ಆಸ್ಪತ್ರೆಗೆ ದಾಖಲಿಸಿಕೊಳ್ಳಲು ನಕಾರ ಆರೋಪ; ರಸ್ತೆ ಬದಿಯಲ್ಲೇ ಮಗುವಿಗೆ ಜನ್ಮ ನೀಡಿದ ದಲಿತ ಮಹಿಳೆ

Date:

ಸಿಬ್ಬಂದಿ ಆಸ್ಪತ್ರೆಗೆ ದಾಖಲಿಸಿಕೊಳ್ಳಲು ನಿರಾಕರಿಸಿದ್ದರಿಂದ 20 ವರ್ಷದ ಬುಡಕಟ್ಟು (ದಲಿತ) ಮಹಿಳೆಯೊಬ್ಬರು ರಸ್ತೆ ಬದಿಯಲ್ಲೇ ಮಗುವಿಗೆ ಜನ್ಮ ನೀಡಿರುವ ಘಟನೆ ಉತ್ತರ ಪ್ರದೇಶದ ಭದೋಹಿ ಜಿಲ್ಲೆಯ ಜ್ಞಾನ್‌ಪುರದಲ್ಲಿರುವ ಮಹರಾಜ ಚೆತ್ ಸಿಂಗ್ ಜಿಲ್ಲಾ ಆಸ್ಪತ್ರೆ ಬಳಿ ನಡೆದಿದೆ. ಸಂತ್ರಂತೆ ಮುಸಾಹರ್ (Musahar) ಸಮುದಾಯಕ್ಕೆ ಸೇರಿದವಳಾಗಿರುವುದರಿಂದ ಸಿಬ್ಬಂದಿ ನರ್ಸ್ ಚಿಕಿತ್ಸೆ ನೀಡಲು ನಿರಾಕರಿಸಿದ್ದಾರೆ ಎಂದು ಕುಟುಂಬಸ್ಥರು ಗಂಭೀರ ಆರೋಪ ಮಾಡಿದ್ದಾರೆ.

- Advertisement -

ಜೊರೈ ಗ್ರಾಮದ ರಾಣಿ ದೇವಿ ಎಂಬವರು ಹೆರಿಗೆ ನೋವಿನಿಂದ ಬಳಲುತ್ತ ಮಂಗಳವಾರ ರಾತ್ರಿ ಕುಟುಂಬಸ್ಥರೊಂದಿಗೆ ಆಸ್ಪತ್ರೆಗೆ ಆಗಮಿಸಿದ್ದರು. ರಾಣಿಯ ಸಹೋದರ ವಿಜಯ್ ಕುಮಾರ್ ಆರೋಪಿಸಿರುವಂತೆ, ಸ್ಟಾಫ್ ನರ್ಸ್ ನೀಲಮ್ ಮೌರ್ಯ ಅವರು ಹೆರಿಗೆ ಮಾಡಿಸಲು ನಿರಾಕರಿಸಿ, ಮಹಿಳೆಯು ಮುಷಾರ್ ಸಮುದಾಯಕ್ಕೆ ಸೇರಿದವಳಾಗಿರುವುದರಿಂದ ತಾನು ಚಿಕಿತ್ಸೆ ನೀಡುವುದಿಲ್ಲ ಎಂದು ಎಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹವ್ಯಾಸದಿಂದ ಉದ್ಯಮದತ್ತ: ಶಿರಸಿ ಮಹಿಳೆಯರ ʻಡೇರೆʼ ಕೃಷಿಗೆ ಸ್ವಾವಲಂಬನೆಯ...

ಮನೆಯಂಗಳದ ಅಂದ ಹೆಚ್ಚಿಸುವ ಹೂವಷ್ಟೇ ಆಗಿದ್ದ ಡೇರೆ ಹೂವು (ಡೇಲಿಯಾ), ಇದೀಗ ಮಲೆನಾಡಿನ ಮಹಿಳೆಯರ ಪಾಲಿಗೆ ಹೊಸ ಆದಾಯದ ಸಾಧ್ಯತೆಗಳನ್ನು ತೆರೆದಿಡುತ್ತಿದೆ. ಉತ್ತರ ಕನ್ನಡ ಜಿಲ್ಲೆಯ ಶಿರಸಿ, ಸಿದ್ದಾಪುರ, ಯಲ್ಲಾಪುರ ಹಾಗೂ ಶಿವಮೊಗ್ಗ...

