ಅಮರಾವತಿ ಆಂಧ್ರ ಪ್ರದೇಶದ ರಾಜಧಾನಿ: ಚಂದ್ರಬಾಬು ನಾಯ್ಡು

Date:

ಅಮರಾವತಿ ಆಂಧ್ರ ಪ್ರದೇಶದ ರಾಜಧಾನಿಯಾಗಿರಲಿದೆ ಎಂದು ತೆಲುಗು ದೇಶಂ ಪಕ್ಷದ ಮುಖ್ಯಸ್ಥ ಎನ್‌ ಚಂದ್ರಬಾಬು ನಾಯ್ಡು, ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುವ ಮುನ್ನ ದಿನದಂದು ತಿಳಿಸಿದ್ದಾರೆ.

- Advertisement -

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಅಮರಾವತಿ ಆಂಧ್ರ ಪ್ರದೇಶದ ಏಕೈಕ ರಾಜಧಾನಿಯಾಗಿರಲಿದ್ದು, ಹಾಗೆಯೇ ಪೊಲಾವರಂ ಯೋಜನೆ ಪೂರ್ಣಗೊಳಿಸುವುದಾಗಿ ಭರವಸೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಗಗನಕ್ಕೇರಿದ ಅಕ್ಕಿ ಬೆಲೆ: ತತ್ತರಿಸಿದ ಬಡ, ಮಧ್ಯಮ ವರ್ಗದ...

ರಾಜ್ಯಾದ್ಯಂತ ತೀವ್ರ ಮಳೆ ಕೊರತೆ ಮತ್ತು ಬರಗಾಲದ ಕರಿಛಾಯೆ ಕೃಷಿ ಕ್ಷೇತ್ರವನ್ನು ತತ್ತರಿಸುವಂತೆ ಮಾಡಿದೆ. ಅನ್ನದಾತನ ಬದುಕನ್ನು ಸಂಕಷ್ಟಕ್ಕೆ ನೂಕಿದ್ದ ಈ ಬರಗಾಲದ ಬಿಸಿ ಇದೀಗ ನೇರವಾಗಿ ಜನಸಾಮಾನ್ಯರ ತಟ್ಟೆಗೆ ತಟ್ಟಿದ್ದು, ಅಕ್ಕಿಯ...

ವಿಶಾಖಾಪಟ್ಟಣಂಅನ್ನು ಆರ್ಥಿಕ ರಾಜಧಾನಿ ಹಾಗೂ ವಿಶೇಷ ನಗರವನ್ನಾಗಿ ಅಭಿವೃದ್ಧಿಪಡಿಸಲಾಗುವುದು ಎಂದು ಇದೇ ಸಂದರ್ಭದಲ್ಲಿ ತಿಳಿಸಿದರು.

“ಅಮರಾವತಿ ನಮ್ಮ ರಾಜಧಾನಿಯಾಗಿರಲಿದೆ. ನಾವು ರಚನಾತ್ಮಕ ರಾಜಕೀಯವನ್ನು ಆರಂಭಿಸುತ್ತೇವೆ ವಿನಾ ರಾಜಕೀಯ ಪಿತೂರಿಯನ್ನಲ್ಲ. ವಿಶಾಖಾಪಟ್ಟಣ ರಾಜ್ಯದ ವಾಣಿಜ್ಯ ರಾಜಧಾನಿಯಾಗಿರಲಿದೆ. ಮೂರು ರಾಜಧಾನಿ ಮಾಡುತ್ತೇವೆ ಎಂದು ಇಂತಹ ವಂಚಕ ಚಟುವಟಿಕೆಗಳ ಮೂಲಕ ನಾವು ಜನರ ಜೊತೆ ಆಟವಾಡುವುದಿಲ್ಲ.ವಿಶಾಖಾಪಟ್ಟಣಂಗೆ ಜನರು ಸಂಪೂರ್ಣ ತೀರ್ಪು ನೀಡಲಾಗಿದೆ. ನಮಗೆ ಜನಾದೇಶವನ್ನು ನೀಡಿದ ರಾಯಲಸೀಮೆಯನ್ನು ಅಭಿವೃದ್ಧಿಪಡಿಸುತ್ತೇವೆ” ಎಂದು ಚಂದ್ರಬಾಬು ನಾಯ್ಡು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮೋದಿ ಸಂಪುಟದಲ್ಲಿ ಬಲಾಢ್ಯರು ಮುಂದಕ್ಕೆ, ಹಿಂದುಳಿದವರು ಹಿಂದಕ್ಕೆ

ವಿಜಯವಾಡದಲ್ಲಿ ನಡೆದ ಎನ್‌ಡಿಎ ಶಾಸಕಾಂಗ ಪಕ್ಷದ ಸಭೆಯಲ್ಲಿ ಎನ್‌ಡಿಎ ಒಕ್ಕೂಟದ ಸದನದ ನಾಯಕರಾಗಿ ಅವಿರೋಧವಾಗಿ ಆಯ್ಕೆ ಮಾಡಿದ ನಂತರ ಚಂದ್ರಬಾಬು ನಾಯ್ಡು ಈ ಘೋಷಣೆ ಮಾಡಿದರು.

