ಆರ್‌ಎಸ್‌ಎಸ್ ಮುಖ್ಯಸ್ಥರ ಮಣಿಪುರ ಭೇಟಿ; ಶಾಂತಿ ಸ್ಥಾಪನೆಗೆ ಏನು ಪ್ರಯೋಜನ: ಕಾಂಗ್ರೆಸ್ ಪ್ರಶ್ನೆ

Date:

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರ ಮೂರು ದಿನಗಳ ಮಣಿಪುರ ಭೇಟಿಯ ಉದ್ದೇಶವನ್ನು ಪ್ರಶ್ನಿಸಿರುವ ಕಾಂಗ್ರೆಸ್, “ಈ ಭೇಟಿಯಿಂದ ಹಿಂಸಾಪೀಡಿತ ರಾಜ್ಯದಲ್ಲಿ ಶಾಂತಿ ಮರುಸ್ಥಾಪಿಸಲು ಯಾವುದೇ ನಿರ್ದಿಷ್ಟ ಕೊಡುಗೆ ಸಿಗಲಿದೆಯೇ? ಏನು ಪ್ರಯೋಜನವಾಗಲಿದೆ” ಎಂದು ಕೇಳಿದೆ.

- Advertisement -

ಗುರುವಾರ ಮಣಿಪುರದ ಇಂಫಾಲದಲ್ಲಿ ಮಾತನಾಡಿದ ಮಣಿಪುರ ಕಾಂಗ್ರೆಸ್ ಶಾಸಕಾಂಗ ಪಕ್ಷದ (ಸಿಎಲ್‌ಪಿ) ನಾಯಕ ಕೀಶಮ್ ಮೇಘಚಂದ್ರ ಸಿಂಗ್, ಮೋಹನ್ ಭಾಗವತ್ ಅವರ ಪ್ರಸ್ತುತ ಭೇಟಿಯ ಕುರಿತು ತೀವ್ರ ಪ್ರಶ್ನೆಗಳನ್ನು ಎತ್ತಿದ್ದಾರೆ. ರಾಜ್ಯಕ್ಕೆ ಈಗ ಮತ್ತೊಂದು ಸುತ್ತಿನ ಕೇವಲ ಭರವಸೆಗಳ ಅಗತ್ಯವಿಲ್ಲ, ಬದಲಾಗಿ ಶಾಶ್ವತ ಶಾಂತಿ, ಭದ್ರತೆ, ಪುನರ್ವಸತಿ, ಉತ್ತರದಾಯಿತ್ವ ಮತ್ತು ವಿಶ್ವಾಸಾರ್ಹ ರಾಜಕೀಯ ಮಾರ್ಗಸೂಚಿಯ ತುರ್ತು ಅಗತ್ಯವಿದೆ ಎಂದು ಪ್ರತಿಪಾದಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕೊಲಂಬಿಯಾ ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿಗಳೊಂದಿಗೆ ರಾಹುಲ್ ಗಾಂಧಿ ಅವರ ಶೈಕ್ಷಣಿಕ...

ಭಾರತದ ಆರ್ಥಿಕ ಬಿಕ್ಕಟ್ಟು, ನಿರುದ್ಯೋಗ, ಶಿಕ್ಷಣ, ಯುವಜನರ ಚಳವಳಿಗಳು, ಪ್ರಜಾಪ್ರಭುತ್ವ ಮತ್ತು ಜಾಗತಿಕ ರಾಜಕೀಯದ ಕುರಿತು ಮಹತ್ವದ ವಿಚಾರ ವಿನಿಮಯ ಭಾರತದ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ನವೆಂಬರ್ 17,...

ಸೋನಿಯಾ ಗಾಂಧಿಯವರ ಪುಸ್ತಕಕ್ಕೆ ನಿಷೇಧದ ಬೇಡಿಕೆ: ಇತಿಹಾಸವನ್ನು ಅಳಿಸಿಹಾಕಲು...

