ಅಂಬಾನಿ ವಂಚನೆ ಪ್ರಕರಣ: ನ್ಯಾಯಯುತ, ತ್ವರಿತ ತನಿಖೆ ನಡೆಸುವಂತೆ CBI, EDಗೆ ಸುಪ್ರೀಂ ನಿರ್ದೇಶನ

Date:

ಅನಿಲ್ ಅಂಬಾನಿ, ಅನಿಲ್ ಧೀರೂಭಾಯಿ ಅಂಬಾನಿ ಗ್ರೂಪ್ (ಎಡಿಎಜಿ) ಹಾಗೂ ಗ್ರೂಪ್‌ನ ಕೆಲ ಕಂಪನಿಗಳನ್ನು ಒಳಗೊಂಡ ಬೃಹತ್ ಬ್ಯಾಂಕಿಂಗ್ ಮತ್ತು ಕಾರ್ಪೊರೇಟ್ ವಂಚನೆ ಪ್ರಕರಣವನ್ನು ‘ನ್ಯಾಯಯುತ, ‘ತ್ವರಿತ’ ಹಾಗೂ ‘ನಿಷ್ಪಕ್ಷಪಾತ’ವಾಗಿ ತನಿಖೆ ನಡೆಸುವಂತೆ ಸಿಬಿಐ ಮತ್ತು ಇಡಿಗೆ ಸುಪ್ರೀಂ ಕೋರ್ಟ್‌ ನಿರ್ದೇಶನ ನೀಡಿದೆ.

- Advertisement -

ಅನಿಲ್ ಅಂಬಾನಿ ಮತ್ತು ಸಂಬಂಧಿತ ಕಂಪನಿಗಳ ವಿರುದ್ಧ ಸಾರ್ವಜನಿಕ ನಿಧಿಯ ದುರ್ಬಳಕೆ, ನಕಲಿ ಹಣಕಾಸು ಹೇಳಿಕೆಗಳನ್ನು ರೂಪಿಸಿದ ಆರೋಪಗಳಿವೆ. ಈ ಆರೋಪಗಳಿಗೆ ಸಂಬಂಧಿಸಿದ ಪ್ರಕರಣವನ್ನು ಸಿಬಿಐ ಮತ್ತು ಇಡಿ ತನಿಖೆ ನಡೆಸುತ್ತಿವೆ. ಅನಿಲ್ ಅಂಬಾನಿ ದೇಶಬಿಟ್ಟು ಹೋಗದಂತೆ ನಿರ್ದೇಶನ ನೀಡಬೇಕೆಂದು ಕೋರಿ ಸಿಬಿಐ ಮತ್ತು ಇಡಿ ಅರ್ಜಿ ಸಲ್ಲಿಸಿದ್ದವು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಆ ಅರ್ಜಿಗಳನ್ನು ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು ಜೋಯ್ಮಲ್ಯ ಬಾಗ್ಚಿ ಹಾಗೂ ವಿಪುಲ್ ಎಂ. ಪಂಚೋಲಿ ಅವರಿದ್ದ ಪೀಠವು ವಿಚಾರಣೆ ನಡೆಸಿದೆ. ಅಂಬಾನಿ ಮತ್ತು ಎಡಿಎಜಿ ಸಂಸ್ಥೆಗಳ ವಿರುದ್ಧದ ಪ್ರಕರಣದ ತನಿಖೆಗಳಲ್ಲಿ ಆಗಿರುವ ಪ್ರಗತಿಯ ಕುರಿತು ಸಿಬಿಐ ಮತ್ತು ಇಡಿ – ಎರಡೂ ನಾಲ್ಕು ವಾರಗಳಲ್ಲಿ ಹೊಸ ಸ್ಥಿತಿ ವರದಿ ನೀಡುವಂತೆ ಸೂಚಿಸಿದೆ.

ಈ ಲೇಖನ ಓದಿದ್ದೀರಾ?: ಎಪ್‍ಸ್ಟೀನ್ ಸಂದೇಶಗಳಿಂದ ಬಹಿರಂಗ: ಟ್ರಂಪ್‍ ಮುಂದೆ ಮೋದಿ ಅಜೆಂಡಾ ತರಲು ಅನಿಲ್ ಅಂಬಾನಿಯಿಂದ ಲೈಂಗಿಕ ಅಪರಾಧಿಯ ಬಳಕೆ!

