ನ್ಯಾಯಾಂಗದ ವಿರುದ್ಧ ಹೇಳಿಕೆ ಆರೋಪ; ಸಿಜೆಪಿ ನಾಯಕ ಸೌರವ್‌ ದಾಸ್‌ಗೆ ಮದ್ರಾಸ್ ಹೈಕೋರ್ಟ್ ನೋಟಿಸ್

Date:

ನ್ಯಾಯಾಂಗದ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ CJP ವಕ್ತಾರ ಹಾಗೂ ಪತ್ರಕರ್ತ ಸೌರವ್ ದಾಸ್ ಅವರಿಗೆ ಮದ್ರಾಸ್ ಹೈಕೋರ್ಟ್ ಶುಕ್ರವಾರ ನೋಟಿಸ್ ಜಾರಿ ಮಾಡಿದೆ.

- Advertisement -

ಚೆನ್ನೈನ ಜಮೀನ್ ಪಲ್ಲಾವರಂ ನಿವಾಸಿ ಆರ್. ಗಣೇಶ್ ಕುಮಾರ್ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಸುಶ್ರುತ್ ಅರವಿಂದ್ ಧರ್ಮಾಧಿಕಾರಿ ಮತ್ತು ನ್ಯಾಯಮೂರ್ತಿ ಜಿ. ಅರುಳ್ ಮುರುಗನ್ ಅವರನ್ನೊಳಗೊಂಡ ಪೀಠವು ದಾಸ್‌ಗೆ ಆರು ವಾರಗಳೊಳಗೆ ಉತ್ತರಿಸುವಂತೆ ನೋಟಿಸ್ ಜಾರಿ ಮಾಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅಭಿವೃದ್ಧಿಯಿಂದ ದೂರ ಉಳಿದ ಜೀವನಮರಡಗಿ: ಬಸ್ ಇಲ್ಲ, ನೀರಿಲ್ಲ,...

ಸ್ವಾತಂತ್ರ್ಯಾನಂತರದ ಅಭಿವೃದ್ಧಿಯ ಹಾದಿಯಲ್ಲಿ ಗ್ರಾಮೀಣ ಪ್ರದೇಶಗಳಿಗೆ ಮೂಲಭೂತ ಸೌಲಭ್ಯಗಳನ್ನು ತಲುಪಿಸುವ ಪ್ರಯತ್ನಗಳು ನಡೆಯುತ್ತಿದ್ದರೂ, ಕಲಬುರಗಿ ಜಿಲ್ಲೆಯ ಕಾಳಗಿ ತಾಲೂಕಿನ ಜೀವನಮರಡಗಿ ಗ್ರಾಮದ ಜನರ ಬದುಕಿನಲ್ಲಿ ಮಾತ್ರ ಇಂದಿಗೂ ಹಲವು ಸಮಸ್ಯೆಗಳು ಮುಂದುವರಿದಿವೆ. ಗ್ರಾಮಕ್ಕೆ...

‘Epstein’ ವಿವಾದದ ನಡುವೆಯೂ ಹರದೀಪ್ ಪುರಿಗೆ ಮಣೆ: ಸಿಖ್...

'Epstein files' ವಿವಾದವು ಹರದೀಪ್ ಸಿಂಗ್ ಪುರಿ ಅವರ ರಾಜಕೀಯ ಬದುಕಿನಲ್ಲಿ ಸಣ್ಣದೊಂದು ಬಿರುಗಾಳಿ ಎಬ್ಬಿಸಿದ್ದು ಸುಳ್ಳಲ್ಲ. ವಿರೋಧ ಪಕ್ಷಗಳ ಟೀಕೆಗಳು ಮತ್ತು ನೈತಿಕ ಹೊಣೆಗಾರಿಕೆಯ ಪ್ರಶ್ನೆಗಳು ಅವರನ್ನು ಸಂಪುಟದಿಂದ ಹೊರಗಟ್ಟುವ ಹಂತಕ್ಕೆ...

ಅಮೆರಿಕದಲ್ಲಿ ನೋಂದಾಯಿಸಿಕೊಂಡ RSS Friends; RSS ಜೊತೆ ಮೌಖಿಕ...