ಸಾವರ್ಕರ್ ಮತ್ತು ಆರ್‌ಎಸ್‌ಎಸ್ ಕುರಿತ ಐತಿಹಾಸಿಕ ಉಲ್ಲೇಖಗಳನ್ನು ವಿರೋಧಿಸಿ ಬಿಜೆಪಿ ಬೆಂಬಲಿತ ಏಕನಾಥ್ ಶಿಂದೆ ನೇತೃತ್ವದ ಶಿವಸೇನೆ ಬಣ ಸೋನಿಯಾ ಗಾಂಧಿಯವರ ಆತ್ಮಕಥನಕ್ಕೆ ನಿಷೇಧ ಹೇರಬೇಕೆಂದು ಒತ್ತಾಯಿಸುತ್ತಿದೆ. ಗಾಂಧೀಜಿಯವರ ಹಂತಕ ಗೋಡ್ಸೆಯನ್ನು ಸಮರ್ಥಿಸುವ...

ಇತಿಹಾಸದ ಕಮಾನು: ಸಮಾನತೆಯಿಂದ ಅಸಮಾನತೆಗೆ, ಮತ್ತೆ ಸಮಾನತೆಯತ್ತವೇ ಮನುಷ್ಯನ...

ಒಂದು ಕಾಲದಲ್ಲಿ ಮನುಷ್ಯನ ಕೈಕೆಲಸವನ್ನು ಯಂತ್ರಗಳು ಬದಲಾಯಿಸಿದವು. ಈಗ ಮನುಷ್ಯನ ಬುದ್ಧಿಶಕ್ತಿಯ ಕೆಲವು ಕೆಲಸಗಳನ್ನೂ ಯಂತ್ರಗಳು ಮಾಡತೊಡಗಿವೆ. ಭಾಷಾಂತರ, ಲೆಕ್ಕಾಚಾರ, ವಿನ್ಯಾಸ, ಮಾಹಿತಿ ವಿಶ್ಲೇಷಣೆ, ವೈದ್ಯಕೀಯ ಪರೀಕ್ಷೆಗಳಿಗೆ ನೆರವು, ಆಡಳಿತದ ನಿರ್ಧಾರಗಳಿಗೆ ಸಹಾಯ...

ಇದನ್ನೂ ಓದಿ: ಉಡುಪಿ | ಮಣಿಪುರ ಹಿಂಸಾಚಾರದ ಹಿಂದೆ ವಿಭಜನಕಾರಿ ಶಕ್ತಿಗಳಿವೆ: ಪ್ರೊ. ಫಣಿರಾಜ್

“ಸಾವಿರಾರು ಕುಟುಂಬಗಳು ಇಂದಿಗೂ ನಿರಾಶ್ರಿತರಾಗಿವೆ, ಅವರ ಮನೆಗಳು ಖಾಲಿ ಬಿದ್ದಿವೆ, ಜೀವನೋಪಾಯ ನಾಶವಾಗಿದೆ ಮತ್ತು ಜನರು ಭಯ ಹಾಗೂ ಅನಿಶ್ಚಿತತೆಯ ನೆರಳಿನಲ್ಲಿ ಬದುಕುತ್ತಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ಮಣಿಪುರದ ಜನರು ಅನಿರ್ದಿಷ್ಟಾವಧಿಯವರೆಗೆ ಕಾಯುತ್ತಿರಲು ಸಾಧ್ಯವಿಲ್ಲ” ಎಂದು ಮೇಘಚಂದ್ರ ಸಿಂಗ್ ಹೇಳಿದ್ದಾರೆ.

