ಜಮ್ಮು ಕಾಶ್ಮೀರದ ಉಧಂಪುರ ಜಿಲ್ಲೆಯ ವಾಯುನೆಲೆಯಲ್ಲಿ ಶನಿವಾರ ಸೇನಾ ವಾಯು ರಕ್ಷಣಾ ಪಡೆ ಪಾಕಿಸ್ತಾನದ ಡ್ರೋನ್ ಅನ್ನು ಹೊಡೆದೊರುಳಿಸಿದೆ. ಈ ವೇಳೆ ಯೋಧರೊಬ್ಬರು ಹುತಾತ್ಮರಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಸುಮಾರು 26 ಭಾರತೀಯರನ್ನು ಬಲಿತೆಗೆದುಕೊಂಡ ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪ್ರತೀಕಾರವಾಗಿ ಭಾರತೀಯ ಸೇನೆ ಮೇ 7ರಂದು ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿನ ಒಂಬತ್ತು ಭಯೋತ್ಪಾದಕ ನೆಲೆಗಳ ಮೇಲೆ ಕ್ಷಿಪಣಿ ದಾಳಿ ನಡೆಸಿದೆ.
ಇದನ್ನು ಓದಿದ್ದೀರಾ? BREAKING NEWS | ‘ತಕ್ಷಣ ಕದನ ವಿರಾಮಕ್ಕೆ ಭಾರತ-ಪಾಕಿಸ್ತಾನ ಒಪ್ಪಿಕೊಂಡಿವೆ’ ಎಂದ ಅಮೆರಿಕ ಅಧ್ಯಕ್ಷ ಟ್ರಂಪ್
ಇದಾದ ಬಳಿಕ ಉಭಯ ದೇಶಗಳ ನಡುವೆ ಉದ್ವಿಗ್ನತೆ ಹೆಚ್ಚಾಗಿದೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಧ್ಯಸ್ಥಿಕೆಯಲ್ಲಿ ಕದನ ವಿರಾಮಕ್ಕೆ ಭಾರತ ಮತ್ತು ಪಾಕಿಸ್ತಾನ ಒಪ್ಪಿಕೊಂಡಿತ್ತು. ಆದರೆ ಪಾಕಿಸ್ತಾನ ಈ ಕದನ ವಿರಾಮವನ್ನು ಶನಿವಾರ ರಾತ್ರಿಯೇ ಉಲ್ಲಂಘಿಸಿದೆ.
ಈ ಕದನ ವಿರಾಮಕ್ಕೂ ಮುನ್ನ ನಡೆದ ದಾಳಿಯಲ್ಲಿ ಯೋಧ ಹುತಾತ್ಮರಾಗಿದ್ದಾರೆ ಎಂದು ಹೇಳಲಾಗಿದೆ. ಭಾರತೀಯ ವಾಯುಪಡೆಯು ಡ್ರೋನ್ಗಳನ್ನು ತಡೆಯುವಲ್ಲಿ ಯಶಸ್ವಿಯಾಗಿದೆ. ಆದರೆ ಈ ವೇಳೆ ಯೋಧ ಸೇವೆ ಸಲ್ಲಿಸುತ್ತಿದ್ದ ವೈದ್ಯಕೀಯ ಸಹಾಯಕ ಅಧಿಕಾರಿ ಸುರೇಂದ್ರ ಕುಮಾರ್ ಮೋಗಾ ಅವರಿಗೆ ಗಂಭೀರ ಗಾಯವಾಗಿದ್ದು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.
राष्ट्र सुरक्षा का कर्तव्य-निर्वहन करते हुए उधमपुर एयर बेस पर वीरगति को प्राप्त राजस्थान के बेटे, झुंझुनूं निवासी, भारतीय सेना के जवान श्री सुरेंद्र सिंह मोगा जी की शहादत का समाचार अत्यंत दुःखद है।
— Bhajanlal Sharma (@BhajanlalBjp) May 10, 2025
प्रभु श्रीराम पुण्यात्मा को अपने श्रीचरणों में स्थान तथा शोकाकुल परिवार को यह… pic.twitter.com/tQTuanJ7Fp
ರಾಜಸ್ಥಾನ ಮುಖ್ಯಮಂತ್ರಿ ಭಜನ್ಲಾಲ್ ಶರ್ಮಾ ಹುತಾತ್ಮ ಯೋಧರಿಗೆ ಶ್ರದ್ಧಾಂಜಲಿ ಸಲ್ಲಿಸಿದರು ಮತ್ತು ಅವರ ಕುಟುಂಬಕ್ಕೆ ಸಂತಾಪ ವ್ಯಕ್ತಪಡಿಸಿದರು. “ರಾಜಸ್ಥಾನದ ಪುತ್ರ, ಜುನ್ಜುನು ನಿವಾಸಿ, ಭಾರತೀಯ ಸೇನೆಯ ಯೋಧ ಸುರೇಂದ್ರ ಕುಮಾರ್ ಮೋಗಾ ಅವರು ಹುತಾತ್ಮರಾದ ಸುದ್ದಿ ಅತ್ಯಂತ ದುಃಖಕರ ಸುದ್ದಿ. ಅವರು ರಾಷ್ಟ್ರೀಯ ಭದ್ರತೆಯ ಕರ್ತವ್ಯವನ್ನು ನಿರ್ವಹಿಸುವಾಗ ಹುತಾತ್ಮರಾದರು” ಎಂದು ಎಕ್ಸ್ನಲ್ಲಿ ಬರೆದುಕೊಂಡಿದ್ದಾರೆ.
ಇನ್ನು ಸದ್ಯ ಪಾಕಿಸ್ತಾನ ಕದನ ವಿರಾಮ ಉಲ್ಲಂಘಿಸಿದ್ದು, ಭಾರತ- ಪಾಕ್ ನಡುವಿನ ಉದ್ವಿಗ್ನತೆ ಇನ್ನಷ್ಟೂ ಹೆಚ್ಚಾಗುವ ಸಾಧ್ಯತೆಯಿದೆ. ಆದರೆ ಜಮ್ಮು ಕಾಶ್ಮೀರದ ಹಲವು ಕಡೆಗಳಲ್ಲಿ ಪರಿಸ್ಥಿತಿ ಮತ್ತೆ ಸಹಜ ಸ್ಥಿತಿಗೆ ಮರಳಿರುವಂತೆ ಕಾಣುತ್ತಿದೆ ಎಂದು ಪಿಟಿಐ ವರದಿ ಮಾಡಿದೆ.
