ಕಿರುಕುಳ ಆರೋಪ: ಟಿವಿಕೆ ಶಾಸಕ ಅರುಳ್ ವಿಘ್ನೇಶ್ ವಿರುದ್ಧ ಜಿಲ್ಲಾಧಿಕಾರಿ ದೂರು!

Date:

ಕಲ್ಲಕುರಿಚಿ ಜಿಲ್ಲಾಧಿಕಾರಿ ಜೆ.ಇ. ಪದ್ಮಜಾ ಟಿವಿಕೆ ಶಾಸಕ ಸಿ. ಅರುಳ್ ವಿಘ್ನೇಶ್ ವಿರುದ್ಧ ಕಿರುಕುಳ ಮತ್ತು ಅನುಚಿತ ವರ್ತನೆಯ ಆರೋಪ ಹೊರಿಸಿ ಅಧಿಕೃತ ಪೊಲೀಸ್ ದೂರು ದಾಖಲಿಸಿದ್ದಾರೆ. ಘಟನೆ ನಡೆದ ಮೂರು ತಿಂಗಳ ಬಳಿಕ ಹಾಗೂ ಮದ್ರಾಸ್ ಹೈಕೋರ್ಟ್ ಈ ಬಗ್ಗೆ ಸ್ಪಷ್ಟನೆ ಕೇಳಿದ ಮರುದಿನವೇ ಜಿಲ್ಲಾಧಿಕಾರಿ ಈ ಕಾನೂನು ಕ್ರಮಕ್ಕೆ ಮುಂದಾಗಿದ್ದಾರೆ.

- Advertisement -

ಸೋಮವಾರ ಮಧ್ಯಾಹ್ನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ (ಎಸ್‌ಪಿ) ಪದ್ಮಜಾ ಅವರು ದೂರು ನೀಡಿದ್ದು, ಇದರ ಆಧಾರದ ಮೇಲೆ ಶಾಸಕರ ವಿರುದ್ಧ ‘ತಮಿಳುನಾಡು ಮಹಿಳೆಯರ ಮೇಲಿನ ಕಿರುಕುಳ ತಡೆ ಕಾಯ್ದೆ’ಯಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಯುಪಿ ಚುನಾವಣೆ | BJPಗೆ ಕ್ಷೇತ್ರ ಹಂಚಿಕೆ ಸವಾಲು;...

ಉತ್ತರ ಪ್ರದೇಶದ 2027ರ ವಿಧಾನಸಭಾ ಚುನಾವಣೆಗೆ ರಾಜಕೀಯ ಪಕ್ಷಗಳು ಸಿದ್ಧತೆ ಆರಂಭಿಸಿವೆ. ಸತತ ಮೂರನೇ ಬಾರಿಗೆ ಅಧಿಕಾರ ಉಳಿಸಿಕೊಳ್ಳಲು ಬಿಜೆಪಿ ಹೆಣಗಾಡುತ್ತಿದ್ದು, ಎನ್‌ಡಿಎ ಮಿತ್ರಪಕ್ಷಗಳೊಂದಿಗೆ ಸ್ಥಾನ ಹಂಚಿಕೆ ಮಾತುಕತೆ ಆರಂಭಿಸಿದೆ. ಮತ್ತೊಂದೆಡೆ ಸಮಾಜವಾದಿ...

ಬಾಕ್ಸ್ ಆಫೀಸ್‌ನಲ್ಲಿ ರಾವಣನೇ ವಿಜೃಂಭಿಸಿರುವ ‘ರಾಮಾಯಣ’ದ ಅಬ್ಬರ: ₹1,600...

ರಾವಣನೇ ವಿಜೃಂಭಿಸಿರುವ ಬಾಲಿವುಡ್‌ ಸಿನಿಮಾ 'ರಾಮಾಯಣ: ಭಾಗ-1' ಬಿಡುಗಡೆಯಾದ ಕೇವಲ 17 ದಿನಗಳಲ್ಲಿ ಜಾಗತಿಕವಾಗಿ ₹1,600 ಕೋಟಿಗೂ ಅಧಿಕ ಕಮಾಯಿ ಮಾಡಿ ದಾಖಲೆ ಬರೆದಿದೆ. ಈ ಮೂಲಕ 'ದಂಗಲ್', 'ಧುರಂಧರ್-2', 'ಬಾಹುಬಲಿ-2' ಹಾಗೂ...