ತನಿಖಾ ಸಂಸ್ಥೆಗಳು ತನಿಖೆಯನ್ನು ಪ್ರಾರಂಭಿಸಲು ಈಗಾಗಲೇ ಸಮಯ ತೆಗೆದುಕೊಂಡಿವೆ. ಆದಾಗ್ಯೂ, ತನಿಖೆ ಪೂರ್ಣಗೊಂಡಿಲ್ಲ ಎಂಬುದನ್ನು ಗಮನಿಸಿರುವ ಪೀಠವು, ಪ್ರಕರಣದ ತನಿಖೆಗಾಗಿ ಹಿರಿಯ ಅಧಿಕಾರಿಗಳನ್ನು ಒಳಗೊಂಡ ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸುವಂತೆ ಇಡಿಗೆ ಸೂಚಿಸಿದೆ.

ಅನಿಲ್ ಅಂಬಾನಿ ಪರ ವಕೀಲ ಮುಕುಲ್ ರೋಹತ್ಗಿ ಮತ್ತು ಶ್ಯಾಮ್ ದಿವಾನ್ ವಾದಮಂಡಿಸಿದ್ದಾರೆ. ಅಂಬಾನಿ ದೇಶ ಬಿಟ್ಟು ಹೋಗದಂತೆ ನಿರ್ದೆಶನ ನೀಡಬೇಕೆಂದು ಕೋರಿದ್ದ ಅರ್ಜಿಯನ್ನು ರೋಹಟ್ಗಿ ವಿರೋಧಿಸಿದ್ದಾರೆ. ‘ಅಂಬಾನಿ ಭಾರತದಲ್ಲೇ ಇರುತ್ತಾರೆ. ನ್ಯಾಯಾಲಯದ ಅನುಮತಿಯಿಲ್ಲದೆ ಅವರ ಹೊರಹೋಗುವುದಿಲ್ಲ’ ಎಂದು ಹೇಳಿದ್ದಾರೆ.

ಈಗಾಗಲೇ ಅನಿಲ್ ಅಂಬನಿ ವಿರುದ್ಧ ಲುಕ್‌ಔಟ್‌ ನೋಟಿಸ್‌ಗಳು ಜಾರಿಯಲ್ಲಿವೆ!

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಇಸಿ ಗ್ಯಾನೇಶ್‌ ಕುಮಾರ್‌ ವಿರುದ್ಧ ದೇಶವ್ಯಾಪಿ ಪ್ರತಿಭಟನೆ; ಹೈದರಾಬಾದ್‌ನಲ್ಲಿ ‘ಸಿಜೆಪಿ’ ಮಹತ್ವದ ಸಭೆ

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ...

ಜಮ್ಮು-ಕಾಶ್ಮೀರಕ್ಕೆ ಪೂರ್ಣ ರಾಜ್ಯ ಸ್ಥಾನಮಾನದ ನಿರ್ಣಯ ಅಂಗೀಕಾರ; ಸದನದಲ್ಲಿ ಬಿಜೆಪಿ ಗದ್ದಲ

ಜಮ್ಮು-ಕಾಶ್ಮೀರಕ್ಕೆ ತುರ್ತಾಗಿ ಪೂರ್ಣ ರಾಜ್ಯದ ಸ್ಥಾನಮಾನವನ್ನು ಮರುಸ್ಥಾಪಿಸಬೇಕು ಎಂದು ಆಗ್ರಹಿಸುವ ನಿರ್ಣಯವನ್ನು...

ಅಕ್ಟೋಬರ್ 8ರೊಳಗೆ ಪಶ್ಚಿಮ ಬಂಗಾಳ ಶಾಸಕರ ಅನರ್ಹತೆ ಅರ್ಜಿಗಳ ವಿಲೇವಾರಿಗೆ ಸ್ಪೀಕರ್​ಗೆ ಸುಪ್ರೀಂ ಸೂಚನೆ

ಪಕ್ಷಾಂತರ ನಿಷೇಧ ಕಾಯ್ದೆ ಹಾಗೂ ಸಂವಿಧಾನದ ಹತ್ತನೇ ಶೆಡ್ಯೂಲ್‌ನ ಅಡಿಯಲ್ಲಿ, ರಿತಬ್ರತಾ...

ಮೋದಿ ಸರ್ಕಾರ ECಗೆ ಇಮ್ಯೂನಿಟಿ ನೀಡಿದ್ದರೂ ಹೊಣೆಗಾರಿಕೆಯಿಂದ ತಪ್ಪಿಸಿಕೊಳ್ಳಲಾಗಲ್ಲ: ಕಪಿಲ್ ಸಿಬಲ್

ಮುಖ್ಯ ಚುನಾವಣಾ ಆಯುಕ್ತರಿಗೆ (CEC) ಕ್ರಿಮಿನಲ್ ಪ್ರಕರಣಗಳಿಂದ ಕಾನೂನು ರಕ್ಷಣೆ ನೀಡಲಾಗಿದೆ...