ನಂಬಿಕೆಯ ಪ್ರಾರ್ಥನೆಗೆ ‘ಸಮ್ಮತಿ ಪತ್ರ’ದ ಕಾವಲು: ಮಹಾರಾಷ್ಟ್ರದ ಚರ್ಚ್...

ಸಾಮಾನ್ಯವಾಗಿ ಈ ಹಿಂದಿನಿಂದಲೂ ಚರ್ಚ್‌ಗಳ ಮೂಲಕ ಉಚಿತ ವೈದ್ಯಕೀಯ ಶಿಬಿರ, ರಕ್ತದಾನ, ಇತರೆ ಸಾಮಾಜಿಕ ಸೇವೆಗಳನ್ನು ಮಾಡಿಕೊಂಡು ಬರಲಾಗಿದೆ. ಆದರೆ ಮಹಾರಾಷ್ಟ್ರದಲ್ಲಿ ಜಾರಿಗೆ ಬಂದಿರುವ ಮತಾಂತರ ವಿರೋಧ ಕಾಯ್ದೆ ಈ ಸಾಮಾಜಿಕ ಕಾರ್ಯಗಳಿಗೂ...

ಮೋದಿ ಸರ್ಕಾರ ಗೆದ್ದದ್ದೇ ಅಥವಾ ಕದ್ದದ್ದೇ? ಸಿಇಸಿ ವಿವಾದ...

2024ರ ಲೋಕಸಭಾ ಚುನಾವಣೆಯ ಮತದಾನ ಅಂಕಿಅಂಶಗಳಲ್ಲಿ ಕಂಡುಬಂದ 4.65 ಕೋಟಿ ಮತಗಳ ವ್ಯತ್ಯಾಸ ಮತ್ತು 79 ಕ್ಷೇತ್ರಗಳ ಫಲಿತಾಂಶಗಳ ಕುರಿತು VFD ವರದಿ ಗಂಭೀರ ಪ್ರಶ್ನೆಗಳನ್ನು ಎತ್ತಿತ್ತು. ಇದೇ ವೇಳೆ ಚುನಾವಣಾ ಆಯೋಗದ...

ಕುಟುಂಬಸ್ಥರು ಪ್ರತಿಭಟಿಸಿದರೂ ಯಾವುದೇ ಹಿರಿಯ ಅಧಿಕಾರಿಗಳು ಮಧ್ಯಪ್ರವೇಶಿಸದ ಕಾರಣ, ಅವರು ಮಹಿಳೆಯನ್ನು ಮನೆಗೆ ಕರೆದುಕೊಂಡು ಹೊರಟಿದ್ದರು. ಆಸ್ಪತ್ರೆಯ ಗೇಟ್‌ನ ಹೊರಗೆ ಬರುತ್ತಿದ್ದಂತೆ ಮಹಿಳೆಗೆ ತೀವ್ರ ಹೆರಿಗೆ ನೋವು ಕಾಣಿಸಿಕೊಂಡಿದ್ದು, ಸ್ಥಳದಲ್ಲಿದ್ದ ಮಹಿಳೆಯರು ಸೀರೆಯೊಂದನ್ನು ಮರೆಯಾಗಿ ಹಿಡಿದು ರಸ್ತೆ ಬದಿಯಲ್ಲೇ ಹೆರಿಗೆ ಮಾಡಿಸಿದ್ದಾರೆ.

