ಪತ್ರಕರ್ತ ಜುಬೈರ್ ವಿರುದ್ಧ ಸುಳ್ಳು ಸುದ್ದಿ ಆರೋಪ; ʼಕನ್ನಡಪ್ರಭʼ ವೆಬ್‌ಗೆ ಕಾನೂನು ಕ್ರಮದ ಎಚ್ಚರಿಕೆ

Date:

ಆಲ್ಟ್ ನ್ಯೂಸ್ (Alt News) ಸಹಸಂಸ್ಥಾಪಕ, ಪತ್ರಕರ್ತ ಮೊಹಮ್ಮದ್ ಜುಬೈರ್ ಅವರ ಮೇಲೆ ಬೆಂಗಳೂರಿನ ನಮ್ಮ ಮೆಟ್ರೋದಲ್ಲಿ ಹಲ್ಲೆ ನಡೆದಿದೆ ಎಂಬ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಈ ಕುರಿತು ಕನ್ನಡಪ್ರಭ ಪ್ರಕಟಿಸಿದ ವರದಿಗೆ ಜುಬೈರ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ವರದಿಯನ್ನು ಸುಳ್ಳು ಸುದ್ದಿ ಎಂದು ಆರೋಪಿಸಿರುವ ಅವರು, ಅದನ್ನು ಹಿಂಪಡೆಯದಿದ್ದರೆ ಕಾನೂನು ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದ್ದಾರೆ.

- Advertisement -

ಕನ್ನಡಪ್ರಭ ಎಕ್ಷ್‌ನಲ್ಲಿ ʼಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸಂಸ್ಥಾಪಕ ಮೊಹಮ್ಮದ್‌ ಜುಬೈರ್‌ಗೆ ಹಿಗ್ಗಾಮುಗ್ಗ ಥಳಿತ?” ಹೆಸರಿನಲ್ಲಿ ಪೋಸ್ಟ್‌ ಒಂದನ್ನು ಹಂಚಿಕೊಂಡಿತ್ತು. ಜತೆಗೆ ವಿಡಿಯೋ ಲಿಂಕ್‌ ಶೇರ್‌ ಮಾಡಲಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಇದು ಕೇವಲ ಒಂದು ಪಕ್ಷದ ಹೋರಾಟವಲ್ಲ, ವ್ಯವಸ್ಥೆಯ ಮೇಲಿನ...

ಜೆಪಿಯ ಟೀಕೆಗಳು ತೀಕ್ಷ್ಣವಾಗಿದ್ದರೂ, ಅದು ಅಹಿಂಸಾತ್ಮಕವಾಗಿದೆ. ಹೆದ್ದಾರಿ ತಡೆಗಳಿಲ್ಲ, ಬಲವಂತದ ಬಂದ್‌ಗಳಿಲ್ಲ. ವಾಸ್ತವವಾಗಿ, ಶಾಂತಿಯುತ ಸಭೆಗೆ ಜಾಗ ನೀಡದೆ ಸರ್ಕಾರವೇ ಅಡೆತಡೆಗಳನ್ನು ಸೃಷ್ಟಿಸುತ್ತಿದೆ. ಈ ಉದ್ದೇಶವನ್ನು ಬೆಂಬಲಿಸುವ ಜನರು ಹೆಚ್ಚಿನ ಸಂಖ್ಯೆಯಲ್ಲಿ ಬೀದಿಗೆ...

ನೊಬೆಲ್‌ ಪ್ರಶಸ್ತಿ ಸರಣಿ | ಭಾರತೀಯ ಮೂಲದ ದಕ್ಷಿಣ...

ಈ ಬಾರಿಯ ಶಾಂತಿ ನೊಬೆಲ್‌ ಪ್ರಶಸ್ತಿಯನ್ನು ಶಾಂತಿ ಮತ್ತು ಅಂತಾರಾಷ್ಟ್ರೀಯ ಕಾನೂನನ್ನು ಉತ್ತೇಜಿಸುವ ನಿಟ್ಟಿನಲ್ಲಿ ನಡೆಸಿದ ಪ್ರಯತ್ನಗಳಿಗಾಗಿ, ಮಾನವ ಹಕ್ಕುಗಳ ರಕ್ಷಣೆಗಾಗಿ ಜೀವನವನ್ನೇ ಮುಡಿಪಾಗಿಟ್ಟ ಭಾರತೀಯ ಮೂಲದ ದಕ್ಷಿಣ ಆಫ್ರಿಕಾದ ಡಾ. ನವನೀತಮ್‌...

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕನ್ನಡಪ್ರಭದ ವರದಿಗೆ ಪ್ರತಿಕ್ರಿಯಿಸಿರುವ ಮೊಹಮ್ಮದ್ ಜುಬೈರ್, ತಮ್ಮ ವಿರುದ್ಧ ಸುಳ್ಳು ಸುದ್ದಿ ಹರಡಲಾಗುತ್ತಿದೆ ಎಂದು ಆರೋಪಿಸಿದ್ದಾರೆ. ಕನ್ನಡಪ್ರಭದ ಎಕ್ಸ್ ಖಾತೆಯನ್ನು ಉಲ್ಲೇಖಿಸಿ, ವರದಿಯನ್ನು ತೆಗೆದುಹಾಕದಿದ್ದರೆ ಕಾನೂನು ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದ್ದಾರೆ.

