ಉತ್ತರ ಪ್ರದೇಶ: ಪ್ರಜಾಪ್ರಭುತ್ವ ಹೋರಾಟಗಾರರಿಗೆ ಅಖಿಲೇಶ್ ಮಾಸಿಕ ₹51,000 ಪಿಂಚಣಿ ಭರವಸೆ

Date:

ಉತ್ತರ ಪ್ರದೇಶದಲ್ಲಿ 2027ರಲ್ಲಿ ಸಮಾಜವಾದಿ ಪಕ್ಷ (ಎಸ್‌ಪಿ) ಸರ್ಕಾರ ರಚಿಸಿದರೆ, 1975ರ ತುರ್ತುಪರಿಸ್ಥಿತಿಯನ್ನು ವಿರೋಧಿಸಿದ್ದ ‘ಲೋಕತಂತ್ರ ಸೇನಾನಿಗಳಿಗೆ’ (ಪ್ರಜಾಪ್ರಭುತ್ವ ಹೋರಾಟಗಾರರು) ನೀಡುತ್ತಿರುವ ಮಾಸಿಕ ಪಿಂಚಣಿಯನ್ನು ₹51,000ಕ್ಕೆ ಹೆಚ್ಚಿಸಲಾಗುವುದು. ಇದರೊಂದಿಗೆ ಸರ್ಕಾರಿ ಆಸ್ಪತ್ರೆಗಳಲ್ಲಿ ಅವರಿಗೆ ಉಚಿತ ಚಿಕಿತ್ಸೆ ಮತ್ತು ಔಷಧಿಗಳನ್ನು ಒದಗಿಸಲಾಗುವುದು ಎಂದು ಎಸ್‌ಪಿ ಮುಖ್ಯಸ್ಥ ಅಖಿಲೇಶ್ ಯಾದವ್ ಗುರುವಾರ ಘೋಷಿಸಿದ್ದಾರೆ.

- Advertisement -

ಸಮಾಜವಾದಿ ಪಕ್ಷದ ಕೇಂದ್ರ ಕಚೇರಿಯಲ್ಲಿ ತಮ್ಮನ್ನು ಭೇಟಿಯಾದ ಈ ಹೋರಾಟಗಾರರೊಂದಿಗೆ ಸಮಾಲೋಚನೆ ನಡೆಸಿದ ಬಳಿಕ ಅವರು ಈ ಭರವಸೆ ನೀಡಿದರು. ಹೋರಾಟಗಾರರು ತಮ್ಮ ಅನುಭವಗಳು ಹಾಗೂ ಸಲಹೆಗಳನ್ನು ಪಕ್ಷದ ವರಿಷ್ಠರೊಂದಿಗೆ ಹಂಚಿಕೊಂಡರು. “ಪ್ರಸ್ತುತ ದಿನಗಳಲ್ಲಿರುವ ತೀವ್ರ ಬೆಲೆ ಏರಿಕೆ ಹಾಗೂ ಬದಲಾದ ಪರಿಸ್ಥಿತಿಗಳನ್ನು ಗಮನಿಸಿದರೆ, ಈ ಸೇನಾನಿಗಳಿಗೆ ಈಗ ನೀಡುತ್ತಿರುವ ಗೌರವಧನ ತೀರಾ ಕಡಿಮೆಯಾಗಿದೆ” ಎಂದು ಅಖಿಲೇಶ್ ಯಾದವ್ ಕಳವಳ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸುದ್ದಿ ವಿವರ | ಇವಿಎಂ vs ಬ್ಯಾಲೆಟ್‌ ಪೇಪರ್‌:...

ಇವಿಎಂ ಮೇಲಿನ ವಿಶ್ವಾಸದ ಪ್ರಶ್ನೆ ಮತ್ತೆ ದೇಶದ ಚುನಾವಣಾ ಚರ್ಚಾ ಕೇಂದ್ರವಾಗಿದೆ. ಪಾರದರ್ಶಕತೆ ಮತ್ತು ಮತದಾರರ ನಂಬಿಕೆಯನ್ನು ಮುಂದಿಟ್ಟುಕೊಂಡು, ಬ್ಯಾಲೆಟ್‌ ಪೇಪರ್ ವ್ಯವಸ್ಥೆಗೆ ಮರಳಬೇಕೆಂಬ ಬೇಡಿಕೆಯನ್ನು ವಿಪಕ್ಷಗಳು ಮುಂದೆ ತಂದಿವೆ. ಬುಧವಾರ (ಸೆ.30), ದೆಹಲಿಯಲ್ಲಿ...

