ಜಂತರ್ ಮಂತರ್‌ನಲ್ಲಿ ಪ್ರತಿಭಟನೆಗೆ ಮತ್ತೆ ಅವಕಾಶ ನೀಡಿ: ಅಮಿತ್ ಶಾಗೆ ಪತ್ರ ಬರೆದ ಸರ್ಕಾರಿ ನೌಕರರ ಒಕ್ಕೂಟ

Date:

ರಾಷ್ಟ್ರ ರಾಜಧಾನಿ ದೆಹಲಿಯ ಐತಿಹಾಸಿಕ ‘ಜಂತರ್ ಮಂತರ್’ ಅನ್ನು ಮತ್ತೆ ಅಧಿಕೃತ ಪ್ರತಿಭಟನಾ ಸ್ಥಳವಾಗಿ ತೆರೆಯುವಂತೆ ಆಗ್ರಹಿಸಿ ಸರ್ಕಾರಿ ನೌಕರರ ಒಕ್ಕೂಟವು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಪತ್ರ ಬರೆದಿದೆ.

- Advertisement -

ಆಲ್ ಇಂಡಿಯಾ ಎನ್‌ಪಿಎಸ್ (ರಾಷ್ಟ್ರೀಯ ಪಿಂಚಣಿ ಯೋಜನೆ) ನೌಕರರ ಒಕ್ಕೂಟದ (AINPSEF) ರಾಷ್ಟ್ರೀಯ ಅಧ್ಯಕ್ಷ ಮಂಜೀತ್ ಸಿಂಗ್ ಪಟೇಲ್ ಅವರು ಈ ಕುರಿತು ಗೃಹ ಸಚಿವರಿಗೆ ಪತ್ರ ರವಾನಿಸಿದ್ದು, “ಆರೋಗ್ಯಕರ ಪ್ರಜಾಪ್ರಭುತ್ವದ ಹಿತದೃಷ್ಟಿಯಿಂದ ಜನರ ಧ್ವನಿಯನ್ನು ಹತ್ತಿಕ್ಕಬಾರದು” ಎಂದು ಮನವಿ ಮಾಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಶ್ರೀನಿವಾಸರಾಜು ದೊಡ್ಡೇರಿ ಅವರ ‘ಬಾಬಾ...

ಕನ್ನಡದ ಅಪರೂಪದ ಬರಹಗಾರ, ಅನುವಾದಕರಾದ ಶ್ರೀನಿವಾಸರಾಜು ದೊಡ್ಡೇರಿ ಅವರು ಅನುವಾದಿಸಿರುವ 'ಬಾಬಾ ಸಾಹೇಬ್' ಕೃತಿಯು ಇಂದು ಭಾನುವಾರ ಚಿತ್ರದುರ್ಗದ ಪತ್ರಕರ್ತರ ಭವನದಲ್ಲಿ ಲೋಕಾರ್ಪಣೆಗೊಳ್ಳಲಿದೆ. ಈ ಕೃತಿಯ ಒಂದು ಆಯ್ದ ಭಾಗ... ಈದಿನ ಓದುಗರಿಗಾಗಿ... 'ಭಾರತದಲ್ಲಿ...

ಒಬಿಸಿ ಮೀಸಲಾತಿ ಮತ್ತು ಕೆನೆಪದರ: ಸುಪ್ರೀಂನ ಮಾರ್ಚ್ ತೀರ್ಪಿನ...

ಒಬಿಸಿ ಮೀಸಲಾತಿ ಸೌಲಭ್ಯ ಪಡೆಯಲು 'ಕೆನೆಪದರ' ನಿರ್ಧರಿಸುವಾಗ ಕೇವಲ ಪೋಷಕರ ವಾರ್ಷಿಕ ವೇತನವನ್ನೇ ಏಕೈಕ ಮಾನದಂಡವಾಗಿ ಪರಿಗಣಿಸುವಂತಿಲ್ಲ ಎಂದು ಸುಪ್ರೀಂ ಕೋರ್ಟ್ ತನ್ನ ಮಾರ್ಚ್ ತೀರ್ಪನ್ನು ಪುನರುಚ್ಚರಿಸಿದೆ. 1993ರ ಮೂಲ ನಿಯಮಗಳೇನು? ಕೆಳಹಂತದ...

ಮೈಕ್ರೋಸಾಫ್ಟ್‌ ಸರ್ವರ್ ಕ್ರಾಶ್; ತಲ್ಲಣಗೊಂಡ ಆನ್‌ ಲೈನ್‌ ಜಗತ್ತು!