ಮಹಿಳೆ ಆಸ್ಪತ್ರೆಯ ಹೊರಗೆ ಹೆರಿಗೆ ಮಾಡಿಕೊಂಡಿರುವ ಸುದ್ದಿ ತಿಳಿದು ಮುಖ್ಯ ವೈದ್ಯಾಧಿಕಾರಿ (CMO) ಡಾ. ಎಸ್.ಕೆ. ಚಕ್ ಅವರು ಮಹಿಳೆಯ ಮನೆಗೆ ಭೇಟಿ ನೀಡಿ, ತಾಯಿ ಮತ್ತು ಮಗುವನ್ನು ಆಸ್ಪತ್ರೆಗೆ ಕರೆತಂದಿದ್ದಾರೆ. ಸದ್ಯ ಅವರನ್ನು ತುರ್ತು ನಿಗಾ ವಾರ್ಡ್‌ಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದ್ದು, ಮಹಿಳೆಗೆ ಪ್ಲಾಸ್ಮಾ ನೀಡಲಾಗುತ್ತಿದೆ ಎಂದು ವೈದ್ಯರು ತಿಳಿಸಿದ್ದಾರೆ.

ಸಿಎಂಒ ಡಾ. ಎಸ್.ಕೆ. ಚಕ್ ನೀಡಿರುವ ಸ್ಪಷ್ಟನೆಯ ಪ್ರಕಾರ, ಸೋಮವಾರವೇ ಆಸ್ಪತ್ರೆಗೆ ಬಂದಿದ್ದ ರಾಣಿ ಅವರ ರಕ್ತದಲ್ಲಿ ಹಿಮೋಗ್ಲೋಬಿನ್ ಮಟ್ಟ 5 ಗ್ರಾಂ ಇತ್ತು. ಹೀಗಾಗಿ ಅವರನ್ನು ಮಿರ್ಜಾಪುರ ವಿಭಾಗೀಯ ಆಸ್ಪತ್ರೆಗೆ ರೆಫರ್‌ ಮಾಡಲಾಗಿತ್ತು. ಅಲ್ಲಿಂದ ವಾಪಸಾದ ಬಳಿಕ ಮಂಗಳವಾರ ರಾತ್ರಿ ಮತ್ತೆ ಜ್ಞಾನ್‌ಪುರ ಆಸ್ಪತ್ರೆಗೆ ಬಂದಾಗ, ಕಡಿಮೆ ಹಿಮೋಗ್ಲೋಬಿನ್ ಇರುವುದರಿಂದ ನರ್ಸ್ ಹಾಗೂ ವೈದ್ಯರು ಬಿಎಚ್‌ಯುಗೆ (BHU) ಹೋಗುವಂತೆ ಸೂಚಿಸಿದ್ದರು. 102 ಆಂಬುಲೆನ್ಸ್ ಸೇವೆ ಸಿಗದ ಕಾರಣ ವಾಪಸಾಗುತ್ತಿದ್ದ ವೇಳೆ ರಸ್ತೆ ಬದಿಯಲ್ಲಿ ಹೆರಿಗೆಯಾಗಿದೆ ಎಂದು ಸಮರ್ಥಿಸಿಕೊಂಡಿದ್ದಾರೆ.

ಘಟನೆ ಗಂಭೀರ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆ, ಜಿಲ್ಲಾಡಳಿತ ಎಚ್ಚೆತ್ತುಕೊಂಡಿದ್ದು, ನರ್ಸ್ ಹಾಗೂ ವೈದ್ಯರ ನಿರ್ಲಕ್ಷ್ಯದ ಆರೋಪದ ಕುರಿತು ತನಿಖೆ ನಡೆಸಲು ನಾಲ್ಕು ಸದಸ್ಯರ ಸಮಿತಿಯನ್ನು ರಚಿಸಿದೆ. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ದಂಡಾಧಿಕಾರಿ (DM) ಶೈಲೇಶ್ ಕುಮಾರ್ ತಿಳಿಸಿದ್ದಾರೆ.

