ಸೋನಮ್ ವಾಂಗ್‌ಚುಕ್ ಜೀವ ಅಮೂಲ್ಯ, ರಕ್ಷಣೆಗೆ ಕೇಂದ್ರ, ದೆಹಲಿ ಸರ್ಕಾರಕ್ಕೆ ಹೈಕೋರ್ಟ್ ಆದೇಶ

Date:

ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಸಾಮಾಜಿಕ ಹೋರಾಟಗಾರ ಸೋನಮ್ ವಾಂಗ್‌ಚುಕ್ ಅವರ ಜೀವ ರಕ್ಷಿಸಲು ಎಲ್ಲ ರೀತಿಯ ವೈದ್ಯಕೀಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ದೆಹಲಿ ಹೈಕೋರ್ಟ್ ಗುರುವಾರ ಆದೇಶಿಸಿದೆ. ವಾಂಗ್‌ಚುಕ್ ಅವರ ಆರೋಗ್ಯ ಸ್ಥಿತಿಯನ್ನು ಸರ್ಕಾರಿ ವೈದ್ಯರು ಪ್ರತಿದಿನ ತಪಾಸಣೆ ಮಾಡಲಿದ್ದಾರೆ ಎಂದು ಕೇಂದ್ರ ಮತ್ತು ದೆಹಲಿ ಸರ್ಕಾರಗಳು ನ್ಯಾಯಾಲಯಕ್ಕೆ ತಿಳಿಸಿದ ಬೆನ್ನಲ್ಲೇ ಈ ಆದೇಶ ಹೊರಬಿದ್ದಿದೆ.

- Advertisement -

ಮುಖ್ಯ ನ್ಯಾಯಮೂರ್ತಿ ದೇವೇಂದ್ರ ಕುಮಾರ್ ಉಪಾಧ್ಯಾಯ ಮತ್ತು ನ್ಯಾಯಮೂರ್ತಿ ತೇಜಸ್ ಕರಿಯಾ ಅವರಿದ್ದ ಪೀಠವು ಈ ಮಹತ್ವದ ನಿರ್ದೇಶನ ನೀಡಿದೆ. ವಿಚಾರಣೆ ವೇಳೆ ಕೇಂದ್ರ ಮತ್ತು ದೆಹಲಿ ಸರ್ಕಾರದ ಪರವಾಗಿ ಹಾಜರಿದ್ದ ಸಾಲಿಸಿಟರ್ ಜನರಲ್ (ಎಸ್‌ಜಿ) ತುಷಾರ್ ಮೆಹ್ತಾ ಅವರು, “ಸರ್ಕಾರಿ ವೈದ್ಯರು ಪ್ರತಿದಿನ ವಾಂಗ್‌ಚುಕ್ ಅವರ ಆರೋಗ್ಯ ತಪಾಸಣೆ ನಡೆಸಲಿದ್ದಾರೆ. ವೈದ್ಯರ ಸಲಹೆಯ ಮೇರೆಗೆ, ಅವರ ಆರೋಗ್ಯ ಕ್ಷೀಣಿಸುವುದನ್ನು ತಡೆಯಲು ಅಗತ್ಯವಿರುವ ಯಾವುದೇ ವೈದ್ಯಕೀಯ ನೆರವನ್ನು ಒದಗಿಸಲಾಗುವುದು” ಎಂದು ನ್ಯಾಯಾಲಯಕ್ಕೆ ಭರವಸೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕ್ಷಿಪಣಿ ಬಿಡಿಭಾಗಗಳ ಖರೀದಿಯಲ್ಲಿ ಸ್ವಜನಪಕ್ಷಪಾತ; ಬಿಡಿಎಲ್ ಮಾಜಿ ಮುಖ್ಯಸ್ಥನ...

ಕ್ಷಿಪಣಿಯ ಆಪ್ಟಿಕಲ್ ಸೈಟ್‌ಗಳ ಪೂರೈಕೆಗಾಗಿ ಭಾರತ್ ಡೈನಾಮಿಕ್ಸ್ ಲಿಮಿಟೆಡ್ (BDL) ತನ್ನದೇ ಸಂಸ್ಥೆಯ ಮಾಜಿ ಅಧ್ಯಕ್ಷ ಹಾಗೂ ವ್ಯವಸ್ಥಾಪಕ ನಿರ್ದೇಶಕರ (CMD) ಪತ್ನಿಯ ಒಡೆತನದ ಖಾಸಗಿ ಕಂಪನಿಗೆ 'ತುರ್ತು' ನೆಪವೊಡ್ಡಿ 56.8 ಕೋಟಿ...

ನುಡಿ ನಮನ | ಚೆರುವಯಲ್ ರಾಮನ್ – ಭತ್ತದ...

