ಆಕೃತಿ ಚೌಧರಿ ಪ್ರಕರಣ: IAS ಅಧಿಕಾರಿ ಮೇಧಾರೂಪಂ ವೇತನದಿಂದ 5 ಲಕ್ಷ ರೂ. ದಂಡ ವಸೂಲಿಗೆ ಸುಪ್ರೀಂ ತಡೆಯಾಜ್ಞೆ

Date:

ದೆಹಲಿ ವಿಶ್ವವಿದ್ಯಾಲಯದ ಇತಿಹಾಸ ವಿಭಾಗದ ವಿದ್ಯಾರ್ಥಿನಿ ಮತ್ತು ಹೋರಾಟಗಾರ್ತಿ ಆಕೃತಿ ಚೌಧರಿ ಅವರ ಮೇಲೆ ರಾಷ್ಟ್ರೀಯ ಭದ್ರತಾ ಕಾಯ್ದೆ (ಎನ್‌ಎಸ್‌ಎ) ಹೇರಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಗೌತಮ್ ಬುದ್ಧ ನಗರ (ನೋಯ್ಡಾ) ಜಿಲ್ಲಾಧಿಕಾರಿ ಮೇಧಾರೂಪಂ ಅವರಿಗೆ ಸುಪ್ರೀಂ ಕೋರ್ಟ್‌ ತಾತ್ಕಾಲಿಕ ರಿಲೀಫ್ ನೀಡಿದೆ. ಅಲಹಾಬಾದ್ ಹೈಕೋರ್ಟ್‌ ನೀಡಿದ್ದ ಬಿರುನುಡಿಗಳ ಟೀಕೆ ಹಾಗೂ 5 ಲಕ್ಷ ರೂಪಾಯಿ ಪರಿಹಾರದ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ ನೀಡಿದೆ.

- Advertisement -

ನ್ಯಾಯಮೂರ್ತಿಗಳಾದ ಸತೀಶ್ ಚಂದ್ರ ಶರ್ಮಾ ಹಾಗೂ ಎನ್. ಕೆ. ಸಿಂಗ್ ಅವರನ್ನೊಳಗೊಂಡ ಪೀಠವು ಈ ವಿಚಾರಣೆ ನಡೆಸಿ ತಡೆಯಾಜ್ಞೆ ನೀಡಿದ್ದು, ಪ್ರಕರಣದ ಮುಂದಿನ ವಿಚಾರಣೆಯನ್ನು ಅಕ್ಟೋಬರ್ 7ಕ್ಕೆ ಮುಂದೂಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಸೆ.23 ‘ಭೀಮ ಸಂಕಲ್ಪ ದಿನ’: ಡಾ ಬಿ ಆರ್...

1917ರ ಸೆಪ್ಟೆಂಬರ್ 23ರಂದು ವಡೋದರದ ಆಲದ ಮರದ ಕೆಳಗೆ ಕುಳಿತಿದ್ದ ಯುವ ಅಂಬೇಡ್ಕರ್ ಅವರ ಬಳಿ ಅಧಿಕಾರವಿರಲಿಲ್ಲ, ದೊಡ್ಡ ಸಂಘಟನೆಯಿರಲಿಲ್ಲ. ಆದರೆ ಅನ್ಯಾಯವನ್ನು ಒಪ್ಪಿಕೊಳ್ಳದ ಮನಸ್ಸು ಮತ್ತು ಸಮಾಜವನ್ನು ಬದಲಿಸಬೇಕೆಂಬ ದೃಢ ಸಂಕಲ್ಪವಿತ್ತು....

ಸೌಜನ್ಯ ಪ್ರಕರಣ: ಪ್ರಭಾವಿಗಳ ಜೊತೆ ಲಜ್ಜೆ ಬಿಟ್ಟು ಹೆಜ್ಜೆ...

ತನಿಖಾಧಿಕಾರಿಗಳು ಹಣದ ಆಮಿಷಕ್ಕೆ ಒಳಗಾಗಿದ್ದರೇ ಅಥವಾ ಬಲಾಢ್ಯರ ಒತ್ತಡಕ್ಕೆ ಮಣಿದು ಸಾಕ್ಷ್ಯ ನಾಶ ಮಾಡಿ ಅಪರಾಧಿಗಳ ರಕ್ಷಣೆಗೆ ನಿಂತರೇ ಎಂಬ ಅನುಮಾನ ಸಾಮಾನ್ಯ ಜನರಿಗೂ ಬರುತ್ತಿರುವಾಗ ಕರ್ನಾಟಕದ ಬಹುತೇಕ ಸುದ್ದಿ ಮಾಧ್ಯಮಗಳು ಈ...

ಉತ್ತರ ಪ್ರದೇಶ | ಅಖಿಲೇಶ್ ‘ಧರ್ಮ ರಕ್ಷಣೆ’ಯ ಯುದ್ಧ...

