ರಾಮಮಂದಿರ ಲೂಟಿ | ಸಿಬಿಐ ತನಿಖೆ ಕೋರಿ ಸಲ್ಲಿಸಿದ ಅರ್ಜಿ ವಜಾಗೊಳಿಸಿದ ಅಲಹಾಬಾದ್ ಹೈಕೋರ್ಟ್

Date:

ಅಯೋಧ್ಯೆಯ ರಾಮ ಮಂದಿರದಲ್ಲಿ ದೇಣಿಗೆಗಳ ದುರುಪಯೋಗದ ಆರೋಪದ ಬಗ್ಗೆ ಸ್ವತಂತ್ರ ತನಿಖೆ ನಡೆಸಬೇಕೆಂದು ಕೋರಿ ಸಲ್ಲಿಸಲಾದ ಪಿಐಎಲ್ ಅನ್ನು ಆಲಿಸಲು ಅಲಹಾಬಾದ್ ಹೈಕೋರ್ಟ್ ಸೋಮವಾರ ನಿರಾಕರಿಸಿದೆ ಮತ್ತು ಅರ್ಜಿಯನ್ನು ವಜಾಗೊಳಿಸಿದೆ. ಇದೇ ವಿಷಯದ ಕುರಿತು ಈಗಾಗಲೇ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಿಚಾರಣೆ ಬಾಕಿ ಇರುವಾಗ, ಹೈಕೋರ್ಟ್‌ನಲ್ಲಿ ಮತ್ತೆ ಪ್ರತ್ಯೇಕ ವಿಚಾರಣೆ ಮಾಡುವ ಅಗತ್ಯವಿಲ್ಲ ಎಂದು ಹೇಳಿದೆ.

- Advertisement -

ನ್ಯಾಯಮೂರ್ತಿಗಳಾದ ರಾಜನ್ ರಾಯ್ ಮತ್ತು ಮಂಜಿವೆ ಶುಕ್ಲಾ ಅವರನ್ನೊಳಗೊಂಡ ನ್ಯಾಯಾಲಯದ ಲಕ್ನೋ ಪೀಠವು ಮೋಹಿತ್ ಅಶೋಕ್ ಸಲ್ಲಿಸಿದ ಪಿಐಎಲ್ ಅನ್ನು ವಿಲೇವಾರಿ ಮಾಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನ್ಯಾಯಕ್ಕಾಗಿ ಬಿಲ್ಕಿಸ್ ಬಾನೋ 22 ವರ್ಷಗಳ ಅಲೆದಾಟ: ಇಂದಿಗೂ...

2002ರ ಗುಜರಾತ್ ಗಲಭೆಯ ಕರಾಳ ನೆನಪುಗಳನ್ನು ಹೊತ್ತು, ತಮ್ಮವರನ್ನೆಲ್ಲಾ ಕಳೆದುಕೊಂಡು, ಅತ್ಯಾಚಾರದ ಘೋರ ಕ್ರೌರ್ಯಕ್ಕೆ ತುತ್ತಾದ ಬಿಲ್ಕಿಸ್ ಬಾನೋ ಬದುಕು ಇಂದಿಗೂ ನೆಮ್ಮದಿ ಕಂಡಿಲ್ಲ. ಇತ್ತೀಚೆಗೆ ಸುಪ್ರೀಂ ಕೋರ್ಟ್ ಇಬ್ಬರು ಅಪರಾಧಿಗಳ ಜೀವಾವಧಿ...

ಡಿಪಿಡಿಪಿ ಕಾಯ್ದೆ: ನಾಗರಿಕರ ಖಾಸಗಿತನದ ರಕ್ಷಣೆಯೋ, ಪತ್ರಿಕಾ ಸ್ವಾತಂತ್ರ್ಯದ...

ಡಿಪಿಡಿಪಿ ಕಾಯ್ದೆ ನಾಗರಿಕರ ಗೌಪ್ಯತೆಯನ್ನು ಕಾಪಾಡುವ ಭರವಸೆ ನೀಡುತ್ತಿದೆ. ಆದರೆ, ಇದೇ ಕಾಯ್ದೆಯು ಪತ್ರಕರ್ತರ ಮೂಲಭೂತ ಹಕ್ಕು ಮತ್ತು ತನಿಖಾ ಪತ್ರಿಕೋದ್ಯಮದ ಮೇಲೆ ಕರಿನೆರಳು ಬೀರಲಿದೆಯೇ? ಆರ್‌ಟಿಐ ದುರ್ಬಲಗೊಳ್ಳುತ್ತಿದೆಯೇ? ಒಂದೆಡೆ ವ್ಯಕ್ತಿಯ ಖಾಸಗಿತನದ...

