ಎಬೋಲಾ ಭೀತಿ: ಮೂರು ಆಫ್ರಿಕನ್ ದೇಶಗಳಿಗೆ ಪ್ರಯಾಣಿಸದಂತೆ ಕೇಂದ್ರ ಸಲಹೆ

Date:

ಆಫ್ರಿಕಾದ ಕೆಲವು ಭಾಗಗಳಲ್ಲಿ ಎಬೋಲಾ ವೈರಸ್‌ನ ಬುಂಡಿಬುಗ್ಯೊ ತಳಿ ತೀವ್ರ ಪ್ರಮಾಣದಲ್ಲಿ ಹರಡುತ್ತಿದೆ. ಈ ನಡುವೆ ಕಾಂಗೋ ಪ್ರಜಾಸತ್ತಾತ್ಮಕ ಗಣರಾಜ್ಯ (DRC), ಉಗಾಂಡಾ ಮತ್ತು ದಕ್ಷಿಣ ಸುಡಾನ್‌ಗೆ ಪ್ರಯಾಣಿಸದಂತೆ ಕೇಂದ್ರ ಸರ್ಕಾರವು ಸಲಹೆ ನೀಡಿದೆ. ತೀವ್ರ ಅನಿವಾರ್ಯವಿಲ್ಲದೆ ಈ ದೇಶಗಳಿಗೆ ಪ್ರಯಾಣಿಸಬೇಡಿ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಭಾನುವಾರ ಸಲಹೆ ನೀಡಿದೆ.

- Advertisement -

ಈ ಬಗ್ಗೆ ಭಾನುವಾರ ಆರೋಗ್ಯ ಸಚಿವಾಲಯ ಹೇಳಿಕೆ ಬಿಡುಗಡೆ ಮಾಡಿದೆ, “ಕಾಂಗೋ ಉಗಾಂಡಾದಲ್ಲಿ ಎಬೋಲಾ ಕಾಯಿಲೆ ಏಕಾಏಕಿ ಬೆಳಕಿಗೆ ಬಂದಿದೆ. ವಿಶ್ವ ಆರೋಗ್ಯ ಸಂಸ್ಥೆ (WHO), ಅಂತಾರಾಷ್ಟ್ರೀಯ ಆರೋಗ್ಯ ನಿಯಮಗಳು (IHR) ಎಬೋಲಾ ಜಾಗತಿಕ ಆರೋಗ್ಯ ತುರ್ತುಸ್ಥಿತಿ ಎಂದು ನಿರ್ಧರಿಸಿದೆ. ಈ ನಿಟ್ಟಿನಲ್ಲಿ ಆಫ್ರಿಕಾದ ಮೂರು ದೇಶಗಳಿಗೆ ಪ್ರಯಾಣ ತಪ್ಪಿಸಿ” ಎಂದು ಹೇಳಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಭದ್ರಾವತಿ | ಕಲುಷಿತ ಕುಡಿಯುವ ನೀರು ಸರಬರಾಜು; ರೋಗಭೀತಿಯಲ್ಲಿ...

ಭದ್ರಾವತಿ ತಾಲೂಕಿನ ಶಿವರಾಮನಗರ ಗ್ರಾಮದಲ್ಲಿ ನಗರಸಭೆ ಕಲುಷಿತ ಕುಡಿಯುವ ನೀರನ್ನು ಸರಬರಾಜು ಮಾಡುತ್ತಿರುವುದು ಗ್ರಾಮಸ್ಥರಲ್ಲಿ ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ. ಈ ವಿಷಯದಲ್ಲಿ ನಗರಸಭೆ ಆಡಳಿತ ಮತ್ತು ಆರೋಗ್ಯ ಇಲಾಖೆ ಕಣ್ಮುಚ್ಚಿ ಕುಳಿತಿರುವುದಾಗಿ ಸ್ಥಳೀಯರು...

