ಟೆಂಪೋದಲ್ಲಿ ಕಾಂಗ್ರೆಸ್‌ಗೆ ಹಣ: ‘ನಿಮ್ಮ ಸ್ವಂತ ಅನುಭವವೇ ಮೋದೀಜಿ’ ಎಂದು ಕೇಳಿದ ರಾಹುಲ್ ಗಾಂಧಿ

Date:

ತೆಲಂಗಾಣದ ವೇಮುಲವಾಡದಲ್ಲಿ ನಡೆದ ಚುನಾವಣಾ ರ್‍ಯಾಲಿಯಲ್ಲಿ ಮಾತನಾಡಿದ್ದ ಪ್ರಧಾನಿ ನರೇಂದ್ರ ಮೋದಿ, “ಕಳೆದ ಐದು ವರ್ಷಗಳಿಂದ ಅಂಬಾನಿ–ಅದಾನಿಯನ್ನು ಗುರಿಯಾಗಿಸಿಕೊಂಡು ಪ್ರಶ್ನೆ ಮಾಡುತ್ತಿದ್ದ ಶೆಹಜಾದಾ (ರಾಹುಲ್‌ ಗಾಂಧಿ), ಇದೀಗ ಏಕಾಏಕಿ ಅಂಬಾನಿ-ಅದಾನಿ ವಿರುದ್ಧ ಪ್ರಶ್ನಿಸುವುದನ್ನು ನಿಲ್ಲಿಸಿದ್ದಾರೆ. ಅವರು ಟೆಂಪೋದಲ್ಲಿ ಕಪ್ಪು ಹಣ ಕಳುಹಿಸಿದ್ದಾರಾ” ಎಂದು ಪ್ರಶ್ನಿಸಿದ್ದರು.

- Advertisement -

ಇದಕ್ಕೆ ವಿಡಿಯೋ ಹೇಳಿಕೆಯ ಮೂಲಕ ಉತ್ತರ ನೀಡಿರುವ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ, “ನಮಸ್ಕಾರ ಮೋದಿ ಅವರೇ, ಏನು ಭಯಗೊಂಡಿದ್ದೀರಾ? ಸಾಮಾನ್ಯವಾಗಿ ನೀವು ಮುಚ್ಚಿದ ಕೋಣೆಯಲ್ಲಿ ಅಂಬಾನಿ, ಅದಾನಿ ಬಗ್ಗೆ ನೀವು ಮಾತನಾಡುತ್ತೀರಿ. ಆದರೆ ಇಂದು ಮೊದಲ ಬಾರಿಗೆ ಸಾರ್ವಜನಿಕವಾಗಿ ಮಾತನಾಡಿದ್ದೀರಿ. ಅವರು ಟೆಂಪೋದಲ್ಲಿ ಹಣ ಕೊಡ್ತಾರೆ ಅಂತಾ ನಿಮಗೆ ಗೊತ್ತು. ಇದು ನಿಮ್ಮ ಮಾತು ಸ್ವಂತ ಅನುಭವದಿಂದ ಬಂದಿದ್ದೇ?” ಎಂದು ಕೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

“ಸಿಬಿಐ, ಇಡಿ ಕಳುಹಿಸಿ ಸಾಧ್ಯವಾದಷ್ಟು ಬೇಗ ವಿಚಾರಣೆ ನಡೆಸಿ. ಹೆದರಿಕೊಳ್ಳಬೇಡಿ. ನಾನು ಮತ್ತೆ ಹೇಳುತ್ತೇನೆ ಪ್ರಧಾನಿ ನರೇಂದ್ರ ಮೋದಿಯವರು ಅಂಬಾನಿ, ಅದಾನಿಗೆ ನೀಡಿದ್ದಾರೆ. ಅಷ್ಟೇ ಹಣವನ್ನು ನಾನು ಭಾರತದ ಬಡವರಿಗೆ ನೀಡುತ್ತೇವೆ” ಎಂದು ರಾಹುಲ್ ಗಾಂಧಿ ಹೇಳಿದರು.

“ಮಹಾಲಕ್ಷ್ಮಿ ಹಾಗೂ ಉದ್ಯೋಗ ಯೋಜನೆ ಮೂಲಕ ಕೋಟ್ಯಂತರ ಜನರನ್ನು ಲಕ್ಷಾಧಿಪತಿಯನ್ನಾಗಿ ನಾವು ಮಾಡುತ್ತೇವೆ. ಮೋದಿ ಅವರು 22 ಜನರನ್ನು ಕೋಟ್ಯಾಧಿಪತಿ ಮಾಡಿದ್ದಾರೆ. ಆದರೆ ನಾವು ಕೋಟ್ಯಾಂತರ ಜನರನ್ನು ಲಕ್ಷಾಧಿಪತಿ ಮಾಡಲಿದ್ದೇವೆ” ಎಂದು ರಾಹುಲ್‌ ಗಾಂಧಿ ಪ್ರಧಾನಿಗೆ ತಿರುಗೇಟು ಕೊಟ್ಟಿದ್ದಾರೆ.

