ರಾಹುಲ್ ಅವರೊಂದಿಗೆ ಮನಸ್ತಾಪವಿಲ್ಲ; ಉತ್ತರ ಪ್ರದೇಶದಲ್ಲಿ ‘ಕೈ’ ಜೊತೆ ಮೈತ್ರಿ ದೃಢಪಡಿಸಿದ ಎಸ್ಪಿ

Date:

ಕಾಂಗ್ರೆಸ್‌ನೊಂದಿಗೆ ಇರುವ ಗೊಂದಲಗಳ ಬಗ್ಗೆ ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್ ಯಾದವ್‌ ಅವರು ನಿರಾಕರಿಸಿದ್ದು,ಉತ್ತರ ಪ್ರದೇಶದಲ್ಲಿ ಮೈತ್ರಿ ಮಾಡಿಕೊಳ್ಳಲು ರಾಹುಲ್ ಗಾಂಧಿ ಅವರೊಂದಿಗೆ ಯಾವುದೇ ಮನಸ್ತಾಪವಿಲ್ಲ ಎಂದು ತಿಳಿಸಿದ್ದಾರೆ.

ರಾಹುಲ್ ಗಾಂಧಿ ನೇತೃತ್ವದಲ್ಲಿ ಅಮೇಥಿ ಹಾಗೂ ರಾಯ್‌ಬರೇಲಿಯಲ್ಲಿ ನಡೆಯುವ ಭಾರತ್‌ ಜೋಡೋ ನ್ಯಾಯಯಾತ್ರೆಯಲ್ಲಿ ಪಾಲ್ಗೊಳ್ಳುವ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅಖಿಲೇಶ್ ಯಾದವ್, ಶೀಘ್ರದಲ್ಲೇ ಎಲ್ಲವೂ ಸ್ಪಷ್ಟವಾಗುತ್ತದೆ. ಉಳಿದ ವಿಷಯಗಳು ಹಳೆಯದಾಗಿವೆ. ಎಲ್ಲವೂ ಚೆನ್ನಾಗಿದೆ, ಚೆನ್ನಾಗಿಯೇ ಕೊನೆಗೊಳ್ಳುತ್ತದೆ. ಯಾವುದೇ ವಿವಾದಗಳಿಲ್ಲ. ಮೈತ್ರಿ ಇರುತ್ತದೆ ಎಂದು ತಿಳಿಸಿದರು.

ಸಮಾಜವಾದಿ ಪಕ್ಷವು ಸಾಧ್ಯವಾದಷ್ಟು ಜನರನ್ನು ಸಂಪರ್ಕಿಸಲು ಪ್ರಯತ್ನಿಸುತ್ತದೆ. ಸಮಯ ಬಂದಾಗ ಜನರಿಗೆ ಜವಾಬ್ದಾರಿ ನೀಡಲಾಗುವುದು. ಇಂದು ಸಂಜೆಯೇ ಸೀಟು ಹಂಚಿಕೆ ಘೋಷಣೆಯಾಗಬಹುದು ಎಂದು ನಂಬಲಾಗಿದೆ ಎಂದು ಅಖಿಲೇಶ್ ಯಾದವ್ ಹೇಳಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಆರಕ್ಷಕ ಇಲಾಖೆ ಯಾತಕ್ಕಾಗಿ, ಪೊಲೀಸರು ಇರುವುದು ಯಾರ ರಕ್ಷಣೆಗಾಗಿ?

ಮುಂಬರುವ ಲೋಕಸಭೆ ಚುನಾವಣೆಗೆ ಸಂಬಂಧಿಸಿದಂತೆ ಸಮಾಜವಾದಿ ಪಕ್ಷ ಮತ್ತು ಕಾಂಗ್ರೆಸ್ ನಡುವೆ ಮಾತುಕತೆ ನಡೆದಿದೆ. ಮೈತ್ರಿ ಸೂತ್ರಕ್ಕೆ ಎರಡೂ ಪಕ್ಷಗಳು ಬಹುತೇಕ ಒಪ್ಪಿಗೆ ಸೂಚಿಸಿವೆ. ಇಂದು ಸಂಜೆಯೊಳಗೆ ಸೀಟು ಹಂಚಿಕೆ ಘೋಷಣೆಯಾಗಲಿದೆ. ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಎಸ್‌ಪಿ ಮತ್ತು ಕಾಂಗ್ರೆಸ್ ಒಟ್ಟಿಗೆ ಸ್ಪರ್ಧಿಸಲಿವೆ.

