ವಿದ್ಯಾರ್ಥಿ ಪ್ರತಿಭಟನೆ ವೇಳೆ ಎಕೆ 47 ಫೈರಿಂಗ್ ವಿವಾದ: ಬಿಹಾರದಲ್ಲಿ 17 ಐಪಿಎಸ್ ಅಧಿಕಾರಿಗಳ ವರ್ಗಾವಣೆ

Date:

ವಿದ್ಯಾರ್ಥಿಗಳ ಪ್ರತಿಭಟನೆಯ ಸಂದರ್ಭದಲ್ಲಿ ಎಕೆ-47 ಬಂದೂಕಿನಿಂದ ಗುಂಡು ಹಾರಿಸಿದ ಘಟನೆ ಭಾರೀ ವಿವಾದ ಸೃಷ್ಟಿಸಿರುವ ಬೆನ್ನಲ್ಲೇ, ಬಿಹಾರ ಸರ್ಕಾರವು ಮಂಗಳವಾರ ಮಹತ್ವದ ಆಡಳಿತಾತ್ಮಕ ಕ್ರಮ ಕೈಗೊಂಡಿದ್ದು, 17 ಹಿರಿಯ ಐಪಿಎಸ್‌ (IPS) ಅಧಿಕಾರಿಗಳನ್ನು ದಿಢೀರ್ ವರ್ಗಾವಣೆ ಮಾಡಿದೆ. ಇದರಲ್ಲಿ ವಿವಾದಕ್ಕೆ ಗುರಿಯಾಗಿದ್ದ ಸಿವಾನ್ ಹಾಗೂ ಭೋಜ್‌ಪುರ ಜಿಲ್ಲೆಗಳ ಪೊಲೀಸ್ ವರಿಷ್ಠಾಧಿಕಾರಿಗಳೂ (ಎಸ್‌ಪಿ) ಸೇರಿದ್ದಾರೆ.

- Advertisement -

ರಾಜ್ಯ ಗೃಹ ಇಲಾಖೆಯ ಅಧಿಸೂಚನೆಯ ಪ್ರಕಾರ, ಸಿವಾನ್ ಎಸ್‌ಪಿ ಪುರಾಣ್ ಕುಮಾರ್ ಝಾ ಅವರನ್ನು ಹುದ್ದೆಯಿಂದ ಎತ್ತಂಗಡಿ ಮಾಡಲಾಗಿದ್ದು, ಯಾವುದೇ ಹುದ್ದೆ ನೀಡದೆ ಕಾಯ್ದಿರಿಸಲಾಗಿದೆ. ಸಿವಾನ್‌ನ ನೂತನ ಎಸ್‌ಪಿಯಾಗಿ ಭಾರತ್ ಸೋನಿ ಹಾಗೂ ಭೋಜ್‌ಪುರದ ಎಸ್‌ಪಿಯಾಗಿ ಅವಧೇಶ್ ದೀಕ್ಷಿತ್ ಅಧಿಕಾರ ವಹಿಸಿಕೊಳ್ಳಲಿದ್ದಾರೆ. ಜೊತೆಗೆ ಹೃದಯ್ ಕಾಂತ್ ಅವರನ್ನು ನಲಂದಾ ಜಿಲ್ಲೆಯ ಎಸ್‌ಪಿಯನ್ನಾಗಿ ನೇಮಿಸಲಾಗಿದೆ. ಈ ವರ್ಗಾವಣೆಗಳು ಇತ್ತೀಚಿನ ವಿವಾದಗಳಿಗೆ ಸಂಬಂಧಿಸಿದ್ದೇ ಅಥವಾ ವಾಡಿಕೆಯ ಆಡಳಿತಾತ್ಮಕ ಪ್ರಕ್ರಿಯೆಯೇ ಎಂಬುದನ್ನು ಸರ್ಕಾರ ಬಹಿರಂಗಪಡಿಸಿಲ್ಲ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮಹಿಳೆ ಮಾಡುತ್ತಿರುವ ಬಿಟ್ಟಿ ಚಾಕರಿಗಳೇನೇನು? ಇದನ್ನೇಕೆ ಅರಿಯಲು ಮುಂದಾಗಿದೆ...

2047ರ ವೇಳೆಗೆ ಭಾರತವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ಮಾಡುವ ಸರ್ಕಾರದ ಗುರಿಗೆ ಒಂದು ದೊಡ್ಡ ಅಡ್ಡಿ ಎದುರಾಗಿದೆ. ಅದೇನೆಂದರೆ; ಸಾಕಷ್ಟು ಸಂಖ್ಯೆಯ ಮಹಿಳೆಯರನ್ನು ಉದ್ಯೋಗ ಕ್ಷೇತ್ರಕ್ಕೆ ತರುವುದು. ವಿಶ್ವಬ್ಯಾಂಕ್ ಪ್ರಕಾರ, 2047ರ ವೇಳೆಗೆ...

