1,870 ಕೋಟಿ ರೂ. ದೇಣಿಗೆ ದಂಧೆ ಆರೋಪ: ಗುಜರಾತ್‌ನ 3 ರಾಜಕೀಯ ಪಕ್ಷಗಳ ಅಕ್ರಮ ಬಯಲು

Date:

ಗುಜರಾತ್‌ನಲ್ಲಿ ನೋಂದಾಯಿತವಾಗಿದ್ದ, ಆದರೆ ಮಾನ್ಯತೆ ಪಡೆಯದ ಮೂರು ರಾಜಕೀಯ ಪಕ್ಷಗಳು ಆದಾಯ ತೆರಿಗೆ ಇಲಾಖೆಗೆ ವಂಚಿಸಿ, ಬೃಹತ್ ಮಟ್ಟದ ‘ನಕಲಿ ದೇಣಿಗೆ ದಂಧೆ’ ನಡೆಸಿರುವುದು ಬೆಳಕಿಗೆ ಬಂದಿದೆ. ಸುಮಾರು 1,870 ಕೋಟಿ ರೂಪಾಯಿ ನಕಲಿ ದೇಣಿಗೆಯನ್ನು ತೋರಿಸಿ, ಸರ್ಕಾರಕ್ಕೆ ಅಂದಾಜು 560 ಕೋಟಿ ರೂ.ಗೂ ಅಧಿಕ ತೆರಿಗೆ ನಷ್ಟ ಉಂಟುಮಾಡಿದ ಆರೋಪದ ಮೇಲೆ ಗುಜರಾತ್ ಪೊಲೀಸರು ಮೂರು ಪ್ರತ್ಯೇಕ ಎಫ್‌ಐಆರ್‌ಗಳನ್ನು ದಾಖಲಿಸಿದ್ದಾರೆ. ತನಿಖೆ ಆರಂಭಿಸಿದ್ದಾರೆ.

- Advertisement -

ಆದಾಯ ತೆರಿಗೆ (IT) ಇಲಾಖೆಯು ನೀಡಿರುವ ದೂರಿನ ಆಧಾರದ ಮೇಲೆ ಗಾಂಧಿನಗರ ವಲಯದ ಅಪರಾಧ ತನಿಖಾ ವಿಭಾಗ (CID) ಈ ಪ್ರಕರಣಗಳನ್ನು ದಾಖಲಿಸಿಕೊಂಡಿದೆ. ಭಾತೀಯ ರಾಷ್ಟ್ರೀಯ ಜನತಾ ದಳ (BNJD), ಸ್ವತಂತ್ರತಾ ಅಭಿವ್ಯಕ್ತಿ ಪಾರ್ಟಿ (SAP) ಹಾಗೂ ಗರೀಬ್ ಕಲ್ಯಾಣ್ ಪಾರ್ಟಿ (GKP) ಎಂಬ ಮೂರು ರಾಜಕೀಯ ಪಕ್ಷಗಳು ಹಾಗೂ ಇವುಗಳಿಗೆ ನೆರವಾದ ಆಡಿಟರ್‌ಗಳು (CA), ಪಕ್ಷದ ಪದಾಧಿಕಾರಿಗಳು ಸೇರಿದಂತೆ ಒಟ್ಟು 15ಕ್ಕೂ ಹೆಚ್ಚು ಜನರ ಹೆಸರುಗಳನ್ನು ಎಫ್‌ಐಆರ್‌ನಲ್ಲಿ ಉಲ್ಲೇಖಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

History Repeats | ರೋಮ್‌ ಉರಿಯುತ್ತಿದ್ದಾಗ ಪಿಟೀಲು ನುಡಿಸಿದ...

ದೇಶದ ಪ್ರಜಾಪ್ರಭುತ್ವದ ಆಧಾರಸ್ತಂಭಗಳು ಒಂದೊಂದಾಗಿ ಕುಸಿಯುತ್ತಾ, ಚುನಾವಣಾ ವ್ಯವಸ್ಥೆಯೇ ಅಕ್ರಮ ಎಸಗುತ್ತಿರುವಾಗ, ನಿರುದ್ಯೋಗ-ಬೆಲೆ ಏರಿಕೆಯ ಭಾರದಿಂದ ಜನ ಹೈರಾಣಾಗಿರುವಾಗ ಭಾರತದ ಪ್ರಧಾನಿ ಭಜನೆ ಮಾಡುತ್ತಿದ್ದಾರೆ. ರೋಂ ಹೊತ್ತಿ ಉರಿಯುತ್ತಿದ್ದಾಗ ನೀರೋ ಪಿಟೀಲು...