ಈ ಘಟನೆಗೆ ಸಂಬಂಧಿಸಿದಂತೆ ಕಾಂಗ್ರೆಸ್‌ ಕೂಡ ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಉತ್ತರ ಪ್ರದೇಶದ ಭದೋಹಿಯಲ್ಲಿ ಮುಸಾಹರ್ ಸಮುದಾಯಕ್ಕೆ ಸೇರಿದ ಮಹಿಳೆಗೆ ಹೆರಿಗೆ ಮಾಡಿಸಲು ನಿರಾಕರಿಸಲಾಗಿದೆ ಎಂಬ ಆರೋಪವನ್ನು ಉಲ್ಲೇಖಿಸಿರುವ ಕಾಂಗ್ರೆಸ್‌, ದಲಿತರು ಮತ್ತು ಆದಿವಾಸಿಗಳೊಂದಿಗೆ ಅಮಾನವೀಯವಾಗಿ ನಡೆದುಕೊಳ್ಳಲಾಗುತ್ತಿದೆ. ಇಂತಹ ಘಟನೆಗಳು ಮಾನವೀಯತೆಗೆ ಕಳಂಕ ತರುವಂತಿದ್ದು, ಬಿಜೆಪಿ ಆಡಳಿತದ ವೈಫಲ್ಯವನ್ನು ಪ್ರತಿಬಿಂಬಿಸುತ್ತವೆ ಎಂದು X (ಟ್ವಿಟರ್‌) ಪೋಸ್ಟ್‌ನಲ್ಲಿ ಆರೋಪಿಸಿದೆ. ಪ್ರಧಾನಿ ನರೇಂದ್ರ ಮೋದಿ ಮತ್ತು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಅವರು ಆಡಳಿತದ ಸಮಸ್ಯೆಗಳತ್ತ ಗಮನಹರಿಸುವ ಬದಲು ತಮ್ಮ ಸಾಧನೆಗಳನ್ನು ಬಿಂಬಿಸುವುದರಲ್ಲಿ ನಿರತರಾಗಿದ್ದಾರೆ ಎಂದು ಕಾಂಗ್ರೆಸ್‌ ಟೀಕಿಸಿದೆ.

ಸರ್ಕಾರಿ ಆಸ್ಪತ್ರೆಗಳು ಜಾತಿ, ಧರ್ಮ, ಆರ್ಥಿಕ ಸ್ಥಿತಿ ಅಥವಾ ಸಾಮಾಜಿಕ ಹಿನ್ನೆಲೆಯ ಭೇದವಿಲ್ಲದೆ ಪ್ರತಿಯೊಬ್ಬರಿಗೂ ಸಮಾನವಾಗಿ ವೈದ್ಯಕೀಯ ಸೇವೆ ಒದಗಿಸಬೇಕು. ವಿಶೇಷವಾಗಿ ಹೆರಿಗೆ ನೋವಿನಿಂದ ಆಸ್ಪತ್ರೆಗೆ ಬರುವ ಗರ್ಭಿಣಿಯರ ಆರೋಗ್ಯ ಸ್ಥಿತಿಯನ್ನು ತಕ್ಷಣ ಪರಿಶೀಲಿಸಿ, ಅಗತ್ಯ ತುರ್ತು ಚಿಕಿತ್ಸೆ ನೀಡುವುದು ಆಸ್ಪತ್ರೆಯ ಕರ್ತವ್ಯ. ರೋಗಿಯ ಸ್ಥಿತಿ ಗಂಭೀರವಾಗಿದ್ದರೆ ಸೂಕ್ತ ವೈದ್ಯಕೀಯ ಸೌಲಭ್ಯವಿರುವ ಆಸ್ಪತ್ರೆಗೆ ಸುರಕ್ಷಿತವಾಗಿ ರವಾನಿಸುವ ವ್ಯವಸ್ಥೆ ಮಾಡಬೇಕು. ಬೇರೆ ಆಸ್ಪತ್ರೆಗೆ ಕಳುಹಿಸುವ ನಿರ್ಧಾರ ಕೈಗೊಂಡರೂ, ರೋಗಿಯನ್ನು ಅಗತ್ಯ ವೈದ್ಯಕೀಯ ನೆರವಿಲ್ಲದೆ ವಾಪಸ್ ಕಳುಹಿಸುವಂತಿಲ್ಲ. ತುರ್ತು ಸಂದರ್ಭದಲ್ಲಿ ಆಂಬುಲೆನ್ಸ್‌ ವ್ಯವಸ್ಥೆ, ವೈದ್ಯಕೀಯ ಮೇಲ್ವಿಚಾರಣೆ ಮತ್ತು ಸೂಕ್ತ ಚಿಕಿತ್ಸೆಯ ನಿರಂತರತೆ ಖಚಿತಪಡಿಸಬೇಕು. ಜಾತಿಯ ಆಧಾರದಲ್ಲಿ ಚಿಕಿತ್ಸೆ ನಿರಾಕರಿಸುವುದು ಅಥವಾ ರೋಗಿಯೊಂದಿಗೆ ತಾರತಮ್ಯದಿಂದ ನಡೆದುಕೊಳ್ಳುವುದು ವ್ಯಕ್ತಿಯ ಘನತೆ ಮತ್ತು ಸಮಾನತೆಯ ಹಕ್ಕಿಗೆ ವಿರುದ್ಧವಾಗಿದೆ.