ರಾಯಚೂರು | ಉದ್ಘಾಟನೆಗಾಗಿ ಕಾಯುತ್ತಿರುವ ಶಾಲೆ; ವರಾಂಡದಲ್ಲೇ ಮಕ್ಕಳಿಗೆ...

ರಾಯಚೂರು ಜಿಲ್ಲೆ, ಜಾಲಹಳ್ಳಿಯ ಬೊಮ್ಮನಹಳ್ಳಿ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ, ಶುದ್ಧ ಕುಡಿಯುವ ನೀರಿನ ಅಭಾವ, ಕಾಂಪೌಂಡ್ ಇಲ್ಲದಿರುವುದು ಹಾಗೂ ಶಾಲಾ ಜಾಗದ ವಿವಾದ ಸೇರಿದಂತೆ ಹಲವು ಸಮಸ್ಯೆಗಳು ಮಕ್ಕಳ ಶಿಕ್ಷಣಕ್ಕೆ ಅಡ್ಡಿಯಾಗಿವೆ....

ದೂರಿನಲ್ಲೇನಿದೆ?

 ಮೂಲಗಳ ಪ್ರಕಾರ, ಸುಮಾರು ಮೂರು ತಿಂಗಳ ಹಿಂದೆ ನಡೆದ ಕಾರ್ಯಕ್ರಮವೊಂದರಲ್ಲಿ ಶಾಸಕ ಅರುಳ್ ವಿಘ್ನೇಶ್ ತಮ್ಮ ಉಡುಪಿನ ಬಗ್ಗೆ ಕಾಮೆಂಟ್ ಮಾಡಿದ್ದು, ಅನುಚಿತವಾಗಿ ವರ್ತಿಸಿ ಖಾಸಗಿ ಅಂತರವನ್ನು ಉಲ್ಲಂಘಿಸಲು ಪ್ರಯತ್ನಿಸಿದ್ದರು ಹಾಗೂ ಅಶ್ಲೀಲ ಸಂದೇಶಗಳನ್ನು ಕಳುಹಿಸಿದ್ದರು ಎಂದು ಜಿಲ್ಲಾಧಿಕಾರಿ ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಆದರೆ, ಶಾಸಕರು ತಮ್ಮ ಅಧಿಕೃತ ನಿವಾಸಕ್ಕೆ ಅಕ್ರಮವಾಗಿ ಪ್ರವೇಶಿಸಿದ್ದಾರೆ ಎಂಬ ಆರೋಪದ ಬಗ್ಗೆ ದೂರಿನಲ್ಲಿ ಯಾವುದೇ ಪ್ರಸ್ತಾಪ ಮಾಡಿಲ್ಲ ಎಂದು ತಿಳಿದುಬಂದಿದೆ.

ಶಾಸಕರ ವಿರುದ್ಧ ಎಫ್‌ಐಆರ್ ದಾಖಲಿಸಲು ನಿರ್ದೇಶನ ನೀಡುವಂತೆ ಕೋರಿ ವಕೀಲ ಆರ್. ತ್ರಿಶೂಲಿ ಸಲ್ಲಿಸಿದ್ದ ಅರ್ಜಿಯನ್ನು ಮದ್ರಾಸ್ ಹೈಕೋರ್ಟ್ ನ್ಯಾಯಮೂರ್ತಿ ವಿ. ಲಕ್ಷ್ಮೀನಾರಾಯಣನ್ ಅವರು ನವೆಂಬರ್ 23ರಂದು ವಿಚಾರಣೆ ನಡೆಸಿದ್ದರು. ಈ ವೇಳೆ ಸರ್ಕಾರಿ ಅಭಿಯೋಜಕ ಆರ್. ಜಾನ್ ಸತ್ಯನ್ ಅವರು, ಜಿಲ್ಲಾಧಿಕಾರಿಯಿಂದ ಮುಖ್ಯ ಕಾರ್ಯದರ್ಶಿ ಎಂ. ಸಾಯಿ ಕುಮಾರ್ ಅವರಿಗಾಗಲಿ ಅಥವಾ ಪೊಲೀಸರಿಗಾಗಲಿ ಯಾವುದೇ ದೂರು ಬಂದಿಲ್ಲ ಎಂದು ನ್ಯಾಯಾಲಯಕ್ಕೆ ತಿಳಿಸಿದ್ದರು. ಕೇವಲ ಮಾಧ್ಯಮ ವರದಿಗಳ ಆಧಾರದ ಮೇಲೆ ನಿರ್ದೇಶನ ನೀಡಲು ಸಾಧ್ಯವಿಲ್ಲ ಎಂದಿದ್ದ ನ್ಯಾಯಾಲಯ, ನೇರವಾಗಿ ಜಿಲ್ಲಾಧಿಕಾರಿಯನ್ನು ಸಂಪರ್ಕಿಸಿ ಅವರು ದೂರು ನೀಡಿದ್ದಾರೆಯೇ ಎಂಬುದನ್ನು ಖಚಿತಪಡಿಸಿಕೊಂಡು ನವೆಂಬರ್ 24ರಂದು ವರದಿ ನೀಡುವಂತೆ ಅಭಿಯೋಜಕರಿಗೆ ಸೂಚಿಸಿತ್ತು.

