ಭಾರತ- ಪಾಕ್ ಸಂಘರ್ಷ | ಜಮ್ಮು ಕಾಶ್ಮೀರ ವಾಯುನೆಲೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ಯೋಧ ಹುತಾತ್ಮ

Date:

ಜಮ್ಮು ಕಾಶ್ಮೀರದ ಉಧಂಪುರ ಜಿಲ್ಲೆಯ ವಾಯುನೆಲೆಯಲ್ಲಿ ಶನಿವಾರ ಸೇನಾ ವಾಯು ರಕ್ಷಣಾ ಪಡೆ ಪಾಕಿಸ್ತಾನದ ಡ್ರೋನ್‌ ಅನ್ನು ಹೊಡೆದೊರುಳಿಸಿದೆ. ಈ ವೇಳೆ ಯೋಧರೊಬ್ಬರು ಹುತಾತ್ಮರಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

- Advertisement -

ಸುಮಾರು 26 ಭಾರತೀಯರನ್ನು ಬಲಿತೆಗೆದುಕೊಂಡ ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪ್ರತೀಕಾರವಾಗಿ ಭಾರತೀಯ ಸೇನೆ ಮೇ 7ರಂದು ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿನ ಒಂಬತ್ತು ಭಯೋತ್ಪಾದಕ ನೆಲೆಗಳ ಮೇಲೆ ಕ್ಷಿಪಣಿ ದಾಳಿ ನಡೆಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಇದನ್ನು ಓದಿದ್ದೀರಾ? BREAKING NEWS | ‘ತಕ್ಷಣ ಕದನ ವಿರಾಮಕ್ಕೆ ಭಾರತ-ಪಾಕಿಸ್ತಾನ ಒಪ್ಪಿಕೊಂಡಿವೆ’ ಎಂದ ಅಮೆರಿಕ ಅಧ್ಯಕ್ಷ ಟ್ರಂಪ್

ಇದಾದ ಬಳಿಕ ಉಭಯ ದೇಶಗಳ ನಡುವೆ ಉದ್ವಿಗ್ನತೆ ಹೆಚ್ಚಾಗಿದೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಧ್ಯಸ್ಥಿಕೆಯಲ್ಲಿ ಕದನ ವಿರಾಮಕ್ಕೆ ಭಾರತ ಮತ್ತು ಪಾಕಿಸ್ತಾನ ಒಪ್ಪಿಕೊಂಡಿತ್ತು. ಆದರೆ ಪಾಕಿಸ್ತಾನ ಈ ಕದನ ವಿರಾಮವನ್ನು ಶನಿವಾರ ರಾತ್ರಿಯೇ ಉಲ್ಲಂಘಿಸಿದೆ.

ಈ ಕದನ ವಿರಾಮಕ್ಕೂ ಮುನ್ನ ನಡೆದ ದಾಳಿಯಲ್ಲಿ ಯೋಧ ಹುತಾತ್ಮರಾಗಿದ್ದಾರೆ ಎಂದು ಹೇಳಲಾಗಿದೆ. ಭಾರತೀಯ ವಾಯುಪಡೆಯು ಡ್ರೋನ್‌ಗಳನ್ನು ತಡೆಯುವಲ್ಲಿ ಯಶಸ್ವಿಯಾಗಿದೆ. ಆದರೆ ಈ ವೇಳೆ ಯೋಧ ಸೇವೆ ಸಲ್ಲಿಸುತ್ತಿದ್ದ ವೈದ್ಯಕೀಯ ಸಹಾಯಕ ಅಧಿಕಾರಿ ಸುರೇಂದ್ರ ಕುಮಾರ್ ಮೋಗಾ ಅವರಿಗೆ ಗಂಭೀರ ಗಾಯವಾಗಿದ್ದು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.