RSS Friends ಎಂಬ ಸಂಘಟನೆಯು ಅಮೆರಿಕದಲ್ಲಿ ಆರ್‌ಎಸ್‌ಎಸ್‌ನ ವಿದೇಶಿ ಏಜೆಂಟ್ ಆಗಿ ನೋಂದಾಯಿಸಿಕೊಂಡಿದೆ. ತನ್ನ ಉದ್ದೇಶಿತ ಚಟುವಟಿಕೆಗಳು ಮುಖ್ಯವಾಗಿ ಮಾಹಿತಿ ಪ್ರಸಾರ, ಶೈಕ್ಷಣಿಕ ಕಾರ್ಯಗಳು, ಸಾರ್ವಜನಿಕ ಸಂಪರ್ಕ ಮತ್ತು ಸಮುದಾಯದೊಂದಿಗಿನ ತೊಡಗಿಸಿಕೊಳ್ಳುವಿಕೆಯನ್ನು ಒಳಗೊಂಡಿರುತ್ತವೆ...

ಭಾರತದ ಮುಖ್ಯ ನ್ಯಾಯಮೂರ್ತಿ ಸೇರಿದಂತೆ ಸುಪ್ರೀಂ ಕೋರ್ಟ್‌ನ ಇತರ ನ್ಯಾಯಮೂರ್ತಿಗಳ ವಿರುದ್ಧ ಸೌರವ್ ದಾಸ್ ಪದೇಪದೇ ಆಕ್ಷೇಪಾರ್ಹ ಹೇಳಿಕೆಗಳನ್ನು ನೀಡಿದ್ದಾರೆ. ಸೌರವ್ ದಾಸ್ ಮತ್ತು ಅವರ ಕುಟುಂಬದ ಸದಸ್ಯರ ಹಿನ್ನೆಲೆಯ ಕುರಿತು ಸಮಗ್ರ, ನಿಷ್ಪಕ್ಷಪಾತ ಹಾಗೂ ಸೂಕ್ತ ತನಿಖೆ ನಡೆಸುವಂತೆ ಕೇಂದ್ರ ಗೃಹ ಸಚಿವಾಲಯ ಸೇರಿದಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡಬೇಕು. ಅಲ್ಲದೆ, ಪುದುಚೇರಿಯಲ್ಲಿ ವಾಸಿಸುತ್ತಿದ್ದಾರೆ ಎನ್ನಲಾದ ದಾಸ್ ಅವರ ತಾಯಿ ಮತ್ತು ಜೈವಿಕ ತಂದೆಯ ಹಿನ್ನೆಲೆಯ ಬಗ್ಗೆಯೂ ತನಿಖೆ ನಡೆಸಬೇಕು ಎಂದು ಅರ್ಜಿಯಲ್ಲಿ ಮನವಿ ಮಾಡಲಾಗಿದೆ. ತನಿಖೆಯಲ್ಲಿ ಅಗತ್ಯ ಆಧಾರಗಳು ಕಂಡುಬಂದರೆ ಸೌರವ್ ದಾಸ್ ಅವರ ಪಾಸ್‌ಪೋರ್ಟ್ ಮತ್ತು ಆಧಾರ್ ಕಾರ್ಡ್ ರದ್ದುಗೊಳಿಸಲು ಕ್ರಮ ಕೈಗೊಳ್ಳಬೇಕು ಎಂಬುದು ಅರ್ಜಿಯ ಮತ್ತೊಂದು ಪ್ರಮುಖ ಬೇಡಿಕೆಯಾಗಿದೆ.

Advertisements

ಜೊತೆಗೆ, ಕೇಂದ್ರ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯವು ಎಕ್ಸ್ ಮತ್ತು ಇನ್‌ಸ್ಟಾಗ್ರಾಂನಲ್ಲಿರುವ ದಾಸ್ ಅವರ ಖಾತೆಗಳನ್ನು ನಿರ್ಬಂಧಿಸಬೇಕು. ನ್ಯಾಯಾಂಗವನ್ನು ಅವಹೇಳನ ಮಾಡುವಂತಹ ಹೇಳಿಕೆಗಳನ್ನು ಅವರು ಮತ್ತಷ್ಟು ನೀಡದಂತೆ ಕ್ರಮ ಕೈಗೊಳ್ಳಬೇಕು ಎಂದೂ ಅರ್ಜಿಯಲ್ಲಿ ಕೋರಲಾಗಿದೆ.