ಉತ್ತರ ಪ್ರದೇಶದ ಯುವಜನತೆಯ (Gen Z) ಅಸಮಾಧಾನ, ನಿರುದ್ಯೋಗ ಸಮಸ್ಯೆ ಮತ್ತು ಬದಲಾಗುತ್ತಿರುವ ಜಾತಿ ಸಮೀಕರಣಗಳು ತಮಗೆ ಪೂರಕವಾಗಿವೆ ಎಂಬುದನ್ನು ಅಖಿಲೇಶ್ ಯಾದವ್ ಅರಿತಿದ್ದಾರೆ. ತಮ್ಮ ಪಕ್ಷ ಕೇವಲ "ಮುಸ್ಲಿಂ ಮತ್ತು ಯಾದವರ...

ಇದನ್ನೂ ಓದಿ: ನೋಯ್ಡಾ ಪ್ರತಿಭಟನೆ | ಆಕೃತಿ NSA ಬಂಧನ ರದ್ದು; ಯೋಗಿ ಸರ್ಕಾರಕ್ಕೆ ಅಲಹಾಬಾದ್ ಹೈಕೋರ್ಟ್‌ ಕಪಾಳಮೋಕ್ಷ!

ಏನಿದು ಆಕೃತಿ ಚೌಧರಿ ಪ್ರಕರಣ?

Advertisements

ಏಪ್ರಿಲ್‌ನಲ್ಲಿ ನೋಯ್ಡಾದಲ್ಲಿ ನಡೆದ ಕೈಗಾರಿಕಾ ಕಾರ್ಮಿಕರ ಪ್ರತಿಭಟನೆ ವೇಳೆ ಆಕೃತಿ ಚೌಧರಿ ಅವರನ್ನು ಪೊಲೀಸರು ಬಂಧಿಸಿ, ಅವರ ಮೇಲೆ ಕಠಿಣ ‘ರಾಷ್ಟ್ರೀಯ ಭದ್ರತಾ ಕಾಯ್ದೆ’ (NSA) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದರು. ಈ ಕ್ರಮವನ್ನು ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಲಾಗಿತ್ತು.

ಸೆಪ್ಟೆಂಬರ್ 2 ರಂದು ಅಲಹಾಬಾದ್ ಹೈಕೋರ್ಟ್‌ನ ನ್ಯಾಯಮೂರ್ತಿ ಅತುಲ್ ಶ್ರೀಧರನ್ ಮತ್ತು ನ್ಯಾಯಮೂರ್ತಿ ಅಚಲ್ ಸಚದೇವ್ ಅವರಿದ್ದ ವಿಭಾಗೀಯ ಪೀಠವು, ಆಕೃತಿ ಚೌಧರಿ ವಿರುದ್ಧದ ಎನ್‌ಎಸ್‌ಎ ಬಂಧನವನ್ನು ರದ್ದುಗೊಳಿಸಿತ್ತು. ಅಷ್ಟೇ ಅಲ್ಲದೆ, “ಬಂಧನಕ್ಕೆ ಬಲವಾದ ಯಾವುದೇ ಸಾಕ್ಷ್ಯಾಧಾರಗಳಿಲ್ಲದೇ ಕಠಿಣ ಕಾನೂನನ್ನು ದುರ್ಬಳಕೆ ಮಾಡಲಾಗಿದೆ” ಎಂದು ಆಕ್ರೋಶ ವ್ಯಕ್ತಪಡಿಸಿತ್ತು.

ಹೈಕೋರ್ಟ್ ತನ್ನ ತೀರ್ಪಿನಲ್ಲಿ, ಗೌತಮ್ ಬುದ್ಧ ನಗರ ಡಿಎಂ ಮೇಧಾರೂಪಂ ಅವರ ನಡೆ “ಉಪಹಾಸಕ್ಕೆ ಅರ್ಹವಾದುದು” ಎಂದು ಕಟುವಾಗಿ ಟೀಕಿಸಿತ್ತು. ಆಕೃತಿ ಚೌಧರಿಗೆ 5 ಲಕ್ಷ ರೂಪಾಯಿ ಪರಿಹಾರ ನೀಡಬೇಕು ಮತ್ತು ಈ ಮೊತ್ತವನ್ನು ಜಿಲ್ಲಾಧಿಕಾರಿ ಮೇಧಾರೂಪಂ ಹಾಗೂ ಘಟನೆಯಲ್ಲಿ ಭಾಗಿಯಾದ ಇತರ ಅಧಿಕಾರಿಗಳ ವೈಯಕ್ತಿಕ ವೇತನದಿಂದ ವಸೂಲಿ ಮಾಡಬೇಕು ಎಂದು ಆದೇಶಿಸಿತ್ತು. ಅಧಿಕಾರಿಗಳು ರಾಜಕೀಯ ನಾಯಕರಿಗಲ್ಲ, ದೇಶದ ಸಂವಿಧಾನಕ್ಕೆ ಬದ್ಧರಾಗಿರಬೇಕು ಎಂದು ಎಚ್ಚರಿಸಿತ್ತು.

