ಜೆಡಿಯು ಹೊಸ ರಾಷ್ಟ್ರೀಯ ನಾಯಕರ ಪಟ್ಟಿಯಲ್ಲಿಲ್ಲ ನಿತೀಶ್ ಕುಮಾರ್ ಪುತ್ರ ನಿಶಾಂತ್ ಹೆಸರು

Date:

ಬಿಹಾರದ ಮಾಜಿ ಮುಖ್ಯಮಂತ್ರಿ ನಿತೀಶ್ ಕುಮಾರ್ ನೇತೃತ್ವದ ಜನತಾದಳ (ಯುನೈಟೆಡ್) -ಜೆಡಿಯು ಬುಧವಾರ ತನ್ನ ಹೊಸ ರಾಷ್ಟ್ರೀಯ ತಂಡದ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಆದರೆ ಈ ಪಟ್ಟಿಯಲ್ಲಿ ನಿತೀಶ್ ಪುತ್ರ ನಿಶಾಂತ್ ಕುಮಾರ್ ಹೆಸರು ಕಾಣಿಸಿಕೊಂಡಿಲ್ಲ. ಅಂದರೆ ಸಾಂಸ್ಥಿಕ ಪುನರ್ರಚನೆ ಮಾಡಿದಾಗ ನಿಶಾಂತ್ ಕುಮಾರ್‌ಗೆ ಯಾವುದೇ ಸ್ಥಾನವನ್ನು ನೀಡಲಾಗಿಲ್ಲ.

- Advertisement -

ನಿತೀಶ್ ತಮ್ಮ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿ ರಾಜ್ಯಸಭೆಗೆ ತೆರಳಿದ ನಂತರ ಜೆಡಿಯು ಸಾಂಸ್ಥಿಕ ಪುನರ್ರಚನೆಯನ್ನು ಮಾಡಿದೆ. ನಿತೀಶ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಹುದ್ದೆಯಲ್ಲಿ ಮುಂದುವರಿದಿದ್ದಾರೆ. ಸಂಜಯ್ ಕುಮಾರ್ ಝಾ ಪಕ್ಷದ ರಾಷ್ಟ್ರೀಯ ಕಾರ್ಯಕಾರಿ ಅಧ್ಯಕ್ಷರಾಗಿಯೂ ತಮ್ಮ ಸ್ಥಾನವನ್ನು ಉಳಿಸಿಕೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಪ್ರಚಾರ, ರಾಹುಲ್ ವ್ಯಕ್ತಿತ್ವ ಮತ್ತು ರೆಜಿಮ್ ಚೇಂಜ್

ಮೋದಿ ಅನುಭವಿ ನಟನಂತೆ, ಪ್ರದರ್ಶಕನಂತೆ ಕಾಣುತ್ತಾರೆ. ರಾಹುಲ್ ಗಾಂಧಿ ಪಾತ್ರದ ಒಳಹೊಕ್ಕು ನಟಿಸುವ ಕಲಾವಿದನಂತೆ ಕಾಣುತ್ತಾರೆ. ಈ ನಿಟ್ಟಿನಲ್ಲಿ ರಾಹುಲ್ ರಾಜಕೀಯ ನಡೆಗಳು ಮೋದಿಯವರ ರಾಜಕೀಯ ನಡೆಗಳೊಂದಿಗೆ ವಿಶ್ಲೇಷಣೆಗೊಳಗಾಗುತ್ತಿವೆ. ಕಳೆದ 12 ವರ್ಷಗಳ...

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

ಇದನ್ನು ಓದಿದ್ದೀರಾ? ನಿತೀಶ್ ಕುಮಾರ್ ಪುತ್ರ ನಿಶಾಂತ್ ಅಧಿಕೃತವಾಗಿ ಜೆಡಿಯು ಸೇರ್ಪಡೆ

ನಿತೀಶ್ ಅವರ ಮಗನಾದ ನಿಶಾಂತ್ ಅವರಿಗೆ ಯಾವುದೇ ಸ್ಥಾನವನ್ನು ನೀಡದಿರಲು ಜೆಡಿಯು ನಿರ್ಧರಿಸಿದೆ. ನಿಶಾಂತ್ ಇತ್ತೀಚೆಗೆ ಪಕ್ಷಕ್ಕೆ ಸೇರಿದ್ದು ಅನೇಕ ಕಾರ್ಯಕ್ರಮಗಳಲ್ಲಿ ಸಕ್ರಿಯವಾಗಿ ಭಾಗವಹಿಸುತ್ತಿದ್ದಾರೆ. ಆದ್ದರಿಂದ ನಿಶಾಂತ್‌ಗೆ ಯಾವುದಾದರೊಂದು ಸ್ಥಾನ ಸಿಗಬಹುದು ಎಂಬ ನಿರೀಕ್ಷೆಯಿತ್ತು. ಆದರೆ ಯಾವುದೇ ಸ್ಥಾನ ಇಲ್ಲದಿರವುದು ಅನೇಕರಲ್ಲಿ ಆಶ್ಚರ್ಯ ಉಂಟು ಮಾಡಿದೆ.