ಜುಬೈರ್ ಅವರ ಪೋಸ್ಟ್‌ನಲ್ಲಿ, “This Kannada Channel @KannadaPrabha owned by @RajeevRC_X is running Fake News against me. If you don’t take down your fake News. I’ll take legal action against” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಸಂಸತ್‌ನಲ್ಲಿ ಮಹಿಳಾ ಮಾರ್ದನಿ: ಬೆದರಿಸುವುದು, ಕಡೆಗಣಿಸುವುದು ಇನ್ನು ಸಾಧ್ಯವಿಲ್ಲ!

ಸದ್ಯ ಲಭ್ಯವಿರುವ ವರದಿಯ ಪ್ರಕಾರ, ಮೆಟ್ರೋದಲ್ಲಿ ಹಲ್ಲೆ ನಡೆದಿದೆ ಎನ್ನಲಾದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಆದರೆ, ಘಟನೆಯ ಕುರಿತು ಅಧಿಕೃತ ದೃಢೀಕರಣ ಲಭ್ಯವಿಲ್ಲ. ಕನ್ನಡಪ್ರಭ ಪ್ರಕಟಿಸಿದ್ದ ಸುದ್ದಿಯೂ ಈಗ ಅದರ ಅಧಿಕೃತ ವೆಬ್‌ಸೈಟ್‌ನಲ್ಲಿ ಲಭ್ಯವಿಲ್ಲ.

image 208

ಸ್ವತಃ ತಾವೇ ‘ಫ್ಯಾಕ್ಟ್ ಚೆಕರ್’ (Fact-checker) ಆಗಿ ಕಾರ್ಯನಿರ್ವಹಿಸುತ್ತಿರುವ ಮೊಹಮ್ಮದ್ ಜುಬೈರ್ ಅವರ ಹೆಸರಿನಲ್ಲೇ ಇಂತಹ ಅಪಪ್ರಚಾರ ಅಥವಾ ಪರಿಶೀಲಿಸದ ವಿಡಿಯೋಗಳು ವೈರಲ್ ಆಗಿರುವುದು ಭಾರಿ ಚರ್ಚೆಗೆ ಕಾರಣವಾಗಿದೆ. ಅಧಿಕೃತ ದೃಢೀಕರಣವಿಲ್ಲದೆ ಸುದ್ದಿ ಪ್ರಸಾರ ಮಾಡುವುದರ ಪರಿಣಾಮವನ್ನು ಇದು ತೋರಿಸುತ್ತಿದೆ. ಇಂದಿನ ಸಾಮಾಜಿಕ ಜಾಲತಾಣಗಳ ಯುಗದಲ್ಲಿ ‘ಕ್ಲಿಕ್‌ಬೈಟ್’ (Clickbait) ಅಥವಾ ಶೀಘ್ರವಾಗಿ ಸುದ್ದಿಯನ್ನು ತಲುಪಿಸುವ ಭರಾಟೆಯಲ್ಲಿ ಮೌಲ್ಯಮಾಪನ ಮತ್ತು ಖಚಿತತೆ ಇಲ್ಲದೆ ವರದಿ ಮಾಡುವುದು ಮಾಧ್ಯಮಗಳ ವಿಶ್ವಾಸಾರ್ಹತೆಗೆ ದೊಡ್ಡ ಸವಾಲಾಗಿ ಪರಿಣಮಿಸುತ್ತಿದೆ ಎಂಬುದಕ್ಕೆ ಈ ಘಟನೆ ಒಂದು ಉದಾಹರಣೆಯಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಜೆಪಿ ಪ್ರತಿಭಟನೆ| ದೆಹಲಿಯಲ್ಲಿ ವಿಮಾನದೊಳಗೇ ದೀಪ್ಕೆ, ದಾಸ್, ರಾಂಕಾ ಬಂಧನ

ಮುಖ್ಯ ಚುನಾವಣಾ ಆಯುಕ್ತ (CEC) ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ...

ಸಿಜೆಪಿ ಪ್ರತಿಭಟನೆಗೆ ಎಡಪಕ್ಷಗಳು, ಎಎಪಿ ಬೆಂಬಲ; ದೂರ ಉಳಿದ ಕಾಂಗ್ರೆಸ್

ಮುಖ್ಯ ಚುನಾವಣಾ ಆಯುಕ್ತ (CEC) ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ, ಎಸ್‌ಐಆರ್‌...

ಸಿಜೆಪಿ ಪ್ರತಿಭಟನೆ: ಖ್ಯಾತ ಯೂಟ್ಯೂಬರ್ ಧೃವ್ ರಾಠಿ ಬಂಧನ

ದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ನಡೆಸುತ್ತಿರುವ ಬೃಹತ್ ಪ್ರತಿಭಟನೆಯಲ್ಲಿ ಭಾಗಿಯಾಗಲು ಬಂದಿದ್ದ...

ಇದು ಕೇವಲ ಒಂದು ಪಕ್ಷದ ಹೋರಾಟವಲ್ಲ, ವ್ಯವಸ್ಥೆಯ ಮೇಲಿನ ನಂಬಿಕೆಯ ಬಿಕ್ಕಟ್ಟು

ಜೆಪಿಯ ಟೀಕೆಗಳು ತೀಕ್ಷ್ಣವಾಗಿದ್ದರೂ, ಅದು ಅಹಿಂಸಾತ್ಮಕವಾಗಿದೆ. ಹೆದ್ದಾರಿ ತಡೆಗಳಿಲ್ಲ, ಬಲವಂತದ ಬಂದ್‌ಗಳಿಲ್ಲ....