ಉಳಿತಾಯದ ಪಾಠ ಹೇಳಿದ ಮೋದಿ: ಬೆಲೆ ಏರಿಕೆ, ನಿರುದ್ಯೋಗ;...

ಮಕ್ಕಳ ಶಿಕ್ಷಣ, ಮದುವೆ ಮತ್ತು ಮುಪ್ಪಿನ ಕಾಲಕ್ಕಾಗಿ ಹೊಟ್ಟೆಬಟ್ಟೆ ಕಟ್ಟಿ ಉಳಿತಾಯ ಮಾಡುವುದು ಭಾರತೀಯರ ಸಂಸ್ಕೃತಿಯಲ್ಲೇ ಬಂದಿದೆ. ಅವರಿಗೆ ಉಳಿತಾಯದ ಪಾಠ ಕಲಿಸುವ ಅಗತ್ಯವಿಲ್ಲ; ಬದಲಾಗಿ ಬಡತನದಿಂದ ಹೊರಬಂದ ಕುಟುಂಬಗಳು ಮತ್ತೆ ಸಂಕಷ್ಟಕ್ಕೆ...

ಇದನ್ನೂ ಓದಿ: ‘ಆಕಾಶ ಕಳಚಿ ಬೀಳುವುದಿಲ್ಲ’: ರಾಮಮಂದಿರ ನಿಧಿ ದುರ್ಬಳಕೆಯ ತುರ್ತು ವಿಚಾರಣೆಗೆ ಸುಪ್ರೀಂ ನಕಾರ

ರಾಮ ಮಂದಿರದಲ್ಲಿ ಭಕ್ತರು ನೀಡಿದ ದೇಣಿಗೆ ಮತ್ತು ಕಾಣಿಕೆಗಳ ದುರುಪಯೋಗದ ಬಗ್ಗೆ ಸ್ವತಂತ್ರ ತನಿಖೆ ನಡೆಸಬೇಕೆಂದು ಅರ್ಜಿದಾರರು ಕೋರಿದ್ದರು. ಭಾರತದ ಮಹಾಲೇಖಪಾಲರು ಮತ್ತು ಲೆಕ್ಕಪರಿಶೋಧಕರು (ಸಿಎಜಿ) ದೇವಾಲಯದ ಹಣಕಾಸಿನ ಲೆಕ್ಕಪರಿಶೋಧನೆಗೆ ನಿರ್ದೇಶನಗಳನ್ನು ನೀಡುವಂತೆಯೂ ಅರ್ಜಿಯಲ್ಲಿ ಕೋರಲಾಗಿತ್ತು.

ಆದರೆ ಈಗಾಗಲೇ ಇಂತಹ ಅರ್ಜಿ ಸುಪ್ರೀಂ ಕೋರ್ಟ್ ಮುಂದಿದೆ. ಆದ್ದರಿಂದ ಅಲಹಾಬಾದ್ ಹೈಕೋರ್ಟ್ ಅರ್ಜಿಯ ಅರ್ಹತೆಯನ್ನು ಪರಿಶೀಲಿಸಲು ನಿರಾಕರಿಸಿದ್ದು, ಪ್ರಕರಣವನ್ನು ವಿಲೇವಾರಿ ಮಾಡಿದೆ.

ಇನ್ನು ಇದಕ್ಕೂ ಮುನ್ನ, ಜೂನ್ 29ರಂದು ಅಯೋಧ್ಯೆಯ ರಾಮಮಂದಿರಕ್ಕಾಗಿ ‘ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್‌’ ಸಂಗ್ರಹಿಸಿದ್ದ ದೇಣಿಗೆಯಲ್ಲಿ ದುರ್ಬಳಕೆಯಾಗಿದೆ ಎಂಬ ಆರೋಪದ ಕುರಿತು ನ್ಯಾಯಸಮ್ಮತ ತನಿಖೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಯ ತುರ್ತು ವಿಚಾರಣೆಯನ್ನು ನಡೆಸಲು ಸುಪ್ರೀಂ ಕೋರ್ಟ್ ಸ್ಪಷ್ಟವಾಗಿ ನಿರಾಕರಿಸಿದೆ. ವಕೀಲರಾದ ಅಜಯ್ ಕುಮಾರ್ ರೈ ಮತ್ತು ದಿನೇಶ್ ಕುಮಾರ್ ಯಾದವ್ ಅವರು ಈ ಅರ್ಜಿಯನ್ನು ಸಲ್ಲಿಸಿದ್ದರು.