ಭದ್ರತೆಯ ಹೆಸರಿನಲ್ಲಿ ಮಾಂಸದಂಗಡಿಗಳಿಗೆ ಬೀಗ: ಸರ್ಕಾರದ ಈ ನಿರ್ಧಾರದ...

ಈ ಬೆಳವಣಿಗೆ ಕಾಂಗ್ರೆಸ್ ಸರ್ಕಾರದ ಆಡಳಿತಾತ್ಮಕ ಹೊಣೆಗಾರಿಕೆಯನ್ನೂ ಮುನ್ನೆಲೆಗೆ ತಂದಿದೆ. ಪ್ರಧಾನಿಯ ಭೇಟಿಯ ಹಿನ್ನೆಲೆಯಲ್ಲಿ ಹೆಲಿಕಾಪ್ಟರ್‌ಗಳ ಆಗಮನ ಮತ್ತು ನಿರ್ಗಮನದ ಭದ್ರತೆಯನ್ನು ನಿರ್ಬಂಧಕ್ಕೆ ಕಾರಣವೆಂದು ಸಮರ್ಥಿಸಲಾಗುತ್ತಿದ್ದರೆ, ಅದಕ್ಕೂ ಸಮಗ್ರ ವಿವರಣೆ ಬೇಕಾಗುತ್ತದೆ. ಪ್ರಧಾನಿ...

ನಿಜಕ್ಕೂ ಭಾರತದ ಬಡತನ 16%ಗೆ ಇಳಿದಿದೆಯೇ? ವಾಸ್ತವ ಹೇಳುವುದೇನು?

ವಿಶ್ವಬ್ಯಾಂಕ್ ವರದಿ ಪ್ರಕಾರ, ಭಾರತದಲ್ಲಿ ಬಡತನ 16.1%ಗೆ ಮತ್ತು ತೀವ್ರ ಬಡತನ 2.6%ಗೆ ಇಳಿದಿದೆ. ಇದೇ ಅಂಕಿಅಂಶವನ್ನು ಬಳಸಿಕೊಂಡು ತಮ್ಮ ಸಾಧನೆ ಎಂಬಂತೆ ಕೇಂದ್ರ ಸರ್ಕಾರ ಸಂಭ್ರಮಿಸುತ್ತಿದೆ. ಆದರೆ, ದೇಶದ ಸುಮಾರು 80...

ಜುಲೈ 25ರಂದು ಸಿವಾನ್ ಜಿಲ್ಲೆಯಲ್ಲಿ ನಡೆದ ವಿದ್ಯಾರ್ಥಿ ಪ್ರತಿಭಟನೆ ವೇಳೆ, ಪೊಲೀಸ್ ಕಾನ್‌ಸ್ಟೆಬಲ್ ಅಭಿಷೇಕ್ ಕುಮಾರ್ ಎಕೆ-47 ರೈಫಲ್‌ನಿಂದ ಗುಂಡು ಹಾರಿಸುತ್ತಿರುವ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿ ತೀವ್ರ ಆಕ್ರೋಶಕ್ಕೆ ಕಾರಣವಾಗಿತ್ತು. ಬಳಿಕ ಆತನನ್ನು ಸೇವೆಯಿಂದ ಅಮಾನತುಗೊಳಿಸಿ, ಇಲಾಖಾ ವಿಚಾರಣೆಗೆ ಆದೇಶಿಸಲಾಗಿತ್ತು.