ಮೂರು ತಿಂಗಳ ಹಿಂದೆಯೇ ಪದ್ಮಜಾ ಅವರು ಈ ವಿಚಾರವನ್ನು ಮುಖ್ಯ ಕಾರ್ಯದರ್ಶಿಗಳ ಗಮನಕ್ಕೆ ಮೌಖಿಕವಾಗಿ ತಂದಿದ್ದರು ಎನ್ನಲಾಗಿದೆ. ಬಳಿಕ ಮುಖ್ಯ ಕಾರ್ಯದರ್ಶಿಗಳು ಟಿವಿಕೆ ಪಕ್ಷದ ನಾಯಕತ್ವದೊಂದಿಗೆ ಈ ಬಗ್ಗೆ ಮಾತನಾಡಿದ್ದು, ಪಕ್ಷದಿಂದ ಶಾಸಕರಿಗೆ ಎಚ್ಚರಿಕೆ ನೀಡಲಾಗಿತ್ತು. ಆದರೆ, ಲಿಖಿತ ದೂರು ಇಲ್ಲದ ಕಾರಣ ಯಾವುದೇ ಕ್ರಿಮಿನಲ್ ಕ್ರಮ ಕೈಗೊಂಡಿರಲಿಲ್ಲ.

ಈ ಪ್ರಕರಣದ ಕುರಿತು ನವೆಂಬರ್ 11ರಂದು ಪ್ರಕಟವಾದ ವರದಿಯನ್ನು ಆಧರಿಸಿ ರಾಷ್ಟ್ರೀಯ ಮಹಿಳಾ ಆಯೋಗವು (NCW) ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿತ್ತು. ನವೆಂಬರ್ 15ರಂದು ತಮಿಳುನಾಡು ಡಿಜಿಪಿಗೆ ಪತ್ರ ಬರೆದಿದ್ದ ಆಯೋಗ, ರಾಜಕೀಯ ಒತ್ತಡಕ್ಕೆ ಮಣಿಯದೆ ನಿಷ್ಪಕ್ಷಪಾತ ತನಿಖೆ ನಡೆಸಿ ಏಳು ದಿನಗಳಲ್ಲಿ ವರದಿ ಸಲ್ಲಿಸುವಂತೆ ಸೂಚಿಸಿತ್ತು.

