ಅಂಬೇಡ್ಕರ್ ವಾದ | ಆರ್‌ಎಸ್‌ಎಸ್‌ ಕಾರ್ಯಕ್ರಮದ ಆಹ್ವಾನ ತಿರಸ್ಕರಿಸಿದ ಸಿಜೆಐ ಬಿ.ಆರ್ ಗವಾಯಿ ಅವರ ತಾಯಿ

Date:

ಆರ್‌ಎಸ್‌ಎಸ್‌ನ 100ನೇ ವರ್ಷಾಚರಣ ಮತ್ತು ವಿಜಯದಶಮಿ ಸಮಾರಂಭಕ್ಕೆ ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಬಿ.ಆರ್‌ ಗವಾಯಿ ಅವರ ತಾಯಿ ಕಮಲತಾಯ್ ಗವಾಯಿ ಅವರನ್ನು ಆಹ್ವಾನಿಸಲಾಗಿದೆ ಎಂದು ಇತ್ತೀಚೆಗಷ್ಟೇ ಸುದ್ದಿಯಾಗಿತ್ತು. ಇದೀಗ, ಅವರು ಆರ್‌ಎಸ್‌ಎಸ್‌ನ ಆಹ್ವಾನವನ್ನು ತರಸ್ಕರಿಸಿರುವುದಾಗಿ ಹೇಳಿದ್ದಾರೆ ಎಂದು ವರದಿಯಾಗಿದೆ.

- Advertisement -

ಕಮಲತಾಯ್ ಬರೆದಿದ್ದಾರೆ ಎನ್ನಲಾದ ಕೈಬರಹದ ಪತ್ರವು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. “ತಾವು ಅಂಬೇಡ್ಕರ್ ವಾದಿಯಾಗಿದ್ದು, ಆರ್‌ಎಸ್‌ಎಸ್‌ ಕಾರ್ಯಕ್ರಮದಲ್ಲಿ ಭಾಗವಹಿಸುವುದಿಲ್ಲ” ಎಂದು ಅವರು ಪತ್ರದಲ್ಲಿ ಬರೆದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ಅಮರಾವತಿಯಲ್ಲಿ ಅಕ್ಟೋಬರ್ 5ರಂದು ಆರ್‌ಎಸ್‌ಎಸ್‌ನ ಜಿಲ್ಲಾ ಘಟಕ ‘ಶತಮಾನೋತ್ಸವ’ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಕಮಲತಾಯಿ ಅವರನ್ನು ಮುಖ್ಯ ಅತಿಥಿಯಾಗಿ ಆಹ್ವಾನಿಸಲಾಗಿತ್ತು. ಕಮಲತಾಯ್ ಅವರು ಕಾರ್ಯಕ್ರಮದಲ್ಲಿ ಭಾಗವಹಿಸಲು ಒಪ್ಪಿಕೊಂಡಿದ್ದಾರೆ ಎಂದು ಅವರ ಪುತ್ರ, ರಾಜಕಾರಣಿ ರಾಜೇಂದ್ರ ಗವಾಯಿ ಕೂಡ ಹೇಳಿದ್ದರು.

ಈ ಬೆನ್ನಲ್ಲೇ, ಕಮಲತಾಯ್ ಅವರು ಆರ್‌ಎಸ್‌ಎಸ್ ಕಾರ್ಯಕ್ರಮದಲ್ಲಿ ಹಾಜರಾಗುತ್ತಾರೆ ಎಂದು ಹಲವಾರು ಸುದ್ದಿ ವಾಹಿನಿಗಳು ವರದಿ ಮಾಡಿದ್ದವು. ಆದಾಗ್ಯೂ, ಕಮಲತಾಯ್ ಅವರು ಯಾವುದೇ ಪ್ರತಿಕ್ರಿಯೆ ನೀಡಿರಲಿಲ್ಲ. ಇದೀಗ, ಅವರು ಪತ್ರ ಬರೆದಿದ್ದು, “ನಾನು ಆರ್‌ಎಸ್‌ಎಸ್‌ ಕಾರ್ಯಕ್ರಮದಲ್ಲಿ ಭಾಗಿಯಾಗುತ್ತೇನೆ ಎಂಬ ಸುದ್ದಿಯು ಪಿತೂರಿ ಭಾಗವಾಗಿದೆ. ಅದೊಂದು ಆರ್‌ಎಸ್‌ಎಸ್‌ ಹರಡಿಸಿರುವ ಸುಳ್ಳು ಸುದ್ದಿ” ಎಂದು ಹೇಳಿರುವುದಾಗಿ ವರದಿಯಾಗಿದೆ.

