ವಿಶೇಷ ಅಧಿವೇ‍ಶನದ ಉದ್ದೇಶ ಇನ್ನೂ ನಿಗೂಢ: ಸೆ.17 ರಂದು ಸರ್ವಪಕ್ಷ ಸಭೆ ಕರೆದ ಕೇಂದ್ರ

Date:

ಸಂಸತ್ತಿನ ವಿಶೇಷ ಅಧಿವೇಶನ ಪ್ರಾರಂಭವಾಗುವ ಒಂದು ದಿನ ಮುಂಚಿತವಾಗಿ ಸೆಪ್ಟೆಂಬರ್ 17 ರಂದು ಸರ್ಕಾರ ಸರ್ವಪಕ್ಷ ಸಭೆ ಕರೆದಿದ್ದು, ವಿಶೇಷ ಅಧಿವೇಶನದ ಉದ್ದೇಶ ಏನು ಅನ್ನೋದು ಇನ್ನೂ ಕೂಡಾ ನಿಗೂಢವಾಗಿಯೇ ಉಳಿದಿದೆ.

- Advertisement -

5 ದಿನಗಳ ವಿಶೇಷ ಸಂಸತ್ ಅಧಿವೇಶನ ಆರಂಭವಾಗುವ ಒಂದು ದಿನ ಮುನ್ನ ಈ ಸರ್ವ ಪಕ್ಷ ಸಭೆ ಕರೆಯಲಾಗಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಮಾಹಿತಿ ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಭಾರತಕ್ಕೆ ಬರದ ಬುಲೆಟ್ ಟ್ರೈನ್: ತಡವಾಗುತ್ತಿರುವುದು ಮೋದಿಯಿಂದಲೋ, ಜಪಾನ್‌ನವರಿಂದಲೋ?

ಮುಂಬೈ ಮತ್ತು ಅಹಮದಾಬಾದ್ ನಡುವಿನ 508 ಕಿ.ಮೀ ಉದ್ದದ ಈ ಮಾರ್ಗವು ಭಾರತೀಯ ರೈಲ್ವೆಯನ್ನು ಆಧುನೀಕರಿಸುವ ಯೋಜನೆಯ ಭಾಗವಾಗಿ ನರೇಂದ್ರ ಮೋದಿಯವರು ಘೋಷಿಸಿದ್ದರು. ಅದಾಗಿ ಹತ್ತು ವರ್ಷವಾದರೂ ಸುದ್ದಿಯೇ ಇಲ್ಲ. ಬುಲೆಟ್ ಟ್ರೈನ್...

ನೊಬೆಲ್‌ ಪ್ರಶಸ್ತಿ ಸರಣಿ | ರಸಾಯನವಿಜ್ಞಾನದ ʼಅಸಮಮಿತಿʼ (Chirality)ಯ...

ರಸಾಯನವಿಜ್ಞಾನದ ನೊಬೆಲ್ ಪ್ರಶಸ್ತಿಯನ್ನು ಈ ಬಾರಿ ಹೆನ್ರಿ ಕಗಾನ್‌ ಮತ್ತು ಕೆನ್ಸೊ ಸುಆಯ್‌ ಅವರಿಗೆ ನೀಡಲಾಗಿದೆ. ಅವರ ಸಂಶೋಧನೆಯ ಕೇಂದ್ರ ಬಿಂದು ರಸಾಯನವಿಜ್ಞಾನದಲ್ಲಿ ಶತಮಾನಗಟ್ಟಲೆ ಅತ್ಯಂತ ಕುತೂಹಲಕಾರಿ ಪ್ರಶ್ನೆಯಾಗಿದ್ದ- ಒಂದಕ್ಕೊಂದು ಕನ್ನಡಿಯ ಪ್ರತಿಬಿಂಬದಂತಿರುವ...

ಅನುದಾನ ಕೊರತೆ: ವಿದ್ಯಾರ್ಥಿಗಳಿಂದ ನಿರ್ವಹಣಾ ಶುಲ್ಕ ವಸೂಲಿ, ಶಿಕ್ಷಕರ...