“ಬಿಜೆಪಿ ರಾಜಕೀಯ ನಾಯಕತ್ವದ ಮೇಲೆ ಆರ್‌ಎಸ್‌ಎಸ್ ನಾಯಕತ್ವಕ್ಕೆ ಪ್ರಭಾವವಿದ್ದರೆ, ರಾಜ್ಯದಲ್ಲಿ ಶಾಂತಿ, ಸಾಮರಸ್ಯ ಮತ್ತು ಸಹಜ ಸ್ಥಿತಿಯನ್ನು ಮರುಸ್ಥಾಪಿಸಲು ನಿರ್ಣಾಯಕ ಕ್ರಮಗಳನ್ನು ಕೈಗೊಳ್ಳುವಂತೆ ಆ ಪ್ರಭಾವವನ್ನು ಬಳಸಿಕೊಳ್ಳಬೇಕು ಎಂದು ಮಣಿಪುರದ ಜನರು ನಿರೀಕ್ಷಿಸುವ ಸಂಪೂರ್ಣ ಹಕ್ಕನ್ನು ಹೊಂದಿದ್ದಾರೆ” ಎಂದು ತಿಳಿಸಿದ್ದಾರೆ.

ಮೋಹನ್ ಭಾಗವತ್ ಅವರು ಬುಧವಾರ ಮಧ್ಯಾಹ್ನ ಮೂರು ದಿನಗಳ ಭೇಟಿಗಾಗಿ ಇಂಫಾಲಕ್ಕೆ ಆಗಮಿಸಿದ್ದಾರೆ. ಈ ಭೇಟಿಯ ವೇಳೆ ಅವರು ರಾಜ್ಯದಲ್ಲಿ ಸಂಘದ ಚಟುವಟಿಕೆಗಳು, ಸಾಮಾಜಿಕ ಸೇವಾ ಕಾರ್ಯಗಳು ಮತ್ತು ಆರ್‌ಎಸ್‌ಎಸ್ ಶತಮಾನೋತ್ಸವದ ಅಂಗವಾಗಿ ನಡೆಯುತ್ತಿರುವ ಕಾರ್ಯಕ್ರಮಗಳ ಪರಿಶೀಲನೆ ನಡೆಸಲಿದ್ದಾರೆ ಎಂದು ಸಂಘದ ಪದಾಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

2023ರ ಮೇ ತಿಂಗಳಲ್ಲಿ ಮೈತೇಯಿ ಮತ್ತು ಕುಕಿ ಸಮುದಾಯಗಳ ನಡುವೆ ಜನಾಂಗೀಯ ಸಂಘರ್ಷ ಆರಂಭವಾದ ನಂತರ ಭಾಗವತ್ ಅವರು ಮಣಿಪುರಕ್ಕೆ ನೀಡುತ್ತಿರುವ ಎರಡನೇ ಭೇಟಿ ಇದಾಗಿದೆ. ಈ ಹಿಂದೆ ನವೆಂಬರ್ 2025ರಲ್ಲಿ ಭೇಟಿ ನೀಡಿದ್ದರು. ಅದಕ್ಕೂ ಮುನ್ನ ಆರ್‌ಎಸ್‌ಎಸ್‌ ನಾಯಕರು ಭೇಟಿ ನೀಡಿರಲಿಲ್ಲ. ಪ್ರಧಾನಿ ನರೇಂದ್ರ ಮೋದಿ ಅವರೂ ಹಿಂಸಾಚಾರ ಆರಂಭವಾದ ಬಳಿಕ ಮಣಿಪುರಕ್ಕೆ ಭೇಟಿ ನೀಡಿರಲಿಲ್ಲ. ವಿಪಕ್ಷಗಳ ಟೀಕೆಗೆ ಒಳಗಾದ ಬಳಿಕ 2025ರ ಸೆಪ್ಟೆಂಬರ್‌ನಲ್ಲಿ ಪ್ರಧಾನಿ ಮಣಿಪುರಕ್ಕೆ ಭೇಟಿ ನೀಡಿದರು.