ನ್ಯಾಯಮೂರ್ತಿಗಳಾದ ಎಂ.ಎಂ. ಸುಂದರೇಶ್ ಮತ್ತು ಶೀಲ್ ನಾಗು ಅವರನ್ನೊಳಗೊಂಡ ಪೀಠವು ಈ ಅರ್ಜಿಯನ್ನು ಕೈಗೆತ್ತಿಕೊಂಡಿದ್ದು ತುರ್ತು ವಿಚಾರಣೆಗೆ ನಕಾರ ವ್ಯಕ್ತಪಡಿಸಿದ ನ್ಯಾಯಪೀಠವು, “ಈಗೇನು ಆಕಾಶ ಕಳಚಿ ಬೀಳುವುದಿಲ್ಲ… ಇದರಲ್ಲಿ ಅಂತಹ ತುರ್ತು ಏನಿದೆ?” ಎಂದು ಮೌಖಿಕವಾಗಿ ಪ್ರಶ್ನಿಸಿದೆ. ಅಲ್ಲದೆ, ಬೇಸಿಗೆ ರಜೆಯ ನಂತರ ಈ ವಿಷಯವನ್ನು ವಿಚಾರಣೆಗೆ ಪಟ್ಟಿ ಮಾಡಲಾಗುವುದು ಎಂದು ಹೇಳಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

10 ವರ್ಷಗಳಲ್ಲಿ ‘ಗ್ರೀನ್ ಇಂಡಿಯಾ ಮಿಷನ್’ ಸಂಪೂರ್ಣ ವಿಫಲ: ಕೆ ಸಿ ವೇಣುಗೋಪಾಲ್ ತೀವ್ರ ಅಸಮಾಧಾನ

ದೇಶದ ಜೈವಿಕ ಸಂಪನ್ಮೂಲಗಳು ಮತ್ತು ಅರಣ್ಯ ಪ್ರದೇಶವನ್ನು ಸಂರಕ್ಷಿಸುವ ಉದ್ದೇಶದಿಂದ ಜಾರಿಗೆ...

ವಿಶ್ವದ ‘ದಿ ಮುಸ್ಲಿಮ್-500’ ಪಟ್ಟಿಯಲ್ಲಿ ಮೊದಲಿಗರು ಯಾರು? ಭಾರತೀಯರು ಇದ್ದಾರಾ?

ವಿಶ್ವದ 500 ಅತ್ಯಂತ ಪ್ರಭಾವಿ ಮುಸ್ಲಿಮರ ಈ ಪಟ್ಟಿಯನ್ನು ‘ದಿ ಮುಸ್ಲಿಮ್...

ಚುನಾವಣೆ ಬಹಿಷ್ಕರಿಸುವುದಿಲ್ಲ, ವ್ಯವಸ್ಥೆಯಲ್ಲಿನ ಲೋಪಗಳನ್ನು ಜನರ ಮುಂದೆ ಬಯಲಿಗೆಳೆಯುತ್ತೇವೆ: ರಾಹುಲ್ ಗಾಂಧಿ

ಭಾರತದ ಚುನಾವಣಾ ವ್ಯವಸ್ಥೆಯಲ್ಲಿ ಗಂಭೀರ ಲೋಪದೋಷಗಳು ಮತ್ತು ಅಕ್ರಮಗಳು ನಡೆಯುತ್ತಿವೆ ಎಂಬ...

ಬೀದರ್‌ | ಲೇಖಕ ರವಿ ಹಂಜ್‌ ಭಾವಚಿತ್ರಕ್ಕೆ ಬೂಟಿನೇಟು, ʼಬಸವ ಮಂಟಪʼ ಕೃತಿ ನಿಷೇಧಕ್ಕೆ ಆಗ್ರಹ

ಕರ್ನಾಟಕದ ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣನವರ ಕುರಿತು ಆಕ್ಷೇಪಾರ್ಹ ಹೇಳಿಕೆ ನೀಡಿ...