ನಟ ನಾಗಾರ್ಜುನ ಒಡೆತನದ ಅದ್ದೂರಿ ಕನ್ವೆನ್ಷನ್‌ ಹಾಲ್ ಧ್ವಂಸ

Date:

ಹೈದರಾಬಾದ್ ವಿಪತ್ತು ಪ್ರತಿಕ್ರಿಯೆ ಮತ್ತು ಆಸ್ತಿ ರಕ್ಷಣೆ (ಹೈಡ್ರಾ) ಅಧಿಕಾರಿಗಳು ಟಾಲಿವುಡ್ ನಟ ಅಕ್ಕಿನೇನಿ ನಾಗಾರ್ಜುನ ಅವರಿಗೆ ಸೇರಿದ ಮಾದಾಪುರದಲ್ಲಿರುವ ಅದ್ದೂರಿ ಕನ್ವೆನ್ಷನ್‌ ಹಾಲ್ ಅನ್ನು ಧ್ವಂಸಗೊಳಿಸಿದ್ದಾರೆ.

- Advertisement -

ತುಮ್ಮಿಡಿ ಕುಂಟಾ ಹೊಂಡವನ್ನು ಒತ್ತುವರಿ ಮಾಡಿ ಕನ್ವೆನ್ಷನ್‌ ಹಾಲ್ ನಿರ್ಮಿಸಿದ್ದಾರೆ ಎಂಬ ಆರೋಪ ನಾಗಾರ್ಜುನ ಮೇಲಿದೆ. ಆದರೆ ಜಮೀನು ಪಟ್ಟಾ ಜಮೀನಾಗಿದ್ದು, ಒಂದು ಇಂಚು ತುಮ್ಮಿಡಿ ಕುಂಟಾ ಹೊಂಡ ಕೂಡ ಒತ್ತುವರಿಯಾಗಿಲ್ಲ ಎಂದು ನಟ ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

“ಹೈಡ್ರಾ ಅಧಿಕಾರಿಗಳು ಇಂದು ಬೆಳಿಗ್ಗೆ ಎನ್ ಕನ್ವೆನ್ಷನ್‌ ಹಾಲ್ ಅನ್ನು ಕೆಡವಲು ಪ್ರಾರಂಭಿಸಿದ್ದಾರೆ. ಭೂಮಿ ಎಫ್‌ಟಿಎಲ್ ವಲಯಕ್ಕೆ ಸೇರಿದ್ದಾಗಿರುವುದರಿಂದ ನೆಲಸಮ ಮಾಡುವ ಕಾರ್ಯವು ಸುಗಮವಾಗಿ ನಡೆಯಲು ನಾವು ಪೊಲೀಸ್ ಪಡೆಗಳನ್ನು ಅಲ್ಲಿ ನಿಯೋಜಿಸಿದ್ದೇವೆ” ಎಂದು ಮಾದಾಪುರ ಡಿಸಿಪಿ ಹೇಳಿದರು.

ಇದನ್ನು ಓದ್ದಿದ್ದೀರಾ? ಮೈಸೂರು | ಮತದಾನದ ವೇಳೆ ವ್ಯಕ್ತಿಯೋರ್ವನಿಂದ ಇವಿಎಂ ನಿಯಂತ್ರಣ ದ್ವಂಸ

ಈ ಬಗ್ಗೆ ಎಕ್ಸ್ ಪೋಸ್ಟ್ ಮಾಡಿರುವ ನಟ ನಾಗಾರ್ಜುನ, “ತಡೆಯಾಜ್ಞೆಗಳು ಮತ್ತು ನ್ಯಾಯಾಲಯದ ಪ್ರಕರಣಗಳ ನಡುವೆಯೂ ಎನ್ ಕನ್ವೆನ್ಷನ್‌ ಅನ್ನು ಕಾನೂನುಬಾಹಿರ ರೀತಿಯಲ್ಲಿ ಕೆಡವಿರುವುದು ನೋವಾಗಿದೆ” ಎಂದಿದ್ದಾರೆ.

“ನನ್ನ ಪ್ರತಿಷ್ಠೆಯನ್ನು ರಕ್ಷಿಸಲು ಕೆಲವು ಸಂಗತಿಗಳನ್ನು ದಾಖಲಿಸಲು ಮತ್ತು ಕಾನೂನನ್ನು ಉಲ್ಲಂಘಿಸುವ ಯಾವುದೇ ಕ್ರಮಗಳನ್ನು ನಾವು ಮಾಡಿಲ್ಲ ಎಂದು ಸೂಚಿಸಲು ಈ ಹೇಳಿಕೆಯನ್ನು ನೀಡುವುದು ಸೂಕ್ತವೆಂದು ನಾನು ಭಾವಿಸಿದೆ. ಜಮೀನು ಪಟ್ಟಾ ಜಮೀನಾಗಿದ್ದು, ಒಂದು ಇಂಚು ಕೂಡಾ ಟ್ಯಾಂಕ್ ಭೂಮಿ ಒತ್ತುವರಿಯಾಗಿಲ್ಲ” ಎಂದು ತಿಳಿಸಿದ್ದಾರೆ.

