ಪ್ರಧಾನಿ ಮೋದಿ ವಿರುದ್ಧ ನಿಂದನೆ ಆರೋಪ: ಸಾಕ್ಷ್ಯವಿಲ್ಲವೆಂದು ಪ್ರಕರಣ ರದ್ದುಗೊಳಿಸಿದ ಹೈಕೋರ್ಟ್

Date:

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ನಿಂದನಾತ್ಮಕ ಪದಗಳನ್ನು ಬಳಸಿದ್ದಾರೆ ಎಂಬ ಆರೋಪದ ಮೇಲೆ ಅಂಗಡಿಕಾರರೊಬ್ಬರ ವಿರುದ್ಧ ದಾಖಲಾಗಿದ್ದ ಕ್ರಿಮಿನಲ್ ಮೊಕದ್ದಮೆಯನ್ನು ಕರ್ನಾಟಕ ಹೈಕೋರ್ಟ್ ರದ್ದುಗೊಳಿಸಿದೆ. ಯಾವುದೇ ನಿರ್ದಿಷ್ಟ ಸಾಕ್ಷ್ಯಗಳು ಅಥವಾ ಆರೋಪಗಳು ಕಂಡುಬಂದಿಲ್ಲ ಎಂದು ಹೈಕೋರ್ಟ್ ಹೇಳಿದೆ.

- Advertisement -

ಅಂಗಡಿಕಾರ ಇಮ್ತಿಯಾಝ್ ನೂರುದ್ದೀನ್ ಚಿಂಚಲಿ ಎಂಬುವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ವೆಂಕಟೇಶ್ ನಾಯಕ್ ಟಿ. ಅವರಿದ್ದ ಪೀಠವು ಈ ಆದೇಶ ನೀಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಚುನಾವಣಾ ಆಯುಕ್ತರ ನೇಮಕ, ವಜಾ ಹೇಗೆ? ಈ ಹಿಂದೆ...

ಚುನಾವಣೆಯನ್ನು ನ್ಯಾಯಸಮ್ಮತವಾಗಿ ನಡೆಸಬೇಕಾದ ಚುನಾವಣಾ ಆಯೋಗ, ಚುನಾವಣಾ ಆಯುಕ್ತರು ಸರ್ಕಾರದ ಪ್ರಭಾವದಿಂದ ಮುಕ್ತವಾಗಿರಬೇಕು. ಆದರೆ ಚುನಾವಣೆ ಸ್ಪರ್ಧಿಸುವ ಆಡಳಿತ ಪಕ್ಷವೇ ತನಗೆ ಇಷ್ಟವಾದ ವ್ಯಕ್ತಿಯನ್ನು ಚುನಾವಣಾ ಅಧಿಕಾರಿಯಾಗಿ ನೇಮಕ ಮಾಡಿಕೊಂಡರೆ, ವಿರೋಧ ಪಕ್ಷಗಳಿಗೆ...

ರಾಹುಲ್‌ ಗಾಂಧಿ ಲಿಸ್ಟ್‌ನಲ್ಲಿರುವ ʼಸಂವಿಧಾನದ ವಿಧ್ವಂಸಕರುʼ ಇವರೇನಾ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ವಿಚಾರದಲ್ಲಿ ಚುನಾವಣಾ ಆಯೋಗದ ವಿರುದ್ಧ ಎದ್ದಿರುವ ಅನುಮಾನಗಳಿಂದ ರಾಜಕೀಯ ಸಂಘರ್ಷ ಮತ್ತಷ್ಟು ತೀವ್ರಗೊಂಡಿದೆ. ಈ ಬೆನ್ನಲ್ಲೇ, ಕಾಂಗ್ರೆಸ್‌ ನಾಯಕ ಹಾಗೂ ಲೋಕಸಭೆ ವಿರೋಧ ಪಕ್ಷದ...

ತೆಲಂಗಾಣ ಬೆಳೆ ರಕ್ಷಣೆಗೆ 3 ಟಿಎಂಸಿ ನೀರು: ಅಚ್ಚುಕಟ್ಟು...

ಕೃಷ್ಣಾ ನದಿಯ ನೀರು ಮತ್ತೊಮ್ಮೆ ಕರ್ನಾಟಕ–ತೆಲಂಗಾಣದ ನಡುವಿನ ಪ್ರಮುಖ ವಿಚಾರವಾಗಿ ಮುನ್ನೆಲೆಗೆ ಬಂದಿದೆ. ತೆಲಂಗಾಣದ ಕೃಷಿ ಪ್ರದೇಶದಲ್ಲಿನ ನಿಂತಿರುವ ಬೆಳೆಗಳನ್ನು ರಕ್ಷಿಸಲು ಕರ್ನಾಟಕದಿಂದ ಕೃಷ್ಣಾ ನೀರು ಬಿಡುಗಡೆ ಮಾಡುವಂತೆ ಆ ರಾಜ್ಯದ ಸಚಿವರು...