ಅಪರಾಧಿಗಳ ಪರ ಬಿ ಸಿ ರೋಡ್ ಚಲೋ: ಎಂದಿನಂತೆ...

ಕೊಲೆಯಂತಹ ಗಂಭೀರ ಅಪರಾಧ ಎಸಗಿದ ಆರೋಪ ಹೊತ್ತವರ ಪರವಾಗಿ ಸಂಘಪರಿವಾರ ಬೀದಿಗಿಳಿಯುತ್ತಿರುವುದು ಇದೇ ಮೊದಲೇನಲ್ಲ. ಕರಾವಳಿಯ ಜನತೆ ಇಂತಹ ಪ್ರಚೋದನಾತ್ಮಕ ನಡೆಗಳನ್ನು ತಿರಸ್ಕರಿಸಿ, ಸತ್ಯ ಮತ್ತು ನ್ಯಾಯದ ಪರವಾಗಿ ನಿಲ್ಲಬೇಕಾಗಿದೆ. ಕರಾವಳಿ ಕರ್ನಾಟಕವಾಗಲಿ...

ಆದಾಯ ತೆರಿಗೆ ಕಾಯ್ದೆಯ ಸೆಕ್ಷನ್ 80GGC ಪ್ರಕಾರ, ನೋಂದಾಯಿತ ರಾಜಕೀಯ ಪಕ್ಷಗಳಿಗೆ ನೀಡುವ ದೇಣಿಗೆಗೆ 100%ರಷ್ಟು ತೆರಿಗೆ ವಿನಾಯಿತಿ ಸಿಗುತ್ತದೆ. ಈ ನಿಯಮವನ್ನು ದುರುಪಯೋಗಪಡಿಸಿಕೊಂಡ ಆರೋಪಿಗಳು, ಪ್ರಭಾವಿ ಉದ್ಯಮಿಗಳು ಮತ್ತು ತೆರಿಗೆ ಪಾವತಿದಾರರಿಂದ ಚೆಕ್ ಅಥವಾ ಬ್ಯಾಂಕ್ (RTGS) ಮೂಲಕ ದೇಣಿಗೆ ಹಣವನ್ನು ಪಡೆದುಕೊಳ್ಳುತ್ತಿದ್ದರು. ನಂತರ ನಕಲಿ/ಶೆಲ್ ಕಂಪನಿಗಳ ಜಾಲವನ್ನು ಬಳಸಿ, ಆಹಾರ ಧಾನ್ಯ ಖರೀದಿ ಮುಂತಾದ ನಕಲಿ ಬಿಲ್‌ಗಳನ್ನು ಸೃಷ್ಟಿಸುತ್ತಿದ್ದರು. ಕೊನೆಗೆ 2 ರಿಂದ 10%ರಷ್ಟು ಕಮಿಷನ್ ಹಣವನ್ನು ತಾವಿಟ್ಟುಕೊಂಡು, ಉಳಿದ ಹಣವನ್ನು ಅದೇ ದೇಣಿಗೆದಾರರಿಗೆ ನಗದುರೂಪದಲ್ಲಿ ವಾಪಸ್ ಕೊಡುತ್ತಿದ್ದರು. ಅಲ್ಲದೆ, ನಕಲಿ ಲೆಕ್ಕಪತ್ರಗಳನ್ನು ಸೃಷ್ಟಿಸಿ ಡಿಜಿಟಲ್ ಸಹಿಯೊಂದಿಗೆ ಚುನಾವಣಾ ಆಯೋಗಕ್ಕೂ ಸುಳ್ಳು ಮಾಹಿತಿ ಸಲ್ಲಿಸುತ್ತಿದ್ದರು ಎಂದು ಆರೋಪಿಸಲಾಗಿದೆ.

