ಪಶ್ಚಿಮ ಬಂಗಾಳ ಉಪಚುನಾವಣೆ ವೇಳೆ ಅಕ್ರಮದ ಆರೋಪ; ಮರುಮತದಾನಕ್ಕೆ ವಿಪಕ್ಷಗಳ ಆಗ್ರಹ

Date:

ಪಶ್ಚಿಮ ಬಂಗಾಳದ ನಂದಿಗ್ರಾಮ ಮತ್ತು ರೇಜಿನಗರ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ಶುಕ್ರವಾರ ಬೆಳಿಗ್ಗೆಯಿಂದ ಆರಂಭಗೊಂಡಿದ್ದು, ಪ್ರಮುಖ ವಿರೋಧ ಪಕ್ಷಗಳು ಬಿಜೆಪಿ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿವೆ. ಮತದಾನದ ವೇಳೆಯಲ್ಲಿ ವ್ಯಾಪಕ ಅಕ್ರಮ ನಡೆದಿದೆ, ಅಕ್ರಮ ಬೂತ್ ರಿಗ್ಗಿಂಗ್ ನಡೆದಿದೆ ಎಂದು ಆರೋಪಿಸಿರುವ ವಿಪಕ್ಷಗಳು, ಎರಡೂ ಕ್ಷೇತ್ರಗಳಲ್ಲಿ ಮರುಮತದಾನ ನಡೆಸಬೇಕೆಂದು ಆಗ್ರಹಿಸಿವೆ.

- Advertisement -

ಪಶ್ಚಿಮ ಬಂಗಾಳ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಶುಭಂಕರ್ ಸರ್ಕಾರ್ ಅವರು ಮಾತನಾಡಿ, “ಸ್ವತಂತ್ರ, ನ್ಯಾಯಸಮ್ಮತ ಮತ್ತು ಭಯರಹಿತ ವಾತಾವರಣದಲ್ಲಿ ಮತದಾನ ನಡೆದಿದ್ದರೆ ನಮಗೆ ಭರವಸೆ ಇರುತ್ತಿತ್ತು. ಆದರೆ ನೈಜ ಮತದಾರರು ಮತಗಟ್ಟೆಗೆ ತಲುಪಲು ಸಾಧ್ಯವಾಗದಂತೆ ತಡೆಯಲಾಗಿದೆ. ನಂದಿಗ್ರಾಮ ಮತ್ತು ರೇಜಿನಗರದ ಮತದಾರರು ತೀವ್ರ ಸಂಕಷ್ಟಕ್ಕೆ ಒಳಗಾಗಿದ್ದಾರೆ. ಹೀಗಾಗಿ ನಾವು ಎರಡೂ ಕ್ಷೇತ್ರಗಳಲ್ಲಿ ಮರುಮತದಾನ ನಡೆಸುವಂತೆ ಕೋರಿದ್ದೇವೆ” ಎಂದು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಗ್ಯಾನೇಶ್ ಕುಮಾರ್ ವಿರುದ್ಧದ 20 ವರ್ಷಗಳ ಪ್ರಕರಣಕ್ಕೆ ಮರುಜೀವ;...

ಭಾರತದ ಮುಖ್ಯ ಚುನಾವಣಾ ಆಯುಕ್ತ (CEC) ಗ್ಯಾನೇಶ್‌ ಕುಮಾರ್ ವಿರುದ್ಧ 2006ರಲ್ಲಿ ದಾಖಲಾಗಿದ್ದ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಪ್ರಕರಣಕ್ಕೆ ಕೇರಳ ಸರ್ಕಾರ ಈಗ ಮರುಜೀವ ನೀಡಿದೆ. ಪ್ರಕರಣವನ್ನು ವಿಜಿಲೆನ್ಸ್ ತನಿಖೆಗೆ ಆದೇಶ ಹೊರಡಿಸಿದೆ....

ನೊಬೆಲ್‌ ಪ್ರಶಸ್ತಿ ಸರಣಿ | ಶಾಸ್ತ್ರೀಯ ಪರಂಪರೆಗೆ ಸಮಕಾಲೀನ...

ಈ ಬಾರಿಯ ಸಾಹಿತ್ಯದ ನೊಬೆಲ್‌ ಪುರಸ್ಕಾರ ಕೆನಡಾದ ಆನ್‌ ಕಾರ್ಸನ್‌ ಅವರ ಮುಡಿಗೇರಿದೆ. ಇವರು ಕವಯತ್ರಿ, ಪ್ರಬಂಧಗಾರ್ತಿ ಹಾಗೂ ಅನುವಾದಕಿ. ಕ್ಲಾಸಿಕಲ್‌ ಗ್ರೀಕ್‌ ಸಾಹಿತ್ಯದ ಪ್ರೇಮಿಯಾದ ಕಾರ್‌ಸನ್‌ ಶಾಸ್ತ್ರೀಯ ಮಾದರಿಯನ್ನು ಸಮಕಾಲೀನ ಸಂದರ್ಭಗಳಲ್ಲಿ...