ಇದಕ್ಕೂ ಮುನ್ನ, ಮಧುರೈನಲ್ಲಿ ನಡೆದ ಕೆಲಸದ ಸ್ಥಳದಲ್ಲಿ ಲೈಂಗಿಕ ಕಿರುಕುಳ ಜಾಗೃತಿ ಕಾರ್ಯಕ್ರಮದಲ್ಲಿ ಮದ್ರಾಸ್ ಹೈಕೋರ್ಟ್ ನ್ಯಾಯಮೂರ್ತಿ ವಿಕ್ಟೋರಿಯಾ ಗೌರಿ ಅವರು ಈ ಘಟನೆಯನ್ನು ಉಲ್ಲೇಖಿಸಿ, ಪೊಲೀಸರ ನಿಷ್ಕ್ರಿಯತೆಯನ್ನು ಪ್ರಶ್ನಿಸಿದ್ದರು. ಜಿಲ್ಲಾಧಿಕಾರಿಯೇ ಪಾಶ್ (POSH) ಸಮಿತಿಯ ಮುಖ್ಯಸ್ಥರಾಗಿರುವುದರಿಂದ, ಸ್ವತಃ ಅವರೇ ದೂರುದಾರರಾದಾಗ ತನಿಖೆ ನಡೆಸುವಲ್ಲಿ ತಾಂತ್ರಿಕ ತೊಡಕು ಎದುರಾಗಿತ್ತು ಎಂದು ಹಿರಿಯ ಐಎಎಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ತಮ್ಮ ಮೇಲಿನ ಎಲ್ಲ ಆರೋಪಗಳನ್ನು ಶಾಸಕ ಅರುಳ್ ವಿಘ್ನೇಶ್ ನಿರಾಕರಿಸಿದ್ದಾರೆ. “ನಾನು ಯಾವುದೇ ಅನುಚಿತ ವಾಟ್ಸಾಪ್ ಸಂದೇಶ ಕಳುಹಿಸಿಲ್ಲ. ನನಗೂ ಮತ್ತು ಆಡಳಿತ ಪಕ್ಷಕ್ಕೂ ಕೆಟ್ಟ ಹೆಸರು ತರಲು ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಹಬ್ಬಿಸಲಾಗುತ್ತಿದೆ. ಬಿಗಿ ಭದ್ರತೆ ಇರುವ ಜಿಲ್ಲಾಧಿಕಾರಿಗಳ ನಿವಾಸಕ್ಕೆ ನಾನು ಮದ್ಯಪಾನ ಮಾಡಿ ಪ್ರವೇಶಿಸಲು ಹೇಗೆ ಸಾಧ್ಯ? ನಾನು ಯಾವುದೇ ತಪ್ಪು ಮಾಡಿಲ್ಲ ಎಂಬುದನ್ನು ಸಾಬೀತುಪಡಿಸಲು ರಕ್ತ ಪರೀಕ್ಷೆಗೂ ಸಿದ್ಧ” ಎಂದು ಅವರು ಸ್ಪಷ್ಟನೆ ನೀಡಿದ್ದಾರೆ.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಬಕವಿ-ಬನಹಟ್ಟಿ |ನಿಸ್ವಾರ್ಥ ಸೇವೆಯಿಂದ ಸಮಾಜದಲ್ಲಿ ಬದಲಾವಣೆ ಸಾಧ್ಯ; ರಾಜಶೇಖರ ಹಿರೇಮಠ

ಬಡವರು, ನಿರ್ಗತಿಕರು ಹಾಗೂ ಪ್ರತಿಭಾವಂತರಿಗೆ ನೆರವಾಗುವ ನಿಸ್ವಾರ್ಥ ಸಮಾಜಮುಖಿ ಸೇವೆಯಿಂದ ಮಾತ್ರ...

ಬಾಗಲಕೋಟೆ |ಜಿಲ್ಲಾ ಮಟ್ಟದ ಬಾಲ್ ಬ್ಯಾಡ್ಮಿಂಟನ್‌ನಲ್ಲಿ ನಾವಲಗಿ ಕೆಪಿಎಸ್ ಶಾಲೆ ವಿದ್ಯಾರ್ಥಿಗಳ ಪ್ರಥಮ ಸ್ಥಾನ

ತುಳಸಿಗೇರಿಯಲ್ಲಿ ನಡೆದ ಬಾಗಲಕೋಟೆ ಜಿಲ್ಲಾ ಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾವಳಿಯಲ್ಲಿ ನಾವಲಗಿ...

ವಿಜಯಪುರ |ಚುನಾವಣೆ ವಿಳಂಬ ಖಂಡಿಸಿ ನ. 26ರಂದು ಕರಾಳ ಸಂವಿಧಾನ ದಿನಾಚರಣೆ

ರಾಜ್ಯದಲ್ಲಿ ಜಿಲ್ಲಾ, ತಾಲೂಕು ಹಾಗೂ ಗ್ರಾಮ ಪಂಚಾಯಿತಿ ಚುನಾವಣೆಗಳನ್ನು ವಿಳಂಬ ಮಾಡುತ್ತಿರುವುದನ್ನು...

ಬೀದರ್‌ | ಟನ್‌ ಕಬ್ಬಿಗೆ ₹3,500 ದರ ಘೋಷಿಸಿದ ಡಿಸಿ, ಧರಣಿ ಹಿಂಪಡೆದ ರೈತರು

ಬೀದರ್‌ ನಗರದ ಉಸ್ತುವಾರಿ ಸಚಿವರ ಕಚೇರಿ ಎದುರುಗಡೆ ಕಳೆದ 12ದಿನಳಿಂದ ಕಬ್ಬಿನ...