“ಖಾಸಗಿ ಜಮೀನಿನೊಳಗೆ ನಿರ್ಮಿಸಲಾದ ಕಟ್ಟಡವನ್ನು ಅಕ್ರಮವೆಂದು ಹೇಳಿ ಕಟ್ಟಡ ಕೆಡವಲು ಮುಂದಾದ ಈ ಹಿಂದಿನ ಎಲ್ಲಾ ನೋಟಿಸ್‌ಗೆ ತಡೆಯಾಜ್ಞೆ ಆದೇಶವಿದೆ. ಆದರೆ ಸ್ಪಷ್ಟವಾಗಿ, ತಪ್ಪು ಮಾಹಿತಿಯ ಆಧಾರದ ಮೇಲೆ ಈಗ ಕೆಡವಲಾಗಿದೆ” ಎಂದು ಹೇಳಿದ್ದಾರೆ.

“ಇಂದು ಬೆಳಗ್ಗೆ ಕೆಡವುವ ಮುನ್ನ ಯಾವುದೇ ಸೂಚನೆ ನೀಡಿಲ್ಲ. ಕಾನೂನು ಪಾಲಿಸುವ ಪ್ರಜೆಯಾಗಿ, ಪ್ರಕರಣದ ವಿಚಾರಣೆ ಬಾಕಿ ಇರುವ ನ್ಯಾಯಾಲಯವು ನನ್ನ ವಿರುದ್ಧ ತೀರ್ಪು ನೀಡಿದ್ದರೆ, ನಾನೇ ಧ್ವಂಸಗೊಳಿಸುತ್ತಿದ್ದೆ” ಎಂದು ಆರೋಪಿಸಿದ್ದಾರೆ.

“ನಾನು ಅಕ್ರಮವಾಗಿ ಕಟ್ಟಡ ನಿರ್ಮಿಸಿದ್ದೇನೆ ಎಂಬ ತಪ್ಪು ಅಭಿಪ್ರಾಯವನ್ನು ಸರಿಪಡಿಸುವ ಉದ್ದೇಶದಿಂದ ನಾನು ಈ ಮಾಹಿತಿ ನೀಡುತ್ತಿದ್ದೇನೆ. ಅಧಿಕಾರಿಗಳು ನಡೆಸಿದ ತಪ್ಪು ಕ್ರಮಗಳಿಗೆ ಸಂಬಂಧಿಸಿದಂತೆ ನಾವು ನ್ಯಾಯಾಲಯದಿಂದ ಸೂಕ್ತ ಪರಿಹಾರವನ್ನು ಕೋರುತ್ತೇವೆ” ಎಂದು ತಿಳಿಸಿದ್ದಾರೆ.

?s=150&d=mp&r=g
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನ್ಯಾಯಾಂಗದ ಮೇಲೆ ಗೌರವವಿದೆ, ತಪ್ಪಾಗಿದ್ದರೆ ಕ್ಷಮೆಯಾಚಿಸುವೆ: ಸಂಜಯ್ ರಾವತ್

ಸುಪ್ರೀಂ ಕೋರ್ಟ್ ಕುರಿತು ತಾವು ನೀಡಿರುವ ಹೇಳಿಕೆಗಳು ಸೂಕ್ತವಲ್ಲ ಅಥವಾ ಅನುಚಿತ...

ವಿರಳಾತಿ ವಿರಳ ಪ್ರಕರಣ: ಮಾಲೆಗಾಂವ್ ಅಪ್ರಾಪ್ತೆಯ ಅತ್ಯಾಚಾರ, ಕೊಲೆ ಅಪರಾಧಿಗೆ ಮರಣದಂಡನೆ ಶಿಕ್ಷೆ

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ಮಾಲೆಗಾಂವ್ ತಾಲೂಕಿನ ಡೋಂಗರಾಳೆ ಗ್ರಾಮದಲ್ಲಿ ಸಾಡೇನಾಲ್ಕು ವರ್ಷದ...

ತಿರಂಗಾ ಮಾರ್ಚ್ ನಡೆಸದಂತೆ ಅಭಿಜೀತ್ ದೀಪ್ಕೆಗೆ ದೆಹಲಿ ಪೊಲೀಸರಿಂದ ನೋಟಿಸ್: ಮನೆಯ ಬಳಿ ಬಿಗಿ ಭದ್ರತೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರು ದೆಹಲಿಯ...

​ಪ್ರತಿಭಟನೆಗಳ ವರದಿಗಾರಿಕೆಗೆ ಭಾರತೀಯ ಪ್ರೆಸ್ ಕೌನ್ಸಿಲ್‌ನಿಂದ ನೂತನ ಮಾರ್ಗದರ್ಶಿ ಸೂತ್ರಗಳ ಬಿಡುಗಡೆ

ಪ್ರತಿಭಟನೆಗಳು ಮತ್ತು ಧರಣಿ ಸತ್ಯಾಗ್ರಹಗಳ ಸಂದರ್ಭದಲ್ಲಿ ಪತ್ರಕರ್ತರ ಸುರಕ್ಷತೆಯನ್ನು ಕಾಯ್ದುಕೊಳ್ಳಲು, ಜವಾಬ್ದಾರಿಯುತ...