ಈ ಘಟನೆಯ ಕುರಿತು ಸುಪ್ರೀಂ ಕೋರ್ಟ್‌ಗೆ ಅಫಿಡವಿಟ್ ಸಲ್ಲಿಸಿರುವ ಬಿಹಾರ ಸರ್ಕಾರ, ಜೆಪಿ ಚೌಕ್ ಬಳಿ ಪ್ರತಿಭಟನಾಕಾರರು ಕಾನ್‌ಸ್ಟೆಬಲ್ ಕುಮಾರ್‌ನನ್ನು ಸುತ್ತುವರಿದು ದಿಗ್ಬಂಧನ ವಿಧಿಸಿದ್ದರಿಂದ ತಪ್ಪಿಸಿಕೊಳ್ಳಲು ಆತ ಗಾಳಿಯಲ್ಲಿ ನಾಲ್ಕು ಸುತ್ತು ಗುಂಡು ಹಾರಿಸಿದ್ದ ಹಾಗೂ ಇದರಿಂದ ಸ್ಥಳದಲ್ಲಿ ಯಾರಿಗೂ ಗಾಯಗಳಾಗಿಲ್ಲ ಎಂದು ತಿಳಿಸಿದೆ. ಆದರೆ ಸಿವಾನ್‌ನ ಮತ್ತೊಂದು ಭಾಗದಲ್ಲಿ ನಡೆದ ಪೊಲೀಸ್ ಕಾರ್ಯಾಚರಣೆಯಲ್ಲಿ ಮೂವರು ಪ್ರತಿಭಟನಾಕಾರರು ಗುಂಡೇಟಿನಿಂದ ಗಾಯಗೊಂಡಿದ್ದರು. ಇದೇ ವೇಳೆ ಹಾಥಿ ಚೌಕ್ ಬಳಿ ಗುಂಪನ್ನು ಚದುರಿಸಲು ಮತ್ತೊಬ್ಬ ಅಧಿಕಾರಿ 9 ಎಂಎಂ ಪಿಸ್ತೂಲ್‌ನಿಂದ ಎರಡು ಸುತ್ತು ಗುಂಡು ಹಾರಿಸಿದ್ದರು.

ಎಕೆ-47 ರೈಫಲ್‌ಗಳು ವಿಶೇಷ ಕಾರ್ಯಾಚರಣೆಗಳಿಗೆ ಬಳಸುವ ಶಸ್ತ್ರಾಸ್ತ್ರವಾಗಿದ್ದು, ದಿನನಿತ್ಯದ ಕಾನೂನು ಸುವ್ಯವಸ್ಥೆ ಪಾಲನೆಗೆ ಬಳಸುವಂತದ್ದಲ್ಲ ಎಂದೂ ಸರ್ಕಾರ ನ್ಯಾಯಾಲಯಕ್ಕೆ ವಿವರಣೆ ನೀಡಿದೆ.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಣಿಪುರ ಹಿಂಸಾಚಾರ | ಹತ್ಯೆಯಾಗಿ ಆರು ತಿಂಗಳ ಬಳಿಕ ಆರು ನಾಗಾ ಯುವಕರ ಅಂತ್ಯಕ್ರಿಯೆ

ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯ ಲೈಲಾನ್ ವೈಫೇಯ್ ಗ್ರಾಮದಿಂದ ಕಳೆದ ಮೇ 13...

ಅಂಕಿತಾ ಭಂಡಾರಿ ಹತ್ಯೆ: ಸಂತ್ರಸ್ತೆಯ ಖಾಸಗಿ ಚಾಟ್ ಬಹಿರಂಗಪಡಿಸಿದ ಹಂತಕನ ತಂದೆ, ಬಿಜೆಪಿ ಮಾಜಿ ಮುಖಂಡ ವಿರುದ್ಧ ದೂರು

ದೇಶಾದ್ಯಂತ ತೀವ್ರ ಸಂಚಲನ ಮೂಡಿಸಿದ್ದ ಉತ್ತರಾಖಂಡದ ಅಂಕಿತಾ ಭಂಡಾರಿ ಹತ್ಯೆ ಪ್ರಕರಣದಲ್ಲಿ...

ನೀರಿನ ಸಮಸ್ಯೆ ಪರಿಹಾರಕ್ಕೆ ಕ್ರಮ : ಔರಾದ್‌ ಬಂದ್‌ ಹಿಂಪಡೆಯಲು ಸಚಿವ ಈಶ್ವರ ಖಂಡ್ರೆ ಮನವಿ

ಔರಾದ್ ಪಟ್ಟಣದ ಕುಡಿಯುವ ನೀರಿನ ಸಮಸ್ಯೆ ಪರಿಹರಿಸಲು ಹಲವು ತುರ್ತು ಕ್ರಮಗಳನ್ನು...

ನಾನು ಜೀವಂತವಾಗಿ ಮರಳದೇ ಇರಬಹುದು: ಜೈಲಿನಿಂದಲೇ ಪಾಕ್ ಸುಪ್ರೀಂ ನ್ಯಾಯಮೂರ್ತಿಗಳಿಗೆ ಇಮ್ರಾನ್ ಖಾನ್ ಪತ್ರ!

ಪಾಕಿಸ್ತಾನದ ರಾವಲ್ಪಿಂಡಿಯ ಅಡಿಯಾಲ ಜೈಲಿನಲ್ಲಿ ಬಂಧಿಯಾಗಿರುವ ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್...