ಇನ್ನು ನಿಶಾಂತ್ ಮೇ 3ರಂದು ರಾಜ್ಯಾದ್ಯಂತ ಪ್ರವಾಸ ಕೈಗೊಳ್ಳುವ ಸಾಧ್ಯತೆಯಿದೆ. ಈ ನಡುವೆ ಈ ಪಟ್ಟಿ ಬಿಡುಗಡೆಯಾಗಿದೆ. ಪಕ್ಷವು ರಾಷ್ಟ್ರೀಯ ಉಪಾಧ್ಯಕ್ಷರ ಸಂಖ್ಯೆಯನ್ನು ಒಂದಕ್ಕೆ ಇಳಿಸಿದೆ. ಮಾಜಿ ಸಂಸದ ಚಂದೇಶ್ವರ್ ಪ್ರಸಾದ್ ಚಂದ್ರವಂಶಿ ಅವರನ್ನು ಏಕೈಕ ರಾಷ್ಟ್ರೀಯ ಉಪಾಧ್ಯಕ್ಷರನ್ನಾಗಿ ಹೆಸರಿಸಲಾಗಿದೆ.

ಹಿರಿಯ ನಾಯಕರಾದ ಮನೀಶ್ ವರ್ಮಾ, ಶ್ಯಾಮ್ ರಜಕ್ ಮತ್ತು ಅಶೋಕ್ ಚೌಧರಿ ಪ್ರಧಾನ ಕಾರ್ಯದರ್ಶಿಗಳಾಗಿ ಮುಂದುವರಿಯಲಿದ್ದಾರೆ. ಆದರೆ ಅಫಾಕ್ ಅಹ್ಮದ್ ಖಾನ್ ಮತ್ತು ಗುಲಾಮ್ ರಸೂಲ್ ಬಲ್ಯಾವಿ ಕೂಡ ಪ್ರಧಾನ ಕಾರ್ಯದರ್ಶಿಗಳ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ.

ಅಲೋಕ್ ಕುಮಾರ್ ಸುಮನ್ ಅವರನ್ನು ಖಜಾಂಚಿಯಾಗಿ ನೇಮಿಸಲಾಗಿದ್ದು, ರಾಜೀವ್ ರಂಜನ್ ಪ್ರಸಾದ್ ಕಾರ್ಯದರ್ಶಿ ಮತ್ತು ವಕ್ತಾರರಾಗಿ ದ್ವಿಪಾತ್ರ ವಹಿಸಿಕೊಳ್ಳಲಿದ್ದಾರೆ. ಜೆಡಿಯುನ ಹೊಸ ರಚನೆಯಲ್ಲಿ 24 ರಾಷ್ಟ್ರೀಯ ಪದಾಧಿಕಾರಿಗಳಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಹಲ್ಲೆಗೊಳಗಾಗಿ ರೈಲ್ವೆ ಹಳಿ ಮೇಲೆ ಬಿದ್ದಿದ್ದ ಯುವಕ ಚಿಕಿತ್ಸೆ ಫಲಿಸದೆ ಸಾವು

ಶಿವಮೊಗ್ಗ ರೈಲ್ವೆ ಹಳಿ ಬಳಿ ಗಂಭೀರ ಗಾಯಗಳೊಂದಿಗೆ ಪತ್ತೆಯಾಗಿದ್ದ 26 ವರ್ಷದ...

ನೇಣು ಬಿಗಿದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ; ತರಾತುರಿಯಲ್ಲಿ ಅಂತ್ಯಕ್ರಿಯೆ, ಕಾರಣ ನಿಗೂಢ!

ಸೊರಬ ತಾಲೂಕಿನ ಮುಟಗುಪ್ಪೆ ಗ್ರಾಮದಲ್ಲಿ 22 ವರ್ಷದ ಯುವತಿಯೊಬ್ಬರು ಮನೆಯಲ್ಲಿ ನೇಣು...

ಶಿವಮೊಗ್ಗ | ಗಾಂಜಾ ಮಾರಾಟ ಆರೋಪ: ಐವರು ಅರೆಸ್ಟ್‌, 1.23 ಕೆಜಿ ಮಾದಕ ವಸ್ತು ಜಪ್ತಿ

ಶಿವಮೊಗ್ಗ ನಗರದ ಅನುಪಿನಕಟ್ಟೆ ಸಮೀಪ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದಡಿ ತುಂಗಾನಗರ...