ಎರಡೂ ಪಕ್ಷಗಳ ರಾಜ್ಯ ಘಟಕಗಳು ಮೈತ್ರಿಯನ್ನು ಘೋಷಿಸಿವೆ. ಉತ್ತರ ಪ್ರದೇಶದಲ್ಲಿ ಒಟ್ಟು 80 ಲೋಕಸಭಾ ಸ್ಥಾನಗಳಿವೆ. ಮೂರು ಸ್ಥಾನಗಳಿಗೆ ಹಕ್ಕು ಸಾಧಿಸಲು ಎರಡೂ ಪಕ್ಷಗಳ ನಡುವೆ ಜಟಾಪಟಿ ನಡೆದಿದೆ. ಮೂಲಗಳ ಪ್ರಕಾರ, ಎಸ್‌ಪಿ ಈಗ ಕಾಂಗ್ರೆಸ್‌ಗೆ 17 ರಿಂದ 19 ಸ್ಥಾನಗಳನ್ನು ನೀಡಲು ಒಪ್ಪಿಗೆ ನೀಡಿದೆ.

ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಂಗ್ಲಾದೇಶ ಸಂಸದನ ಹತ್ಯೆ ಪ್ರಕರಣ: ತನಿಖೆಗಾಗಿ ಢಾಕಾ ಪೊಲೀಸರ ತಂಡ ಕೋಲ್ಕತ್ತಾಗೆ ಭೇಟಿ

ಕೋಲ್ಕತ್ತಾದಲ್ಲಿ ಈ ವಾರದ ಆರಂಭದಲ್ಲಿ ನಡೆದ ಬಾಂಗ್ಲಾದೇಶದ ಸಂಸದ ಅನ್ವರುಲ್ ಅಜೀಮ್...

ಧ್ವನಿ ಬದಲಾಯಿಸುವ ಆ್ಯಪ್ ಬಳಸಿ 7 ಆದಿವಾಸಿ ವಿದ್ಯಾರ್ಥಿನಿಯರ ಮೇಲೆ ಅತ್ಯಾಚಾರ

30 ವರ್ಷದ ವ್ಯಕ್ತಿಯೊಬ್ಬ ಧ್ವನಿ ಬದಲಾವಣೆ ಮಾಡುವ ಆ್ಯಪ್ ಬಳಸಿ, ಶಿಕ್ಷಕಿಯಾಗಿ...

ಮೊದಲ ಬಾರಿಗೆ ಮತ ಚಲಾಯಿಸಿದ ಹಣಕಾಸು ಆಯೋಗದ ಮುಖ್ಯಸ್ಥ ಅರವಿಂದ್ ಪನಗಾರಿಯಾ

ಹದಿನಾರನೇ ಹಣಕಾಸು ಆಯೋಗದ ಅಧ್ಯಕ್ಷ, 71 ವರ್ಷ ವಯಸ್ಸಿನ ಅರವಿಂದ್ ಪನಗಾರಿಯಾ...

ನಿರ್ಗಮಿಸುವ ಪ್ರಧಾನಿ ತನ್ನನ್ನು ತಾನು ದೇವಮಾನವನೆಂದು ಭಾವಿಸಬಹುದು: ಕಾಂಗ್ರೆಸ್‌

"ನಿರ್ಗಮಿಸುತ್ತಿರುವ ಪ್ರಧಾನಿ ಸೋಲಿನ ವಾಸ್ತವ ತಿಳಿಯುತ್ತಿದ್ದಂತೆ, ಹೆಚ್ಚು ಭ್ರಮೆಯಲ್ಲಿದ್ದಾರೆ. ಅದಕ್ಕೆ ತನ್ನ...