ಕೃಷಿ ಎಂದರೆ ಕೇವಲ ಬೆಳೆ ಬೆಳೆಯುವುದಲ್ಲ; ಬಿತ್ತನೆಗೆ ಸೂಕ್ತವಾದ ಬೀಜಗಳನ್ನು ಆಯ್ಕೆ ಮಾಡುವುದು, ಅವುಗಳನ್ನು ಸಂಗ್ರಹಿಸುವುದು ಹಾಗೂ ಮುಂದಿನ ಋತುವಿಗೆ ಉಳಿಸುವುದೂ ಕೃಷಿಯ ಅವಿಭಾಜ್ಯ ಅಂಗ ಎನ್ನುತ್ತಿದ್ದ ರಾಮನ್, ತಮ್ಮ ಇಡೀ ಜೀವನವನ್ನೇ...

ಬರಗಾಲದ ದಸರಾದಲ್ಲಿ ಕಂಬಳದ ಹಠ: ಜನಾಭಿಪ್ರಾಯಕ್ಕೆ ಬೆಲೆಯಿಲ್ಲವೇ?

ನೀರಿನ ಅಭಾವ, ಪರಿಸರ ನಾಶ, ಸಾರ್ವಜನಿಕ ಹಣದ ವೆಚ್ಚದ ನಡುವೆ ಸರ್ಕಾರದ ಸಮರ್ಥನೆ; ಇತಿಹಾಸದ ಹೆಸರಿನಲ್ಲಿ ವಿವಾದ, ಆಡಳಿತದ ನಡೆಗೆ ಸಾರ್ವಜನಿಕರ ಪ್ರಶ್ನೆ. ರಾಜ್ಯದ ಜನತೆ ಬರಗಾಲದ ಸಂಕಷ್ಟ ಎದುರಿಸುತ್ತಿರುವಾಗ, ರೈತರು ಮಳೆ-ಬೆಳೆಯಿಲ್ಲದೆ ಕಂಗಾಲಾಗಿರುವಾಗ,...

ಈ ಭರವಸೆಯನ್ನು ಒಪ್ಪಿಕೊಂಡ ನ್ಯಾಯಪೀಠವು, “ಯಾವುದೇ ನಾಗರಿಕನ ಜೀವ ಅತ್ಯಮೂಲ್ಯವಾದದ್ದು. ಅದನ್ನು ಉಳಿಸಲು ಸರ್ಕಾರಿ ಅಧಿಕಾರಿಗಳು ಎಲ್ಲ ರೀತಿಯ ಪ್ರಯತ್ನಗಳನ್ನು ಮಾಡಬೇಕು. ಸಾಲಿಸಿಟರ್ ಜನರಲ್ ಅವರ ನಿಲುವನ್ನು ನಾವು ಪ್ರಶಂಸಿಸುತ್ತೇವೆ. ಅದರಂತೆ, ವಾಂಗ್‌ಚುಕ್ ಅವರ ಆರೋಗ್ಯ ಸ್ಥಿತಿಯನ್ನು ಪ್ರತಿದಿನವೂ ಕಟ್ಟುನಿಟ್ಟಾಗಿ ಮೇಲ್ವಿಚಾರಣೆ ಮಾಡಬೇಕು” ಎಂದು ನಿರ್ದೇಶನ ನೀಡಿತು.

ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಶಿಕ್ಷಣ ವ್ಯವಸ್ಥೆಯಲ್ಲಿನ ಅಕ್ರಮಗಳನ್ನು ಖಂಡಿಸಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್‌ನಲ್ಲಿ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ನೇತೃತ್ವದಲ್ಲಿ ಪ್ರತಿಭಟನೆ ನಡೆಯುತ್ತಿದೆ. ಈ ಪ್ರತಿಭಟನೆಯಲ್ಲಿ ಪಾಲ್ಗೊಂಡಿರುವ ವಾಂಗ್‌ಚುಕ್, ಜೂನ್ 28 ರಿಂದ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದಾರೆ. ಅಭಿಜೀತ್ ದೀಪ್ಕೆ ಸ್ಥಾಪಿಸಿದ ಸಿಜೆಪಿ (CJP) ಸಂಘಟನೆಯು ಜೂನ್ 20 ರಿಂದಲೇ ಪ್ರತಿಭಟನೆ ನಡೆಸುತ್ತಿದೆ. ಇದೊಂದು ಆನ್‌ಲೈನ್ ವಿಡಂಬನಾತ್ಮಕ ಚಳವಳಿಯಾಗಿ ಆರಂಭವಾಗಿ, ನಿರುದ್ಯೋಗ, ಸಾಂಸ್ಥಿಕ ಉತ್ತರದಾಯಿತ್ವ ಮತ್ತು ಮಾಧ್ಯಮ ಸ್ವಾತಂತ್ರ್ಯದಂತಹ ವಿಷಯಗಳ ಬಗ್ಗೆ ಧ್ವನಿ ಎತ್ತುತ್ತಾ ಯುವಕರ ಗಮನ ಸೆಳೆದಿದೆ.