ಇದನ್ನೂ ಓದಿ: ವಿಮಾನ ದುರಂತ | ಘಟನಾ ಸ್ಥಳಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ

ಅರ್ಜಿದಾರರು ಪ್ರಧಾನಮಂತ್ರಿಯವರ ವಿರುದ್ಧ ನಿಂದನಾತ್ಮಕ ಮಾತುಗಳನ್ನು ಆಡಿದ್ದಾರೆ ಎಂದು ದೂರಲಾಗಿತ್ತು. ಆದರೆ, ಈ ಆರೋಪಗಳು ಅತ್ಯಂತ ಸಾಮಾನ್ಯ ಸ್ವರೂಪದಾಗಿದ್ದು, ದೂರುದಾರರನ್ನು ಪ್ರಚೋದಿಸುವ ಅಥವಾ ಸಾರ್ವಜನಿಕ ಶಾಂತಿಗೆ ಭಂಗ ತರುವ ಉದ್ದೇಶದಿಂದಲೇ ನಿಂದಿಸಲಾಗಿದೆ ಎಂಬುದಕ್ಕೆ ಯಾವುದೇ ನಿರ್ದಿಷ್ಟ ಸಾಕ್ಷ್ಯಗಳು ಅಥವಾ ಆರೋಪಗಳು ಕಂಡುಬಂದಿಲ್ಲ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ.

ಇಂತಹ ಅಪೂರ್ಣ ಹಾಗೂ ಆಧಾರರಹಿತ ಆರೋಪಗಳ ಆಧಾರದ ಮೇಲೆ ಕಾನೂನು ಪ್ರಕ್ರಿಯೆಯನ್ನು ಮುಂದುವರಿಸುವುದು ‘ಕಾನೂನು ದುರುಪಯೋಗಕ್ಕೆ’ ದಾರಿಯಾಗುತ್ತದೆ ಎಂದು ಅಭಿಪ್ರಾಯಪಟ್ಟ ಹೈಕೋರ್ಟ್, ಅರ್ಜಿದಾರರ ವಿರುದ್ಧದ ಎಲ್ಲಾ ಕ್ರಿಮಿನಲ್ ನಡಾವಳಿಗಳನ್ನು ವಜಾಗೊಳಿಸಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸೌಜನ್ಯ ಪ್ರಕರಣ ಮರುತನಿಖೆ | SIT ಪುನರ್‌ ರಚಿಸುವಂತೆ ಕೊಂದವರು ಯಾರು? ಆಂದೋಲನ ಒತ್ತಾಯ

ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆಗಾಗಿ ರಚಿಸಲಾಗಿರುವ ವಿಶೇಷ...

‘ವೀರಮಣಿ ಅತ್ಯಾಚಾರ ಪ್ರಕರಣ ಮುಚ್ಚುವುದರ ಹಿಂದೆ ಯಾವ ಒಪ್ಪಂದವಿತ್ತು’?; ಡಿಎಂಕೆ ವಿರುದ್ಧ ಸಿಎಂ ವಿಜಯ್‌ ವಾಗ್ದಾಳಿ

ಅಪ್ರಾಪ್ತ ಬಾಲಕಿಯರ ಮೇಲಿನ ಲೈಂಗಿಕ ದೌರ್ಜನ್ಯ ಆರೋಪಕ್ಕೆ ಸಂಬಂಧಿಸಿದ ತಮಿಳುನಾಡಿನ ಆರ್‌....

ರಾಹುಲ್‌ ಗಾಂಧಿ ಲಿಸ್ಟ್‌ನಲ್ಲಿರುವ ʼಸಂವಿಧಾನದ ವಿಧ್ವಂಸಕರುʼ ಇವರೇನಾ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ವಿಚಾರದಲ್ಲಿ ಚುನಾವಣಾ ಆಯೋಗದ...

ಬೀದರ್‌ | ಜಿಲ್ಲಾ ಮಟ್ಟದ ಯುವಜನೋತ್ಸವ ಕಾರ್ಯಕ್ರಮ

2026-27ನೇ ಸಾಲಿನ ಜಿಲ್ಲಾ ಮಟ್ಟದ ಯುವಜನೋತ್ಸವವನ್ನು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ...