ಯತಿ ನರಸಿಂಗಾನಂದ ಪ್ರಕರಣ: ಪತ್ರಕರ್ತ ಝುಬೇರ್ ಬಂಧಿಸದಂತೆ ಅಲಹಾಬಾದ್ ಹೈಕೋರ್ಟಿನಿಂದ ರಕ್ಷಣೆ

Date:

Advertisements

ದ್ವೇಷ ಭಾಷಣಗೈದಿದ್ದ ಉತ್ತರ ಪ್ರದೇಶದ ಯತಿ ನರಸಿಂಗಾನಂದ ಬೆಂಬಲಿಗರು ದಾಖಲಿಸಿದ್ದ ಪ್ರಕರಣದಲ್ಲಿ ಆಲ್ಟ್‌ ನ್ಯೂಸ್‌ನ ಪತ್ರಕರ್ತ ಮೊಹಮ್ಮದ್ ಝುಬೇರ್ ಅವರನ್ನು ಬಂಧಿಸದಂತೆ ಅಲಹಾಬಾದ್ ಹೈಕೋರ್ಟ್ ಮಧ್ಯಂತರ ರಕ್ಷಣೆ ನೀಡಿ, ಶುಕ್ರವಾರ ಆದೇಶ ಹೊರಡಿಸಿದೆ.

ನ್ಯಾಯಮೂರ್ತಿ ಸಿದ್ಧಾರ್ಥ ವರ್ಮಾ ಮತ್ತು ನ್ಯಾಯಮೂರ್ತಿ ನಳಿನ್ ಶ್ರೀವಾಸ್ತವ ಅವರ ನ್ಯಾಯಪೀಠವು ಈ ಪ್ರಕರಣದಲ್ಲಿ ಬಂಧನದಿಂದ ರಕ್ಷಣೆ ಕೋರಿ ಜುಬೈರ್ ಸಲ್ಲಿಸಿದ ಮನವಿಗೆ ವಿವರವಾದ ಪ್ರತಿಕ್ರಿಯೆಯನ್ನು ಸಲ್ಲಿಸುವಂತೆ ಯೋಗಿ ಸರ್ಕಾರಕ್ಕೆ ಇದೇ ವೇಳೆ ನಿರ್ದೇಶನ ನೀಡಿದೆ. 2025ರ ಜನವರಿ 6ರವರೆಗೆ ಜುಬೈರ್ ವಿರುದ್ಧ ಯಾವುದೇ ಕ್ರಮ ಕೈಗೊಳ್ಳಬಾರದು ಎಂದು ನ್ಯಾಯಪೀಠ ಹೇಳಿದೆ.

ನರಸಿಂಗಾನಂದ್ ಕುರಿತು ಎಕ್ಸ್‌ನಲ್ಲಿ ಪೋಸ್ಟ್ ಮಾಡುವ ಮೂಲಕ ಧಾರ್ಮಿಕ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸಿದ ಆರೋಪದ ಮೇಲೆ ಜುಬೇರ್ ವಿರುದ್ಧ ಅಕ್ಟೋಬರ್ 7 ರಂದು ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

Advertisements

ಉತ್ತರ ಪ್ರದೇಶದ ಗಾಝಿಯಾಬಾದ್‌ನಲ್ಲಿರುವ ದಾಸ್ನಾ ದೇವಿ ದೇವಸ್ಥಾನದ ಅರ್ಚಕರಾಗಿರುವ ನರಸಿಂಗಾನಂದ್ ಅವರು ಸೆಪ್ಟೆಂಬರ್ 29 ರಂದು ಧರ್ಮೋಪದೇಶದ ಸಂದರ್ಭದಲ್ಲಿ ಪ್ರವಾದಿ ಮುಹಮ್ಮದ್ ಅವರ ಬಗ್ಗೆ ಅವಹೇಳನಕಾರಿ ಕಾಮೆಂಟ್ ಮಾಡಿದ್ದಾರೆ ಎಂದು ವರದಿಯಾಗಿದೆ. ಇದನ್ನು ವಿರೋಧಿಸಿ ದೇಶದ ಹಲವಾರು ನಗರಗಳಲ್ಲಿ ಮುಸ್ಲಿಮರು ಪ್ರತಿಭಟನೆ ನಡೆಸಿದ್ದರು.