ಆಧುನಿಕ ಕಚೇರಿ ವ್ಯವಹಾರ ಮತ್ತು ಡಿಜಿಟಲ್ ಸಂವಹನದ ಬೆನ್ನೆಲುಬಂತಿರುವ ತಂತ್ರಜ್ಞಾನ ದೈತ್ಯ ಮೈಕ್ರೋಸಾಫ್ಟ್‌ನ ಸರ್ವರ್‌ಗಳಲ್ಲಿ ಕಾಣಿಸಿಕೊಂಡ ಅನಿರೀಕ್ಷಿತ ತಾಂತ್ರಿಕ ದೋಷವು ಜಾಗತಿಕ ಮಟ್ಟದಲ್ಲಿ ಭಾರಿ ಅಲ್ಲೋಲಕಲ್ಲೋಲ ಸೃಷ್ಟಿಸಿದೆ. ಗುರುವಾರ (ನವೆಂಬರ್ 12) ಸಂಜೆಯಿಂದ...

“ಜಂತರ್ ಮಂತರ್ ಒಂದು ಐತಿಹಾಸಿಕ ವೇದಿಕೆಯಾಗಿದ್ದು, ದೇಶದ ಬಡ ಮತ್ತು ದುರ್ಬಲ ವರ್ಗದ ನಾಗರಿಕರು ಲಕ್ಷಾಂತರ ರೂಪಾಯಿ ಖರ್ಚು ಮಾಡದೆಯೇ ತಮ್ಮ ನೋವು ಹಾಗೂ ನ್ಯಾಯಯುತ ಬೇಡಿಕೆಗಳನ್ನು ನೇರವಾಗಿ ಸರ್ಕಾರದ ಗಮನಕ್ಕೆ ತರಲು ಇದು ಸಹಕಾರಿಯಾಗಿತ್ತು” ಎಂದು ಮಂಜೀತ್ ಸಿಂಗ್ ಪಟೇಲ್ ತಿಳಿಸಿದ್ದಾರೆ.

ಇದನ್ನೂ ಓದಿ: ಜಂತರ್‌ ಮಂತರ್‌ನತ್ತ ಮತ್ತೆ ಯುವಜನ; ಈ ಬಾರಿ ಅಮಿತ್‌ ಶಾ ರಾಜೀನಾಮೆಗೆ ಆಗ್ರಹ ಸಾಧ್ಯತೆ, ಆ.5ರಂದು ಸಿಜೆಪಿ ಸಭೆ

“ಜಂತರ್ ಮಂತರ್ ಅನ್ನು ಮುಚ್ಚುವುದರಿಂದ ರಾಷ್ಟ್ರ ರಾಜಧಾನಿಯಲ್ಲಿ ಸಾಮಾನ್ಯ ಜನರ ಧ್ವನಿಯನ್ನು ಶಾಶ್ವತವಾಗಿ ಅಡಗಿಸಿದಂತಾಗುತ್ತದೆ. ಆದ್ದರಿಂದ, ಶಾಂತಿಪ್ರಿಯ ನಾಗರಿಕರಿಗಾಗಿ ‘ಪ್ರಜಾಪ್ರಭುತ್ವದ ಹೃದಯ’ದಂತಿರುವ ಈ ಸ್ಥಳವನ್ನು ಕೇಂದ್ರ ಗೃಹ ಸಚಿವಾಲಯವು ಮತ್ತೆ ತೆರೆಯಬೇಕು” ಎಂದು ಒತ್ತಾಯಿಸಿದ್ದಾರೆ.

ದಶಕಗಳಿಂದ ದೇಶದ ಮೂಲೆಮೂಲೆಗಳಿಂದ ನ್ಯಾಯ ಕೋರಿ ಬರುವ ಲಕ್ಷಾಂತರ ಜನರಿಗೆ, ಆರ್ಥಿಕವಾಗಿ ಹಿಂದುಳಿದ ವರ್ಗಗಳಿಗೆ ಮತ್ತು ನೌಕರರ ಸಂಘಟನೆಗಳಿಗೆ ಜಂತರ್ ಮಂತರ್ ಒಂದು ಆಶಾಕಿರಣವಾಗಿತ್ತು ಎಂದು ಎನ್‌ಪಿಎಸ್ ನೌಕರರ ಒಕ್ಕೂಟ ಪ್ರತಿಪಾದಿಸಿದೆ.