15 ವರ್ಷಗಳಿಂದ ಪ್ಲಾಸ್ಟಿಕ್‌ ದೂರವಿಟ್ಟ ಗ್ರಾಮ; ನಮ್ಮೂರಿಗೂ ಇದು...

ಒಂದು ಗ್ರಾಮವೆಂದರೆ, ಇಂದಿಗೂ ಮಣ್ಣಿನ ರಸ್ತೆಗಳು, ಕಚ್ಚಾ ಮನೆಗಳು, ಹೊಲ-ಗದ್ದೆಗಳು ಮಾತ್ರ ನೆನಪಾಗುತ್ತವೆ. ಅಲ್ಲಿನ ಜನರ ಬದುಕಿನ ಶಿಸ್ತು, ಸಾರ್ವಜನಿಕ ಸ್ಥಳಗಳ ಮೇಲಿನ ಅವರ ಹೊಣೆಗಾರಿಕೆ ಮತ್ತು ಮುಂದಿನ ಪೀಳಿಗೆಯ ಬಗ್ಗೆ ಇರುವ...

ʼಹಿಂದೆ ಸರಿಯುವ ಮಾತೇ ಇಲ್ಲʼ; ದೆಹಲಿ ಬೀದಿಗಳಲ್ಲಿ ಅಬ್ಬರಿಸುತ್ತಿರುವ...

ಚುನಾವಣಾ ಆಯೋಗದ (ECI) ವಿಶೇಷ ತೀವ್ರ ಪರಿಷ್ಕರಣೆ (SIR) ವಿರುದ್ಧ ಮತ್ತು CEC ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ INDIA ಬ್ಲಾಕ್ ಸಂಸತ್ ಸದಸ್ಯರು ದೆಹಲಿ ಬೀದಿಗಳಲ್ಲಿ ಬೃಹತ್‌ ಪ್ರತಿಭಟನೆ ನಡೆಸುತ್ತಿದ್ದಾರೆ. ಯುವಕರು...

ಇದನ್ನು ಓದಿದ್ದೀರಾ? ದೇಶದಲ್ಲಿ ಎಬೋಲಾ ಪ್ರಕರಣ ಪತ್ತೆಯಾಗಿಲ್ಲ, ಯಾವುದೇ ಸವಾಲಿಗೂ ಸಿದ್ಧವಾಗಿದ್ದೇವೆ: ಕೇಂದ್ರ ಸರ್ಕಾರ

“ಈ ದೇಶಗಳಲ್ಲಿ ಪ್ರಸ್ತುತ ವಾಸಿಸುತ್ತಿರುವ ಅಥವಾ ಪ್ರಯಾಣಿಸುತ್ತಿರುವ ಭಾರತೀಯ ಪ್ರಜೆಗಳು ಸ್ಥಳೀಯ ಸಾರ್ವಜನಿಕ ಆರೋಗ್ಯ ಸಲಹೆಗಳನ್ನು ಅನುಸರಿಸಿ. ಹೆಚ್ಚಿನ ಮುನ್ನೆಚ್ಚರಿಕೆ ಕಾಪಾಡಿಕೊಳ್ಳಿ, ರೋಗಲಕ್ಷಣ ಹೊಂದಿರುವ ವ್ಯಕ್ತಿಗಳೊಂದಿಗೆ ಸಂಪರ್ಕವನ್ನು ತಪ್ಪಿಸಿ. ಜ್ವರ ಅಥವಾ ಸಂಬಂಧಿತ ಲಕ್ಷಣ ಕಂಡುಬಂದರೆ ತಕ್ಷಣದ ವೈದ್ಯಕೀಯ ಆರೈಕೆಯನ್ನು ಪಡೆಯಿರಿ” ಎಂದು ಕೇಂದ್ರ ಸರ್ಕಾರ ತಿಳಿಸಿದೆ.