ಅಕ್ಟೋಬರ್ 3 ರಂದು, ಜುಬೈರ್ ಅವರು ಎಕ್ಸ್‌ನಲ್ಲಿ ಅವರ ಭಾಷಣದ ವೀಡಿಯೊವನ್ನು ಹಂಚಿಕೊಂಡಿದ್ದರು ಮತ್ತು ಅವರ ವಿರುದ್ಧ ಕಾನೂನು ಕ್ರಮಕ್ಕೆ ಒತ್ತಾಯಿಸಿದ್ದರು. ನರಸಿಂಗಾನಂದ್ ಅವರು ಈ ಹಿಂದೆ ಕೂಡಾ ಮುಸ್ಲಿಮರನ್ನು ಗುರಿಯಾಗಿಸಿಕೊಂಡು ದ್ವೇಷಪೂರಿತ ಭಾಷಣ ಮಾಡಿದ್ದನ್ನು ಉಲ್ಲೇಖಿಸಿದ್ದರಿಂದ ಯತಿ ನರಸಿಂಗಾನಂದ ಬೆಂಬಲಿಗರು ಕೂಡ ಪತ್ರಕರ್ತ ಝುಬೇರ್ ವಿರುದ್ಧ ಕೂಡ ಎಫ್‌ಐಆರ್‌ ದಾಖಲಿಸಿದ್ದರು.

ಜುಬೇರ್ ವಿರುದ್ಧ ಎಫ್‌ಐಆರ್ ದಾಖಲಾದ ನಂತರ, ಅವರು ಬಂಧನದಿಂದ ರಕ್ಷಣೆ ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಕಳೆದ ಬುಧವಾರ ವಿಚಾರಣೆ ನಡೆಸಿದ್ದ ನ್ಯಾಯಾಲಯವು, ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 152 ರ ಅಡಿಯಲ್ಲಿ ಭಾರತದ ಸಾರ್ವಭೌಮತೆ, ಏಕತೆ ಮತ್ತು ಸಮಗ್ರತೆಗೆ ಅಪಾಯವನ್ನುಂಟುಮಾಡುವ ಅಪರಾಧಕ್ಕಾಗಿ ಜುಬೇರ್ ವಿರುದ್ಧದ ಪ್ರಕರಣದ ಬಗ್ಗೆ ಉತ್ತರ ಪ್ರದೇಶ ಸರ್ಕಾರದ ಪ್ರತಿಕ್ರಿಯೆಯನ್ನು ಕೇಳಿತ್ತು. ಬಳಿಕ ಶುಕ್ರವಾರ (ಡಿಸೆಂಬರ್ 20) ಹೆಚ್ಚಿನ ವಿಚಾರಣೆಗೆ ಪಟ್ಟಿ ಮಾಡಿತ್ತು.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಸಿ ಟಿ ರವಿಯಂಥವರಿಗೆ ಮಹಿಳೆಯರನ್ನು ಅಪಮಾನಿಸೋದು ಮನುವಾದಿ ವ್ಯಸನ

ಇಂದು ವಿಚಾರಣೆ ನಡೆಸಿದ ಅಲಹಾಬಾದ್ ಹೈಕೋರ್ಟಿನ ನ್ಯಾಯಮೂರ್ತಿ ಸಿದ್ಧಾರ್ಥ ವರ್ಮಾ ಮತ್ತು ನ್ಯಾಯಮೂರ್ತಿ ನಳಿನ್ ಶ್ರೀವಾಸ್ತವ ಅವರ ನ್ಯಾಯಪೀಠವು, ಆಲ್ಟ್‌ ನ್ಯೂಸ್‌ನ ಪತ್ರಕರ್ತ ಮೊಹಮ್ಮದ್ ಝುಬೇರ್ ಅವರನ್ನು ಬಂಧಿಸದಂತೆ ಮಧ್ಯಂತರ ರಕ್ಷಣೆ ನೀಡಿ, ಶುಕ್ರವಾರ ಆದೇಶ ಹೊರಡಿಸಿದ್ದಾರೆ.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X