ಪೈಲಟ್ ಗಾಯಗೊಂಡ ನಂತರ ʼಫ್ಲೈದುಬೈʼ ವಿಮಾನ ನಡೆಸಿದವರು ಯಾರು?...

ಬುಧವಾರ ದುಬೈನಿಂದ ಇಸ್ರೇಲ್‌ನ ಟೆಲ್ ಅವೀವ್‌ಗೆ ಹಾರಾಟದಲ್ಲಿದ್ದ FZ1073 ವಿಮಾನದಲ್ಲಿ ನಡೆದ ಪ್ರಕರಣವು ಕಾಕ್‌ಪಿಟ್‌ನೊಳಗಿನ ಸುರಕ್ಷತೆ ಕುರಿತು ಪ್ರಶ್ನೆಗಳನ್ನು ಹುಟ್ಟಿ ಹಾಕಿದೆ.ಈ ವಿಮಾನದ ಯೆಮೆನ್ ಮೂಲದ ಸಹ-ಪೈಲಟ್‌, ಹರಿತ ವಸ್ತುವಿನಿಂದ ಪೈಲಟ್ ಮೇಲೆ...

ಜಾಗತಿಕ ಬಿಕ್ಕಟ್ಟಿನ ನೆಪ, ಮರೆಯಾದ ದೇಶದ ಹಿತ: ಜೈಶಂಕರ್...

ಬೆಲೆ ಏರಿಕೆಯ ಬೇಗೆಯಲ್ಲಿ ಜನಸಾಮಾನ್ಯರು ನರಳುತ್ತಿದ್ದರೆ, ಗದ್ದೆಯಲ್ಲಿ ರೈತ ರಸಗೊಬ್ಬರಕ್ಕಾಗಿ ಕಣ್ಣೀರು ಸುರಿಸುತ್ತಿದ್ದಾನೆ. ಆದರೆ, ಇದಕ್ಕೆ ಸ್ಪಂದಿಸಬೇಕಾದ ಮೋದಿ ಸರ್ಕಾರ, ವಿದೇಶಾಂಗ ಸಚಿವ ಎಸ್. ಜೈಶಂಕರ್ ಮೂಲಕ ಜಾಗತಿಕ ವೇದಿಕೆಗಳಲ್ಲಿ ವಿದೇಶಿ ಯುದ್ಧಗಳತ್ತ...

ಈ ಹೋರಾಟಗಾರರ ಆರೋಗ್ಯ ರಕ್ಷಣೆಗೆ ವಿಶೇಷ ಆದ್ಯತೆ ನೀಡಲಾಗುವುದು. ಸರ್ಕಾರಿ ಆಸ್ಪತ್ರೆಗಳಲ್ಲಿ ಸಂಪೂರ್ಣ ಉಚಿತ ಚಿಕಿತ್ಸೆ ಹಾಗೂ ಔಷಧಿ ಲಭ್ಯವಾಗುವಂತೆ ವಿಶೇಷ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ಅವರು ತಿಳಿಸಿದರು. ಇದಲ್ಲದೆ, ಸ್ವಾತಂತ್ರ್ಯ ಹೋರಾಟಗಾರರಿಗೆ ಸರಿಸಮಾನವಾದ ಗೌರವ ನೀಡಬೇಕು ಹಾಗೂ ರೈಲು ಮತ್ತು ಬಸ್ ಪ್ರಯಾಣ ದರಗಳಲ್ಲಿ ರಿಯಾಯಿತಿ ಕಲ್ಪಿಸಬೇಕು ಎಂಬ ಅವರ ಬೇಡಿಕೆಗಳನ್ನು ಪಕ್ಷದ ಮುಂಬರುವ ಚುನಾವಣಾ ಪ್ರಣಾಳಿಕೆಯಲ್ಲಿ ಸೇರಿಸಲಾಗುವುದು ಎಂದು ಸ್ಪಷ್ಟಪಡಿಸಿದರು.