ಕಳೆದ ಅಕ್ಟೋಬರ್ ತಿಂಗಳಲ್ಲಿ ಕೇಂದ್ರ ಗೃಹ ಸಚಿವಾಲಯ ನೇಮಿಸಿದ್ದ ಸಮಿತಿಯ ಶಿಫಾರಸಿನ ಮೇರೆಗೆ, ದೆಹಲಿ ಪೊಲೀಸರು ಜಂತರ್ ಮಂತರ್ ಅನ್ನು ಅಧಿಕೃತ ಪ್ರತಿಭಟನಾ ಸ್ಥಳಗಳ ಪಟ್ಟಿಯಿಂದ ಕೈಬಿಟ್ಟಿದ್ದರು. ಭದ್ರತಾ ಕಾರಣಗಳು, ಸುತ್ತಮುತ್ತಲಿನ ರಾಯಭಾರ ಕಚೇರಿಗಳು, ಸರ್ಕಾರಿ ಕಚೇರಿಗಳ ದೈನಂದಿನ ಚಟುವಟಿಕೆಗಳಿಗೆ ಅಡಚಣೆ ಮತ್ತು ಜನಸಂದಣಿ ನಿಯಂತ್ರಣದ ದೃಷ್ಟಿಯಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ದೆಹಲಿ ಪೊಲೀಸರು ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿದ ಅಫಿಡವಿಟ್‌ನಲ್ಲಿ ಸಮರ್ಥಿಸಿಕೊಂಡಿದ್ದರು. ಇದರ ಬದಲಾಗಿ ದೆಹಲಿಯಲ್ಲಿ ಮೂರು ಪರ್ಯಾಯ ಸ್ಥಳಗಳನ್ನು ನಿಗದಿಪಡಿಸಲಾಗಿತ್ತು. ಈ ನಿರ್ಧಾರವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ನಡೆಸುತ್ತಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒಬಿಸಿ ಮೀಸಲಾತಿ ಮತ್ತು ಕೆನೆಪದರ: ಸುಪ್ರೀಂನ ಮಾರ್ಚ್ ತೀರ್ಪಿನ ಹಿನ್ನೆಲೆಯೇನು? ಪ್ರಸ್ತುತ ಮಹತ್ವವೇನು?

ಒಬಿಸಿ ಮೀಸಲಾತಿ ಸೌಲಭ್ಯ ಪಡೆಯಲು 'ಕೆನೆಪದರ' ನಿರ್ಧರಿಸುವಾಗ ಕೇವಲ ಪೋಷಕರ ವಾರ್ಷಿಕ...

ನಾಲ್ವರು ನಾಗರಿಕರ ಹತ್ಯೆ: ಕೇಂದ್ರ, ಮಣಿಪುರ ಸರ್ಕಾರಕ್ಕೆ 3 ದಿನಗಳ ಗಡುವು ನೀಡಿದ ನಾಗಾ ಸಂಘಟನೆ

ಮಣಿಪುರದ ಉಖ್ರುಲ್ ಜಿಲ್ಲೆಯಲ್ಲಿ ಶುಕ್ರವಾರ (ನವೆಂಬರ್ 13) ಶಂಕಿತ ಉಗ್ರರ ಗುಂಡಿನ...

ಮೈಕ್ರೋಸಾಫ್ಟ್‌ ಸರ್ವರ್ ಕ್ರಾಶ್; ತಲ್ಲಣಗೊಂಡ ಆನ್‌ ಲೈನ್‌ ಜಗತ್ತು!

ಆಧುನಿಕ ಕಚೇರಿ ವ್ಯವಹಾರ ಮತ್ತು ಡಿಜಿಟಲ್ ಸಂವಹನದ ಬೆನ್ನೆಲುಬಂತಿರುವ ತಂತ್ರಜ್ಞಾನ ದೈತ್ಯ...

ಕೊನೆಯ ಎಸೆತದಲ್ಲಿ ಬೌಂಡರಿ ಬಾರಿಸಿದ ಮೋಹಿತ್ ಉಲ್ವಾ; ಪಾಕ್ ಮಣಿಸಿ 9ನೇ ಬಾರಿ ಅಂಡರ್-19 ಏಷ್ಯಾ ಕಪ್ ಗೆದ್ದ ಭಾರತ

ಕೊನೆಯ ಎಸೆತದವರೆಗೂ ತೀವ್ರ ಕುತೂಹಲ ಕೆರಳಿಸಿದ್ದ 'ಎಸಿಸಿ ಪುರುಷರ ಅಂಡರ್-19 ಏಷ್ಯಾ...