ಕಾಶಿ ವಿಶ್ವನಾಥ ದೇವಾಲಯದಲ್ಲಿ ಚಿನ್ನ ಕಣ್ಮರೆ ಆರೋಪ: ಪಿಎಂಒಗೆ ವಕೀಲರ ಪತ್ರ

Date:

ಅಯೋಧ್ಯೆಯ ರಾಮ ಮಂದಿರದ ಕಾಣಿಕೆಯಲ್ಲಿ ದುರ್ನಡೆಯಾಗಿದೆ ಎಂಬ ಆರೋಪದ ಮೇಲೆ ನ್ಯಾಯಾಲಯ ಚಾರ್ಜ್’ಶೀಟ್ ಸಲ್ಲಿಸಿದ ಕೆಲವೇ ದಿನಗಳಲ್ಲಿ, ಪ್ರಧಾನಿ ನರೇಂದ್ರ ಮೋದಿ ಅವರ ಲೋಕಸಭಾ ಕ್ಷೇತ್ರವಾದ ವಾರಣಾಸಿಯ ಪ್ರಸಿದ್ಧ ಕಾಶಿ ವಿಶ್ವನಾಥ ದೇವಾಲಯದಲ್ಲಿ ‘ಚಿನ್ನ ಕಣ್ಮರೆ’ ಆರೋಪ ಕೇಳಿಬಂದಿದೆ.

- Advertisement -

​ವಾರಣಾಸಿಯ ವಕೀಲ ಹಾಗೂ ವಕೀಲರ ಸಂಘದ (ಬಾರ್ ಅಸೋಸಿಯೇಷನ್) ಮಾಜಿ ಪ್ರಧಾನ ಕಾರ್ಯದರ್ಶಿ ನಿತ್ಯಾನಂದ ರೈ ಅವರು ಈ ಕುರಿತು ಪ್ರಧಾನ ಮಂತ್ರಿಗಳ ಕಚೇರಿಗೆ (ಪಿಎಂಒ) ಪತ್ರ ಬರೆದಿದ್ದಾರೆ. ದೇವಾಲಯದ ‘ಶಿಖರ’ ಸೇರಿದಂತೆ ಹಲವು ಕಡೆಗಳಿಂದ ಚಿನ್ನ ಕಣ್ಮರೆಯಾಗಿದೆ ಮತ್ತು ಈ ವಿಷಯವನ್ನು ಮುಚ್ಚಿಹಾಕುವ ಉದ್ದೇಶದಿಂದ ದೇವಾಲಯದ ಆಡಳಿತ ಮಂಡಳಿಯು ಆ ಜಾಗಗಳಿಗೆ ಬಣ್ಣ ಬಳಿದಿದೆ ಎಂದು ಅವರು ಆರೋಪಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

ಬಾಗಲಕೋಟೆ | ನಿಲ್ದಾಣಗಳಿದ್ದರೂ ರಸ್ತೆಯಲ್ಲೇ ಬಸ್‌ ನಿಲುಗಡೆ; ಟ್ರಾಫಿಕ್...

ಬಾಗಲಕೋಟೆ ನಗರದಲ್ಲಿ ಸುಗಮ ಸಂಚಾರಕ್ಕಾಗಿ ಬಸ್‌ ನಿಲ್ದಾಣಗಳನ್ನು ನಿರ್ಮಿಸಲಾಗಿದೆ. ಪ್ರಯಾಣಿಕರು ಬಿಸಿಲು, ಮಳೆಯಿಂದ ರಕ್ಷಣೆ ಪಡೆಯಲು ಆಸನ ವ್ಯವಸ್ಥೆಯನ್ನೂ ಕಲ್ಪಿಸಲಾಗಿದೆ. ಬಸ್‌ಗಳು ನಿಲುಗಡೆಗೊಳ್ಳಲು ಪ್ರತ್ಯೇಕ ಜಾಗವನ್ನೂ ಗುರುತಿಸಲಾಗಿದೆ. ಆದರೆ, ಬಸ್‌ಗಳು ಮಾತ್ರ ನಿಲ್ದಾಣಕ್ಕೆ...