ಇದನ್ನೂ ಓದಿ: ಆರೋಪಿಯನ್ನು ಹಿಡಿದರೂ FIRನಲ್ಲಿ ಹೆಸರಿಲ್ಲ; ಯುಪಿ ಪೊಲೀಸರ ನಡೆಗೆ ಸುಪ್ರೀಂ ಅಸಮಾಧಾನ

ಭಾರತೀಯ ಸಂವಿಧಾನದ 14, 15 ಮತ್ತು 17ನೇ ವಿಧಿಗಳು ಸಮಾನತೆಯ ಹಕ್ಕು, ಜಾತಿ ಆಧಾರಿತ ತಾರತಮ್ಯದ ನಿಷೇಧ ಹಾಗೂ ಅಸ್ಪೃಶ್ಯತೆ ನಿರ್ಮೂಲನೆಗೆ ಅವಕಾಶ ಕಲ್ಪಿಸಿವೆ. ಸುಪ್ರೀಂ ಕೋರ್ಟ್‌ನ ಪರಮಾನಂದ ಕಟಾರಾ ಮತ್ತು ಭಾರತ ಒಕ್ಕೂಟ ಪ್ರಕರಣದ ತೀರ್ಪಿನ ಪ್ರಕಾರ, ಜೀವ ರಕ್ಷಣೆಗಾಗಿ ವೈದ್ಯರು ತಕ್ಷಣ ವೈದ್ಯಕೀಯ ನೆರವು ನೀಡುವುದು ಅವರ ವೃತ್ತಿಪರ ಕರ್ತವ್ಯವಾಗಿದೆ. ತುರ್ತು ಚಿಕಿತ್ಸೆಯ ಅಗತ್ಯವಿರುವ ರೋಗಿಯನ್ನು ಆಸ್ಪತ್ರೆ ದಾಖಲಿಸಿಕೊಳ್ಳುವ ಮೊದಲು ಅನಗತ್ಯ ಔಪಚಾರಿಕತೆಗಳಿಗೆ ಒಳಪಡಿಸಬಾರದು. ಆಸ್ಪತ್ರೆಯಲ್ಲಿ ಅಗತ್ಯ ಸೌಲಭ್ಯಗಳಿಲ್ಲದಿದ್ದರೆ, ರೋಗಿಯ ಸ್ಥಿತಿಯನ್ನು ಸ್ಥಿರಗೊಳಿಸಲು ಸಾಧ್ಯವಿರುವ ಚಿಕಿತ್ಸೆ ನೀಡಿ, ಸೂಕ್ತ ವೈದ್ಯಕೀಯ ಸೌಲಭ್ಯವಿರುವ ಆಸ್ಪತ್ರೆಗೆ ಸುರಕ್ಷಿತವಾಗಿ ರವಾನಿಸುವ ವ್ಯವಸ್ಥೆ ಮಾಡಬೇಕು.