ಕಮಲಾತಾಯ್ ಅವರು ಆರ್‌ಎಸ್‌ಎಸ್‌ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಾರೆ ಎಂಬುದನ್ನು ಸಮರ್ಥಿಸಿಕೊಂಡಿದ್ದ ರಾಜೇಂದ್ರ ಗವಾಯಿ, “ನನ್ನ ತಂದೆ (ಆರ್.ಎಸ್ ಗವಾಯಿ) ಪಕ್ಷಾತೀತವಾಗಿ ರಾಜಕಾರಣಿಗಳಿಗೆ ಹತ್ತಿರವಾಗಿದ್ದರು. ಅವರು ಇಂದಿರಾ ಗಾಂಧಿ ಮತ್ತು ಅಟಲ್ ಬಿಹಾರಿ ವಾಜಪೇಯಿ ಅವರೊಂದಿಗೆ ಉತ್ತಮ ಬಾಂಧವ್ಯ ಹೊಂದಿದ್ದರು. ಅವರ ವಿವಿಧ ಕಾರ್ಯಕ್ರಮಗಳಿಗೆ ಹಾಜರಾಗಿದ್ದರು. ಇದರರ್ಥ ಅವರು ತಮ್ಮ ರಾಜಕೀಯ ದೃಷ್ಟಿಕೋನಗಳೊಂದಿಗೆ ರಾಜಿ ಮಾಡಿಕೊಂಡಿದ್ದಾರೆ ಎಂದರ್ಥವಲ್ಲ” ಎಂದಿದ್ದಾರೆ

“ತಮ್ಮ ತಾಯಿ ಕಮಲತಾಯ್ ಅವರನ್ನು ಆಹ್ವಾನಿಸಿದ ಕಾರ್ಯಕ್ರಮವು ಆರ್‌ಎಸ್‌ಎಸ್‌ನ ‘ಮುಖ್ಯ ಕಾರ್ಯಕ್ರಮ’ವಲ್ಲ. ನನ್ನ ತಂದೆ ಕೂಡ ಈ ಹಿಂದೆ ಆರ್‌ಎಸ್‌ಎಸ್‌ ಆಹ್ವಾನವನ್ನು ಸ್ವೀಕರಿಸಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಆ ಕಾರಣಕ್ಕಾಗಿಯೇ ನನ್ನ ತಾಯಿ ಅದನ್ನು ಸ್ವೀಕರಿಸಲು ನಿರ್ಧರಿಸಿದರು” ಎಂದು ರಾಜೇಂದ್ರ ಹೇಳಿಕೊಂಡಿದ್ದಾರೆ.

ಈ ಲೇಖನ ಓದಿದ್ದೀರಾ?: ಜಾತಿ ಸಮೀಕ್ಷೆ: ಒಬಿಸಿಗಳಿಗೆ ವಂಚಿಸಲು ಬಿಜೆಪಿ ನಾಯಕರ ಯತ್ನ?

ರಾಜೇಂದ್ರ ಗವಾಯಿ ಅವರು ಸೆಪ್ಟೆಂಬರ್ 29ರಂದು ತಮ್ಮ ತಾಯಿ ಆರ್‌ಎಸ್‌ಎಸ್‌ ಕಾರ್ಯಕ್ರಮದಲ್ಲಿ ಭಾಗಿಯಾಗುತ್ತಾರೆ ಎಂದು ಹೇಳಿಕೆ ನೀಡಿದ್ದರು. ಆದರೆ, ಇದಾದ ಕೆಲವೇ ಗಂಟೆಗಳಲ್ಲಿ ಕಮಲಾತಾಯ್ ಬರೆದಿದ್ದಾರೆ ಎನ್ನಲಾಗಿರುವ ಪತ್ರವು ವ್ಯಾಪಕ ವೈರಲ್ ಆಗಿದೆ.