2023ರ ಮೇ ತಿಂಗಳಿನಿಂದ ಮಣಿಪುರದಲ್ಲಿ ನಡೆಯುತ್ತಿರುವ ಜನಾಂಗೀಯ ಹಿಂಸಾಚಾರದಲ್ಲಿ ಇದುವರೆಗೆ ಕನಿಷ್ಠ 306 ಜನರು ಪ್ರಾಣ ಕಳೆದುಕೊಂಡಿದ್ದು, 49 ಜನರು ಇನ್ನೂ ನಾಪತ್ತೆಯಾಗಿದ್ದಾರೆ ಹಾಗೂ ಸಾವಿರಾರು ಜನರು ಮನೆ ಕಳೆದುಕೊಂಡಿದ್ದಾರೆ. ಇದರ ಜೊತೆಗೆ, ಪ್ರಸಕ್ತ ವರ್ಷದ ಫೆಬ್ರವರಿಯಿಂದ ಬೆಟ್ಟದ ಜಿಲ್ಲೆಗಳಲ್ಲಿ ಕುಕಿ ಮತ್ತು ನಾಗಾ ಸಮುದಾಯಗಳ ನಡುವೆ ನಡೆದ ಘರ್ಷಣೆಗಳಲ್ಲಿ ಕನಿಷ್ಠ 50 ಜನರು ಮೃತಪಟ್ಟಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಡಪಕ್ಷಗಳ ಒತ್ತಡಕ್ಕೆ ಕಡೆಗೂ ಮಣಿದ ಕೇರಳ ಸರ್ಕಾರ- ಆರೆಸ್ಸೆಸ್ ಕಾರ್ಯಸೂಚಿಯ ಕ್ವಿಜ್ ರದ್ದು

ಶಾಲೆಗಳಲ್ಲಿ ‘ಸಂಘ ಪರಿವಾರದ ಅಜೆಂಡಾ’ ಜಾರಿಗೊಳಿಸಲಾಗುತ್ತಿದೆ ಎಂಬ ಎಡಪಕ್ಷಗಳ ತೀವ್ರ ವಾಗ್ದಾಳಿಗೆ...

‘ಸ್ಥಳೀಯರಿಗೆ ಮೊದಲ ಆದ್ಯತೆ ನೀಡಿ’: ಉದ್ಯಮಗಳಿಗೆ ಸಿಎಂ ಒಮರ್ ಅಬ್ದುಲ್ಲಾ ಎಚ್ಚರಿಕೆ!

ಕೇಂದ್ರಾಡಳಿತ ಪ್ರದೇಶದಲ್ಲಿ ಉದ್ಯಮಗಳನ್ನು ಸ್ಥಾಪಿಸುವ ಕಂಪನಿಗಳು ಸ್ಥಳೀಯ ಯುವಕರಿಗೆ ಉದ್ಯೋಗ ನೀಡಲೇಬೇಕು...

ಜನರ ಆರೋಗ್ಯ ರಕ್ಷಣೆಯಲ್ಲೂ ಪ್ರಾದೇಶಿಕ ತಾರತಮ್ಯ: ತಲಾವಾರು ವೆಚ್ಚದಲ್ಲಿ ಬಿಹಾರ ಕೊನೆ, ಸಿಕ್ಕಿಂಗೆ ಅಗ್ರಸ್ಥಾನ

ದೇಶದ ವಿವಿಧ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಸರ್ಕಾರಗಳು ಆರೋಗ್ಯ ಕ್ಷೇತ್ರಕ್ಕೆ...

ದಾಖಲೆ ಇಲ್ಲದೆ ದೆಹಲಿ ವಿಮಾನ ನಿಲ್ದಾಣಕ್ಕೆ ಬಲವಂತವಾಗಿ ಒಳನುಗ್ಗಲು ಯತ್ನಿಸಿದ ವ್ಯಕ್ತಿ ವಶಕ್ಕೆ

ಮಾನ್ಯ ಪ್ರಯಾಣ ದಾಖಲೆಗಳಿಲ್ಲದೆ ನವದೆಹಲಿಯ ಇಂದಿರಾ ಗಾಂಧಿ ಅಂತರರಾಷ್ಟ್ರೀಯ (ಐಜಿಐ) ವಿಮಾನ...