ಹೈಕೋರ್ಟ್‌ನ ಈ ಕಟು ಆದೇಶವನ್ನು ಪ್ರಶ್ನಿಸಿ ಉತ್ತರ ಪ್ರದೇಶ ಸರ್ಕಾರ ಹಾಗೂ ಜಿಲ್ಲಾಧಿಕಾರಿ ಮೇಧಾರೂಪಂ ಪರವಾಗಿ ಹಿರಿಯ ವಕೀಲರು ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದರು. ಸುಪ್ರೀಂ ಕೋರ್ಟ್ ವಿಚಾರಣೆ ವೇಳೆ, ಎನ್‌ಎಸ್‌ಎ ಜಾರಿಗೊಳಿಸುವ ನಿರ್ಧಾರವು ಕೇವಲ ಜಿಲ್ಲಾಧಿಕಾರಿ ಒಬ್ಬರ ನಿರ್ಧಾರವಾಗಿರುವುದಿಲ್ಲ. ಪೊಲೀಸರ ವರದಿ, ಉನ್ನತ ಮಟ್ಟದ ಸಲಹಾ ಸಮಿತಿ ಮತ್ತು ಸರ್ಕಾರದ ಅನುಮೋದನೆಯ ಹಂತಗಳನ್ನು ದಾಟಿ ಈ ಪ್ರಕ್ರಿಯೆ ನಡೆದಿರುತ್ತದೆ. ಹೀಗಿರುವಾಗ ಕೇವಲ ಯುವ ಐಎಎಸ್ ಅಧಿಕಾರಿಯನ್ನು ಮಾತ್ರ ಪ್ರತ್ಯೇಕಿಸಿ, ಅವರ ಮೇಲೆಯೇ ಸಂಪೂರ್ಣ ಜವಾಬ್ದಾರಿ ಹಾಕಿ ದಂಡ ವಿಧಿಸುವುದು ಸೂಕ್ತವೇ ಎಂದು ಮೌಖಿಕವಾಗಿ ಅಭಿಪ್ರಾಯಪಟ್ಟಿತು. ಅಂತಿಮವಾಗಿ ಹೈಕೋರ್ಟ್‌ನ ದಂಡದ ಆದೇಶ ಹಾಗೂ ಅಧಿಕಾರಿಯ ವಿರುದ್ಧದ ಕಟು ಟೀಕೆಯ ಪ್ಯಾರಾಗಳಿಗೆ ಸುಪ್ರೀಂ ಕೋರ್ಟ್‌ ತಡೆಯಾಜ್ಞೆ ನೀಡಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಮುನಾ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ದುರಂತ: ಸ್ಲೀಪರ್ ಬಸ್‌ಗೆ ಬೆಂಕಿ ಬಿದ್ದು 9 ಮಂದಿ ಸಜೀವ ದಹನ

ಚಲಿಸುತ್ತಿದ್ದ ಖಾಸಗಿ ಸ್ಲೀಪರ್ ಬಸ್ ಒಂದಕ್ಕೆ ದಿಢೀರ್ ಬೆಂಕಿ ಹೊತ್ತಿಕೊಂಡ ಪರಿಣಾಮ...

ಬೀದರ್‌ | ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ದಲಿತರ ಯುವಕರ ಮೇಲೆ ಹಲ್ಲೆ, 8 ಜನರ ವಿರುದ್ಧ ಎಫ್‌ಐಆರ್

ಗಣೇಶ ವಿಸರ್ಜನೆ ಮೆರವಣಿಗೆಯಲ್ಲಿ ನಡೆದ ಗಲಾಟೆಯಲ್ಲಿ ಮೇಲ್ಜಾತಿ ಯುವಕರು ದಲಿತರ ಸಮುದಾಯದವರ...

ಔರಾದ ತಾಲೂಕು ʼಬರʼ ಘೋಷಿಸಿ : ಸಿಎಂಗೆ ಶಾಸಕ ಪ್ರಭು ಚವ್ಹಾಣ ಮನವಿ

ಔರಾದ(ಬಿ) ತಾಲ್ಲೂಕನ್ನು ಕೂಡಲೇ ಬರಪೀಡಿತ ಪ್ರದೇಶವೆಂದು ಘೋಷಿಸಿ, ಬರದಿಂದ ಸಂಕಷ್ಟಕ್ಕೊಳಗಾಗಿರುವ ರೈತರಿಗೆ...