1976ರಲ್ಲಿ ಮೊದಲ ಬಾರಿಗೆ ಕಾಂಗೋದ ‘ಎಬೋಲಾ ನದಿ’ಯ ತೀರದಲ್ಲಿ ಎಬೋಲಾ ವೈರಸ್ ಪತ್ತೆಯಾಗಿದೆ. ಈವರೆಗೆ ವಿಶ್ವದಾದ್ಯಂತ ಒಟ್ಟು 35,000 ಕ್ಕೂ ಹೆಚ್ಚು ಎಬೋಲಾ ಪ್ರಕರಣಗಳು ದಾಖಲಾಗಿದ್ದು, ಸುಮಾರು 15,400 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ. ಎಬೋಲಾ ವೈರಸ್‌ನ ಸರಾಸರಿ ಮರಣ ಪ್ರಮಾಣವು ಸುಮಾರು 50% ರಷ್ಟಿದೆ. ಪ್ರಸ್ತುತ 2026ರಲ್ಲಿ ಕಾಂಗೋ, ಉಗಾಂಡಾದಲ್ಲಿ 800ಕ್ಕೂ ಅಧಿಕ ಎಬೋಲಾ ಪ್ರಕರಣಗಳು ಕಂಡುಬಂದಿದೆ. ಈ ಪೈಕಿ 180ಕ್ಕೂ ಅಧಿಕ ಮಂದಿ ಮೃತಪಟ್ಟಿದ್ದಾರೆ. ಇದರಲ್ಲಿ ಶಂಕಿತ ಪ್ರಕರಣಗಳೂ ಸೇರಿವೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಭದ್ರಾವತಿ | ಕಲುಷಿತ ಕುಡಿಯುವ ನೀರು ಸರಬರಾಜು; ರೋಗಭೀತಿಯಲ್ಲಿ ಗ್ರಾಮಸ್ಥರು

ಭದ್ರಾವತಿ ತಾಲೂಕಿನ ಶಿವರಾಮನಗರ ಗ್ರಾಮದಲ್ಲಿ ನಗರಸಭೆ ಕಲುಷಿತ ಕುಡಿಯುವ ನೀರನ್ನು ಸರಬರಾಜು...

ವಿಜಯಪುರ | ಕೆ-ಸೆಟ್ ಪರೀಕ್ಷೆ ಪಾರದರ್ಶಕತೆಗೆ ಕಟ್ಟುನಿಟ್ಟಿನ ಕ್ರಮ: ಡಾ. ಔದ್ರಾಮ

ಅ. 11ರಂದು ನಡೆಯಲಿರುವ ಕೆ-ಸೆಟ್ ಪರೀಕ್ಷೆಯನ್ನು ಪಾರದರ್ಶಕ ಹಾಗೂ ಅಚ್ಚುಕಟ್ಟಾಗಿ ನಡೆಸಲು...

15 ವರ್ಷಗಳಿಂದ ಪ್ಲಾಸ್ಟಿಕ್‌ ದೂರವಿಟ್ಟ ಗ್ರಾಮ; ನಮ್ಮೂರಿಗೂ ಇದು ಸಾಧ್ಯವಲ್ಲವೇ?

ಒಂದು ಗ್ರಾಮವೆಂದರೆ, ಇಂದಿಗೂ ಮಣ್ಣಿನ ರಸ್ತೆಗಳು, ಕಚ್ಚಾ ಮನೆಗಳು, ಹೊಲ-ಗದ್ದೆಗಳು ಮಾತ್ರ...

ಕ್ಯಾನ್ಸರ್ ರೋಗಿಗಳಿಗೆ ಗುಡ್‌ನ್ಯೂಸ್‌; ದುಬಾರಿ ಔಷಧಗಳ ಬೆಲೆ ಶೇ.70ರವರೆಗೆ ಇಳಿಕೆ?

ದೇಶದಲ್ಲಿ ದುಬಾರಿಯಾಗಿರುವ ಕೆಲವು ಕ್ಯಾನ್ಸರ್ ಔಷಧಗಳ ಬೆಲೆ ಶೀಘ್ರದಲ್ಲೇ ಭಾರಿ ಪ್ರಮಾಣದಲ್ಲಿ...