ಇದೇ ವೇಳೆ ಆಡಳಿತರೂಢ ಬಿಜೆಪಿ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಅಖಿಲೇಶ್, ದೇಶವು ಪ್ರಸ್ತುತ ‘ಬಿಜೆಪಿ ನಿರ್ಮಿತ ತುರ್ತುಪರಿಸ್ಥಿತಿ’ಯ (BJPian Emergency) ಕಾಲಘಟ್ಟವನ್ನು ಎದುರಿಸುತ್ತಿದೆ ಎಂದು ಆರೋಪಿಸಿದರು. ಈ ಆಡಳಿತದಲ್ಲಿ ಸಾಮಾಜಿಕ ನ್ಯಾಯವನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ ಎಂದ ಅವರು, “ಯಾವ ಆಡಳಿತದಲ್ಲಿ ಪಿಡಿಎ (ಹಿಂದುಳಿದ, ದಲಿತ ಮತ್ತು ಅಲ್ಪಸಂಖ್ಯಾತ) ವರ್ಗದ ಮೇಲೆ ದಬ್ಬಾಳಿಕೆ ನಡೆಯುತ್ತದೆಯೋ ಅದು ತುರ್ತುಪರಿಸ್ಥಿತಿಯೇ ಸರಿ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ರಾಷ್ಟ್ರ ರಾಜಕಾರಣ ಪ್ರವೇಶ ಹಾಗೂ ಪ್ರಧಾನಿ ಹುದ್ದೆಯ ಆಕಾಂಕ್ಷೆಯ ಕುರಿತ ಪ್ರಶ್ನೆಗೆ ಉತ್ತರಿಸಿದ ಅವರು, “ಸದ್ಯಕ್ಕೆ ನನ್ನನ್ನು ಉತ್ತರ ಪ್ರದೇಶದಲ್ಲೇ ಇರಲು ಬಿಡಿ; ನಮ್ಮ ನಮ್ಮಲ್ಲೇ ಜಗಳ ತಂದಿಡಬೇಡಿ” ಎಂದು ‘ಇಂಡಿಯಾ’ ಮೈತ್ರಿಕೂಟದ ಮಿತ್ರಪಕ್ಷ ಕಾಂಗ್ರೆಸ್‌ನ ರಾಹುಲ್ ಗಾಂಧಿ ಅವರನ್ನು ಪರೋಕ್ಷವಾಗಿ ಉಲ್ಲೇಖಿಸಿ ಮಾರ್ಮಿಕವಾಗಿ ನುಡಿದರು. ರಾಜ್ಯ ಪೊಲೀಸ್ ವ್ಯವಸ್ಥೆಯ ಬಗ್ಗೆ ಕಿಡಿಕಾರಿದ ಅವರು, “ಪೊಲೀಸರು ಬಿಜೆಪಿ ಕಾರ್ಯಕರ್ತರಂತೆ ವರ್ತಿಸುತ್ತಿರುವುದರಿಂದ ಅವರ ಮೇಲೆ ನಂಬಿಕೆಯಿಲ್ಲ. ಈ ಸರ್ಕಾರದಲ್ಲಿ ನೈಜ ಸಂತರಿಗೂ ಅಪಮಾನವಾಗಿದ್ದು, ನ್ಯಾಯ ಸಿಕ್ಕಿಲ್ಲ” ಎಂದು ದೂರಿದರು.