ಹಾವೇರಿ ಜಿಲ್ಲೆಯಲ್ಲಿ ಸರಕಾರಿ ಶಾಲೆಗಳಿಗೆ ನಿರ್ವಹಣಾ ವೆಚ್ಚದ ಅನುದಾನ ಬಿಡುಗಡೆಯಾಗದ ಹಿನ್ನೆಲೆಯಲ್ಲಿ ಶಿಕ್ಷಕರು ನಿತ್ಯದ ಖರ್ಚು-ವೆಚ್ಚ ಸರಿದೂಗಿಸಲು ಪರದಾಡುವಂತಾಗಿದೆ. ಶಾಲೆ ನಡೆಸಲು ವಿದ್ಯಾರ್ಥಿಗಳಿಂದಲೇ ಹಣ ವಸೂಲಿ ಮಾಡುತ್ತಿರುವ ಆರೋಪ ಕೇಳಿಬಂದಿದ್ದು, ಪೋಷಕರಿಂದ ಮತ್ತು...

ಸೆಪ್ಟೆಂಬರ್ 18 ರಿಂದ 5 ದಿನಗಳ ಕಾಲ ಸಂಸತ್‌ನ ವಿಶೇಷ ಅಧಿವೇಶನ ನಡೆಯಲಿದೆ. ಇದಕ್ಕೆ ಪೂರ್ವಭಾವಿಯಾಗಿ ಸೆಪ್ಟೆಂಬರ್ 17 ಭಾನುವಾರ ಸಂಜೆ 4.30ಕ್ಕೆ ಸರ್ವ ಪಕ್ಷ ಸಭೆ ಕರೆಯಲಾಗಿದೆ ಎಂದು ಮಾಹಿತಿ ನೀಡಿದ್ಧಾರೆ. ಈ ಸಂಬಂಧ ರಾಜ್ಯಸಭೆ ಹಾಗೂ ಲೋಕಸಭೆಯ ನಾಯಕರಿಗೆ ಇಮೇಲ್ ಮೂಲಕ ಹಾಗೂ ಪತ್ರದ ಮೂಲಕ ಮಾಹಿತಿ ರವಾನಿಸಲಾಗಿದೆ ಎಂದು ಪ್ರಲ್ಹಾದ್ ಜೋಶಿ ಟ್ವೀಟ್ ಮಾಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ಮಧ್ಯಪ್ರದೇಶ | ಹಸು ಮೇಯಿಸುವ ವಿಚಾರಕ್ಕೆ ಎರಡು ಗುಂಪುಗಳ ನಡುವೆ ಗುಂಡಿನ ಚಕಮಕಿ; ಐವರು ಸಾವು, 8 ಮಂದಿ ಗಾಯ

ಭಾನುವಾರ ಸಂಜೆ ನಡೆಯಲಿರುವ ಸರ್ವ ಪಕ್ಷ ಸಭೆಯಲ್ಲಿ ಮುಂದಿನ ವಾರದಿಂದ ಆರಂಭ ಆಗಲಿರುವ ಸಂಸತ್ ವಿಶೇಷ ಅಧಿವೇಶನದ ಉದ್ದೇಶ ಕುರಿತಾಗಿ ಚರ್ಚೆ ನಡೆಯುವ ಸಾದ್ಯತೆ ಇದೆ. ಆದರೆ ವಿಪಕ್ಷಗಳಿಗೆ ವಿಶೇಷ ಅಧಿವೇಶನದ ಉದ್ದೇಶ ಕುರಿತಾಗಿ ಯಾವುದೇ ಮಾಹಿತಿ ಇಲ್ಲ. ಹೀಗಾಗಿ, ಅಧಿವೇಶನದ ಉದ್ದೇಶ ಏನಿರಬಹುದು ಎಂಬ ವಿಚಾರದ ಕುರಿತಾಗಿ ಹಲವು ಊಹಾಪೋಹಗಳು ಶುರುವಾಗಿವೆ.