ಅಂಬಾನಿ ರಕ್ಷಣೆಗೆ ನಿಂತಿತೇ ಮೋದಿ ಸರ್ಕಾರ; ಗೆಳೆಯನ ಹಿತ...

ಭಾರತದ ಡಿಜಿಟಲ್ ಆಕಾಶದಲ್ಲಿ ಈಗ ಜಾಗತಿಕ ದೈತ್ಯ ಎಲಾನ್ ಮಸ್ಕ್ ಮತ್ತು ದೇಶೀಯ ಕುಬೇರ ಮುಖೇಶ್ ಅಂಬಾನಿ ನಡುವೆ ಮಹಾಸಮರ ಶುರುವಾಗಿದೆ. ಜನಸಾಮಾನ್ಯರಿಗೆ ಕೈಗೆಟುಕುವ ದರದಲ್ಲಿ ಇಂಟರ್‌ನೆಟ್ ನೀಡಲು ಸಜ್ಜಾಗಿರುವ ಮಸ್ಕ್ ಅವರ...

​ವಾರಣಾಸಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ರೈ, ಈ ವಿಷಯವಾಗಿ ಪ್ರಶ್ನೆಗಳಿಗೆ ಉತ್ತರ ಬಯಸಿ ಕಳೆದ ತಿಂಗಳು ವಾರಣಾಸಿಯ ಆಯುಕ್ತರು, ಜಿಲ್ಲಾಧಿಕಾರಿ, ಮುಖ್ಯಮಂತ್ರಿಗಳ ಕಚೇರಿ (ಸಿಎಂಒ) ಹಾಗೂ ಪ್ರಧಾನ ಮಂತ್ರಿಗಳ ಕಚೇರಿಗೆ ಪತ್ರ ಬರೆದಿರುವುದಾಗಿ ತಿಳಿಸಿದ್ದಾರೆ. ಆದರೆ, ಪ್ರಧಾನ ಮಂತ್ರಿಗಳ ಕಚೇರಿಯನ್ನು ಹೊರತುಪಡಿಸಿ ಮತ್ತಾವ ಕಚೇರಿಯೂ ಇದಕ್ಕೆ ಪ್ರತಿಕ್ರಿಯಿಸಲಿಲ್ಲ. ಪಿಎಂಒ ತಮ್ಮ ದರನ್ನು ಪರಿಗಣಿಸಿದ್ದು, ವಿವರ ಪಡೆಯಲು ತಮ್ಮನ್ನು ಸಂಪರ್ಕಿಸಿತ್ತು ಎಂದು ಅವರು ಹೇಳಿದ್ದಾರೆ.

​ದೇವಾಲಯದ ಉತ್ತರ ಭಾಗಿದ ಮೇಲ್ಭಾಗದ ಎರಡು ಸ್ಥಳಗಳಿಂದ ‘ಸ್ವರ್ಣ ಕಲಶ’ (ಚಿನ್ನದ ಕಲಶ) ಕಣ್ಮರೆಯಾಗಿದೆ ಎಂದು ರೈ ಆರೋಪಿಸಿದ್ದಾರೆ. “ಇದು ಗಂಭೀರ ವಿಷಯವಾಗಿದ್ದು, ಸಮಗ್ರ ತನಿಖೆ ನಡೆಯಬೇಕಿದೆ” ಎಂದು ಅವರು ಮಾತನಾಡಿದ್ದಾರೆ. ಜೊತೆಗೆ ದೇವಾಲಯದ ಯಾವ ಭಾಗಗಳಲ್ಲಿ ಚಿನ್ನ ಮತ್ತು ಬೆಳ್ಳಿಯನ್ನು ಬಳಸಲಾಗಿದೆ ಎಂಬ ವಿವರಗಳನ್ನು ಒಳಗೊಂಡ ‘ಶ್ವೇತ ಪತ್ರ’ವನ್ನು (ವೈಟ್ ಪೇಪರ್) ಆಡಳಿತ ಮಂಡಳಿಯು ಹೊರಡಿಸಬೇಕು ಮತ್ತು ಅದನ್ನು ದೇವಾಲಯದ ಅಧಿಕೃತ ವೆಬ್‌ಸೈಟ್‌ನಲ್ಲಿ ಹಂಚಿಕೊಳ್ಳಬೇಕು ಎಂದು ಅವರು ಆಗ್ರಹಿಸಿದ್ದಾರೆ.

