ಮನಮೋಹನ್​ ಸಿಂಗ್ ನಿಧನ| ರಾಜ್ಯದಲ್ಲಿ ಇಂದು ಸರ್ಕಾರಿ ರಜೆ; ಬೆಳಗಾವಿ ಕಾಂಗ್ರೆಸ್ ಅಧಿವೇಶನ ರದ್ದು

Date:

Advertisements

ಭಾರತದ ಮಾಜಿ ಪ್ರಧಾನಿ, ಅರ್ಥಶಾಸ್ತ್ರಜ್ಞ, ಹಿರಿಯ ಕಾಂಗ್ರೆಸ್​ ನಾಯಕ ಮನಮೋಹನ್​ ಸಿಂಗ್ ಅವರು ಗುರುವಾರ ದೆಹಲಿಯಲ್ಲಿ ವಿಧಿವಶರಾಗಿದ್ದಾರೆ. ಅವರ ನಿಧನ ಹಿನ್ನೆಲೆ ಕರ್ನಾಟಕ ಸರ್ಕಾರ ರಾಜ್ಯದಲ್ಲಿ 7 ದಿನಗಳ ಕಾಲ ಶೋಕಾಚರಣೆ ಮತ್ತು ಇಂದು (ಡಿ.27) ಸರ್ಕಾರಿ ರಜೆ ಘೋಷಸಿ ಆದೇಶ ಹೊರಡಿಸಲಾಗಿದೆ.

ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ನಿಧನ ಹಿನ್ನಲೆ ಇಂದು ಬೆಳಗಾವಿಯಲ್ಲಿ ನಡೆಯುತ್ತಿದ್ದ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವದ ಎಲ್ಲ ಕಾರ್ಯಕ್ರಮಗಳನ್ನು ಈಗಾಗಲೇ ರದ್ದು ಮಾಡಲಾಗಿದೆ. ಇತ್ತ ಕಾರ್ಯಕ್ರಮ ರದ್ದು ಮಾಡುತ್ತಿದ್ದಂತೆ ಕಾಂಗ್ರೆಸ್​ ನಾಯಕರಾದ ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ, ಕೆ.ಸಿ.ವೇಣುಗೋಪಾಲ್ ಸೇರಿದಂತೆ ಇತರರು ಬೆಳಗಾವಿಯಿಂದ ದೆಹಲಿಗೆ ತೆರಳಿದ್ದಾರೆ.

ಬೆಳಗಾವಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಡಿಸಿಎಂ ಡಿ ಕೆ ಶಿವಕುಮಾರ್, ಮನಮೋಹನ್​ ಸಿಂಗ್ ಕೊಡುಗೆ ಮರೆಯಲು ಸಾಧ್ಯವಿಲ್ಲ. ನಾಳೆ ಬೆಳಗಾವಿಯಲ್ಲಿ ನಡೆಯಬೇಕಿದ್ದ ಕಾರ್ಯಕ್ರಮ ರದ್ದು ಮಾಡಲಾಗಿದೆ. ವರಿಷ್ಠರ ಜೊತೆ ಚರ್ಚಿಸಿ ಮುಂದೆ ಕಾರ್ಯಕ್ರಮ ಮಾಡುತ್ತೇವೆ. ನಾಳೆ ಸರ್ಕಾರಿ ರಜೆ ಘೋಷಿಸಲಾಗಿದೆ. ರಾಜ್ಯದಲ್ಲಿ ಒಂದು ವಾರ ಶೋಕಾಚರಣೆ ಆಚರಿಸಲಾಗುತ್ತದೆ. ನಾಳೆ ನಾನು, ಸಿಎಂ ಸಿದ್ದರಾಮಯ್ಯ ಮತ್ತು ಸಚಿವರು ದೆಹಲಿಗೆ ಹೋಗುತ್ತೇವೆ ಎಂದು ಹೇಳಿದ್ದಾರೆ.