2019ರಲ್ಲಿ ಆಂಧ್ರ ಪ್ರದೇಶದಲ್ಲಿ ವಿಜಯಗಳಿಸಿದ್ದ ವೈ ಎಸ್‌ ಜಗನ್‌ಮೋಹನ್‌ ರೆಡ್ಡಿ ರಾಜ್ಯದ ಅಭಿವೃದ್ಧಿಯನ್ನು ವಿಕೇಂದ್ರಿಕರಣಗೊಳಿಸಲು ವಿಶಾಖಾಪಟ್ಟಣಂಅನ್ನು ಆಡಳಿತಾತ್ಮಕ ರಾಜಧಾನಿಯನ್ನಾಗಿ ಮಾಡುವುದಾಗಿ ಹೇಳಿದ್ದರು. ಹಾಗೆಯೇ ಅಮರಾವತಿ ಶಾಸಕಾಂಗ ರಾಜಧಾನಿ, ಕರ್ನೂಲ್‌ಅನ್ನು ನ್ಯಾಯಾಂಗದ ರಾಜಧಾನಿಯನ್ನಾಗಿ ಮಾಡುವುದಾಗಿ ಹೇಳಿದ್ದರು.

ಜನಸೇನಾ ಪಕ್ಷದ ಮುಖ್ಯಸ್ಥ ಕೆ ಪವನ್‌ ಕಲ್ಯಾಣ್ ಎನ್‌ಡಿಎ ನಾಯಕನಾಗಿ ನಾಯ್ಡು ಹೆಸರನ್ನು ಪ್ರಸ್ತಾಪಿಸಿ, ಇತ್ತೀಚಿಗಷ್ಟೆ ನೂತನ ಸಂಸದರಾಗಿ ಆಯ್ಕೆಯಾಗಿರುವ ಬಿಜೆಪಿ ರಾಜ್ಯಾಧ್ಯಕ್ಷೆ ಡಿ ಪುರಂದೇಶ್ವರಿ ಅವರಿಗೆ ಬೆಂಬಲ ನೀಡುವುದಾಗಿ ತಿಳಿಸಿದರು.

2024ರ ಆಂಧ್ರ ವಿದಾನಸಭೆ ಚುನಾವಣೆಯಲ್ಲಿ ಒಟ್ಟು 175 ಸದಸ್ಯರ ಪೈಕಿ ಟಿಡಿಪಿ 135 ಸ್ಥಾನ ಗಳಿಸಿದರೆ, ಮಿತ್ರ ಪಕ್ಷ ಜನಸೇನಾ 21, ವೈಎಸ್‌ಆರ್‌ಪಿ 11 ಕ್ಷೇತ್ರಗಳಲ್ಲಿ ಮಾತ್ರ ಜಯಗಳಿಸಿತ್ತು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿರಳಾತಿ ವಿರಳ ಪ್ರಕರಣ: ಮಾಲೆಗಾಂವ್ ಅಪ್ರಾಪ್ತೆಯ ಅತ್ಯಾಚಾರ, ಕೊಲೆ ಅಪರಾಧಿಗೆ ಮರಣದಂಡನೆ ಶಿಕ್ಷೆ

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ಮಾಲೆಗಾಂವ್ ತಾಲೂಕಿನ ಡೋಂಗರಾಳೆ ಗ್ರಾಮದಲ್ಲಿ ಸಾಡೇನಾಲ್ಕು ವರ್ಷದ...

ತಿರಂಗಾ ಮಾರ್ಚ್ ನಡೆಸದಂತೆ ಅಭಿಜೀತ್ ದೀಪ್ಕೆಗೆ ದೆಹಲಿ ಪೊಲೀಸರಿಂದ ನೋಟಿಸ್: ಮನೆಯ ಬಳಿ ಬಿಗಿ ಭದ್ರತೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರು ದೆಹಲಿಯ...

​ಪ್ರತಿಭಟನೆಗಳ ವರದಿಗಾರಿಕೆಗೆ ಭಾರತೀಯ ಪ್ರೆಸ್ ಕೌನ್ಸಿಲ್‌ನಿಂದ ನೂತನ ಮಾರ್ಗದರ್ಶಿ ಸೂತ್ರಗಳ ಬಿಡುಗಡೆ

ಪ್ರತಿಭಟನೆಗಳು ಮತ್ತು ಧರಣಿ ಸತ್ಯಾಗ್ರಹಗಳ ಸಂದರ್ಭದಲ್ಲಿ ಪತ್ರಕರ್ತರ ಸುರಕ್ಷತೆಯನ್ನು ಕಾಯ್ದುಕೊಳ್ಳಲು, ಜವಾಬ್ದಾರಿಯುತ...

ಲಡಾಖ್ ನಾಯಕರ ಜೊತೆ ಕೇಂದ್ರದ ಮಾತುಕತೆ ಅಪೂರ್ಣ: ಅಕ್ಟೋಬರ್ 22ಕ್ಕೆ ಮುಂದಿನ ಸಭೆ

ಕೇಂದ್ರ ಗೃಹ ಸಚಿವಾಲಯ ಹಾಗೂ ಲಡಾಖ್‌ನ ಪ್ರಾತಿನಿಧಿಕ ಸಂಸ್ಥೆಗಳ ನಡುವೆ ಲೇಹ್‌ನಲ್ಲಿ...