ಉದ್ಯೋಗ ಅರಸುವ ಬದಲು ಯುವಕರು ಇ-ರಿಕ್ಷಾ ಓಡಿಸಬೇಕು ಎಂಬ ಉಪಮುಖ್ಯಮಂತ್ರಿ ಬ್ರಜೇಶ್ ಪಾಠಕ್ ಅವರ ಹೇಳಿಕೆಯನ್ನು ಲೇವಡಿ ಮಾಡಿದ ಅಖಿಲೇಶ್, “ಮೊದಲು ಉಪಮುಖ್ಯಮಂತ್ರಿಗಳೇ ಇ-ರಿಕ್ಷಾ ಕಾಯ್ದಿರಿಸಲಿ. ಇವರು ಆಸ್ಪತ್ರೆಗಳನ್ನೇ ರೋಗಗ್ರಸ್ತವನ್ನಾಗಿ ಮಾಡಿದ ಉಪಮುಖ್ಯಮಂತ್ರಿ” ಎಂದು ಟೀಕಿಸಿದರು. ಮುಂಬರುವ ರಾಜ್ಯಸಭಾ ಚುನಾವಣೆಯಲ್ಲಿ ಬಿಜೆಪಿ 9 ಅಥವಾ 10 ಅಭ್ಯರ್ಥಿಗಳನ್ನು ಕಣಕ್ಕಿಳಿಸಿದರೂ ಸೋಲು ಖಚಿತ. ಹಣದುಬ್ಬರ, ನಿರುದ್ಯೋಗ ಮತ್ತು ಭ್ರಷ್ಟಾಚಾರ ಮಿತಿಮೀರಿರುವ ಈ ಕಾಲದಲ್ಲಿ ಬಿಜೆಪಿಯನ್ನು ಸೋಲಿಸಲು ಕೈಜೋಡಿಸುವ ಯಾರನ್ನಾದರೂ ಸ್ವಾಗತಿಸುತ್ತೇವೆ. ರಾಜ್ಯದಲ್ಲಿ ಸರ್ಕಾರ ಬದಲಾದ ತಕ್ಷಣ ಈ ಬುಲ್ಡೋಜರ್ ಸಂಸ್ಕೃತಿಯೂ ಅಂತ್ಯಗೊಳ್ಳಲಿದೆ ಎಂದು ಅವರು ಭವಿಷ್ಯ ನುಡಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನಾಳೆ ‘ಕೊಂದವರು ಯಾರು?’ ರಾಷ್ಟ್ರೀಯ ವಿಚಾರ ಸಂಕಿರಣ: ಪಿತೃಪ್ರಧಾನತೆ, ಹೊಣೆಗಾರಿಕೆ ಕುರಿತು ಚರ್ಚೆಗೆ ವೇದಿಕೆ

ಕರ್ನಾಟಕದ ‘ನಾವೆದ್ದು ನಿಲ್ಲದಿದ್ದರೆ' ಸಂಘಟನೆಯು ಆರಂಭಿಸಿರುವ 'ಕೊಂದವರು ಯಾರು? Who Killed...

ಫಾರ್ಮ್-7 ಸಲ್ಲಿಸಿದವರ ವಿರುದ್ಧ ಪ್ರಕರಣ ದಾಖಲಿಸಿ: ಚುನಾವಣಾ ಆಯೋಗದ ಕಚೇರಿಯಲ್ಲಿ ಪಟ್ಟು ಕುಳಿತ ಸಿಎಂ

ರಾಜ್ಯದಲ್ಲಿ ಅರ್ಹ ಮತದಾರರ ಹೆಸರುಗಳನ್ನು ಅಕ್ರಮವಾಗಿ ಪಟ್ಟಿಯಿಂದ ತೆಗೆದುಹಾಕಲಾಗುತ್ತಿದೆ ಎಂದು ಆರೋಪಿಸಿ,...

ಪೈಲಟ್ ಗಾಯಗೊಂಡ ನಂತರ ʼಫ್ಲೈದುಬೈʼ ವಿಮಾನ ನಡೆಸಿದವರು ಯಾರು? ವಿಮಾನದ ಕಾಕ್‌ಪಿಟ್‌ ಹೇಗಿರುತ್ತದೆ ಬಲ್ಲಿರಾ?

ಬುಧವಾರ ದುಬೈನಿಂದ ಇಸ್ರೇಲ್‌ನ ಟೆಲ್ ಅವೀವ್‌ಗೆ ಹಾರಾಟದಲ್ಲಿದ್ದ FZ1073 ವಿಮಾನದಲ್ಲಿ ನಡೆದ...