ಅಂಬೇಡ್ಕರ್ ಪ್ರತಿಮೆಗೆ ಅಪಮಾನ; ಬೆರಳು ಮುರಿದು ವಿಕೃತಿ

Date:

ಸಂವಿಧಾನ ಶಿಲ್ಪಿ, ಭಾರತದ ಮೊದಲ ಕಾನೂನು ಸಚಿವ, ಭಾರತದ ಹಿರಿಮೆ, ಜ್ಞಾನದ ಪ್ರತೀಕ ಡಾ. ಬಿ.ಆರ್‌ ಅಂಬೇಡ್ಕರ್ ಅವರ ಪ್ರತಿಮೆಗಳ ಮೇಲೆ ಹಿಂದುತ್ವವಾದಿ, ಜಾತಿವಾದಿಗಳ ದಾಳಿಗಳು ನಿರಂತವಾಗಿ ನಡೆಯುತ್ತಲೇ ಇವೆ. ಅಂಬೇಡ್ಕರ್ ಪ್ರತಿಮೆಯ ಒಂದು ಕೈಯ ಬೆರಳನ್ನು ಮುರಿದು ದುಷ್ಕರ್ಮಿಗಳು ವಿಕೃತಿ ಮರೆದಿರುವ ಘಟನೆ ಮಧ್ಯಪ್ರದೇಶದ ದಾಮೋಹ್‌ ಜಿಲ್ಲೆಯ ಹಳ್ಳಿಯೊಂದರಲ್ಲಿ ನಡೆದಿದೆ. ಮಧ್ಯಪ್ರದೇಶದಲ್ಲಿ ಕಳೆದ ಎರಡು ತಿಂಗಳಲ್ಲಿ ನಡೆದ ಎರಡನೇ ಘಟನೆ ಇದಾಗಿದೆ.

- Advertisement -

ದಾಮೋಹ್ ಜಿಲ್ಲೆಯ ಪಟೇರಿಯಾ ಗ್ರಾಮದಲ್ಲಿ ಘಟನೆ ನಡೆದಿದೆ. ಇಲ್ಲಿನ ಗ್ರಾಮ ಪಂಚಾಯಿತಿ ಕಟ್ಟಡದ ಬಳಿ ಅಂಬೇಡ್ಕರ್ ಪ್ರತಿಮೆ ಸ್ಥಾಪಿಸಲಾಗಿತ್ತು. ದುಷ್ಕರ್ಮಿಗಳು ರಾತ್ರಿ ವೇಳೆ ಪ್ರತಿಮೆಯ ಬಲಗೈನ ಬೆರಳನ್ನು ಮುರಿದಿದ್ದಾರೆ. ಮರುದಿನ ಬೆಳಗ್ಗೆ ಗ್ರಾಮಸ್ಥರು ಪ್ರತಿಮೆಯನ್ನು ಗಮನಿಸಿದಾಗ, ಕೃತ್ಯ ಬೆಳಕಿಗೆ ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಸ್ಥಳಕ್ಕೆ ಕುಮ್ಹಾರಿ ಪೊಲೀಸ್ ಠಾಣೆಯ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ. ಅಪರಿಚಿತ ದುಷ್ಕರ್ಮಿಗಳ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ನಡೆಸುತ್ತಿದ್ದಾರೆ. ಆರೋಪಿಗಳನ್ನು ಬಂಧಿಸಲು ಹುಡುಕಾಟ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

‘ಪ್ರತಿಮೆಯ ಪಕ್ಕದ ಏಣಿಯನ್ನು ಹತ್ತಿ ಬೆರಳು ಮುರಿದಿರುವುದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಸ್ಥಳೀಯರನ್ನು ವಿಚಾರಣೆಗೆ ಒಳಪಡಿಸಲಾಗಿದ್ದು, ಹೆಚ್ಚಿನ ಮಾಹಿತಿ ಕಲೆ ಹಾಕುತ್ತಿದ್ದಾರೆ. ಕೆಲ ಅನುಮಾನಾಸ್ಪದ ವ್ಯಕ್ತಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ” ಎಂದು ಎಎಸ್‌ಪಿ ಸಂದೀಪ್ ಮಿಶ್ರಾ ತಿಳಿಸಿದ್ದಾರೆ.

ಈ ಹಿಂದೆ, ಡಿಸೆಂಬರ್‌ನಲ್ಲಿ ಮಧ್ಯಪ್ರದೇಶದ ಪಾತೆರಾ ಪೊಲೀಸ್ ಠಾಣಾ ವ್ಯಾಪ್ತಿಯ ಕೋಟಾ ಗ್ರಾಮದಲ್ಲಿ ಅಂಬೇಡ್ಕರ್ ಪ್ರತಿಮೆಯ ಒಂದು ತೋಳನ್ನು ಮುರಿದುಹಾಕಲಾಗಿತ್ತು. ಘಟನೆ ನಂತರ ಗ್ರಾಮದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಾಲಾ ಸಮಸ್ಯೆಗಳ ಕುರಿತು ಗ್ರಾಮ ಸಭೆಯಲ್ಲಿ ಧ್ವನಿ ಎತ್ತಿದ ವಿದ್ಯಾರ್ಥಿಗಳು; ಅಧಿಕಾರಿಗಳ ಮೆಚ್ಚುಗೆ-ಭರವಸೆ

ಸರ್ಕಾರಿ ಶಾಲಾ ವಿದ್ಯಾರ್ಥಿಗಳು ‘ವಿಶೇಷ ಗ್ರಾಮ ಸಭೆ’ಗಳಲ್ಲಿ ಪಾಲ್ಗೊಂಡು, ಪಂಚಾಯತ್ ಪ್ರತಿನಿಧಿಗಳು...

ಉತ್ತರಾಖಂಡ SIR ಅಂತಿಮ ಮತದಾರರ ಪಟ್ಟಿ ಪ್ರಕಟ: ಆದರೆ ಮುಗಿದಿಲ್ಲ ನೋಂದಣಿ ಪ್ರಕ್ರಿಯೆ

ಉತ್ತರಾಖಂಡ ರಾಜ್ಯದಲ್ಲಿ ನಡೆದ 'ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ' (ಎಸ್‌ಐಆರ್)...

ವಾಹನ ದಟ್ಟಣೆಯ ಸುಳಿಯಲ್ಲಿ ಮನಾಲಿ; ಪ್ರವಾಸೋದ್ಯಮದ ಒತ್ತಡಕ್ಕೆ ನಲುಗುತ್ತಿವೆಯೇ ಬೆಟ್ಟಗಳು?

ಮುಂಗಾರು ಮಳೆ ಕಡಿಮೆಯಾಗುತ್ತಿದ್ದಂತೆ ಹಿಮಾಚಲ ಪ್ರದೇಶದ ಪ್ರವಾಸಿ ತಾಣಗಳಿಗೆ ಪ್ರವಾಸಿಗರ ಆಗಮನ...