ಭಾರತೀಯ ರಾಷ್ಟ್ರೀಯ ಜನತಾ ದಳ (BNJD) ಪಕ್ಷವು ಪ್ರಕರಣದಲ್ಲೇ ಅತ್ಯಂತ ದೊಡ್ಡ ಪ್ರಮಾಣದ ವಂಚನೆ ನಡೆಸಿದೆ. ಇದು 56,238 ದೇಣಿಗೆದಾರರಿಂದ ಬರೋಬ್ಬರಿ 1,143.85 ಕೋಟಿ ರೂಪಾಯಿ ದೇಣಿಗೆ ಪಡೆದಿದ್ದು, ಸರ್ಕಾರಕ್ಕೆ ಸುಮಾರು 343 ಕೋಟಿ ರೂಪಾಯಿ ತೆರಿಗೆ ನಷ್ಟ ಉಂಟುಮಾಡಿದೆ. ಈ ಪಕ್ಷದ ಅಧ್ಯಕ್ಷ ಸುರೇಂದ್ರಕುಮಾರ್ ವಿಷ್ಣುಭಾಯಿ ಗಜೇರಾ ಎಂಬುವವರೇ ಈ ಸಂಪೂರ್ಣ ದಂಧೆಯ ಸೂತ್ರಧಾರಿಯಾಗಿದ್ದು, ಕಮಿಷನ್ ದರಗಳನ್ನು ಇವರೇ ನಿರ್ಧರಿಸುತ್ತಿದ್ದರು ಎನ್ನಲಾಗಿದೆ.

Advertisements

ಅಂತೆಯೇ, ಸ್ವತಂತ್ರತಾ ಅಭಿವ್ಯಕ್ತಿ ಪಕ್ಷವು (SAP) ಸುಮಾರು 519 ಕೋಟಿ ರೂಪಾಯಿ ನಕಲಿ ದೇಣಿಗೆ ಸಂಗ್ರಹಿಸಿ, ಸರ್ಕಾರಕ್ಕೆ 155 ಕೋಟಿ ರೂಪಾಯಿ ತೆರಿಗೆ ವಂಚನೆ ಮಾಡಿದೆ. ಈ ಪಕ್ಷಕ್ಕೆ ಯಾವುದೇ ನೈಜ ರಾಜಕೀಯ ಚಟುವಟಿಕೆಗಳಿರಲಿಲ್ಲ, ಕೇವಲ ಕಮಿಷನ್ ದಂಧೆಗಾಗಿ ಇದನ್ನು ಬಳಿಸಿಕೊಳ್ಳಲಾಗಿತ್ತು ಎಂದು ತನಿಖೆಯಲ್ಲಿ ತಿಳಿದುಬಂದಿದೆ.

ಗರೀಬ್ ಕಲ್ಯಾಣ್ ಪಾರ್ಟಿಯು (GKP) 2022-23 ರಿಂದ 2025-26ರ ಹಣಕಾಸು ವರ್ಷಗಳ ನಡುವೆ ಈ ಪಕ್ಷವು 206.76 ಕೋಟಿ ರೂಪಾಯಿ ನಕಲಿ ದೇಣಿಗೆ ಪಡೆದು, ಸುಮಾರು 62 ಕೋಟಿ ರೂಪಾಯಿ ತೆರಿಗೆ ವಂಚಿಸಿದೆ. ಬ್ಯಾಂಕ್ ಖಾತೆಗಳ ಸರಿಯಾದ ಪರಿಶೀಲನೆ ನಡೆಸದೇ ನಕಲಿ ಆಡಿಟ್ ವರದಿ ನೀಡಲು ಚಾರ್ಟರ್ಡ್ ಅಕೌಂಟೆಂಟ್‌ಗಳು (CA) 50,000 ರೂಪಾಯಿ ಲಂಚ ಪಡೆದಿರುವುದು ಎಫ್‌ಐಆರ್‌ನಲ್ಲಿ ಉಲ್ಲೇಖವಾಗಿದೆ.

ಚುನಾವಣಾ ಆಯೋಗದ ಮಾಹಿತಿ ಪ್ರಕಾರ, ಈ ಮೂರೂ ಪಕ್ಷಗಳು 2017ರಿಂದ ಗುಜರಾತ್ ವಿಧಾನಸಭೆ ಮತ್ತು ಲೋಕಸಭಾ ಚುನಾವಣೆಗಳಲ್ಲಿ ಸ್ಪರ್ಧಿಸುತ್ತಿವೆ. ಆದರೆ, ಕೇವಲ ಕಾಗದದ ಮೇಲಷ್ಟೇ ರಾಜಕೀಯ ಪಕ್ಷಗಳಾಗಿದ್ದ ಇವುಗಳು, ನಿಯಮದಂತೆ ಪಡೆಯಬೇಕಿದ್ದ 16.67%ರಷ್ಟು ಕನಿಷ್ಠ ಮತಗಳನ್ನು ಪಡೆಯಲು ವಿಫಲವಾಗಿ, ಸ್ಪರ್ಧಿಸಿದ ಎಲ್ಲ ಕ್ಷೇತ್ರಗಳಲ್ಲೂ ಠೇವಣಿ ಕಳೆದುಕೊಂಡಿವೆ. 2017 ಮತ್ತು 2022ರ ಚುನಾವಣೆಯಲ್ಲಿ ಈ ಪಕ್ಷಗಳ ರಾಜ್ಯಮಟ್ಟದ ಮತಗಳ ಪ್ರಮಾಣ 0.01%ರಷ್ಟು ಮಾತ್ರವಿತ್ತು ಎಂದು ವರದಿಯಾಗಿದೆ.