ಉತ್ತರ ಪ್ರದೇಶದಲ್ಲಿ ಮುಸಾಹರ್ ಸಮುದಾಯವು ಪರಿಶಿಷ್ಟ ಜಾತಿಗಳ ಪಟ್ಟಿಯಲ್ಲಿ ಸೇರಿದೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆ, 1989ರ ಅಡಿಯಲ್ಲಿ ಜಾತಿಯ ಕಾರಣಕ್ಕೆ ಉದ್ದೇಶಪೂರ್ವಕವಾಗಿ ಅವಮಾನಿಸುವುದು, ಜಾತಿ ಹೆಸರಿನಿಂದ ನಿಂದಿಸುವುದು ಸೇರಿದಂತೆ ಕಾಯ್ದೆಯಲ್ಲಿ ನಿರ್ದಿಷ್ಟಪಡಿಸಿರುವ ಕೃತ್ಯಗಳು ಅಪರಾಧವಾಗಬಹುದು. ಇಂತಹ ಕೆಲವು ಅಪರಾಧಗಳಿಗೆ ಆರು ತಿಂಗಳಿಂದ ಐದು ವರ್ಷಗಳವರೆಗೆ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಲು ಅವಕಾಶವಿದೆ. ಅಲ್ಲದೆ, ಕಾಯ್ದೆಯಡಿ ಕರ್ತವ್ಯ ನಿರ್ವಹಿಸಬೇಕಾದ ಸಾರ್ವಜನಿಕ ಸೇವಕರು ಉದ್ದೇಶಪೂರ್ವಕವಾಗಿ ಕರ್ತವ್ಯ ನಿರ್ಲಕ್ಷಿಸಿದರೆ, ಕಾಯ್ದೆಯ ಸೆಕ್ಷನ್‌ 4ರ ಪ್ರಕಾರ ಆರು ತಿಂಗಳಿಂದ ಒಂದು ವರ್ಷದವರೆಗೆ ಜೈಲು ಶಿಕ್ಷೆ ವಿಧಿಸಬಹುದು. ಈ ಸೆಕ್ಷನ್‌ ಅನ್ವಯಿಸಲು ಆಡಳಿತಾತ್ಮಕ ವಿಚಾರಣೆಯ ಶಿಫಾರಸು ಸೇರಿದಂತೆ ಕಾನೂನಿನಲ್ಲಿ ನಿಗದಿಪಡಿಸಿರುವ ಪ್ರಕ್ರಿಯೆ ಪಾಲಿಸಬೇಕಾಗುತ್ತದೆ. ರಾಣಿ ದೇವಿ ಪ್ರಕರಣದಲ್ಲಿ ನರ್ಸ್‌ ಮತ್ತು ವೈದ್ಯರ ವಿರುದ್ಧ ಕೇಳಿಬಂದಿರುವ ಆರೋಪಗಳು ತನಿಖೆಯಲ್ಲಿದ್ದು, ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

3,000 ಮದರಸಾಗಳ ನಿರ್ವಹಣೆ, ನಿಯಂತ್ರಣಕ್ಕೆ ಕ್ರಮ ಕೈಗೊಳ್ಳುವಂತೆ ರಾಜಸ್ಥಾನ ಹೈಕೋರ್ಟ್‌ ಸೂಚನೆ

ರಾಜಸ್ಥಾನದಲ್ಲಿ ಕಾರ್ಯಾಚರಿಸುತ್ತಿರುವ ಸುಮಾರು 3,000 ಮದರಸಾಗಳ ಪರಿಣಾಮಕಾರಿ ನಿರ್ವಹಣೆ, ಮೇಲ್ವಿಚಾರಣೆ ಹಾಗೂ...

45 ಲಕ್ಷ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಷಡ್ಯಂತ್ರ; ಮುಖ್ಯ ಚುನಾವಣಾಧಿಕಾರಿಗೆ ಸಿಎಂ ದೂರು

ರಾಜ್ಯದಲ್ಲಿ ಅಲ್ಪಸಂಖ್ಯಾತರು, ದಲಿತರು ಹಾಗೂ ಹಿಂದುಳಿದ ವರ್ಗಗಳಿಗೆ ಸೇರಿದ ಸುಮಾರು 45...