಯಾದಲ್ಲಿ ಪಾಲುದಾರರಾಗಿದ್ದಾರೆ. ಆದರೆ ವ್ಯವಹಾರಕ್ಕೆ ಸಂಬಂಧಿಸಿದ ಯಾವುದೇ ದಾಖಲೆಯಲ್ಲಿ ಅವರ ಹೆಸರು ಕಂಡುಬಂದಿಲ್ಲ ಎಂದು ತನಿಖಾ ವರದಿಯಲ್ಲಿ ಹೇಳಲಾಗಿದೆ. ಆದ್ದರಿಂದ ಸಮಿತಿಯು ತನ್ನ ವರದಿಯಲ್ಲಿ ಅವರ ಬಗ್ಗೆ ಯಾವುದೇ ಉಲ್ಲೇಖವನ್ನು ಮಾಡಿಲ್ಲ ಎಂದು ಹೇಳಲಾಗಿದೆ.

ತನಿಖಾ ವರದಿಯಲ್ಲಿ ಅಮಾನತುಗೊಂಡ ಸಬ್ ರಿಜಿಸ್ಟ್ರಾರ್ ರವೀಂದ್ರ ತರು, ಶೀತಲ್ ತೇಜ್ವಾನಿ ಮತ್ತು ಅಮಾದಿಯಾ ಎಂಟರ್ಪ್ರೈಸಸ್ ಪಾಲುದಾರ ದಿಗ್ವಿಜಯ್ ಪಾಟೀಲ್ ಅವರನ್ನು ಅಕ್ರಮಗಳಿಗೆ ಹೊಣೆಗಾರರನ್ನಾಗಿ ಮಾಡಿದೆ. ಪುಣೆ ಪೊಲೀಸರು ಸಲ್ಲಿಸಿದ ಎಫ್ಐಆರ್‌ನಲ್ಲಿ ಈ ಮೂವರನ್ನು ಆರೋಪಿಗಳೆಂದು ಹೆಸರಿಸಲಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಣಿಪುರ | ಮತ್ತೆ ಭುಗಿಲೆದ್ದ ಹಿಂಸಾಚಾರ: ಗುಂಡಿನ ದಾಳಿಗೆ ಮೂವರ ಬಲಿ, 7 ಮನೆಗಳಿಗೆ ಬೆಂಕಿ

ದೀರ್ಘಕಾಲದಿಂದ ಜನಾಂಗೀಯ ಸಂಘರ್ಷಕ್ಕೆ ಈಡಾಗಿರುವ ಮಣಿಪುರದಲ್ಲಿ ಮತ್ತೆ ಹಿಂಸಾಚಾರ ಭುಗಿಲೆದ್ದಿದೆ. ಕಾಂಗ್‌ಪೋಕ್ಪಿ...

ದೆಹಲಿ ಪ್ರತಿಭಟನೆ | ವಶಕ್ಕೆ ಪಡೆದ ನೂರಾರು ಪ್ರತಿಭಟನಾಕಾರರನ್ನು ಸ್ಟೇಡಿಯಂಗೆ ದಬ್ಬಿದ ಪೊಲೀಸರು

ದೆಹಲಿಯ ವಿವಿಧ ಪ್ರದೇಶಗಳಿಂದ CJP ನೂರಾರು ಕಾರ್ಯಕರ್ತರು ಸೇರಿದಂತೆ ಹಲವು ನಾಗರಿಕರು...

ಸಿಜೆಪಿ ಪ್ರತಿಭಟನೆ – ಹೆದರಿದ ಮೋದಿ: ದೆಹಲಿಯಲ್ಲಿ ಮೂವರು ಮಾಜಿ ಸಿಎಂ – ಮಮತಾ, ಪಿಣರಾಯಿ, ಕೇಜ್ರಿವಾಲ್ – ಬಂಧನ

ಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್ ರಾಜೀನಾಮೆ ಮತ್ತು ಎಸ್‌ಐಆರ್‌ ರದ್ದತಿಗೆ ಆಗ್ರಹಿಸಿ...

ಅ.12ರಂದು ದೆಹಲಿಯಲ್ಲಿ ಇಂಡಿಯಾ ಒಕ್ಕೂಟದ ಪ್ರತಿಭಟನೆ: ಕೆ.ಸಿ. ವೇಣುಗೋಪಾಲ್

ಜನರ ಮತದಾನದ ಹಕ್ಕನ್ನು ರಕ್ಷಿಸುವ ಉದ್ದೇಶದಿಂದ ಇಂಡಿಯಾ ಮೈತ್ರಿಕೂಟವು ಸೋಮವಾರ ನವದೆಹಲಿಯಲ್ಲಿ...