ಪ್ರಸ್ತುತ, ಗುಜರಾತ್ ಪೊಲೀಸರು ವಂಚನೆ, ಕ್ರಿಮಿನಲ್ ಪಿತೂರಿ ಮತ್ತು ನಕಲಿ ದಾಖಲೆ ಸೃಷ್ಟಿ ಆರೋಪದಡಿ ಪ್ರಕರಣಗಳನ್ನು ದಾಖಲಿಸಿಕೊಂಡಿದ್ದಾರೆ. ಆರೋಪಿಗಳ ಬ್ಯಾಂಕ್ ಖಾತೆಗಳನ್ನು ಮುಟ್ಟುಗೋಲು ಹಾಕಿಕೊಳ್ಳಲು ಹಾಗೂ ಆಸ್ತಿಗಳನ್ನು ಜಪ್ತಿ ಮಾಡಲು ಕಾನೂನು ಕ್ರಮ ಕೈಗೊಳ್ಳುತ್ತಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಗಳೂರು | ಕಾರಿಡಾರ್‌ ಗೋಡೆ ಕುಸಿದು ಐವರು ವಿದ್ಯಾರ್ಥಿಗಳಿಗೆ ಗಾಯ, ಓರ್ವ ಗಂಭೀರ

ಮಂಗಳೂರಿನ ಪಾಂಡೇಶ್ವರ ಸಮೀಪದ ಎಮ್ಮೆಕೆರೆ ಕ್ರಾಸ್ ಬಳಿಯ ರಾಮಲಕ್ಷ್ಮೀ ಹಾಲ್ ಸಭಾಭವನದಲ್ಲಿ...

ಸಿಇಸಿ ಗ್ಯಾನೇಶ್ ಕುಮಾರ್ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು: ಜನವಾದಿ ಮಹಿಳಾ ಸಂಘಟನೆ ಆಗ್ರಹ

ದೇಶದ ಚುನಾವಣಾ ಪ್ರಜಾಪ್ರಭುತ್ವದ ಮೇಲಿನ ಸಾರ್ವಜನಿಕ ವಿಶ್ವಾಸವನ್ನು ಪುನಃಸ್ಥಾಪಿಸಲು ಮುಖ್ಯ ಚುನಾವಣಾ...

ಕಲೆ ಉಳಿಯಲಿ, ಕೌಶಲ್ಯ ಬೆಳೆಯಲಿ: ಕರ್ನಾಟಕ ಪರ್ವ 2026ಕ್ಕೆ ಡಿ.ಕೆ ಶಿವಕುಮಾರ್ ಚಾಲನೆ

ಬೆಂಗಳೂರಿನ ಅರಮನೆ ಮೈದಾನದಲ್ಲಿ ಶನಿವಾರ ವೈವಿಧ್ಯತೆಯಲ್ಲಿ ಏಕತೆ, ಕೌಶಲ್ಯದಲ್ಲಿ ಸ್ವಾವಲಂಬನೆ ಎಂಬ...

ಅಪರಾಧಿಗಳ ಪರ ಬಿ ಸಿ ರೋಡ್ ಚಲೋ: ಎಂದಿನಂತೆ ಅಮಾನವೀಯ ಕೊಲೆಗಡುಕರ ಬೆಂಬಲಕ್ಕೆ ನಿಂತ ಸಂಘಪರಿವಾರ

ಕೊಲೆಯಂತಹ ಗಂಭೀರ ಅಪರಾಧ ಎಸಗಿದ ಆರೋಪ ಹೊತ್ತವರ ಪರವಾಗಿ ಸಂಘಪರಿವಾರ ಬೀದಿಗಿಳಿಯುತ್ತಿರುವುದು...