ಚೆನ್ನೈನ ಪ್ರಾದೇಶಿಕ ಪಾಸ್‌ಪೋರ್ಟ್ ಅಧಿಕಾರಿ, ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ (UIDAI), ಕೇಂದ್ರ ಗೃಹ, ವಿದೇಶಾಂಗ, ಕಾನೂನು ಮತ್ತು ನ್ಯಾಯ ಹಾಗೂ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯಗಳು ಸೇರಿದಂತೆ ಹಲವು ಅಧಿಕಾರಿಗಳು ಮತ್ತು ಎಕ್ಸ್ ಹಾಗೂ ಇನ್‌ಸ್ಟಾಗ್ರಾಂನ ಕುಂದುಕೊರತೆ ಪರಿಹಾರ ಅಧಿಕಾರಿಗಳನ್ನು ಅರ್ಜಿಯಲ್ಲಿ ಪ್ರತಿವಾದಿಗಳನ್ನಾಗಿ ಮಾಡಲಾಗಿದೆ.

ಅರ್ಜಿದಾರರ ಪರ ವಕೀಲ ಬಿ. ಜಗನ್ನಾಥ್ ವಾದ ಮಂಡಿಸಿ, ತಮ್ಮ ಕಕ್ಷಿದಾರರು ಈ ಸಂಬಂಧ ಅಕ್ಟೋಬರ್ 7ರಂದು ಸಂಬಂಧಪಟ್ಟ ಅಧಿಕಾರಿಗಳಿಗೆ ದೂರು ಸಲ್ಲಿಸಿದ್ದರೂ ಯಾವುದೇ ಪ್ರತಿಕ್ರಿಯೆ ಬಂದಿಲ್ಲ ಎಂದು ನ್ಯಾಯಾಲಯಕ್ಕೆ ತಿಳಿಸಿದರು.

ಇದನ್ನೂ ಓದಿ: ದೆಹಲಿ ಪ್ರತಿಭಟನೆ | ಪ್ರತಿಭಟನಾಕಾರರ ಮೇಲಿನ FIR ರದ್ದುಗೊಳಿಸಿದ ಸುಪ್ರೀಂ; 2,873 ಮಂದಿ ವಿರುದ್ಧ ತನಿಖೆಗೆ ಅನುಮತಿ

ಸೌರವ್ ದಾಸ್ ಅವರ ಹೇಳಿಕೆಗಳ ಕುರಿತು ಅಧಿಕೃತ ಪರಿಶೀಲನೆ ಅಗತ್ಯವಿದೆ. ಈ ಹಿಂದೆ ಸಲ್ಲಿಸಿದ್ದ ದೂರಿನ ಬಗ್ಗೆ ಅಧಿಕಾರಿಗಳು ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿ ಹೈಕೋರ್ಟ್ ಮೊರೆ ಹೋಗಬೇಕಾಯಿತು ಎಂದು ಅರ್ಜಿದಾರರ ಪರ ವಕೀಲರು ವಾದಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೊಪ್ಪಳ | ಪರಿಸರ ನಿಯಮ ಉಲ್ಲಂಘನೆ: 8 ಕಾರ್ಖಾನೆಗಳ ಬಂದ್‌ಗೆ ನಿರ್ಧಾರ

ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಯ ನಿಗದಿತ ಮಾನದಂಡಗಳನ್ನು ಉಲ್ಲಂಘಿಸಿರುವ ಹಿನ್ನೆಲೆಯಲ್ಲಿ ಕೊಪ್ಪಳ...

ಔರಾದ್‌ | ಕನ್ನಡ ನಾಮಫಲಕ ಕಡ್ಡಾಯ ಅಳವಡಿಕೆಗೆ ಆಗ್ರಹ

ರಾಜ್ಯ ಸರ್ಕಾರದ ಆದೇಶದಂತೆ ಔರಾದ್ ಪಟ್ಟಣ ಸೇರಿದಂತೆ ತಾಲೂಕು ವ್ಯಾಪ್ತಿಯ ಅಂಗಡಿ...

ಚಿಟಗುಪ್ಪ | ಜೆಜೆಎಂ, ರಾಜ್ಯ ಹೆದ್ದಾರಿ ಕಾಮಗಾರಿ ಕಳಪೆ : ತನಿಖೆಗೆ ಆಗ್ರಹಿಸಿ ಗ್ರಾಮಸ್ಥರ ಪ್ರತಿಭಟನೆ

ಜಲ ಜೀವನ್‌ ಮಿಷನ್‌ (ಜೆಜೆಎಂ) ಯೋಜನೆ ಕಾಮಗಾರಿ ಹಾಗೂ ರಾಜ್ಯ ಹೆದ್ದಾರಿ–122ರ...