ಯಾವುದೇ ದಾಖಲೆಗಳಿಲ್ಲ: ಮತಾಂತರಕ್ಕೆ ಯತ್ನಿಸಿದ ಆರೋಪ ಹೊತ್ತಿರುವ ಮುಸ್ಲಿಂ ಬಾಲಕಿಗೆ ಅಲಹಾಬಾದ್ ಹೈಕೋರ್ಟ್ ನಿರೀಕ್ಷಣಾ ಜಾಮೀನು

Date:

ತನ್ನ ಹಿಂದೂ ಸಹಪಾಠಿಯನ್ನು ಬಲವಂತವಾಗಿ ಮತಾಂತರಿಸಲು ಯತ್ನಿಸಿದ ಆರೋಪ ಹೊತ್ತಿರುವ ಮುಸ್ಲಿಂ ಬಾಲಕಿ ವಿರುದ್ಧ ಹೇಳಿಕೆ ಬಿಟ್ಟು ಬೇರೆ ಯಾವುದೇ ದಾಖಲೆಗಳಿಲ್ಲ ಎಂದು ಹೇಳಿಕೆಯು ಅಲಹಾಬಾದ್ ಹೈಕೋರ್ಟ್ ಬಾಲಕಿಗೆ ನಿರೀಕ್ಷಣಾ ಜಾಮೀನು ನೀಡಿದೆ.

- Advertisement -

ಮುಸ್ಲಿಂ ಬಾಲಕಿಯರ ಗುಂಪೊಂದು ಅದೇ ಬೋಧನಾ ಕೇಂದ್ರದಲ್ಲಿ ವ್ಯಾಸಂಗ ಮಾಡಿದ ಹಿಂದೂ ಹುಡುಗಿಯ ಮೇಲೆ ತಮ್ಮ ಧಾರ್ಮಿಕ ನಂಬಿಕೆಗಳನ್ನು ಬಲವಂತವಾಗಿ ಹೇರಲು ಯತ್ನಿಸಿದೆ ಎಂದು ಬಾಲಕಿಯ ಸಹೋದರ ದೂರು ನೀಡಿದ್ದಾನೆ. ತಮ್ಮ ಸಹೋದರಿಯನ್ನು ಆರೋಪಿಗಳು ಬುರ್ಖಾ ಧರಿಸುವಂತೆ ಒತ್ತಾಯಿಸಿದ್ದಾರೆ. ಇಸ್ಲಾಂ ಧರ್ಮವನ್ನು ಸ್ವೀಕರಿಸುವಂತೆ ಒತ್ತಾಯಿಸುತ್ತಿದ್ದಾರೆ ಎಂದು ಒತ್ತಾಯಿಸಿದ್ದಾರೆ ಎಂದು ಹೇಳಿದ್ದಾನೆ. ಈ ಸಂಬಂಧ 2025ರ ಡಿಸೆಂಬರ್‌ನಲ್ಲಿ ತನ್ನ ಸಹೋದರಿಯಿಂದ ಹೇಳಿಕೆ ನೀಡಿಸಿದ್ದಾನೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

History Repeats | ರೋಮ್‌ ಉರಿಯುತ್ತಿದ್ದಾಗ ಪಿಟೀಲು ನುಡಿಸಿದ...

ದೇಶದ ಪ್ರಜಾಪ್ರಭುತ್ವದ ಆಧಾರಸ್ತಂಭಗಳು ಒಂದೊಂದಾಗಿ ಕುಸಿಯುತ್ತಾ, ಚುನಾವಣಾ ವ್ಯವಸ್ಥೆಯೇ ಅಕ್ರಮ ಎಸಗುತ್ತಿರುವಾಗ, ನಿರುದ್ಯೋಗ-ಬೆಲೆ ಏರಿಕೆಯ ಭಾರದಿಂದ ಜನ ಹೈರಾಣಾಗಿರುವಾಗ ಭಾರತದ ಪ್ರಧಾನಿ ಭಜನೆ ಮಾಡುತ್ತಿದ್ದಾರೆ. ರೋಂ ಹೊತ್ತಿ ಉರಿಯುತ್ತಿದ್ದಾಗ ನೀರೋ ಪಿಟೀಲು...

ಅಪರಾಧಿಗಳ ಪರ ಬಿ ಸಿ ರೋಡ್ ಚಲೋ: ಎಂದಿನಂತೆ...

ಕೊಲೆಯಂತಹ ಗಂಭೀರ ಅಪರಾಧ ಎಸಗಿದ ಆರೋಪ ಹೊತ್ತವರ ಪರವಾಗಿ ಸಂಘಪರಿವಾರ ಬೀದಿಗಿಳಿಯುತ್ತಿರುವುದು ಇದೇ ಮೊದಲೇನಲ್ಲ. ಕರಾವಳಿಯ ಜನತೆ ಇಂತಹ ಪ್ರಚೋದನಾತ್ಮಕ ನಡೆಗಳನ್ನು ತಿರಸ್ಕರಿಸಿ, ಸತ್ಯ ಮತ್ತು ನ್ಯಾಯದ ಪರವಾಗಿ ನಿಲ್ಲಬೇಕಾಗಿದೆ. ಕರಾವಳಿ ಕರ್ನಾಟಕವಾಗಲಿ...