​ಆದರೆ, ದೇವಾಲಯದ ಹಿರಿಯ ಅಧಿಕಾರಿಯೊಬ್ಬರು ಈ ಆರೋಪಗಳನ್ನು ತಳ್ಳಿಹಾಕಿದ್ದು, ಅವು ‘ಸುಳ್ಳು’ ಮತ್ತು ‘ಆಧಾರರಹಿತ’ ಎಂದು ಸ್ಪಷ್ಟಪಡಿಸಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿರುವ ವಾರಣಾಸಿಯ ಆಯುಕ್ತ ಎಸ್. ರಾಜಲಿಂಗಂ, ಸುಮಾರು ಮೂರು ತಿಂಗಳ ಹಿಂದೆ ಸುರಿದ ಆಲಿಕಲ್ಲು ಮಳೆಯ ಸಮಯದಲ್ಲಿ ದೇವಾಲಯದ ಪ್ರವೇಶದ್ವಾರದ ನೇರ ಮೇಲ್ಭಾಗದಲ್ಲಿದ್ದ ಗುಮ್ಮಟದ (ಡೋಮ್) ಒಂದು ಭಾಗ ಕುಸಿದು ಬಿದ್ದಿತ್ತು ಹಾಗೂ ಅದನ್ನು ದೇವಾಲಯದ ಆಡಳಿತ ಮಂಡಳಿಯ ಸುರಕ್ಷಿತ ವಶದಲ್ಲಿ ಇಡಲಾಗಿದೆ ಎಂದು ತಿಳಿಸಿದ್ದಾರೆ.

​ದೇವಾಲಯದ ಶಿಖರದ ರಚನಾತ್ಮಕ ಸ್ಥಿರತೆ ಮತ್ತು ಸುರಕ್ಷತೆಯನ್ನು ಪರೀಕ್ಷಿಸಲು ತಾಂತ್ರಿಕ ಅಧ್ಯಯನ ನಡೆಸುವಂತೆ ‘ಐಐಟಿ-ಮದ್ರಾಸ್’ ಸಂಸ್ಥೆಗೆ ಜವಾಬ್ದಾರಿ ವಹಿಸಲಾಗಿದ್ದು, ಅವರ ಶಿಫಾರಸುಗಳಿಗೆ ಅನುಗುಣವಾಗಿ ದುರಸ್ತಿ ಕಾರ್ಯವನ್ನು ಕೈಗೊಳ್ಳಲಾಗುವುದು ಎಂದು ಆಯುಕ್ತರು ವಿವರಿಸಿದ್ದಾರೆ. 

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪತಿಯನ್ನು ಕೊಂದು ಕಾಂಕ್ರೀಟ್ ಡ್ರಮ್‌ನಲ್ಲಿ ಹೂತಿಟ್ಟ ಪ್ರಕರಣ: ಪತ್ನಿ, ಪ್ರಿಯಕರನಿಗೆ ಗಲ್ಲು ಶಿಕ್ಷೆ

ಮರ್ಚೆಂಟ್ ನೇವಿ ಅಧಿಕಾರಿ ಸೌರಭ್ ರಜಪೂತ್ ಅವರನ್ನು ಬರ್ಬರವಾಗಿ ಹತ್ಯೆಗೈದು, ಮೃತದೇಹವನ್ನು...

ಜಂತರ್ ಮಂತರ್ ಧರಣಿ ಸ್ಥಳ ರದ್ದತಿ ಖಂಡಿಸಿ ಎಸ್‌ಎಫ್‌ಐ, ಡಿವೈಎಫ್‌ಐ ಪ್ರತಿಭಟನಾ ಮೆರವಣಿಗೆ: ಹಲವು ನಾಯಕರು ಪೊಲೀಸ್ ವಶಕ್ಕೆ

ದೇಶದ ರಾಜಧಾನಿ ದೆಹಲಿಯ ಐತಿಹಾಸಿಕ 'ಜಂತರ್ ಮಂತರ್' ಅನ್ನು ಪ್ರಜಾಸತ್ತಾತ್ಮಕ ಪ್ರತಿಭಟನಾ...