ಇದನ್ನೂ ಓದಿ: ಉಪಚುನಾವಣೆ: ನಂದಿಗ್ರಾಮ, ನಗಾಂವ್‌ ಫಲಿತಾಂಶದತ್ತ ಎಲ್ಲರ ಚಿತ್ತ

ಕಾಂಗ್ರೆಸ್ ನಾಯಕಿ ಪೂಜಾ ರಾಯ್ ಚೌಧರಿ ಅವರು ಪ್ರತಿಕ್ರಿಯಿಸಿ, ಮತದಾನದ ದಿನದಂದು ಪ್ರಜಾಪ್ರಭುತ್ವದ ನಿಯಮಗಳನ್ನು ಗಾಳಿಗೆ ತೂರಿ ಅಕ್ರಮ ಎಸಗಲಾಗಿದೆ. ಆದಾಗ್ಯೂ ಜನರು ಕಾಂಗ್ರೆಸ್ ಪರವಾಗಿ ಮತ ಚಲಾಯಿಸಿದ್ದಾರೆ ಎಂಬ ನಿರೀಕ್ಷೆಯಿದೆ ಎಂದಿದ್ದಾರೆ.

ವಿಪಕ್ಷಗಳ ಆರೋಪಗಳನ್ನು ತಳ್ಳಿಹಾಕಿರುವ ಬಿಜೆಪಿ ನಾಯಕರು, ಎರಡೂ ಕ್ಷೇತ್ರಗಳಲ್ಲಿ ತಾವೇ ಜಯಗಳಿಸುವುದಾಗಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ನಂದಿಗ್ರಾಮ ಈಗಾಗಲೇ ಬಿಜೆಪಿಯ ಭದ್ರಕೋಟೆಯಾಗಿದ್ದು, ರೇಜಿನಗರದಲ್ಲೂ ಜನತೆ ವಿಪಕ್ಷಗಳ ತಂತ್ರಗಳನ್ನು ಅರಿತು ನಮಗೆ ಬೆಂಬಲ ನೀಡಿದ್ದಾರೆ ಎಂದು ತಿಳಿಸಿದ್ದಾರೆ.

ಪ್ರಸ್ತುತ ಮತ ಎಣಿಕೆ ಕೇಂದ್ರಗಳಲ್ಲಿ ಬಿಗಿ ಪೊಲೀಸ್ ಹಾಗೂ ಕೇಂದ್ರೀಯ ಭದ್ರತಾ ಪಡೆಗಳ ಕಾವಲು ಹಾಕಲಾಗಿದ್ದು, ಎವಿಎಂ ಮತಗಳ ಎಣಿಕೆ ಪ್ರಕ್ರಿಯೆ ಮುಂದುವರಿದಿದೆ. ಎರಡು ಕ್ಷೇತ್ರಗಳಲ್ಲೂ ಬಿಜೆಪಿ ಮುನ್ನಡೆಯಲ್ಲಿದೆ. ಅದರಲ್ಲೂ ರೇಜಿನಗರದ ಮುಸ್ಲಿಂ ಪ್ರಾಬಲ್ಯವಿರುವ ಕಡೆಗಳಲ್ಲೂ ಬಿಜೆಪಿ ಅಧಿಕ ಮತ ಪಡೆದಿರುವುದು ತೀವ್ರ ಅನುಮಾನಕ್ಕೆ ಎಡೆಮಾಡಿಕೊಟ್ಟಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ ಕೆಫೆ’: 44 ಲಕ್ಷ ರೂ. ವಹಿವಾಟು!

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ...

ನಾಲ್ಕನೇ ದಿನಕ್ಕೆ ಕಾಲಿಟ್ಟ INDIA ಒಕ್ಕೂಟದ ಪ್ರತಿಭಟನೆ; CEC ಗ್ಯಾನೇಶ್‌ ಕುಮಾರ್‌ ರಾಜೀನಾಮೆಗೆ ಪಟ್ಟು

CEC ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ INDIA ಒಕ್ಕೂಟದ ನಾಯಕರು ನಡೆಸುತ್ತಿರುವ...

ಹುಮನಾಬಾದ್ ತಾಲೂಕು ಟೋಕರೆ ಕೋಳಿ ಸಮಾಜ ಸಂಘದ ಅಧ್ಯಕ್ಷರಾಗಿ ಸಂತೋಷ ಸಂಗಮ ಆಯ್ಕೆ

ಬೀದರ್‌ ಜಿಲ್ಲೆಯ ಹುಮನಾಬಾದ್ ತಾಲೂಕು ಎಸ್‌ಟಿ ಟೋಕರೆ ಕೋಳಿ ಸಮಾಜ ಸಂಘದ...