ವಾಂಗ್‌ಚುಕ್ ಅವರ ಜೀವ ರಕ್ಷಿಸಲು ತುರ್ತು ಮಧ್ಯಪ್ರವೇಶ ಕೋರಿ ವಕೀಲ ರಾಕೇಶ್ ಕುಮಾರ್ ಸೈನಿ ಅವರು ಹೈಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ (PIL) ಸಲ್ಲಿಸಿದ್ದರು. “ವಾಂಗ್‌ಚುಕ್ ಅವರ ಆರೋಗ್ಯ ತೀವ್ರವಾಗಿ ಹದಗೆಟ್ಟಿದ್ದು, ಈಗಾಗಲೇ 8.5 ಕೆ.ಜಿ ತೂಕ ಕಳೆದುಕೊಂಡಿದ್ದಾರೆ. ಇದೇ ರೀತಿ ಮುಂದುವರಿದರೆ ಇನ್ನೆರಡು ದಿನಗಳಲ್ಲಿ ಅವರು ಪ್ರಾಣ ಕಳೆದುಕೊಳ್ಳುವ ಅಪಾಯವಿದೆ. ಸರ್ಕಾರವು ಅವರನ್ನು ಓರ್ವ ಭಯೋತ್ಪಾದಕ ಅಥವಾ ದೇಶದ್ರೋಹಿಯಂತೆ ನಡೆಸಿಕೊಳ್ಳುತ್ತಿದೆ” ಎಂದು ಅರ್ಜಿಯಲ್ಲಿ ಆಕ್ರೋಶ ವ್ಯಕ್ತಪಡಿಸಲಾಗಿತ್ತು.

“ಮಾನವನ ದೇಹ ಬದುಕುಳಿಯಲು ಅಗತ್ಯವಿರುವ ಪೌಷ್ಟಿಕಾಂಶಗಳು ಮತ್ತು ವಿಟಮಿನ್‌ಗಳಿರುವ ದ್ರವರೂಪದ ಆಹಾರವನ್ನು ಬಲವಂತವಾಗಿಯಾದರೂ (Force-feed) ನೀಡಿ ಅವರ ಜೀವ ಉಳಿಸಲು ಕೇಂದ್ರ ಹಾಗೂ ದೆಹಲಿ ಸರ್ಕಾರಕ್ಕೆ ನಿರ್ದೇಶನ ನೀಡಬೇಕು” ಎಂದು ಅರ್ಜಿದಾರರು ಕೋರಿದ್ದರು. ಈ ಬಗ್ಗೆ ಪ್ರತಿಕ್ರಿಯಿಸಿದ ಸಾಲಿಸಿಟರ್ ಜನರಲ್, “ವಾಂಗ್‌ಚುಕ್ ಅವರ ಒಪ್ಪಿಗೆಯ ಮೇರೆಗೆ ಸರ್ಕಾರಿ ವೈದ್ಯರು ಪ್ರತಿದಿನ ತಪಾಸಣೆ ನಡೆಸುತ್ತಿದ್ದಾರೆ. ಕೆಲವೊಮ್ಮೆ ಖಾಸಗಿ ವೈದ್ಯರು ಕೂಡ ಬಂದು ಪರೀಕ್ಷಿಸುತ್ತಿದ್ದಾರೆ. ಇದರ ವರದಿಯನ್ನು ಸಿದ್ಧಪಡಿಸಬಹುದು” ಎಂದು ನ್ಯಾಯಾಲಯಕ್ಕೆ ತಿಳಿಸಿದರು. ಇದನ್ನು ಆಲಿಸಿದ ನ್ಯಾಯಾಲಯವು ದೈನಂದಿನ ಆರೋಗ್ಯ ನಿಗಾ ವಹಿಸುವಂತೆ ಸೂಚಿಸಿ ವಿಚಾರಣೆ ಮುಕ್ತಾಯಗೊಳಿಸಿತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ನ.28, 29ರಂದು 47ನೇ ಶರಣ ಕಮ್ಮಟ, ಅನುಭವಮಂಟಪ ಉತ್ಸವ

ವಿಶ್ವಬಸವಧರ್ಮ ಅನುಭವಮಂಟಪ, ಬಸವಕಲ್ಯಾಣ ವತಿಯಿಂದ ನವೆಂಬರ್ 28 ಮತ್ತು 29ರಂದು 47ನೇ...

ಕನ್ನಾಟ್ ಪ್ಲೇಸ್‌ನಲ್ಲಿ ಸಿಜೆಪಿ ಪ್ರತಿಭಟನೆ: ತಡೆ ನೀಡಲು ದೆಹಲಿ ಹೈಕೋರ್ಟ್ ನಕಾರ

ಮುಖ್ಯ ಚುನಾವಣಾ ಆಯುಕ್ತರ (ಸಿಇಸಿ) ರಾಜೀನಾಮೆಗೆ ಆಗ್ರಹಿಸಿ ಅಕ್ಟೋಬರ್ 16ರಂದು ದೆಹಲಿಯ...

ಜಂತರ್ ಮಂತರ್ ಪ್ರತಿಭಟನಾ ಸ್ಥಳ ರದ್ದು: ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್

ನವದೆಹಲಿಯ ಐತಿಹಾಸಿಕ 'ಜಂತರ್ ಮಂತರ್' ಅನ್ನು ಪ್ರತಿಭಟನಾ ಸ್ಥಳಗಳ ಪಟ್ಟಿಯಿಂದ ಅಧಿಕೃತವಾಗಿ...