ಈ ಬಗ್ಗೆ ಪ್ರತಿಕ್ರಿಯಿಯೆ ನೀಡಿರುವ ರಾಜೇಂದ್ರ ಗವಾಯಿ, “ನಾನು ನನ್ನ ತಾಯಿಯನ್ನು ಬೆಂಬಲಿಸುತ್ತೇನೆ. ಅವರು ಕಾರ್ಯಕ್ರಮಕ್ಕೆ ಹಾಜರಾಗಲು ಅಥವಾ ಹಾಜರಾಗದೇ ಇರಲಿ ನಿರ್ಧರಿಸಿದರೆ, ನಾನು ಅವರನ್ನು ನಿಲುನ್ನು ಬೆಂಬಲಿಸುತ್ತೇನೆ” ಎಂದು ಹೇಳಿಕೊಂಡಿದ್ದಾರೆ.

ಆದಾಗ್ಯೂ, ವೈರಲ್ ಆಗಿರುವ ಪತ್ರವನ್ನು ಕಮಲತಾಯ್ ಅವರೇ ಬರೆದಿದ್ದಾರೆಯೇ ಎಂಬುದನ್ನು ಅವರಿಂದಲೇ ಖಚಿತ ಪಡಿಸಿಕೊಳ್ಳಲು ‘ದಿ ವೈರ್’ ಪ್ರಯತ್ನಿಸಿದೆ. ಆದರೆ, ಅವರು ಪ್ರತಿಕ್ರಿಯೆ ನೀಡಲು ಲಭ್ಯವಾಗಿಲ್ಲ ಎಂದು ಸಂಸ್ಥೆ ಹೇಳಿದೆ.

ಕಮಲತಾಯ್ ಅವರ ಪತಿ ಆರ್‌.ಎಸ್‌ ಗವಾಯಿ ಅವರು ರಾಜ್ಯಸಭಾ ಸದಸ್ಯರಾಗಿದ್ದರು. ಬಿಹಾರ ಮತ್ತು ಕೇರಳದ ರಾಜ್ಯಪಾಲರಾಗಿಯೂ ಸೇವೆ ಸಲ್ಲಿಸಿದ್ದರು. ಅಂಬೇಡ್ಕರ್ ಚಳವಳಿಯ ಹಿರಿಯ ನಾಯಕರಾಗಿದ್ದ ಅವರು, ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾದಲ್ಲಿ (ಆರ್‌ಪಿಐ) ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು. ಅಲ್ಲದೆ, ಕಾಲಾನಂತರ, ತಮ್ಮದೇ ಆದ ಬಣ, ಆರ್‌ಪಿಐ (ಗವಾಯಿ)ಅನ್ನು ಸ್ಥಾಪಿಸಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಸ್ಸಾಂ ಉಪಚುನಾವಣೆ ಅಖಾಡ: ಸಿಎಂ ಶರ್ಮಾ ಮತ್ತು ಕಾಂಗ್ರೆಸ್ ಸಂಸದರ ನಡುವೆ ‘ಬಿರಿಯಾನಿ vs ರಸ್ಕ್’ ವಾಕ್ಸಮರ!

ಅಸ್ಸಾಂನ ನಗಾಂವ್ ಲೋಕಸಭಾ ಕ್ಷೇತ್ರಕ್ಕೆ ನಡೆಯಲಿರುವ ಉಪಚುನಾವಣೆಯ ಪ್ರಚಾರ ಕಣದಲ್ಲಿ ರಾಜಕೀಯ...

ಶಾಲಾ ಸಮಸ್ಯೆಗಳ ಕುರಿತು ಗ್ರಾಮ ಸಭೆಯಲ್ಲಿ ಧ್ವನಿ ಎತ್ತಿದ ವಿದ್ಯಾರ್ಥಿಗಳು; ಅಧಿಕಾರಿಗಳ ಮೆಚ್ಚುಗೆ-ಭರವಸೆ

ಸರ್ಕಾರಿ ಶಾಲಾ ವಿದ್ಯಾರ್ಥಿಗಳು ‘ವಿಶೇಷ ಗ್ರಾಮ ಸಭೆ’ಗಳಲ್ಲಿ ಪಾಲ್ಗೊಂಡು, ಪಂಚಾಯತ್ ಪ್ರತಿನಿಧಿಗಳು...

ಉತ್ತರಾಖಂಡ SIR ಅಂತಿಮ ಮತದಾರರ ಪಟ್ಟಿ ಪ್ರಕಟ: ಆದರೆ ಮುಗಿದಿಲ್ಲ ನೋಂದಣಿ ಪ್ರಕ್ರಿಯೆ

ಉತ್ತರಾಖಂಡ ರಾಜ್ಯದಲ್ಲಿ ನಡೆದ 'ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ' (ಎಸ್‌ಐಆರ್)...