ರಾಹುಲ್ ಗಾಂಧಿ ಈ ವಿಡಿಯೋವನ್ನು ತಮ್ಮ ಸೋಷಿಯಲ್ ಮೀಡಿಯಾ ಪುಟಗಳಲ್ಲಿ ಹಂಚಿಕೊಂಡಿದ್ದು, ವೈರಲ್ ಆಗಿದೆ. ಎಕ್ಸ್‌ನಲ್ಲಿ ಹಂಚಿಕೊಂಡಿರುವ ವಿಡಿಯೋದೊಂದಿಗೆ, “ಬಿಜೆಪಿಯ ಭ್ರಷ್ಟಾಚಾರದ ಟೆಂಪೋಗೆ ‘ಚಾಲಕ’ ಮತ್ತು ‘ಸಹಾಯಕ’ ಯಾರು ಎಂಬುದು ದೇಶಕ್ಕೇ ಗೊತ್ತಿದೆ” ಎಂದು ಪೋಸ್ಟ್‌ ಮಾಡಿದ್ದಾರೆ.

ಇದನ್ನು ಓದಿದ್ದೀರಾ? ‘Yes’, ಮೋದಿ ಹೇಳಿದ್ದು ಸರಿ; ಚುನಾವಣೆ ವೇಳೆ ಅದಾನಿ-ಅಂಬಾನಿ ವಿಷಯ ಚರ್ಚೆಯಾಗಲೇಬೇಕು!

ರಾಹುಲ್ ಗಾಂಧಿ ಈ ವಿಡಿಯೋವನ್ನು ಎಕ್ಸ್‌ನಲ್ಲಿ ಈಗಾಗಲೇ 1.7 ಮಿಲಿಯನ್ ಜನ ನೋಡಿದ್ದರೆ, ಇನ್‌ಸ್ಟಾಗ್ರಾಂನಲ್ಲಿ ಸುಮಾರು 4 ಮಿಲಿಯನ್ ಜನ ವೀಕ್ಷಿಸಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಾಲಾ ಸಮಸ್ಯೆಗಳ ಕುರಿತು ಗ್ರಾಮ ಸಭೆಯಲ್ಲಿ ಧ್ವನಿ ಎತ್ತಿದ ವಿದ್ಯಾರ್ಥಿಗಳು; ಅಧಿಕಾರಿಗಳ ಮೆಚ್ಚುಗೆ-ಭರವಸೆ

ಸರ್ಕಾರಿ ಶಾಲಾ ವಿದ್ಯಾರ್ಥಿಗಳು ‘ವಿಶೇಷ ಗ್ರಾಮ ಸಭೆ’ಗಳಲ್ಲಿ ಪಾಲ್ಗೊಂಡು, ಪಂಚಾಯತ್ ಪ್ರತಿನಿಧಿಗಳು...

ಉತ್ತರಾಖಂಡ SIR ಅಂತಿಮ ಮತದಾರರ ಪಟ್ಟಿ ಪ್ರಕಟ: ಆದರೆ ಮುಗಿದಿಲ್ಲ ನೋಂದಣಿ ಪ್ರಕ್ರಿಯೆ

ಉತ್ತರಾಖಂಡ ರಾಜ್ಯದಲ್ಲಿ ನಡೆದ 'ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ' (ಎಸ್‌ಐಆರ್)...

ವಾಹನ ದಟ್ಟಣೆಯ ಸುಳಿಯಲ್ಲಿ ಮನಾಲಿ; ಪ್ರವಾಸೋದ್ಯಮದ ಒತ್ತಡಕ್ಕೆ ನಲುಗುತ್ತಿವೆಯೇ ಬೆಟ್ಟಗಳು?

ಮುಂಗಾರು ಮಳೆ ಕಡಿಮೆಯಾಗುತ್ತಿದ್ದಂತೆ ಹಿಮಾಚಲ ಪ್ರದೇಶದ ಪ್ರವಾಸಿ ತಾಣಗಳಿಗೆ ಪ್ರವಾಸಿಗರ ಆಗಮನ...