ಟಿಎಂಸಿ ಸಂಸದ ಡೆರೆಕ್ ಒ’ಬ್ರೇನ್ ಸರ್ಕಾರದ ನಿರ್ಧಾರದ ವಿರುದ್ಧ ವ್ಯಂಗ್ಯವಾಡಿದ್ದಾರೆ. ಸಂಸತ್ತಿನ ವಿಶೇಷ ಅಧಿವೇಶನದ ಕಾರ್ಯಸೂಚಿಯ ಬಗ್ಗೆ ಇನ್ನೂ ಯಾವುದೇ ಸ್ಪಷ್ಟ ನಿರ್ಧಾರವಿಲ್ಲ ಎಂದು ಹೇಳಿದರು.

“ವಿಶೇಷ ಸಂಸತ್ ಅಧಿವೇಶನ ಪ್ರಾರಂಭವಾಗುವುದಕ್ಕೆ ಎರಡು ಕೆಲಸದ ದಿನಗಳು ಬಾಕಿ ಉಳಿದಿವೆ. ಯಾವ ಉದ್ದೇಶಕ್ಕೆ ಕರೆಯಲಾಗಿದೆ ಎಂದು ಇನ್ನೂ ಮಾಹಿತಿ ನೀಡಿಲ್ಲ. ಇದು ಇಬ್ಬರಿಗೆ ಮಾತ್ರ ತಿಳಿದಿದೆ! ನಾವು ಇನ್ನೂ ನಮ್ಮನ್ನು ಸಂಸದೀಯ ಪ್ರಜಾಪ್ರಭುತ್ವ ಎಂದು ಕರೆಯುತ್ತೇವೆ” ಎಂದು ಅವರು ಟ್ವಿಟರ್‌ನಲ್ಲಿ ಬರೆದಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಲೆಮರೆಸಿಕೊಂಡಿದ್ದ ಬಿಜೆಪಿ ಕೌನ್ಸಿಲರ್ ಹಾಜರಾತಿ ರಿಜಿಸ್ಟರ್‌ನಲ್ಲಿ ನಕಲಿ ಸಹಿ: ತನಿಖೆಗೆ ಮುಂದಾದ ಕೇರಳ ಪೊಲೀಸ್

ಕೇರಳದ ತಿರುವನಂತಪುರಂ ಮಹಾನಗರ ಪಾಲಿಕೆಯ ಹಾಜರಾತಿ ಪುಸ್ತಕದಲ್ಲಿ ಬಿಜೆಪಿ ಕೌನ್ಸಿಲರ್ ಆರ್...

ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್; ದೆಹಲಿ ಪೊಲೀಸರಿಗೆ ಕೇಸ್ ಹಾಕುವುದಷ್ಟೇ ಕೆಲಸ: ಅಖಿಲೇಶ್ ಯಾದವ್ ಆಕ್ರೋಶ

ನವದೆಹಲಿಯಲ್ಲಿ ಪ್ರತಿಭಟನೆ ನಡೆಸಿ ಆಕಾಶವಾಣಿ ಭವನಕ್ಕೆ ಅಕ್ರಮ ಪ್ರವೇಶಿಸಿದ ಕಾರಣಕ್ಕೆ ಕಾಂಗ್ರೆಸ್...

ಹಿರಿಯ ನಟ ನಾನಾ ಪಾಟೇಕರ್‌ ನಿಧನ

ಪಣಜಿ:  ಹಿರಿಯ ನಟ ನಾನಾ ಪಾಟೇಕರ್ ಅವರು ತೀವ್ರ ಹೃದಯಾಘಾತಕ್ಕೆ ಒಳಗಾಗಿ...

ನೊಬೆಲ್‌ ಪ್ರಶಸ್ತಿ ಸರಣಿ | ರಸಾಯನವಿಜ್ಞಾನದ ʼಅಸಮಮಿತಿʼ (Chirality)ಯ ರಹಸ್ಯಕ್ಕೆ ಪರಿಹಾರ

ರಸಾಯನವಿಜ್ಞಾನದ ನೊಬೆಲ್ ಪ್ರಶಸ್ತಿಯನ್ನು ಈ ಬಾರಿ ಹೆನ್ರಿ ಕಗಾನ್‌ ಮತ್ತು ಕೆನ್ಸೊ...