ಇದನ್ನು ಓದಿದ್ದೀರಾ? ಕ್ರೈಸ್ತ ಧರ್ಮಕ್ಕೆ ದಲಿತರ ಮತಾಂತರ: ಕೇರಳದ ದಂಪತಿಗೆ 5 ವರ್ಷ ಜೈಲು ಶಿಕ್ಷೆ

ಈ ಸಂಬಂಧ ಮುಸ್ಲಿಂ ಬಾಲಕಿಯರು ತಮ್ಮ ವಿರುದ್ಧ ದಾಖಲಾಗಿರುವ ಮತಾಂತರ ವಿರೋಧಿ ಪ್ರಕರಣವನ್ನು ರದ್ದುಗೊಳಿಸುವಂತೆ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಈ ಅರ್ಜಿ ವಿಚಾರಣೆ ನಡೆಸಿದ್ ಹೈಕೋರ್ಟ್‌ನ ನ್ಯಾಯಮೂರ್ತಿ ಅವ್ನಿಶ್ ಸಕ್ಸೇನಾ, ಆರೋಪಿ ಬಾಲಕಿ ವಿರುದ್ಧ ಯಾವುದೇ ಕ್ರಿಮಿನಲ್ ಪ್ರಕರಣಗಳಿಲ್ಲ. ಯಾವುದೇ ದಾಖಲೆಗಳಿಲ್ಲ ಎಂದು ಹೇಳಿದ್ದಾರೆ.

ಇನ್ನು ದೂರುದಾರನು ಮುಸ್ಲಿಂ ಬಾಲಕಿಯರಲ್ಲಿ ಒಬ್ಬಳಿಗೆ ಕಿರುಕುಳ ನೀಡುತ್ತಿದ್ದ, ಆಕೆ ದೂರು ನೀಡಿದಾಗ ಮತಾಂತರದ ಆರೋಪವನ್ನು ಮಾಡಿದ್ದಾನೆ ಎಂದು ಅರ್ಜಿದಾರರು ತಿಳಿಸಿದ್ದಾರೆ.

ಪ್ರಕರಣವನ್ನು ರದ್ದುಗೊಳಿಸುವಂತೆ ಮೂವರು ವಿದ್ಯಾರ್ಥಿಗಳು ನ್ಯಾಯಾಲಯದ ಮೆಟ್ಟಿಲೇರಿದ್ದರೂ, ಆ ಪೈಕಿ ಒಬ್ಬರು ಅರ್ಜಿ ಹಿಂಪಡೆದಿದ್ದಾರೆ. ಏಪ್ರಿಲ್ 16ರಂದು ಹೈಕೋರ್ಟ್ ಕ್ರಿಮಿನಲ್ ಪ್ರಕರಣವನ್ನು ರದ್ದುಗೊಳಿಸಲು ನಿರಾಕರಿಸಿದೆ.

ವಕೀಲ ಜೈದೀಪ್ ಪಾಂಡೆ ಆರೋಪಿ ಬಾಲಕಿ ಪರವಾಗಿ, ವಕೀಲ ಚಂದ್ರ ವಿಜಯ್ ಸಿಂಗ್ ದೂರುದಾರರ ಪರವಾಗಿ ವಕೀಲ ಪಂಕಜ್ ಸಕ್ಸೇನಾ ಅವರು ರಾಜ್ಯದ ಪರವಾಗಿ ವಾದಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಏಕಪಕ್ಷೀಯ ನಿರ್ಧಾರ ವಿವಾದದ ಬೆನ್ನಲ್ಲೇ ಸಭೆ: ಸರ್ವಮತದಿಂದ ತೀಮಾರ್ನಗಳ ತಗೆದುಕೊಂಡಿದ್ದು ಎಂದ ಇಸಿಐ

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಹಾಗೂ ಚುನಾವಣಾ ಆಯುಕ್ತರಾದ...

ಮಂಗಳೂರು | ಕಾರಿಡಾರ್‌ ಗೋಡೆ ಕುಸಿದು ಐವರು ವಿದ್ಯಾರ್ಥಿಗಳಿಗೆ ಗಾಯ, ಓರ್ವ ಗಂಭೀರ

ಮಂಗಳೂರಿನ ಪಾಂಡೇಶ್ವರ ಸಮೀಪದ ಎಮ್ಮೆಕೆರೆ ಕ್ರಾಸ್ ಬಳಿಯ ರಾಮಲಕ್ಷ್ಮೀ ಹಾಲ್ ಸಭಾಭವನದಲ್ಲಿ...

ಸಿಇಸಿ ಗ್ಯಾನೇಶ್ ಕುಮಾರ್ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು: ಜನವಾದಿ ಮಹಿಳಾ ಸಂಘಟನೆ ಆಗ್ರಹ

ದೇಶದ ಚುನಾವಣಾ ಪ್ರಜಾಪ್ರಭುತ್ವದ ಮೇಲಿನ ಸಾರ್ವಜನಿಕ ವಿಶ್ವಾಸವನ್ನು ಪುನಃಸ್ಥಾಪಿಸಲು ಮುಖ್ಯ ಚುನಾವಣಾ...

ಕಲೆ ಉಳಿಯಲಿ, ಕೌಶಲ್ಯ ಬೆಳೆಯಲಿ: ಕರ್ನಾಟಕ ಪರ್ವ 2026ಕ್ಕೆ ಡಿ.ಕೆ ಶಿವಕುಮಾರ್ ಚಾಲನೆ

ಬೆಂಗಳೂರಿನ ಅರಮನೆ ಮೈದಾನದಲ್ಲಿ ಶನಿವಾರ ವೈವಿಧ್ಯತೆಯಲ್ಲಿ ಏಕತೆ, ಕೌಶಲ್ಯದಲ್ಲಿ ಸ್ವಾವಲಂಬನೆ ಎಂಬ...