Advertisements

ಈ ಸುದ್ದಿ ಓದಿದ್ದೀರಾ? ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ ನಿಧನ

ದೇಶದ ಹಿತವೇ ಮುಖ್ಯವಾಗಿತ್ತು: ಡಾ. ಹೆಚ್​ ಸಿ ಮಹದೇವಪ್ಪ

“ದೇಶದ ಆರ್ಥಿಕತೆಯನ್ನು ಬಲಪಡಿಸುವಲ್ಲಿ ಶ್ರಮವಹಿಸಿದವರು. ಸಮಸಮಾಜ ನಿರ್ಮಾಣ ಮಾಡುವಲ್ಲಿ ಮಹತ್ತರ ಪಾತ್ರ ವಹಿಸಿದ್ದರು. ಸಂವಿಧಾನದ ಬಗ್ಗೆ ಅವರಿಗೆ ಆಳವಾದ ಜ್ಞಾನವಿತ್ತು. ಡಾ. ಮನಮೋಹನ್​ ಸಿಂಗ್ ನಿಧನ ರಾಷ್ಟ್ರಕ್ಕೆ ತುಂಬಲಾರದ ನಷ್ಟ. ಅವರಿಗೆ ದೇಶದ ಹಿತವೇ ಮುಖ್ಯವಾಗಿತ್ತು” ಎಂದು ಸಚಿವ ಡಾ. ಹೆಚ್​ ಸಿ ಮಹದೇವಪ್ಪ ತಿಳಿಸಿದ್ದಾರೆ.

ಸರಳ, ಸಜ್ಜನಿಕೆಯ ರಾಜಕಾರಣಿ: ಸಚಿವ ಮುನಿಯಪ್ಪ

ಸಚಿವ ಮುನಿಯಪ್ಪ ಕೂಡ ಸಂತಾಪ ಸೂಚಿಸಿದ್ದು, ಡಾ. ಮನಮೋಹನ್​ ಸಿಂಗ್​ ನಿಧನ ದೇಶಕ್ಕೆ ತುಂಬಲಾರದ ನಷ್ಟ. ಅವರ ನಿಧನ ಸುದ್ದಿಯಿಂದ ಆಘಾತವಾಗಿದೆ. ಅವರ ಮಾರ್ಗದರ್ಶನದಲ್ಲಿ ನಾವೆಲ್ಲರೂ ಕೆಲಸ ಮಾಡಿದ್ದೇವೆ. ಅವರ ಸರಳ, ಸಜ್ಜನಿಕೆಯ ರಾಜಕಾರಣಿ. ಮಹಾನ್‌ ಚೇತನ, ಅರ್ಥಶಾಸ್ತ್ರಜ್ಞರನ್ನು ದೇಶ ಕಳೆದುಕೊಂಡಿದೆ. ಅರ್ಥ ಸಚಿವರಾಗಿ ಕಷ್ಟದಲ್ಲಿದ್ದ ದೇಶವನ್ನ ಬಲಿಷ್ಠವಾಗಿಸಿದ್ದರು. ಅವರ ಜತೆಯಲ್ಲಿ ಕೆಲಸ ಮಾಡಿರುವುದು ನಮ್ಮ ಸೌಭಾಗ್ಯ ಎಂದಿದ್ದಾರೆ.

ನಾಳೆ ಸರ್ಕಾರಿ ಗೌರವದೊಂದಿಗೆ ಮನಮೋಹನ್ ಸಿಂಗ್ ಅಂತ್ಯಕ್ರಿಯೆ

ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಅಂತ್ಯಕ್ರಿಯೆ ಸಕಲ ಸರ್ಕಾರಿ ಗೌರವದೊಂದಿಗೆ ನಾಳೆ (ಶನಿವಾರ) ನಡೆಯಲಿದೆ ಎಂದು ಕಾಂಗ್ರೆಸ್‌ನ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ತಿಳಿಸಿದ್ದಾರೆ.

ಈ ಬಗ್ಗೆ ಮಾಧ್ಯಮಗಳೊಂದಿಗೆ ಮಾಹಿತಿ ಹಂಚಿಕೊಂಡಿರುವ ಅವರು,ಸಿಂಗ್ ಅವರ ಪಾರ್ಥಿವ ಶರೀರ ಏಮ್ಸ್ ನಿಂದ ಗುರುವಾರ ತಡರಾತ್ರಿ ಅವರ ನಿವಾಸಕ್ಕೆ ತಲುಪಿದೆ. ಇಂದು ಸಾರ್ವಜನಿಕರ ಅಂತಿಮ ದರ್ಶನಕ್ಕೆ ಅವಕಾಶ ನೀಡಲಾಗುತ್ತದೆ. ಈಗಾಗಲೇ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಮತ್ತು ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ, ಕಾಂಗ್ರೆಸ್‌ನ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರು ಡಾ ಸಿಂಗ್ ಅವರ ನಿವಾಸಕ್ಕೆ ಭೇಟಿ ನೀಡಿ ಅಂತಿಮ ನಮನ ಸಲ್ಲಿಸಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X