ರಾಜಸ್ಥಾನ ಮುಖ್ಯಮಂತ್ರಿ ಭಜನ್‌ಲಾಲ್ ಶರ್ಮಾ ಹುತಾತ್ಮ ಯೋಧರಿಗೆ ಶ್ರದ್ಧಾಂಜಲಿ ಸಲ್ಲಿಸಿದರು ಮತ್ತು ಅವರ ಕುಟುಂಬಕ್ಕೆ ಸಂತಾಪ ವ್ಯಕ್ತಪಡಿಸಿದರು. “ರಾಜಸ್ಥಾನದ ಪುತ್ರ, ಜುನ್ಜುನು ನಿವಾಸಿ, ಭಾರತೀಯ ಸೇನೆಯ ಯೋಧ ಸುರೇಂದ್ರ ಕುಮಾರ್ ಮೋಗಾ ಅವರು ಹುತಾತ್ಮರಾದ ಸುದ್ದಿ ಅತ್ಯಂತ ದುಃಖಕರ ಸುದ್ದಿ. ಅವರು ರಾಷ್ಟ್ರೀಯ ಭದ್ರತೆಯ ಕರ್ತವ್ಯವನ್ನು ನಿರ್ವಹಿಸುವಾಗ ಹುತಾತ್ಮರಾದರು” ಎಂದು ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ.

ಇನ್ನು ಸದ್ಯ ಪಾಕಿಸ್ತಾನ ಕದನ ವಿರಾಮ ಉಲ್ಲಂಘಿಸಿದ್ದು, ಭಾರತ- ಪಾಕ್ ನಡುವಿನ ಉದ್ವಿಗ್ನತೆ ಇನ್ನಷ್ಟೂ ಹೆಚ್ಚಾಗುವ ಸಾಧ್ಯತೆಯಿದೆ. ಆದರೆ ಜಮ್ಮು ಕಾಶ್ಮೀರದ ಹಲವು ಕಡೆಗಳಲ್ಲಿ ಪರಿಸ್ಥಿತಿ ಮತ್ತೆ ಸಹಜ ಸ್ಥಿತಿಗೆ ಮರಳಿರುವಂತೆ ಕಾಣುತ್ತಿದೆ ಎಂದು ಪಿಟಿಐ ವರದಿ ಮಾಡಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಳೆಯ ಪ್ರಕರಣ: ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ವಿರುದ್ಧ ವಿಜಿಲೆನ್ಸ್ ತನಿಖೆಗೆ ಕೇರಳ ಸರ್ಕಾರ ಆದೇಶ

20೦6ರ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಹಾಲಿ ಮುಖ್ಯ ಚುನಾವಣಾ ಆಯುಕ್ತ (CEC) ಗ್ಯಾನೇಶ್...

ಗಣೇಶ ವಿಸರ್ಜನೆ ಮುಗಿಯಿತು, ಇನ್ನು ಸಿಇಸಿ ಗ್ಯಾನೇಶ್ ಕುಮಾರ್ ವಿಸರ್ಜನೆ ಬಾಕಿ: ನಟ ಪ್ರಕಾಶ್ ರಾಜ್

ದೇಶಾದ್ಯಂತ ಗಣೇಶ ವಿಸರ್ಜನೆ ಪ್ರಕ್ರಿಯೆ ಪೂರ್ಣಗೊಂಡಿದ್ದು, ಈಗ ಮುಖ್ಯ ಚುನಾವಣಾ ಆಯುಕ್ತ...

ಜಿಎಸ್‌ಟಿ ದಸ್ತಗಿರಿ ಅಧಿಕಾರ ಹಿಂಪಡೆಯುವ ಪ್ರಸ್ತಾಪ: ಆಡಂಬರದ ಜಾರಿಯೂ ಇಂದಿನ ಭ್ರಮನಿರಸನವೂ….

2017ರ ಜೂನ್ 30ರ ಮಧ್ಯರಾತ್ರಿ ಭಾರತದ ಸಂಸತ್ತಿನಲ್ಲಿ ವಿಶೇಷ ಅಧಿವೇಶನ ಕರೆಯಾಗಿತ್ತು....

ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರ ಕೊರತೆ ಬಗ್ಗೆ ದೂರಿದ್ದ ಎಎಪಿ ಶಾಸಕ ಅಮಾನತು

ತಮ್ಮ ಕ್ಷೇತ್ರದ ಸರ್ಕಾರಿ ಶಾಲೆಗಳಲ್ಲಿನ ಶಿಕ್ಷಕರ ಕೊರತೆ ಹೆಚ್ಚಿದೆ ಎಂದು ತಮ್ಮದೇ...